ಪ್ರತಿ ಚಾರ್ಜ್‌ಗೆ 306 ಕಿ.ಮೀ ಮೈಲೇಜ್ ನೀಡುವ ಟಾಟಾ ಟಿಗೋರ್ ಇವಿ ವಿಡಿಯೋ ರಿವ್ಯೂ

ದೇಶದ ಮುಂಚೂಣಿ ಕಾರು ತಯಾರಕ ಕಂಪನಿ ಟಾಟಾ ಮೋಟಾರ್ಸ್(Tata Motors) ತನ್ನ ಹೊಸ ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆ ಹೊಂದಿರುವ Tigor EV ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.


ಹೊಸ ಟಿಗೋರ್ ಇವಿ(Tigor EV) ಕಾರು ಈ ಹಿಂದಿನ ಆವೃತ್ತಿಗಿಂತಲೂ ಹೆಚ್ಚು ಪ್ರೀಮಿಯಂ, ಪವರ್‌ಪುಲ್ ಪವರ್‌ಟ್ರೈನ್ ಸೇರಿದಂತೆ ಹಲವಾರು ಹೊಸ ಬದಲಾವಣೆಗಳೊಂದಿಗೆ ಅಭಿವೃದ್ದಿಗೊಂಡಿದ್ದು, ರಿವ್ಯೂ ವಿಡಿಯೋದಲ್ಲಿ ಹೊಸ ಕಾರಿನ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ. ಹೊಸ ಟಿಗೋರ್ ಇವಿ ಮಾದರಿಯು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಡ್ಯುಯಲ್ ಟೋನ್ ವೆರಿಯೆಂಟ್ ಒಳಗೊಂಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 13.14 ಲಕ್ಷ ಬೆಲೆ ಹೊಂದಿದೆ.

ಹೊಸ ತಂತ್ರಜ್ಞಾನ ಪ್ರೇರಿತ 55kW ಎಲೆಕ್ಟ್ರಿಕ್ ಮೋಟಾರ್‌ ಮತ್ತು 26kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆಯು ಕಾರಿನ ಕಾರ್ಯಕ್ಷಮತೆ ಹೆಚ್ಚಳದೊಂದಿಗೆ ಮೈಲೇಜ್‌ನಲ್ಲೂ ಸಾಕಷ್ಟು ಸುಧಾರಣೆಗೊಂಡಿದ್ದು, ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 306 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವನ್ನು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೊಸ ಪವರ್‌ಟ್ರೈನ್‌ನಲ್ಲಿ ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳಿಂದ ಕೂಡಿದೆ.

ಪ್ರತಿ ಚಾರ್ಜ್‌ಗೆ 306 ಕಿ.ಮೀ ಮೈಲೇಜ್ ನೀಡುವ Tata Tigor EV ವಿಡಿಯೋ ರಿವ್ಯೂ

Nexon EV ಮಾದರಿಯಲ್ಲಿ ಈಗಾಗಲೇ ಹೊಸ ಜಿಪ್‌ಟ್ರಾನ್ ತಂತ್ರಜ್ಞಾನವನ್ನು ಈಗಾಗಲೇ ಅಳವಡಿಸಲಾಗಿದ್ದು, ಇದೀಗ Tigor EV ಮಾದರಿಯಲ್ಲಿ ಅಳವಡಿಸಲಾಗಿದೆ. ಜಿಪ್‌ಟ್ರಾನ್ ತಂತ್ರಜ್ಞಾನವು Tata ಕಂಪನಿಯನ್ನು ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವಂತೆ ಮಾಡಿದ್ದು, ಎಲೆಕ್ಟ್ರಿಕ್ ಕಾರುಗಳ ಕಾರ್ಯಕ್ಷಮತೆ, ಬ್ಯಾಟರಿ ದಕ್ಷತೆ ಮತ್ತು ಗ್ರಾಹಕರ ಸ್ನೇಹಿ ವಾಹನಗಳನ್ನಾಗಿ ಗುರುತಿಸಲು ಸಹಕಾರಿಯಾಗಿದೆ.

Most Read Articles

Kannada
English summary
Ziptron powered tata tigor ev first drive review video
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X