Just In
- 5 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 6 hrs ago
2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 6 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 6 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇನ್ನು ಕೆಲವೇ ದಿನಗಳಲ್ಲಿ ಕೇವಲ ಫಾಸ್ಟ್‌ಟ್ಯಾಗ್ ಲೇನ್‌ಗಳನ್ನು ಮಾತ್ರ ಹೊಂದಿರಲಿದೆ ಈ ಎಕ್ಸ್‌ಪ್ರೆಸ್ ವೇ
ಯಮುನಾ ಎಕ್ಸ್‌ಪ್ರೆಸ್‌ನಲ್ಲಿ ಚಲಿಸುವ ಎಲ್ಲಾ ವಾಹನಗಳಿಗೆ ಫೆಬ್ರವರಿ 15ರಿಂದ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫೆಬ್ರವರಿ 15ರಿಂದ ದೇಶದಲ್ಲಿ ಫಾಸ್ಟ್‌ಟ್ಯಾಗ್ ಅನುಷ್ಠಾನಗೊಳಿಸಲು ಸಿದ್ಧತೆಗಳನ್ನು ನಡೆಸಿದೆ. ಇದರಿಂದಾಗಿ ಈ ಎಕ್ಸ್‌ಪ್ರೆಸ್ ವೇ ಫಾಸ್ಟ್‌ಟ್ಯಾಗ್ ಲೇನ್‌ಗಳನ್ನು ಮಾತ್ರವೇ ಹೊಂದಿರಲಿದೆ.

ಯಮುನಾ ಎಕ್ಸ್‌ಪ್ರೆಸ್‌ವೇಯ ಎಲ್ಲಾ ಟೋಲ್ ಬೂತ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಲೇನ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಉಪಕರಣಗಳನ್ನು ಪರೀಕ್ಷಿಸಲಾಗುತ್ತಿದೆ. ದೆಹಲಿ-ಆಗ್ರಾ ಯಮುನಾ ಎಕ್ಸ್‌ಪ್ರೆಸ್ ವೇ ಮೂಲಕ ಪ್ರತಿದಿನ ಸುಮಾರು 40,000 ವಾಹನಗಳು ಸಂಚರಿಸುತ್ತವೆ. ಇವುಗಳಲ್ಲಿ ಲಘು ಹಾಗೂ ಭಾರೀ ಗಾತ್ರದ ವಾಹನಗಳು ಸೇರಿವೆ. ಎಲೆಕ್ಟ್ರಾನಿಕ್ ಟೋಲ್ ಸಂಗ್ರಹದ ಕೊರತೆಯಿಂದಾಗಿ ಟೋಲ್ ಬೂತ್‌ಗಳಲ್ಲಿ ವಾಹನಗಳು ಗಂಟೆ ಗಟ್ಟಲೇ ಕಾಯುವಂತಾಗಿದೆ.

ಫಾಸ್ಟ್‌ಟ್ಯಾಗ್ ಕಡ್ಡಾಯಗೊಂಡ ನಂತರ ಎಕ್ಸ್‌ಪ್ರೆಸ್‌ವೇಯಲ್ಲಿನ ಟ್ರಾಫಿಕ್ ಜಾಮ್ ನಿವಾರಣೆಯಾಗುತ್ತದೆ ಎಂದು ಹೇಳಲಾಗಿದೆ. ಫಾಸ್ಟ್‌ಟ್ಯಾಗ್ ಕಡ್ಡಾಯ ಅಳವಡಿಕೆಗೆ ಜನವರಿ 1ರ ಗಡುವು ನೀಡಲಾಗಿತ್ತು. ಆದರೆ ಕೋವಿಡ್ -19 ಹಿನ್ನೆಲೆಯಲ್ಲಿ ಈ ಗಡುವನ್ನು ಮುಂದೂಡಲಾಗಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಹೆಚ್‌ಎಐ) ವರದಿಗಳ ಪ್ರಕಾರ 75% - 80% ವಾಹನಗಳು ಫಾಸ್ಟ್‌ಟ್ಯಾಗ್ ಮೂಲಕವೇ ಟೋಲ್ ಪಾವತಿಸುತ್ತಿವೆ. 2021ರ ಏಪ್ರಿಲ್ 1ರಿಂದ ಹೊಸ ವಾಹನವನ್ನು ನೋಂದಾಯಿಸುವಾಗ ಫಾಸ್ಟ್‌ಟ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ.

2020ರ ಡಿಸೆಂಬರ್‌ನಲ್ಲಿ ದೇಶಾದ್ಯಂತ ಫಾಸ್ಟ್‌ಟ್ಯಾಗ್ ಮೂಲಕ 13.84 ಕೋಟಿ ವಹಿವಾಟು ನಡೆದಿದ್ದು, ರೂ.2,303.79 ಕೋಟಿ ಸಂಗ್ರಹವಾಗಿದೆ. ದೇಶದಲ್ಲಿ 2.30 ಕೋಟಿ ಫಾಸ್ಟ್‌ಟ್ಯಾಗ್ ಬಳಕೆದಾರರಿದ್ದಾರೆ ಎಂದು ವರದಿ ಹೇಳಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಟೋಲ್ ಸಂಗ್ರಹವನ್ನು ಸಂಪೂರ್ಣವಾಗಿ ಕ್ಯಾಶ್ ಲೆಸ್ ಆಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಟೋಲ್ ಬೂತ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಆಧಾರಿತ ಟೋಲ್ ಸಂಗ್ರಹಕ್ಕೆ ಮೂಲಸೌಕರ್ಯಗಳನ್ನು ಸಿದ್ಧಪಡಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಹಾಗೂ ಎಕ್ಸ್‌ಪ್ರೆಸ್ ಹೆದ್ದಾರಿಗಳನ್ನು ವೇಗವಾಗಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ರಸ್ತೆ ಯೋಜನೆಗಳಲ್ಲಿ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹವೂ ಸೇರಿದೆ. ಈ ಯೋಜನೆಯ ಮೂಲಕ ದೇಶದ ಎಲ್ಲಾ ಟೋಲ್ ಪ್ಲಾಜಾಗಳು 100%ನಷ್ಟು ಕ್ಯಾಶ್ ಲೆಸ್ ಆಗಲಿವೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ದೇಶದ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಡೆಡಿಕೇಟೆಡ್ ಫಾಸ್ಟ್‌ಟ್ಯಾಗ್ ಲೇನ್‌ಗಳನ್ನು ನಿರ್ಮಿಸಲಾಗಿದೆ. ಫಾಸ್ಟ್‌ಟ್ಯಾಗ್ ಎಂದರೆ ವಾಹನಗಳ ಮುಂಭಾಗದ ಗ್ಲಾಸಿನ ಮೇಲೆ ಅಳವಡಿಸಲಾಗುವ ಡಿಜಿಟಲ್ ಸ್ಟಿಕ್ಕರ್ ಆಗಿದೆ. ಈ ಸ್ಟಿಕ್ಕರ್ ರೇಡಿಯೋ ಫ್ರಿಕ್ವೆನ್ಸಿ ಐಡೆಂಟಿಫಿಕೇಶನ್ ಟೆಕ್ನಾಲಜಿಯ ಮೂಲಕ ಕಾರ್ಯನಿರ್ವಹಿಸುತ್ತದೆ.

ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳು ಟೋಲ್ ಪ್ಲಾಜಾ ಮೂಲಕ ಹಾದುಹೋದಾಗ ಫಾಸ್ಟ್‌ಟ್ಯಾಗ್ ಪ್ರಿಪೇಯ್ಡ್ ಖಾತೆಯಿಂದ ಹಣವು ಆಟೋಮ್ಯಾಟಿಕ್ ಆಗಿ ಕಡಿತವಾಗುತ್ತದೆ. ಇದರಿಂದಾಗಿ ವಾಹನಗಳು ಟೋಲ್ ಪ್ಲಾಜಾದಲ್ಲಿ ನಿಂತು ಟೋಲ್ ಪಾವತಿಸುವ ಅಗತ್ಯವಿಲ್ಲ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಇದರಿಂದಾಗಿ ಸಮಯ ಉಳಿಯುವುದರ ಜೊತೆಗೆ ಮಾಲಿನ್ಯವನ್ನು ಸಹ ಕಡಿಮೆಯಾಗುತ್ತದೆ. ಟೋಲ್ ಶುಲ್ಕ ಸಂಗ್ರಹವು 100% ಫಾಸ್ಟ್‌ಟ್ಯಾಗ್ ಮೂಲಕವೇ ಜಾರಿಯಾದ ನಂತರ ವಾಹನಗಳು ಟೋಲ್ ಪ್ಲಾಜಾಗಳಲ್ಲಿ ನಿಲ್ಲುವುದು ತಪ್ಪುತ್ತದೆ. ಫಾಸ್ಟ್‌ಟ್ಯಾಗ್'ಗಳನ್ನು ಸಾರಿಗೆ ಕಚೇರಿ, ಬ್ಯಾಂಕ್, ಅಮೆಜಾನ್ ಹಾಗೂ ಪೇಟಿಎಂ ಮೂಲಕ ಖರೀದಿಸಬಹುದು.

ಫಾಸ್ಟ್‌ಟ್ಯಾಗ್ ಖರೀದಿಸಲು ಕೆವೈಸಿ ಹಾಗೂ ವಾಹನ ನೋಂದಣಿ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ. ಫಾಸ್ಟ್‌ಟ್ಯಾಗ್ ಅಳವಡಿಸಿಕೊಳ್ಳದೇ ಟೋಲ್ ಪ್ಲಾಜಾ ಮೂಲಕ ಸಾಗುವ ವಾಹನಗಳಿಗೆ ಎರಡು ಪಟ್ಟು ಹೆಚ್ಚು ಟೋಲ್ ಶುಲ್ಕ ವಿಧಿಸಲಾಗುವುದು.