Just In
Don't Miss!
- Lifestyle
ಭಾನುವಾರದ ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಫಲ ಹೇಗಿದೆ ನೋಡಿ
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಬಿಡುಗಡೆಯಾಗಲಿವೆ ವೊಲ್ವೊ ನವೀಕೃತ ಎಕ್ಸ್‌ಸಿ60 ಎಸ್‌ಯುವಿ ಮತ್ತು ಎಸ್90 ಸೆಡಾನ್
ಸ್ವಿಡಿಷ್ ಆಟೋ ಕಂಪನಿಯು ಭವಿಷ್ಯ ಯೋಜನೆಗಳಿಗೆ ಚಾಲನೆ ನೀಡುವ ಮೂಲಕ ವಾಹನ ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, ಶೀಘ್ರದಲ್ಲೇ ತನ್ನ ಪ್ರಮುಖ ಕಾರು ಮಾದರಿಗಳಾದ ಎಕ್ಸ್‌ಸಿ60 ಎಸ್‌ಯುವಿ ಮತ್ತು ಎಸ್90 ಸೆಡಾನ್ ಮಾದರಿಗಳ ನವೀಕೃತ ಆವೃತ್ತಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ವೊಲ್ವೊ ಕಂಪನಿಯು ಭಾರತದಲ್ಲಿ ಸದ್ಯ ಎಸ್60, ಎಕ್ಸ್‌ಸಿ40, ಎಕ್ಸ್‌ಸಿ60, ಎಕ್ಸ್‌ಸಿ90, ಎಸ್90, ವಿ90 ಕ್ರಾಸ್ ಕಂಟ್ರಿ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಕಂಪನಿಯು ಎಕ್ಸ್‌ಸಿ60 ಮತ್ತು ಎಸ್90 ಸೆಡಾನ್ ಕಾರುಗಳ 2021ರ ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ. ಹೊಸ ಕಾರುಗಳು ಈಗಾಗಲೇ ಬಿಎಸ್-6 ಆವೃತ್ತಿಯೊಂದಿಗೆ ಮಾರಾಟವಾಗುತ್ತಿದ್ದು, 2021ರ ಮಾದರಿಯ ಮೂಲಕ ಕೆಲವು ಹೆಚ್ಚುವರಿ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿವೆ.

ಎಕ್ಸ್‌ಸಿ60 ಎಸ್‌ಯುವಿ ಮತ್ತು ಎಸ್90 ಸೆಡಾನ್ ಮಾದರಿಯು ಒಂದೇ ಮಾದರಿಯ 2.0-ಲೀಟರ್ ಡೀಸೆಲ್ ಆಟೋಮ್ಯಾಟಿಕ್ ಎಂಜಿನ್ ಆಯ್ಕೆ ಹೊಂದಿದ್ದು, ಹೊಸ ಆವೃತ್ತಿಗಳಲ್ಲಿ ಕಂಪನಿಯು ಉನ್ನತೀಕರಿಸಿದ ತಂತ್ರಜ್ಞಾನ ಸೌಲಭ್ಯಗಳನ್ನು ಪರಿಚಯಿಸುತ್ತಿದೆ.

ಹೊಸ ಕಾರುಗಳನ್ನು ವೊಲ್ವೊ ಕಂಪನಿಯು ಮುಂಬರುವ ಮೇ ಹೊತ್ತಿಗೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ನವೀಕೃತ ಮಾದರಿಗಳ ಜೊತೆಗೆ ವೊಲ್ವೊ ಕಂಪನಿಯು ಎಲೆಕ್ಟ್ರಿಕ್ ಕಾರು ಮಾದರಿಯನ್ನು ಪರಿಚಯಿಸುವ ಸಿದ್ದತೆಯಲ್ಲಿದೆ.

ಇನ್ನು ವೊಲ್ವೊ ಇಂಡಿಯಾ ಕಂಪನಿಯು ತನ್ನ ವಿವಿಧ ಮಾದರಿಯ ಐಷಾರಾಮಿ ಕಾರು ಮಾರಾಟದಲ್ಲಿ ತನ್ನ ತನ್ನದೆ ಆದ ಬೇಡಿಕೆಯನ್ನು ಹೊಂದಿದ್ದು, ದೇಶಾದ್ಯಂತ ಕೆಲವೇ ಕೆಲವು ನಗರಗಳಲ್ಲಿ ಮಾತ್ರ ಮಾರಾಟ ಸೌಲಭ್ಯವನ್ನು ಹೊಂದಿದೆ. ಕಾರು ಮಾರಾಟದಲ್ಲಿ ಹೊಸ ಬದಲಾವಣೆಗಳೊಂದಿಗೆ ಹೊಸ ಉತ್ಪನ್ನಗಳನ್ನು ಪರಿಚಯಿಸಲು ಸಿದ್ದವಾಗಿರುವ ವೊಲ್ವೊ ಕಂಪನಿಯು ಇತ್ತೀಚೆಗೆ ಚೆನ್ನೈನಲ್ಲಿ ಹೊಸ ಕಾರು ಮಾರಾಟ ಮಳಿಗೆಯೊಂದಕ್ಕೆ ಚಾಲನೆ ನೀಡಿತು.

ಹೊಸ ಮಾರಾಟ ಮಳಿಗೆಯ ಮೂಲಕ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಮಾರಾಟ ಮಳಿಗೆಯು 7 ಸಾವಿರ ಚದರ ಅಡಿಯಲ್ಲಿ ನಿರ್ಮಾಣಗೊಳ್ಳುವ ಮೂಲಕ ಒಂದೇ ಸೂರಿನಡಿ ಮಾರಾಟ ಮತ್ತು ಸೇವಾ ವಿಭಾಗವನ್ನು ಪರಿಚಯಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮಿನೆಂಟ್ ಗ್ರೂಪ್‌ನೊಂದಿಗೆ ಸೇರಿ ಹೊಸ ಕಾರು ಮಾರಾಟ ಮಳಿಗೆಗಳನ್ನು ತೆರೆಯಲಾಗಿದ್ದು, ಅನ್ನಾ ಸಲೈ ರಸ್ತೆಯಲ್ಲಿ ಹೊಸ ಕಾರು ಮಾರಾಟ ಮಳಿಗೆಯನ್ನು ಮತ್ತು ಟಿವಿಕೆ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ವರ್ಕ್‌ಶಾಪ್ ನಿರ್ಮಾಣ ಮಾಡಲಾಗಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಬದಲಾವಣೆಗಳನ್ನು ಪರಿಚಯಿಸುತ್ತಲೇ ಹೊಸ ಮಾದರಿಯ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿರುವ ವೊಲ್ವೊ ಕಂಪನಿಯು ಮುಂಬರುವ ಕೆಲವೇ ವರ್ಷಗಳಲ್ಲಿ ಡೀಸೆಲ್ ಕಾರುಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ನಿರ್ಧರಿಸದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ವೊಲ್ವೊ ಕಂಪನಿಯು ಕೂಡಾ ಈಗಾಗಲೇ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಪೂರ್ಣ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಹೈಬ್ರಿಡ್ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, 2022ರಿಂದ ಇನ್ನುಳಿದ ಕಾರು ಮಾದರಿಗಳಲ್ಲಿನ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಸಂಪೂರ್ಣವಾಗಿ ಸ್ಥಗಿತಗೊಳಿಸಿ ಪೂರ್ಣ ಪ್ರಮಾಣದಲ್ಲಿ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡುವ ಗುರಿಯೋಜನೆ ಹೊಂದಿದೆ.