ಎಲೆಕ್ಟ್ರಿಕ್ ಕಾರು ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಖ್ಯಾತ ಮೊಬೈಲ್ ತಯಾರಕ ಕಂಪನಿ

ವಿಶ್ವಾದ್ಯಂತ ದಿನೇ ದಿನೇ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಪರಿಸರ ಸ್ನೇಹಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ದೇಶಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ. ನಾರ್ವೆ ಸೇರಿದಂತೆ ಯುರೋಪಿನ ಹಲವು ದೇಶಗಳಲ್ಲಿ 2030ರ ವೇಳೆಗೆ ಸಂಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಭಾರತದಲ್ಲಿಯೂ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ.

ಎಲೆಕ್ಟ್ರಿಕ್ ಕಾರು ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಫೇಮ್ 2 ನಂತಹ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡಲಾಗುತ್ತಿದೆ. ಇನ್ನು ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿವೆ.

ಎಲೆಕ್ಟ್ರಿಕ್ ಕಾರು ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಖ್ಯಾತ ಮೊಬೈಲ್ ತಯಾರಕ ಕಂಪನಿ

ವಾಹನ ತಯಾರಕ ಕಂಪನಿಗಳು ಮಾತ್ರವಲ್ಲದೇ ಸೆಲ್ ಫೋನ್ ತಯಾರಕ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸಲು ಮುಂದಾಗಿವೆ. ಕೆಲವು ತಿಂಗಳ ಹಿಂದಷ್ಟೇ ಲೆನೊವೊ ಕಂಪನಿಯು ಸ್ಕೂಟರ್ ಮಾದರಿಯ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆಗೊಳಿಸಿತ್ತು. ಕಳೆದ ಕೆಲವು ತಿಂಗಳುಗಳಿಂದ ವಿಶ್ವದ ಅತಿ ದೊಡ್ಡ ಮೊಬೈಲ್ ಫೋನ್ ತಯಾರಕ ಕಂಪನಿಯಾದ ಶಿಯೋಮಿ (Xiaomi) ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿಡಲಿದೆ ಎಂದು ಸುದ್ದಿಯಾಗುತ್ತಿತ್ತು.

ಎಲೆಕ್ಟ್ರಿಕ್ ಕಾರು ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಆದರೆ ಕಂಪನಿಯ ತನ್ನ ಎಲೆಕ್ಟ್ರಿಕ್ ಕಾರ್ ಅನ್ನು ಯಾವಾಗ ಬಿಡುಗಡೆಗೊಳಿಸುತ್ತದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿರಲಿಲ್ಲ. ಈಗ ಸ್ವತಃ ಶಿಯೋಮಿ ಕಂಪನಿಯೇ ತನ್ನ ಎಲೆಕ್ಟ್ರಿಕ್ ಕಾರ್ ಅನ್ನು ಯಾವಾಗ ಬಿಡುಗಡೆಗೊಳಿಸಲಾಗುವುದು ಎಂಬ ಮಾಹಿತಿ ನೀಡಿದೆ. ವರದಿಗಳ ಪ್ರಕಾರ ಶಿಯೋಮಿ ಕಂಪನಿಯು ತನ್ನ ಮೊದಲ ಕಾರ್ ಅನ್ನು 2024 ರ ಮೊದಲಾರ್ಧದಲ್ಲಿ ಬಿಡುಗಡೆಗೊಳಿಸಲಿದೆ.

ಎಲೆಕ್ಟ್ರಿಕ್ ಕಾರು ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಶಿಯೋಮಿ ಚೀನಿ ಮೂಲದ ಸ್ಮಾರ್ಟ್ ಫೋನ್ ತಯಾರಕ ಕಂಪನಿಯಾಗಿದ್ದು, ಎಲೆಕ್ಟ್ರಿಕ್ ವಾಹನ ತಯಾರಿಕೆಯಲ್ಲಿ ಪರಿಣತಿ ಹೊಂದಿದೆ. ಶಿಯೋಮಿ ಕಂಪನಿಯು ಈಗಾಗಲೇ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆಯಲ್ಲಿ ತೊಡಗಿದೆ ಎಂಬುದು ಗಮನಾರ್ಹ. ಇದರ ನಂತರ ಕಂಪನಿಯು ತನ್ನ ವ್ಯಾಪಾರವನ್ನು ವಿಸ್ತರಿಸುವ ಸಲುವಾಗಿ ಶೀಘ್ರದಲ್ಲೇ ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದಿಸುವುದಾಗಿ ಘೋಷಿಸಿದೆ.

ಎಲೆಕ್ಟ್ರಿಕ್ ಕಾರು ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಇದಕ್ಕಾಗಿ ಬೃಹತ್ ಬಂಡವಾಳ ಹೂಡಿಕೆ ಮಾಡುವುದಾಗಿ ಕಂಪನಿ ಇತ್ತೀಚೆಗೆ ಘೋಷಿಸಿತ್ತು. ಇದರ ನಂತರ ಶಿಯೋಮಿ ಕಂಪನಿಯು ಎಲೆಕ್ಟ್ರಿಕ್ ವಾಹನ ತಯಾರಿಕೆಯಲ್ಲಿ ಹೆಚ್ಚು ಸಕ್ರಿಯವಾಗಿ ತೊಡಗಿಸಿ ಕೊಂಡಿದೆ. ವಿಶ್ವಾದ್ಯಂತ ಎಲೆಕ್ಟ್ರಿಕ್ ವಾಹನಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಶಿಯೋಮಿ ಕಂಪನಿಯು ತನ್ನ ಎಲೆಕ್ಟ್ರಿಕ್ ಕಾರು ಬಿಡುಗಡೆಯ ಬಗ್ಗೆ ಮಾಹಿತಿ ನೀಡಿದೆ.

ಎಲೆಕ್ಟ್ರಿಕ್ ಕಾರು ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಶಿಯೋಮಿ ವಿಶ್ವದ ಅತಿ ದೊಡ್ಡ ಸೆಲ್ ಫೋನ್ ತಯಾರಕ ಕಂಪನಿಗಳಲ್ಲಿ ಒಂದಾಗಿದೆ. ಕಂಪನಿಯು ಅತ್ಯಾಧುನಿಕ ಮೊಬೈಲ್ ಫೋನ್ ಗಳನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಕಂಪನಿಯು ಅಭಿವೃದ್ಧಿಪಡಿಸುತ್ತಿರುವ ಎಲೆಕ್ಟ್ರಿಕ್ ಕಾರು ಹೆಚ್ಚು ವಿಶೇಷತೆಗಳೊಂದಿಗೆ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ನಿರೀಕ್ಷೆಗಳಿವೆ.

ಎಲೆಕ್ಟ್ರಿಕ್ ಕಾರು ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಶಿಯೋಮಿ ಕಂಪನಿಯು ಎಲೆಕ್ಟ್ರಿಕ್ ವಾಹನ ತಯಾರಿಕೆಗಾಗಿ ಸುಮಾರು 10 ಬಿಲಿಯನ್ ಡಾಲರ್ ಹೂಡಿಕೆ ಮಾಡಿದೆ. ಮುಂದಿನ ಹತ್ತು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಕ್ರಾಂತಿ ಮಾಡುವುದಾಗಿ ಕಂಪನಿ ಹೇಳಿದೆ. ಶಿಯೋಮಿ ಎಲೆಕ್ಟ್ರಿಕ್ ವಾಹನ ತಯಾರಿಕೆಗೆ ಕಾಲಿಡುತ್ತಿರುವ ಮೊದಲ ಮೊಬೈಲ್ ಕಂಪನಿಯಲ್ಲ ಎಂಬುದು ಗಮನಾರ್ಹ.

ಎಲೆಕ್ಟ್ರಿಕ್ ಕಾರು ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಲೆನೊವೊ, ಆಪಲ್, ಹುವೈ ನಂತಹ ಮೊಬೈಲ್ ಫೋನ್ ತಯಾರಕ ಕಂಪನಿಗಳು ಈಗಾಗಲೇ ಎಲೆಕ್ಟ್ರಿಕ್ ವಾಹನ ತಯಾರಿಕೆಯಲ್ಲಿ ತೊಡಗಿವೆ. ಗೂಗಲ್ ಹಾಗೂ ಅಮೆಜಾನ್ ನಂತಹ ಕಂಪನಿಗಳು ಸ್ವಯಂಚಾಲಿತ ವಾಹನಗಳನ್ನು ತಯಾರಿಸುವ ಪ್ರಕ್ರಿಯೆಯಲ್ಲಿ ನಿರತವಾಗಿವೆ. ಈ ಸಾಲಿಗೆ ಶಿಯೋಮಿ ಹೊಸ ಸೇರ್ಪಡೆಯಾಗಿದೆ. ಕಂಪನಿಯ ಸೆಲ್ ಫೋನ್'ಗಳು ಮೊಬೈಲ್ ಮಾರುಕಟ್ಟೆಯಲ್ಲಿ ತಮ್ಮದೇ ಆದ ಪ್ರಾಬಲ್ಯವನ್ನು ಸಾಧಿಸಿವೆ.

ಎಲೆಕ್ಟ್ರಿಕ್ ಕಾರು ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಕಡಿಮೆ ವೆಚ್ಚದ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡುವ ಮೂಲಕ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿಯೂ ಇದೇ ರೀತಿಯ ಪ್ರಾಬಲ್ಯವನ್ನು ಹೊಂದುವ ಸಾಧ್ಯತೆಗಳಿವೆ. ಕಂಪನಿಯು ಈಗಾಗಲೇ ಸ್ಮಾರ್ಟ್ ವಾಚ್, ಏರ್ ಪ್ಯೂರಿಫೈಯರ್, ಎಲ್ಇಡಿ ಟಿವಿ, ಪ್ರೊಜೆಕ್ಟರ್, ವ್ಯಾಕ್ಯೂಮ್ ಕ್ಲೀನರ್, ಬ್ಲೂಟೂತ್ ಸ್ಪೀಕರ್, ಇಂಟರ್ ನೆಟ್ ರೂಟರ್, ಬ್ಯಾಕ್ ಪ್ಯಾಕ್, ಇಯರ್ ಫೋನ್, ಇಯರ್ ಬಡ್, ಎಲ್ಇಡಿ ಲೈಟ್, ಸೂಟ್ ಕೇಸ್, ಸೆಕ್ಯುರಿಟಿ ಕ್ಯಾಮೆರಾ ಸೇರಿದಂತೆ ಹಲವು ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುತ್ತಿದೆ.

ಎಲೆಕ್ಟ್ರಿಕ್ ಕಾರು ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಖ್ಯಾತ ಮೊಬೈಲ್ ತಯಾರಕ ಕಂಪನಿ

Hyundai, Mahindra and Mahindra, Tata Motors, MG Motor ಸೇರಿದಂತೆ ಹಲವು ಕಂಪನಿಗಳು ಈಗಾಗಲೇ ತಮ್ಮ ಎಲೆಕ್ಟ್ರಿಕ್ ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿವೆ. Tata Motors ಕಂಪನಿಯು ಕೆಲವು ದಿನಗಳ ಹಿಂದಷ್ಟೇ ತನ್ನ Tigor ಎಲೆಕ್ಟ್ರಿಕ್ ಕಾರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Xiaomi mobile company to launch electric car by 2024 details
Story first published: Tuesday, October 19, 2021, 19:04 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X