ಹೊಸ ಎಲೆಕ್ಟ್ರಿಕ್ ಕಾರು ಅನಾವರಣಗೊಳಿಸಿದ Volkswagen

ಜರ್ಮನಿ ಮೂಲದ ಖ್ಯಾತ ಕಾರು ತಯಾರಕ ಕಂಪನಿಯಾದ Volkswagen ಇತ್ತೀಚೆಗೆ ತನ್ನ ಹೊಸ ಎಲೆಕ್ಟ್ರಿಕ್ ಕಾರ್ ಅನ್ನು ಅನಾವರಣಗೊಳಿಸಿದೆ. Volkswagen ID 5 ಎಂಬ ಹೆಸರಿನ ಈ ಎಲೆಕ್ಟ್ರಿಕ್ ಕಾರ್ ಅನ್ನು ಕಂಪನಿಯು ಮುಂದಿನ ವರ್ಷದ ಮಾರ್ಚ್‌ನಲ್ಲಿ ಬಿಡುಗಡೆಗೊಳಿಸಲಿದೆ. ಕಂಪನಿಯು ಜರ್ಮನಿಯ ಡ್ರೆಸ್ಡೆನ್ ನಲ್ಲಿರುವ ತನ್ನ ಉತ್ಪಾದನಾ ಘಟಕದಲ್ಲಿ ಈ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಉತ್ಪಾದಿಸುತ್ತದೆ.

ಹೊಸ ಎಲೆಕ್ಟ್ರಿಕ್ ಕಾರು ಅನಾವರಣಗೊಳಿಸಿದ Volkswagen

Volkswagen ID.5 ಎಲೆಕ್ಟ್ರಿಕ್ ಕಾರ್ ಅನ್ನು ಪ್ರೊ, ಪ್ರೊ ಪರ್ಫಾರ್ಮೆನ್ಸ್ ಹಾಗೂ ಜಿಟಿಎಕ್ಸ್ ಎಂಬ ಮೂರು ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಈ ಎಲ್ಲಾ ಮೂರು ಮಾದರಿಗಳಲ್ಲಿ 77 ಕಿ.ವ್ಯಾ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಲಾಗುತ್ತದೆ. ಆದರೆ ಮೂರು ಮಾದರಿಗಳ ವಿದ್ಯುತ್ ಉತ್ಪಾದನೆಯು ವಿಭಿನ್ನವಾಗಿರಲಿದೆ. Volkswagen ಕಂಪನಿಯು ತನ್ನ ಎಲೆಕ್ಟ್ರಿಕ್ ಕಾರು ಸರಣಿಯಲ್ಲಿ ID.3 ಹಾಗೂ ID.4 ಮಾದರಿಗಳನ್ನು ಸಹ ಅಭಿವೃದ್ಧಿಪಡಿಸುತ್ತಿದೆ.

ಹೊಸ ಎಲೆಕ್ಟ್ರಿಕ್ ಕಾರು ಅನಾವರಣಗೊಳಿಸಿದ Volkswagen

ID.5 ಪ್ರೊ ಮಾದರಿಯಲ್ಲಿರುವ ಎಲೆಕ್ಟ್ರಿಕ್ ಮೋಟರ್ 172 ಬಿ‌ಹೆಚ್‌ಪಿ ಪವರ್ ಉತ್ಪಾದಿಸುತ್ತದೆ. ಈ ಮಾದರಿಯು ಪ್ರತಿ ಗಂಟೆಗೆ 159 ಕಿ.ಮೀ ಗರಿಷ್ಠ ವೇಗದಲ್ಲಿ ಚಲಿಸುತ್ತದೆ. ಇನ್ನು ಪ್ರೊ ಪರ್ಫಾರ್ಮೆನ್ಸ್ ಮಾದರಿಯು 201 ಬಿ‌ಹೆಚ್‌ಪಿ ಪವರ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದ್ದು, ಪ್ರತಿ ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುತ್ತದೆ. ಟಾಪ್ ಮಾದರಿಯಾದ ಜಿಟಿಎಕ್ಸ್ ನಲ್ಲಿ ಡ್ಯುಯಲ್ ಎಲೆಕ್ಟ್ರಿಕ್ ಮೋಟರ್ ಅಳವಡಿಸಲಾಗಿದೆ.

ಹೊಸ ಎಲೆಕ್ಟ್ರಿಕ್ ಕಾರು ಅನಾವರಣಗೊಳಿಸಿದ Volkswagen

ಈ ಮೋಟರ್ 295 ಬಿ‌ಹೆಚ್‌ಪಿ ಪವರ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಮಾದರಿಯು ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸುತ್ತದೆ. ಈ ಕಾರು ಕೇವಲ 6.3 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ. Volkswagen ID.5 ಎಲೆಕ್ಟ್ರಿಕ್ ಕಾರು ಒಂದು ಬಾರಿ ಪೂರ್ತಿಯಾಗಿ ಚಾರ್ಜ್‌ ಆದ ನಂತರ ಗರಿಷ್ಠ 520 ಕಿ.ಮೀಗಳವರೆಗೆ ಚಲಿಸುತ್ತದೆ.

ಹೊಸ ಎಲೆಕ್ಟ್ರಿಕ್ ಕಾರು ಅನಾವರಣಗೊಳಿಸಿದ Volkswagen

ಆದರೆ ಜಿಟಿಎಕ್ಸ್ ಮಾದರಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ 489 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಹೇಳಲಾಗಿದೆ. ಕಂಪನಿಯು ID.5 ಕಾರಿನೊಂದಿಗೆ 135 ಕಿ.ವ್ಯಾ ಫಾಸ್ಟ್ ಚಾರ್ಜರ್ ನೀಡುತ್ತದೆ. ಈ ಚಾರ್ಜರ್ ಕೇವಲ 30 ನಿಮಿಷಗಳಲ್ಲಿ ಬ್ಯಾಟರಿಯನ್ನು 0 - 80% ವರೆಗೂ ಚಾರ್ಜ್ ಮಾಡುತ್ತದೆ. Volkswagen ID.5 ಎಲೆಕ್ಟ್ರಿಕ್ ಕಾರ್ ಅನ್ನು MEB ಪ್ಲಾಟ್‌ಫಾರಂನಲ್ಲಿ ನಿರ್ಮಿಸಲಾಗುತ್ತಿದೆ.

ಹೊಸ ಎಲೆಕ್ಟ್ರಿಕ್ ಕಾರು ಅನಾವರಣಗೊಳಿಸಿದ Volkswagen

ಈ ಪ್ಲಾಟ್‌ಫಾರಂನಲ್ಲಿ ID.4 ಕಾರ್ ಅನ್ನು ಸಹ ಅಭಿವೃದ್ಧಿಪಡಿಸಲಾಗಿದೆ. ಈ ಎಲೆಕ್ಟ್ರಿಕ್ ಕಾರಿನ ಗಾತ್ರದ ಬಗ್ಗೆ ಹೇಳುವುದಾದರೆ ID.5 ಕಾರು 4,599 ಎಂಎಂ ಉದ್ದ, 2,600 ಎಂಎಂ ವ್ಹೀಲ್‌ಬೇಸ್ ಹೊಂದಿದೆ. Volkswagen ಕಂಪನಿಯು ಈ ಎಲೆಕ್ಟ್ರಿಕ್ ಕಾರಿನಲ್ಲಿ 549 ಲೀಟರ್ ಬೂಟ್‌ಸ್ಪೇಸ್ ನೀಡುತ್ತಿದೆ. ಇದರ ಗಾತ್ರವು ID.4 ಕಾರಿನಲ್ಲಿರುವ ಬೂಟ್ ಸ್ಪೇಸ್ ಗಿಂತ 6 ಲೀಟರ್ ಹೆಚ್ಚು.

ಹೊಸ ಎಲೆಕ್ಟ್ರಿಕ್ ಕಾರು ಅನಾವರಣಗೊಳಿಸಿದ Volkswagen

ಇನ್ನು ವಿನ್ಯಾಸದ ಬಗ್ಗೆ ಹೇಳುವುದಾದರೆ Volkswagen ID.5 ಕಾರಿಗೆ ಕೂಪೆ ವಿನ್ಯಾಸವನ್ನು ನೀಡಲಾಗಿದೆ. ಈ ಕಾರಿನಲ್ಲಿರುವ ಸ್ಲೋಪಿಂಗ್ ರೂಫ್ ಹಿಂಭಾಗದಲ್ಲಿ ರೇಕ್ ನಂತಹ ವಿನ್ಯಾಸವನ್ನು ಹೊಂದಿದೆ. ಈ ಕಾರಿನ ಮುಂಭಾಗದ ಗ್ರಿಲ್‌ನಲ್ಲಿರುವ ವೆಂಟ್ ಗಳು ಕಾರ್ ಅನ್ನು ತಂಪಾಗಿಸುವ ಅಗತ್ಯಕ್ಕೆ ಅನುಗುಣವಾಗಿ ಗಾಳಿಯನ್ನು ಆಟೋಮ್ಯಾಟಿಕ್ ಆಗಿ ಒಳಕ್ಕೆ ಸೆಳೆಯುತ್ತವೆ.

ಹೊಸ ಎಲೆಕ್ಟ್ರಿಕ್ ಕಾರು ಅನಾವರಣಗೊಳಿಸಿದ Volkswagen

ಈ ಎಲೆಕ್ಟ್ರಿಕ್ ಕಾರಿನ ಸಂಪೂರ್ಣ ವಿನ್ಯಾಸವು ಹೆಚ್ಚು ಏರೋಡೈನಾಮಿಕ್ ಆಗಿದ್ದು, ಕಡಿಮೆ ಬ್ಯಾಟರಿ ಬಳಕೆಯೊಂದಿಗೆ ಹೆಚ್ಚಿನ ವೇಗದಲ್ಲಿ ಚಲಿಸಲು ನೆರವಾಗುತ್ತದೆ. ಈ ಕಾರಿನ ಇಂಟಿರಿಯರ್ ಬಗ್ಗೆ ಹೇಳುವುದಾದರೆ, ID.5 ಕಾರಿನ ಕ್ಯಾಬಿನ್'ನಲ್ಲಿ ಹಲವಾರು ಆಧುನಿಕ ಫೀಚರ್ ಗಳನ್ನು ನೀಡಲಾಗಿದೆ. ಈ ಕ್ಯಾಬಿನ್ 6 ಇಂಚಿನ ಇನ್ಸ್'ಟ್ರೂಮೆಂಟ್ ಕ್ಲಸ್ಟರ್, 12 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಸಿಸ್ಟಂ, ಸ್ಪೋರ್ಟಿ ಡ್ರೈವರ್ ಹಾಗೂ ಫ್ರಂಟ್ ಪ್ಯಾಸೆಂಜರ್ ಸೀಟ್‌ಗಳನ್ನು ಹೊಂದಿದೆ.

ಹೊಸ ಎಲೆಕ್ಟ್ರಿಕ್ ಕಾರು ಅನಾವರಣಗೊಳಿಸಿದ Volkswagen

ಇದರ ಜೊತೆಗೆ ಈ ಎಲೆಕ್ಟ್ರಿಕ್ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಎಬಿಎಸ್ ಇಬಿಡಿ ಸೇರಿದಂತೆ ಹಲವಾರು ಫೀಚರ್‌ಗಳನ್ನು ನೀಡಲಾಗಿದೆ. ಈ ಕಾರು 4 ಸೀಟುಗಳನ್ನು ಹೊಂದಿದ್ದು, ನಾಲ್ಕು ಜನರು ಆರಾಮವಾಗಿ ಪ್ರಯಾಣಿಸಬಹುದು. ಸದ್ಯಕ್ಕೆ Volkswagen ಕಂಪನಿಯು ಈ ಎಲೆಕ್ಟ್ರಿಕ್ ಕಾರಿನ ಬೆಲೆಯ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಹೊಸ ಎಲೆಕ್ಟ್ರಿಕ್ ಕಾರು ಅನಾವರಣಗೊಳಿಸಿದ Volkswagen

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವ್ಯವಹಾರಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ತರುತ್ತಿರುವ ಆಟೋ ಮೊಬೈಲ್ ಕಂಪನಿಗಳು ಪರಿಸ್ಥಿತಿಗೆ ಅನುಗುಣವಾಗಿ ವಿವಿಧ ವಾಹನಗಳನ್ನು ಲೀಸ್ ಆಯ್ಕೆಯೊಂದಿಗೆ ನೀಡುತ್ತಿವೆ. Volkswagen India ಕಂಪನಿಯು ಸಹ ಕೆಲ ದಿನಗಳ ಹಿಂದೆ ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ವಿವಿಧ ಕಾರ್ ರೆಂಟಲ್ ಕಂಪನಿಗಳ ಜೊತೆಗೂಡಿ ಲೀಸ್ ಆಯ್ಕೆ ಆರಂಭಿಸಿದೆ.

ಹೊಸ ಎಲೆಕ್ಟ್ರಿಕ್ ಕಾರು ಅನಾವರಣಗೊಳಿಸಿದ Volkswagen

Volkswagen ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ Polo, Vento ಹಾಗೂ T-Roc ಕಾರುಗಳನ್ನು, ಕಾರ್ ರೆಂಟಲ್‌ ಕಂಪನಿಗಳಲ್ಲಿ ಆಸಕ್ತ ಗ್ರಾಹಕರಿಗೆ ಸಬ್‌ಸ್ಕ್ರೈಬ್ ಆಯ್ಕೆ ಪರಿಚಯಿಸಿದೆ. ಆಟೋ ಕಂಪನಿಗಳಿಗೆ ಕೋವಿಡ್‌ನಿಂದಾಗುತ್ತಿರುವ ಆರ್ಥಿಕ ಸಂಕಷ್ಟದಿಂದ ಹೊರಬರಲು ಕಾರ್ ಸಬ್‌ಸ್ಕೈಬ್ ಯೋಜನೆಗಳು ಸಾಕಷ್ಟು ಸಹಕಾರಿಯಾಗುತ್ತಿದ್ದು, Volkswagen ಕಂಪನಿಯು ಸಹ ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಚಂದಾದಾರಿಕೆಯನ್ನು ಆರಂಭಿಸಿದೆ. ಜರ್ಮನಿ ಮೂಲದ ಫೋಕ್ಸ್‌ವ್ಯಾಗನ್ ಕಂಪನಿಯು ಭಾರತದಲ್ಲಿ ಹಲವಾರು ವರ್ಷಗಳಿಂದ ತನ್ನ ಕಾರುಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಯು ತನ್ನ ಕಾರುಗಳನ್ನು ಕಾಲ ಕಾಲಕ್ಕೆ ಅಪ್ ಡೇಟ್ ಮಾಡುತ್ತಿದೆ.

Most Read Articles

Kannada
English summary
Volkswagen unveils new electric car to launch it in early 2022 details
Story first published: Saturday, November 6, 2021, 14:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X