150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಕಂಪನಿ ಜೊತೆಗೂಡಿ ಭಾರತದಲ್ಲಿ ಹಲವು ಹೊಸ ಯೋಜನೆಗಳನ್ನು ಆರಂಭಿಸಿದ್ದು, ಸಿ ಸೆಗ್ಮೆಂಟ್ ಸೆಡಾನ್ ಮತ್ತು ಬಿ ಸೆಗ್ಮೆಂಟ್ ಎಸ್‌ಯುವಿ ವಿಭಾಗದಲ್ಲಿ ಹೊಸ ಉತ್ಪನ್ನಗಳೊಂದಿಗೆ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ಸಿದ್ದತೆ ನಡೆಸಿದೆ.

150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಸ್ಕೋಡಾ ಇಂಡಿಯಾ ಕಂಪನಿಯು ವಿವಿಧ ಕಾರು ಮಾದರಿಗಳ ಮಾರಾಟದೊಂದಿಗೆ ಉತ್ತಮ ಮಾರಾಟ ಸೌಲಭ್ಯ ಹೊಂದಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಹೊಸ ಕಾರು ಉತ್ಪನ್ನಗಳೊಂದಿಗೆ ಪ್ರಬಲ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದೆ. ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಕುಶಾಕ್ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿರುವ ಸ್ಕೋಡಾ ಕಂಪನಿಯು ಸೆಡಾನ್ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಮಾದರಿಗಿಂತಲೂ ಉತ್ತಮ ವಿನ್ಯಾಸದ ಮತ್ತೊಂದು ಕಾರು ಮಾದರಿಯೊಂದನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.

150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಸ್ಕೋಡಾ ರ‍್ಯಾಪಿಡ್ ಮಾತ್ರವಲ್ಲದೆ ಫೋಕ್ಸ್‌‌ವ್ಯಾಗನ್ ವೆಂಟೊ ಕಾರು ಮಾದರಿಯು ಕೂಡಾ ಮಾರಾಟದಿಂದ ಸ್ಥಗಿತಗೊಳ್ಳುತ್ತಿದ್ದು, ವೆಂಟೊ ಸ್ಥಾನಕ್ಕೆ ಮತ್ತೊಂದು ಹೊಸ ವಿನ್ಯಾಸ ಮತ್ತು ಪವರ್‌ಫುಲ್ ಎಂಜಿನ್ ಆಯ್ಕೆ ಹೊಸ ಸೆಡಾನ್ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಕಾರು ಮಾದರಿಯನ್ನು ಮುಂದಿನ ಕೆಲವೇ ದಿನಗಳಲ್ಲಿ ಮಾರಾಟದಿಂದ ಸ್ಥಗಿತಗೊಳಿಸುವ ಬಗೆಗೆ ಈಗಾಗಲೇ ಮಾಹಿತಿ ಹಂಚಿಕೊಂಡಿರುವ ಸ್ಕೋಡಾ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ರ‍್ಯಾಪಿಡ್ ಸ್ಥಾನದಲ್ಲಿ ಸಂಪೂರ್ಣವಾಗಿ ಹೊಸ ಮಾದರಿಯೊಂದನ್ನು ಸಿದ್ದಪಡಿಸುತ್ತಿದೆ.

150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಸಹಭಾಗಿತ್ವ ಯೋಜನೆ ಅಡಿ ಅಭಿವೃದ್ದಿಗೊಳ್ಳುತ್ತಿರುವ ಫೋಕ್ಸ್‌ವ್ಯಾಗನ್ ಮತ್ತು ಸ್ಕೋಡಾ ಹೊಸ ಸೆಡಾನ್ ಕಾರು ಮಾದರಿಯು ತಾಂತ್ರಿಕವಾಗಿ ಮತ್ತು ಎಂಜಿನ್ ಆಯ್ಕೆಯಲ್ಲಿ ಬಹುತೇಕ ಒಂದೇ ಆಗಿರಲಿದ್ದು, ವಿನ್ಯಾಸದಲ್ಲಿ ತುಸು ಬದಲಾವಣೆಯೊಂದಿಗೆ ತಮ್ಮದೇ ಆದ ಗ್ರಾಹಕ ವರ್ಗವನ್ನು ಸೆಳೆಯಲಿವೆ. ಹೊಸ ಕಾರುಗಳಲ್ಲಿ ಜೋಡಣೆ ಮಾಡಲು ನಿರ್ಧರಿಸಿರುವ 1.5-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು ಎರಡು ಕಾರುಗಳಲ್ಲೂ ಒಂದೇ ಆಗಿರಲಿದ್ದು, ಹೊಸ ಎಂಜಿನ್ ಆಯ್ಕೆ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಯಾದ ಹೋಂಡಾ ಸಿಟಿ ಕಾರಿಗೆ ಭರ್ಜರಿ ಪೈಪೋಟಿ ನೀಡಲಿವೆ.

150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಹಾಗೆಯೇ ಹೊಸ ಕಾರುಗಳನ್ನು ಫೋಕ್ಸ್‌ವ್ಯಾಗನ್ ಜೊತೆಗಿನ ಸಹಭಾಗಿತ್ವ ಯೋಜನೆ ಅಡಿ ಸಿದ್ದಪಡಿಸಲಾದ ಎಂಕ್ಯೂಬಿ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವುದಾಗಿ ಮಾಹಿತಿ ಹಂಚಿಕೊಂಡಿದ್ದು, ಹೊಸ ಕಾರನ್ನು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಟಿಎಸ್ಐ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಮಾರಾಟ ಮಾಡಲಿದೆ.

150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಹೊಸ ಸೆಡಾನ್ ಕಾರಿನಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಇರಲಿದೆಯಾ ಎನ್ನುವ ಪ್ರಶ್ನೆಗೆ ಈಗಾಗಲೇ ಸ್ಪಷ್ಟನೆ ನೀಡಿರುವ ಸ್ಕೋಡಾ ಕಂಪನಿಯು ಹೊಸ ಕಾರಿನಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡಲಿದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಯಾದ ಹೋಂಡಾ ಸಿಟಿ ಕಾರಿನಲ್ಲಿರುವ ಬಹುತೇಕ ತಾಂತ್ರಿಕ ಅಂಶಗಳನ್ನು ಸ್ಕೋಡಾ ಸೆಡಾನ್ ಕಾರು ಕೂಡಾ ಪಡೆದುಕೊಳ್ಳಲಿದೆ.

150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಸದ್ಯ ಮಾರುಕಟ್ಟೆಯಲ್ಲಿ ರ‍್ಯಾಪಿಡ್ ಕಾರು ಸಿಂಗಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.29 ಲಕ್ಷ ಬೆಲೆ ಹೊಂದಿದ್ದು, ಹೊಸ ಸೆಡಾನ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ಸಾಧ್ಯತೆಗಳಿವೆ.

150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಫೋಕ್ಸ್‌ವ್ಯಾಗನ್ ವೆಂಟೊ ಕೂಡಾ ಸ್ಕೋಡಾ ಮಾದರಿಯಲ್ಲಿ ಸಿಂಗಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.68 ಲಕ್ಷ ಬೆಲೆ ಹೊಂದಿದ್ದು, ಹೊಸ ಆವೃತ್ತಿಯು ರೂ.9.50 ಲಕ್ಷದಿಂದ ರೂ.14 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಇನ್ನು ಪ್ರತಿಸ್ಪರ್ಧಿ ಹೋಂಡಾ ಸಿಟಿ ಕಾರು ಸದ್ಯ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.03 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.88 ಲಕ್ಷ ಬೆಲೆ ಹೊಂದಿದ್ದು, ಸಿಟಿ ಕಾರಿಗೆ ಪೈಪೋಟಿಯಾಗಿ ಸ್ಕೋಡಾ ಕಂಪನಿಯು ಹೊಸ ಕಾರನ್ನು ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಅಭಿವೃದ್ದಿಗೊಳಿಸುತ್ತಿದೆ.

150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಸ್ಕೋಡಾ ಸೆಡಾನ್ ಕಾರಿನಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಇಲ್ಲವಾದರೂ ಗ್ರಾಹಕರ ಬೇಡಿಕೆಯೆಂತೆ ಎರಡು ಪೆಟ್ರೋಲ್ ಎಂಜಿನ್ ಹೊಂದಲಿದ್ದು, ಆರಂಭಿಕ ಮಾದರಿಗಳಲ್ಲಿ 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳನ್ನು ಪರಿಚಯಿಸುವ ಸಾಧ್ಯತೆಗಳಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

150 ಬಿಎಚ್‌ಪಿ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿವೆ ನ್ಯೂ ಜನರೇಷನ್ ವೆಂಟೊ ಮತ್ತು ರ‍್ಯಾಪಿಡ್

ಒಟ್ಟಿನಲ್ಲಿ ಹೊಸ ಸೆಡಾನ್ ಕಾರಿನೊಂದಿಗೆ ಹೋಂಡಾ ಸಿಟಿಗೆ ಪ್ರಬಲ ಪೈಪೋಟಿ ನೀಡಲು ನಿರ್ಧರಿಸಿರುವ ಸ್ಕೋಡಾ ಮತ್ತು ಫೋಕ್ಸ್‌ವ್ಯಾಗನ್ ಕಂಪನಿಗಳು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳು ಸ್ಕೋಡಾ ಕಾರು ಮಾರಾಟ ಸಂಖ್ಯೆಯಲ್ಲಿ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಲಿವೆ.

Most Read Articles

Kannada
English summary
Volkswagen Vento And Skoda Rapid Successors Will Offer 150 bhp Turbo-Petrol Engine Option. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X