Just In
- 8 min ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 57 min ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 2 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 2 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ಚಿಗುರು ಮೀಸೆ ಜ್ಯೋತಿಷಿಗೆ ಅಧಿಕಾರಿಗಳು ಸರ್ಟಿಫಿಕೇಟ್ ಕೊಟ್ರಾ?
- Sports
ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಅನಾವರಣಗೊಳಿಸಿದ ವೊಲ್ವೊ
ಸ್ವೀಡಿಷ್ ಕಾರು ಉತ್ಪಾದನಾ ಕಂಪನಿಯಾಗಿರುವ ವೊಲ್ವೊ ಭಾರತದಲ್ಲಿ ತನ್ನ ಹೊಚ್ಚ ಹೊಸ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರು ಬಿಡುಗಡೆಗೂ ಅನಾವರಣಗೊಳಿಸಿ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಮಾಲಿನ್ಯ ತಡೆಗಾಗಿ ಈಗಾಗಲೇ ಮುಂದುವರಿದ ಹಲವು ರಾಷ್ಟ್ರಗಳು ಡೀಸೆಲ್ ಎಂಜಿನ್ ವಾಹನಗಳ ಬಳಕೆ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ. ಇದಕ್ಕೆ ಪೂರಕವಾಗಿ ಭವಿಷ್ಯದ ವಾಹನ ಮಾದರಿಗಳ ಮೇಲೆ ಗಮನಹರಿಸಿರುವ ಆಟೋ ಉತ್ಪಾದನಾ ಕಂಪನಿಗಳು ಡೀಸೆಲ್ ವಾಹನಗಳ ಉತ್ಪಾದನೆಯನ್ನು ತಗ್ಗಿಸುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯನ್ನು ಹೆಚ್ಚಿಸುತ್ತಿವೆ.

ವೊಲ್ವೊ ಕಂಪನಿಯು ಕೂಡಾ ಈಗಾಗಲೇ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಪೂರ್ಣ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಹೈಬ್ರಿಡ್ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, 2022ರಿಂದ ಇನ್ನುಳಿದ ಕಾರು ಮಾದರಿಗಳಲ್ಲೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ.

ಹೈಬ್ರಿಡ್ ಎಂಜಿನ್ ವಾಹನ ಉತ್ಪಾದನೆಯಲ್ಲಿ ಈಗಾಗಲೇ ಮುಂಚೂಣಿ ಹೊಂದಿರುವ ವೊಲ್ವೊ ಕಂಪನಿಯು 2023ರ ವೇಳೆಗೆ ಒಟ್ಟು 6 ಕಾರು ಮಾದರಿಗಳನ್ನು ಎಲೆಕ್ಟ್ರಿಕ್ ರೂಪಾಂತರದಲ್ಲಿ ಮಾರಾಟಮಾಡುವ ಗುರಿಹೊಂದಿದ್ದು, ಇದೇ ವರ್ಷದ ಮಧ್ಯಂತರದಲ್ಲಿ ಭಾರತದಲ್ಲಿ ಮೊದಲ ಇವಿ ಕಾರು ಮಾದರಿಯಾಗಿ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಮಾದರಿಯನ್ನು ಬಿಡುಗಡೆಗಡೆಗೊಳಿಸುತ್ತಿದೆ.

ಹೊಸ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಕಾರು ಮಾದರಿಯ ಬಿಡುಗಡೆಗೂ ಮುನ್ನ ಅನಾವರಣಗೊಳಿಸಿದ ವೊಲ್ವೊ ಕಂಪನಿಯು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದ್ದು, ಜೂನ್ ಮೊದಲ ವಾರದಲ್ಲಿ ಹೊಸ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸುವುದಾಗಿ ಹೇಳಿಕೊಂಡಿದೆ. ಜೂನ್‌ನಲ್ಲಿ ಬುಕ್ಕಿಂಗ್ ಆರಂಭವಾದ ನಂತರ ಅಕ್ಟೊಬರ್ ಆರಂಭದಲ್ಲಿ ಹೊಸ ಕಾರಿನ ವಿತರಣೆಯು ಆರಂಭವಾಗಲಿದ್ದು, ಹೊಸ ಕಾರು ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದಲೇ ಆಮದುಗೊಳ್ಳಲಿದೆ.

ಎಕ್ಸ್‌ಸಿ40 ರಿಚಾರ್ಜ್ ಕಾರು ಮಾದರಿಯನ್ನು ಬೆಲ್ಜಿಯಂನಲ್ಲಿರುವ ಘೆಂಟ್ ಕಾರು ಉತ್ಪಾದನಾ ಘಟಕದಲ್ಲಿ ನಿರ್ಮಾಣವಾಗುತ್ತಿದ್ದು, ಇದೇ ಘಟಕದಿಂದಲೇ ವೊಲ್ವೊ ಕಂಪನಿಯು ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಫ್ತು ಕೈಗೊಳ್ಳಲಿದೆ.

ಹೊಸ ಕಾರಿನ ಬೆಲೆ ಕುರಿತಾಗಿ ಸದ್ಯ ಯಾವುದೇ ಮಾಹಿತಿ ಹಂಚಿಕೊಂಡಿಲ್ಲವಾದರೂ ಸಾಮಾನ್ಯ ಆವೃತ್ತಿಗಿಂತಲೂ ದುಬಾರಿಯಾಗಿರಲಿದ್ದು, ಹೊಸ ಕಾರಿನಲ್ಲಿ ಕಂಪನಿಯು 78kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದೆ.

ಡ್ಯಯಲ್ ಎಲೆಕ್ಟ್ರಿಕ್ ಮೋಟಾರ್ ಸೌಲಭ್ಯ ಹೊಂದಿರುವ ಹೊಸ ಕಾರು 408-ಬಿಎಚ್‌ಪಿ ಮತ್ತು 660-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಎಲೆಕ್ಟ್ರಿಕ್ ಕಾರು ಮಾದರಿಯಲ್ಲೇ ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಅಧಿಕ ಮೈಲೇಜ್ ಪ್ರೇರಣೆ ಪಡೆದುಕೊಂಡಿರುವ ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 418 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಸ್ಟ್ಯಾಂಡರ್ಡ್ ಅಥವಾ ಫಾಸ್ಟ್ ಚಾರ್ಜರ್ ಮೂಲಕ ಕೇವಲ 40 ನಿಮಿಷಗಳಲ್ಲಿ ಶೇ.80 ರಷ್ಟು ರೀಚಾರ್ಜ್ ಮಾಡಬಹುದಾಗಿದ್ದು, ಹಲವಾರು ಐಷಾರಾಮಿ ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ಕಂಪನಿಯು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಹೊಸ ಕಾರಿನ ಹೊರಭಾಗದಲ್ಲಿನ ಫೀಚರ್ಸ್‌ಗಳನ್ನು ಸಾಮಾನ್ಯ ಕಾರಿನ ಮಾದರಿಯಲ್ಲೇ ಕಾಣುವಂತೆ ಡ್ಯುಯಲ್ ಎಕ್ಸಾಸ್ಟ್, ಚಾರ್ಜಿಂಗ್ ಪಾಯಿಂಟ್‌ಗೆ ಫ್ಯೂಲ್ ಟ್ಯಾಂಪ್ ಮಾದರಿಯ ಕ್ಯಾಪ್ ನೀಡಲಾಗಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಭಾರತದಲ್ಲಿ ಸದ್ಯ ಬೆರಳಣಿಕೆಯಲ್ಲಿ ಎಲೆಕ್ಟ್ರಿಕ್ ಕಾರುಗಳು ಮಾರಾಟಗೊಳ್ಳುತ್ತಿದ್ದು, ಮಾಲಿನ್ಯ ಮತ್ತು ಇಂಧನ ವೆಚ್ಚಗಳನ್ನು ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ ನೀಡುತ್ತಿರುವುದು ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯು ಕ್ರಮೇಣ ಹೆಚ್ಟುತ್ತಿದೆ. ಅದರಲ್ಲೂ ಐಷಾರಾಮಿ ಎಲೆಕ್ಟ್ರಿಕ್ ವಾಹನ ವಿಭಾಗದಲ್ಲಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ನಂತರದ ವೊಲ್ವೊ ಎಕ್ಸ್‌ಸಿ ರೀಚಾರ್ಜ್ ಕಾರು ಮಾದರಿಯೇ ಎರಡನೇ ಎಲೆಕ್ಟ್ರಿಕ್ ಮಾದರಿಯಾಗಿ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 55 ಲಕ್ಷದಿಂದ ರೂ.60 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ಸಾಧ್ಯತೆಗಳಿವೆ.