ಫೇಸ್ ಮಾಸ್ಕ್ ಧರಿಸುವುದರ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ ಹಾಗೂ ನವದೆಹಲಿಯಲ್ಲಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪ್ರತಿದಿನ ಸಾವಿರಾರು ಕರೋನಾ ವೈರಸ್‌ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ.

ಫೇಸ್ ಮಾಸ್ಕ್ ಧರಿಸುವುದರ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಎಲ್ಲಾ ರಾಜ್ಯ ಸರ್ಕಾರಗಳು ಸೋಂಕು ಹರಡುವುದನ್ನು ತಡೆಯಲು ಪ್ರಯತ್ನ ಪಡುತ್ತಿವೆ. ಆದರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ಕೇಂದ್ರ ಸರ್ಕಾರವು ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಇದರನ್ವಯ ದೆಹಲಿಯಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಫೇಸ್ ಮಾಸ್ಕ್ ಧರಿಸುವುದರ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಈಗ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ದೆಹಲಿ ಹೈಕೋರ್ಟ್ ಯಾವುದೇ ವ್ಯಕ್ತಿಯ ಕಾರನ್ನು ಸಾರ್ವಜನಿಕ ಸ್ಥಳವೆಂದು ಪರಿಗಣಿಸಿದೆ. ಒಬ್ಬ ವ್ಯಕ್ತಿಯು ಏಕಾಂಗಿಯಾಗಿ ಕಾರಿನಲ್ಲಿ ಸಂಚರಿಸಿದರೂ ಸಹ ಫೇಸ್ ಮಾಸ್ಕ್ ಧರಿಸುವುದು ಕಡ್ಡಾಯವೆಂದು ದೆಹಲಿ ಹೈಕೋರ್ಟ್ ಹೇಳಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಫೇಸ್ ಮಾಸ್ಕ್ ಧರಿಸುವುದರ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಫೇಸ್ ಮಾಸ್ಕ್ ಜನರಿಗೆ ರಕ್ಷಣೆ ನೀಡುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಏಕಾಂಗಿಯಾಗಿ ವಾಹನ ಚಲಾಯಿಸುವಾಗ ಫೇಸ್ ಮಾಸ್ಕ್ ಧರಿಸದಿದ್ದಕ್ಕಾಗಿ ದಂಡ ವಿಧಿಸಿದ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಈ ಆದೇಶ ನೀಡಿದ್ದಾರೆ.

ಫೇಸ್ ಮಾಸ್ಕ್ ಧರಿಸುವುದರ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಕಾರಿನಲ್ಲಿ ಏಕಾಂಗಿ ಚಲಿಸುವಾಗ ಏಕೆ ಫೇಸ್ ಮಾಸ್ಕ್ ಧರಿಸುವುದಿಲ್ಲ. ಫೇಸ್ ಮಾಸ್ಕ್ ಧರಿಸುವುದು ನಿಮ್ಮ ಸುರಕ್ಷತೆಗಾಗಿ ಎಂದು ಅವರು ಹೇಳಿದ್ದಾರೆ. ಕರೋನಾ ವೈರಸ್ ಸಾಂಕ್ರಾಮಿಕ ಬಿಕ್ಕಟ್ಟು ಹೆಚ್ಚಾಗಿದೆ. ವ್ಯಕ್ತಿಯೊಬ್ಬ ಲಸಿಕೆ ತೆಗೆದುಕೊಂಡಿದ್ದರೂ, ತೆಗೆದುಕೊಳ್ಳದೇ ಇದ್ದರೂ ಫೇಸ್ ಮಾಸ್ಕ್ ಧರಿಸಲೇಬೇಕು ಎಂದು ಅವರು ಹೇಳಿದ್ದಾರೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಫೇಸ್ ಮಾಸ್ಕ್ ಧರಿಸುವುದರ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಕೋವಿಡ್ ವಿರುದ್ಧ ರಕ್ಷಣೆ ಪಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ಅವರು ವಿಶ್ವದಾದ್ಯಂತ ವಿಜ್ಞಾನಿಗಳು ಹಾಗೂ ಸರ್ಕಾರಗಳು ನೀಡಿರುವ ಸಲಹೆಯನ್ನು ಉಲ್ಲೇಖಿಸಿದ್ದಾರೆ.

ಫೇಸ್ ಮಾಸ್ಕ್ ಧರಿಸುವುದರ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಂತಿರುವಾಗ ಕಾರು ಚಾಲಕನು ಕಾರಿನ ವಿಂಡೋವನ್ನು ಮುಚ್ಚಬೇಕೆಂದು ಹೈಕೋರ್ಟ್ ಹೇಳಿದೆ. ಕರೋನಾ ವೈರಸ್ ಎಷ್ಟುಸಾಂಕ್ರಾಮಿಕವಾಗಿದೆಯೆಂದರೆ, ಸಿಗ್ನಲ್'ನಲ್ಲಿ ಕಾರು ನಿಂತಿರುವಾಗಲೂ ಸಹ ಯಾರಿಗಾದರೂ ಸೋಂಕು ತಗುಲಬಹುದು ಎಂದು ಹೈಕೋರ್ಟ್ ಹೇಳಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಫೇಸ್ ಮಾಸ್ಕ್ ಧರಿಸುವುದರ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಫೇಸ್ ಮಾಸ್ಕ್ ಇಲ್ಲದೇ ಏಕಾಂಗಿಯಾಗಿ ಕಾರಿನಲ್ಲಿ ಚಲಿಸುತ್ತಿದ್ದ ಸೌರಭ್ ಶರ್ಮಾ ಎಂಬ ವಕೀಲರಿಗೆ ಪೊಲೀಸರು ರೂ.500 ದಂಡ ವಿಧಿಸಿದ್ದರು. ಪೊಲೀಸರ ಈ ಕ್ರಮದ ವಿರುದ್ಧ ಆ ವಕೀಲರು ಹೈಕೋರ್ಟಿನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಫೇಸ್ ಮಾಸ್ಕ್ ಧರಿಸುವುದರ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಈ ಪ್ರಕರಣದ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಈ ತೀರ್ಪು ನೀಡಿದೆ. ಕಾರಿನಲ್ಲಿ ಒಬ್ಬರೇ ಪ್ರಯಾಣ ಮಾಡುತ್ತಿರುವಾಗ ಫೇಸ್ ಮಾಸ್ಕ್ ಧರಿಸಬೇಕೆಂಬ ನಿಯಮವಿಲ್ಲವೆಂದು ಕೇಂದ್ರ ಆರೋಗ್ಯ ಇಲಾಖೆಯು ಹೈಕೋರ್ಟ್‌ಗೆ ತಿಳಿಸಿತ್ತು.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಫೇಸ್ ಮಾಸ್ಕ್ ಧರಿಸುವುದರ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ನಿಯಮಗಳನ್ನು ರೂಪಿಸುವ ಹಾಗೂ ಜಾರಿಗೊಳಿಸುವ ಹಕ್ಕಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ದೆಹಲಿಯ ಎಎಪಿ ಸರ್ಕಾರವು ಖಾಸಗಿ ಅಥವಾ ಸಾರ್ವಜನಿಕ ವಾಹನಗಳಲ್ಲಿ ಪ್ರಯಾಣಿಸುವ ಎಲ್ಲರೂ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕೆಂದು ವಾದಿಸಿತ್ತು.

ಫೇಸ್ ಮಾಸ್ಕ್ ಧರಿಸುವುದರ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಕಳೆದ ವರ್ಷದ ಏಪ್ರಿಲ್‌ ತಿಂಗಳಿನಲ್ಲಿ ದೆಹಲಿ ಸರ್ಕಾರವು ಇದೇ ರೀತಿಯ ಆದೇಶ ಹೊರಡಿಸಿತ್ತು. ದೆಹಲಿ ಸರ್ಕಾರವು ಈ ನಿಯಮವನ್ನು ಜಾರಿಗೊಳಿಸಿದ್ದರೂ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಫೇಸ್ ಮಾಸ್ಕ್ ಧರಿಸುವ ಅಗತ್ಯವಿಲ್ಲವೆಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ ಎಂದು ಅರ್ಜಿದಾರರು ವಾದಿಸಿದ್ದರು.

Most Read Articles

Kannada
Read more on auto news
English summary
Wearing face mask is compulsory in car even if travelling alone says Delhi High court. Read in Kannada.
Story first published: Wednesday, April 7, 2021, 14:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X