ಬಿಡುಗಡೆಯಾಗಲಿರುವ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಮಹೀಂದ್ರಾ ಕಂಪನಿಯು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ತರುವ ನೀರಿಕ್ಷೆಯಲ್ಲಿದ್ದು, 2025ರ ವೇಳೆಗೆ ಒಟ್ಟು ಒಂಬತ್ತು ಹೊಸ ಎಸ್‌ಯುವಿ ಕಾರುಗಳನ್ನು ಪರಿಚಯಿಸುವ ಬೃಹತ್ ಯೋಜನೆ ಚಾಲನೆ ನೀಡಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಹೊಸ ಎಸ್‌ಯುವಿ ಕಾರುಗಳ ಬಿಡುಗಡೆ ಯೋಜನೆಯ ಭಾಗವಾಗಿ ಮೊದಲ ಹಂತದಲ್ಲಿ ಎಕ್ಸ್‌ಯುವಿ700 ಆವೃತ್ತಿಯನ್ನು ಅನಾವರಣಗೊಳಿಸಿದ್ದು, ಹೊಸ ಕಾರು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿ ಮೂಲಕ ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಸಿದ್ದಪಡಿಸಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಹೊಸ ಕಾರು ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಹೊಸ ಎಕ್ಸ್‌ಯುವಿ700 ಎಸ್‌ಯುವಿ ಅಭಿವೃದ್ದಿಗೊಂಡಿದ್ದು, ಮಧ್ಯಮ ಕ್ರಮಾಂಕದ ಹಲವು ಕಾರು ಮಾದರಗಳಿಗೆ ಭರ್ಜರಿ ಪೈಪೋಟಿ ನೀಡುವಂತಹ ಪ್ರಮುಖ ಫೀಚರ್ಸ್ ಪಡೆದುಕೊಂಡಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಎಕ್ಸ್‌ಯುವಿ ಸರಣಿಯಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಜೊತೆ ಎಲೆಕ್ಟ್ರಿಕ್ ಆವೃತ್ತಿಗಳು ಸಹ ಸೇರಿದ್ದು, ಮೊದಲ ಹಂತದಲ್ಲಿ ಅನಾವರಣಗೊಂಡಿರುವ ಎಕ್ಸ್‌ಯುವಿ700 ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಆಧರಿಸಿ ಬಿಡುಗಡೆಯಾಗಲಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಸಂಪೂರ್ಣವಾಗಿ ಹೊಸ ತಂತ್ರಜ್ಞಾನ, ವಿನೂತನ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಲ್ಲೇ ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಹೊಸ ಎಕ್ಸ್‌‌ಯುವಿ700 ಎಸ್‌ಯುವಿ ಮಾದರಿಯ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಎಂಎಕ್ಸ್ ಸೀರಿಸ್ ಮತ್ತು ಆಂಡ್ರಿನೊಎಕ್ಸ್ ಸೀರಿಸ್‌ ಪಡೆದುಕೊಂಡಿದೆ. ಇದರಲ್ಲಿ ಎಂಎಕ್ಸ್ ಸೀರಿಸ್ ಮಾದರಿಗಳು 5 ಸೀಟರ್‌ನೊಂದಿಗೆ ಬಿಡುಗಡೆಯಾಗಲಿದ್ದರೆ ಆಂಡ್ರಿನೊಎಕ್ಸ್ ಸೀರಿಸ್‌ ಕಾರುಗಳು 7 ಸೀಟರ್ ಸೌಲಭ್ಯದೊಂದಿಗೆ ತುಸು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಮಹೀಂದ್ರಾ ಕಂಪನಿಯು ಎಂಎಕ್ಸ್ ಸೀರಿಸ್ ಹೊಂದಿರುವ ಎಕ್ಸ್‌ಯುವಿ700 ಮಾದರಿಯ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.99 ಲಕ್ಷ ಬೆಲೆಗೆ ನಿಗದಿಪಡಿಸಿದ್ದು, ಎಂಎಕ್ಸ್ ಸೀರಿಸ್ ಕಾರುಗಳನ್ನು ಮ್ಯಾನುವಲ್ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲಿ ಮಾತ್ರ ಮಾರಾಟ ಮಾಡಲಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಸದ್ಯ ಎಂಎಕ್ಸ್ ಸರಣಿ ಬೆಲೆ ಹಂಚಿಕೊಂಡರುವ ಮಹೀಂದ್ರಾ ಕಂಪನಿಯು ಹೈ ಮಾದರಿಯಾದ ಆಂಡ್ರಿನೊಎಕ್ಸ್ ಸೀರಿಸ್‌ ಎಕ್ಸ್‌ಯುವಿ700 ಎಸ್‌ಯುವಿ ಬೆಲೆ ಹಂಚಿಕೊಳ್ಳಲಿದ್ದು, ಎಂಎಕ್ಸ್ ಸರಣಿಗಿಂತ ಆಂಡ್ರಿನೊಎಕ್ಸ್ ಸರಣಿ ಮಾದರಿಗಳ ಬೆಲೆ ತುಸು ದುಬಾರಿಯಾಗಿರಲಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ700 ಬಿಡುಗಡೆಯ ನಂತರ ಎಕ್ಸ್‌ಯುವಿ500 ಮಾದರಿಯ ಮಾರಾಟವನ್ನು ಸ್ಥಗಿತಗೊಳಿಸಲಿದ್ದು, ಎಕ್ಸ್‌ಯುವಿ500 ಸ್ಥಾನಕ್ಕಾಗಿಯೇ ಎಕ್ಸ್‌ಯುವಿ700 ಮಾದರಿಯಲ್ಲಿ 5 ಸೀಟರ್ ಸೌಲಭ್ಯದ ಎಂಎಕ್ಸ್ ಸರಣಿ ಪರಿಚಯಿಸಲಾಗಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಎಕ್ಸ್‌ಯುವಿ700 ಬಿಡುಗಡೆಯ ನಂತರ ಎಕ್ಸ್‌ಯುವಿ500 ಮಾದರಿಯನ್ನು ಸ್ಥಗಿತಗೊಳಿಸಲಿರುವ ಕಂಪನಿಯು 2023ರ ವೇಳೆಗೆ ಎಕ್ಸ್‌ಯುವಿ500 ಮಾದರಿಯನ್ನು ಬದಲಿ ಹೆಸರಿನೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಮರುಬಿಡುಗಡೆ ಮಾಡಲಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಹೀಗಾಗಿ ಹೊಸ ಎಕ್ಸ್‌ಯುವಿ700 ಮಾದರಿಯ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಹೊಸ ತಂತ್ರಜ್ಞಾನ ಸೌಲಭ್ಯ ಪಡೆದುಕೊಂಡಿದ್ದು, ಆಕರ್ಷಕ ಗ್ರಿಲ್ ಜೊತೆ ವರ್ಟಿಕಲ್ ಸ್ಲಾಟ್ ಮತ್ತು ಡ್ಯುಯಲ್ ಟೋನ್ ಕ್ರೋಮ್, ಹೊಸ ಕಾರಿಗೆ ಮತ್ತಷ್ಟು ಐಷಾರಾಮಿ ಲುಕ್ ನೀಡಲು ಬ್ರಾಂಡ್ ನ್ಯೂ ಲೋಗೋ ನೀಡಲಾಗಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಆಂಡ್ರಿನೊಎಕ್ಸ್ ಸೀರಿಸ್‌ ಆವೃತ್ತಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 15 ಲಕ್ಷದಿಂದ ರೂ. 21 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿವೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಹಾಗೆಯೇ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ. 2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(ಎಂಟಿ),450-ಎನ್ಎಂ ಟಾರ್ಕ್(ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳು ಲಭ್ಯವಿದ್ದು, ಹೈ ಎಂಡ್ ಮಾದರಿಗಳಲ್ಲಿ ಮಹೀಂದ್ರಾ ಕಂಪನಿಯು 4x4 ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೋಡಣೆ ಮಾಡಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಹೊಸ ಕಾರಿನ ಪರ್ಫಾಮೆನ್ಸ್‌ಗೆ ಪೂರಕವಾಗಿ ಜಿಪ್, ಜಾಪ್, ಜೂಮ್ ಮತ್ತು ಕಸ್ಟಮ್ ಎನ್ನುವ ನಾಲ್ಕು ಡ್ರೈವ್ ಮೋಡ್‌ಗಳಿದ್ದು, ಹೊಸ ಕಾರು ಐಷಾರಾಮಿ ಕಾರುಗಳಲ್ಲಿ ಕಂಡುಬರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ(ಎಡಿಎಎಸ್) ತಂತ್ರಜ್ಞಾನ ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಶೇಷತೆಗಳಿವು!

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

More from DriveSpark

Article Published On: Tuesday, August 17, 2021, 8:45 [IST]
English summary
You should know these things about mahindra xuv700 suv details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+