ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ಸ್ವೀಡಿಷ್ ಕಾರು ಉತ್ಪಾದನಾ ಕಂಪನಿ ವೊಲ್ವೊ ತನ್ನ ಹೊಚ್ಚ ಹೊಸ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯನ್ನು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರು ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದೆ.

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ಮಾಲಿನ್ಯ ತಡೆಗಾಗಿ ಈಗಾಗಲೇ ಮುಂದುವರಿದ ಹಲವು ರಾಷ್ಟ್ರಗಳು ಡೀಸೆಲ್ ಎಂಜಿನ್ ವಾಹನಗಳ ಬಳಕೆ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ. ಇದಕ್ಕೆ ಪೂರಕವಾಗಿ ಭವಿಷ್ಯದ ವಾಹನ ಮಾದರಿಗಳ ಮೇಲೆ ಗಮನಹರಿಸಿರುವ ಆಟೋ ಉತ್ಪಾದನಾ ಕಂಪನಿಗಳು ಡೀಸೆಲ್ ವಾಹನಗಳ ಉತ್ಪಾದನೆಯನ್ನು ತಗ್ಗಿಸುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯನ್ನು ಹೆಚ್ಚಿಸುತ್ತಿವೆ.

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ವೊಲ್ವೊ ಕಂಪನಿಯು ಕೂಡಾ ಈಗಾಗಲೇ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಪೂರ್ಣ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಹೈಬ್ರಿಡ್ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, 2022ರಿಂದ ಇನ್ನುಳಿದ ಕಾರು ಮಾದರಿಗಳಲ್ಲೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ.

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ಹೈಬ್ರಿಡ್ ಎಂಜಿನ್ ವಾಹನ ಉತ್ಪಾದನೆಯಲ್ಲಿ ಈಗಾಗಲೇ ಮುಂಚೂಣಿ ಹೊಂದಿರುವ ವೊಲ್ವೊ ಕಂಪನಿಯು 2023ರ ವೇಳೆಗೆ ಒಟ್ಟು 6 ಕಾರು ಮಾದರಿಗಳನ್ನು ಎಲೆಕ್ಟ್ರಿಕ್ ರೂಪಾಂತರದಲ್ಲಿ ಮಾರಾಟಮಾಡುವ ಗುರಿಹೊಂದಿದ್ದು, ಇದೇ ವರ್ಷದ ಮಧ್ಯಂತರದಲ್ಲಿ ಭಾರತದಲ್ಲಿ ಮೊದಲ ಇವಿ ಕಾರು ಮಾದರಿಯಾಗಿ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಮಾದರಿಯನ್ನು ಬಿಡುಗಡೆಗಡೆಗೊಳಿಸುತ್ತಿದೆ.

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ಹೊಸ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಕಾರು ಮಾದರಿಯ ಬಿಡುಗಡೆಗೂ ಮುನ್ನ ಅನಾವರಣಗೊಳಿಸಿದ ವೊಲ್ವೊ ಕಂಪನಿಯು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದ್ದು, ಹೊಸ ಕಾರನ್ನು ಮುಂಬರುವ ಅಕ್ಟೊಬರ್ ಆರಂಭದಲ್ಲಿ ವಿತರಣೆ ಆರಂಭಿಸುವ ಸಿದ್ದತೆಯಲ್ಲಿದೆ.

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯನ್ನು ಕಂಪನಿಯು ಭಾರತದಲ್ಲಿ ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದಲೇ ಆಮದು ಮಾಡಿಕೊಳ್ಳಲಿದ್ದು, ಹೊಸ ಕಾರಿನಲ್ಲಿ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳನ್ನು ಜೋಡಣೆ ಮಾಡಿದೆ.

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ಹೊಸ ಎಕ್ಸ್‌ಸಿ40 ರಿಚಾರ್ಜ್ ಕಾರು ಮಾದರಿಯನ್ನು ಬೆಲ್ಜಿಯಂನಲ್ಲಿರುವ ಘೆಂಟ್‌ ಕಾರು ಉತ್ಪಾದನಾ ಘಟಕದಲ್ಲಿ ನಿರ್ಮಾಣವಾಗುತ್ತಿದ್ದು, ಇದೇ ಘಟಕದಿಂದಲೇ ವೊಲ್ವೊ ಕಂಪನಿಯು ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಫ್ತು ಕೈಗೊಳ್ಳಲಿದೆ.

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ಹೊಸ ಕಾರಿನ ಬೆಲೆ ಕುರಿತಾಗಿ ಸದ್ಯ ಯಾವುದೇ ಮಾಹಿತಿ ಹಂಚಿಕೊಂಡಿಲ್ಲವಾದರೂ ಸಾಮಾನ್ಯ ಆವೃತ್ತಿಗಿಂತಲೂ ದುಬಾರಿಯಾಗಿರಲಿದ್ದು, ಹೊಸ ಕಾರಿನಲ್ಲಿ ಕಂಪನಿಯು 78kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದೆ.

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್‌ ಸೌಲಭ್ಯ ಹೊಂದಿರುವ ಹೊಸ ಕಾರು 408-ಬಿಎಚ್‌ಪಿ ಮತ್ತು 660-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಎಲೆಕ್ಟ್ರಿಕ್ ಕಾರು ಮಾದರಿಯಲ್ಲೇ ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಅಧಿಕ ಮೈಲೇಜ್ ಪ್ರೇರಣೆ ಪಡೆದುಕೊಂಡಿರುವ ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 418 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ಸ್ಟ್ಯಾಂಡರ್ಡ್ ಅಥವಾ ಫಾಸ್ಟ್ ಚಾರ್ಜರ್ ಮೂಲಕ ಕೇವಲ 40 ನಿಮಿಷಗಳಲ್ಲಿ ಶೇ.80 ರಷ್ಟು ರೀಚಾರ್ಜ್ ಮಾಡಬಹುದಾಗಿದ್ದು, ಹಲವಾರು ಐಷಾರಾಮಿ ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ಕಂಪನಿಯು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ಹೊಸ ಕಾರಿನ ಹೊರಭಾಗದಲ್ಲಿನ ಫೀಚರ್ಸ್‌ಗಳನ್ನು ಸಾಮಾನ್ಯ ಕಾರಿನ ಮಾದರಿಯಲ್ಲೇ ಕಾಣುವಂತೆ ಡ್ಯುಯಲ್ ಎಕ್ಸಾಸ್ಟ್, ಚಾರ್ಜಿಂಗ್ ಪಾಯಿಂಟ್‌ಗೆ ಫ್ಯೂಲ್ ಟ್ಯಾಂಪ್ ಮಾದರಿಯ ಕ್ಯಾಪ್ ನೀಡಲಾಗಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ.

ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಗೆ ಬುಕ್ಕಿಂಗ್ ಆರಂಭಿಸಿದ ವೊಲ್ವೊ

ಭಾರತದಲ್ಲಿ ಸದ್ಯ ಬೆರಳಣಿಕೆಯಲ್ಲಿ ಮಾತ್ರ ಎಲೆಕ್ಟ್ರಿಕ್ ಕಾರುಗಳು ಮಾರಾಟಗೊಳ್ಳುತ್ತಿದ್ದು, ಮಾಲಿನ್ಯ ಮತ್ತು ಇಂಧನ ವೆಚ್ಚಗಳನ್ನು ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ ನೀಡುತ್ತಿರುವುದು ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯು ಕ್ರಮೇಣ ಹೆಚ್ಟುತ್ತಿದೆ. ಅದರಲ್ಲೂ ಐಷಾರಾಮಿ ಎಲೆಕ್ಟ್ರಿಕ್ ವಾಹನ ವಿಭಾಗದಲ್ಲಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ನಂತರದ ವೊಲ್ವೊ ಎಕ್ಸ್‌ಸಿ ರೀಚಾರ್ಜ್ ಕಾರು ಮಾದರಿಯೇ ಎರಡನೇ ಎಲೆಕ್ಟ್ರಿಕ್ ಮಾದರಿಯಾಗಿ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 55 ಲಕ್ಷದಿಂದ ರೂ.60 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ಸಾಧ್ಯತೆಗಳಿವೆ.

Most Read Articles

Kannada
Read more on ವೊಲ್ವೊ volvo
English summary
Volvo Started To Accept Pre-Order Booking For XC40 Recharge. Read in Kannada.
Story first published: Monday, June 7, 2021, 12:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X