Tata Nexon EV vs Tigor EV ಈ ಎರಡರಲ್ಲಿ ಯಾವುದು ಬೆಸ್ಟ್?

Tata Motors ಕಂಪನಿಯು ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಎರಡನೇ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಹೊಸ ಪವರ್‌ಟ್ರೈನ್ ಜೋಡಣೆಯ ನಂತರ ಹೊಸ Tigor EV ಹಾಗೂ Nexon EV ಕಾರಿಗಿಂತಲೂ ಹೇಗೆ ಭಿನ್ನವಾಗಿ ಗುರುತಿಸಿಕೊಳ್ಳಲಿದೆ ಎಂಬುವುದನ್ನು ಈ ಲೇಖನದಲ್ಲಿ ತಿಳಿಯೋಣ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

Tata Motors ಕಂಪನಿಯು ಸದ್ಯ ಎಲೆಕ್ಟ್ರಿಕ್ ಹೊಸ ಕಾರುಗಳ ಉತ್ಪಾದನೆ ಹೊಸ ಬದಲಾವಣೆಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ಗ್ರಾಹಕರ ಬೇಡಿಕೆಯೆಂತೆ Tigor EV ಆವೃತ್ತಿಯನ್ನು ಹೊಸ ಡ್ರೈವ್ ಟೆಕ್ನಾಲಜಿಯೊಂದಿಗೆ ಉನ್ನತೀಕರಿಸಿ ಅನಾವರಣಗೊಳಿಸಿದ್ದು, ಇದೇ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿರುವ ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಹೊಸ ಪವರ್‌ಟ್ರೈನ್ ತಂತ್ರಜ್ಞಾನ ಹೊಂದಿರುವ Tigor EV ಕಾರು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, ಹೊಸ ಕಾರು ಇದೇ ತಿಂಗಳು 31ರಂದು ಬಿಡುಗಡೆಯಾಗಲಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ನವೀಕೃತ Tigor EV ಮಾದರಿಯಲ್ಲಿ Nexon EV ಕಾರಿನಲ್ಲಿ ಬಳಕೆ ಮಾಡಲಾಗುತ್ತಿರುವ ಹೈ-ವೊಲ್ಟೆಜ್ ಆರ್ಕಿಟೆಕ್ಚರ್ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನವನ್ನು ಜೋಡಣೆ ಮಾಡಲಾಗಿದ್ದು, ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವನ್ನು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಉನ್ನತೀಕರಿಸಿದ Tigor EV ಕಾರಿಲ್ಲಿ ಜಿಪ್‌ಟ್ರಾನ್ ತಂತ್ರಜ್ಞಾನದೊಂದಿಗೆ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಕೂಡಾ ನೀಡಲಾಗುತ್ತಿದ್ದು, ಹೊಸ ಕಾರು 55kW ಎಲೆಕ್ಟ್ರಿಕ್ ಮೋಟಾರ್‌ ಮತ್ತು 26kWh ಲೀಥಿಯಂ ಅಯಾನ್ ಬ್ಯಾಟರಿಯೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 250 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಹೊಸ ಆವೃತ್ತಿಯಲ್ಲಿರುವ 26kWh ಲೀಥಿಯಂ ಅಯಾನ್ ಬ್ಯಾಟರಿಯನ್ನು ಹೋಂ ಚಾರ್ಜರ್ ಮೂಲಕ ಚಾರ್ಜ್ ಮಾಡಲು 8 ಗಂಟೆ ಸಮಯಾವಕಾಶ ತೆಗೆದುಕೊಂಡರೆ ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 1 ಗಂಟೆಯಲ್ಲಿ ಶೇ. 80 ರಷ್ಟು ಚಾರ್ಜ್ ಮಾಡಬಹುದಾಗಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಹಾಗೆಯೇ ಹೊಸ Tigor EV ಮಾದರಿಯಲ್ಲಿ Tata Motors ಕಂಪನಿಯು ನವೀಕೃತ ವಿನ್ಯಾಸವನ್ನು ನೀಡಿದ್ದು, ಹೊರ ಭಾಗದಲ್ಲಿ ಮಾತ್ರವಲ್ಲ ಒಳಭಾಗದ ವಿನ್ಯಾಸದಲ್ಲೂ ಹೊಸ ಕಾರು ಗ್ರಾಹಕರನ್ನು ಸೆಳೆಯಲಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಹೊಸ ಕಾರಿನಲ್ಲಿ Tata Motors ಕಂಪನಿಯು ಹೊಸ ವಿನ್ಯಾಸದ ಹೆಡ್‌ಲ್ಯಾಂಪ್‌ಗಳು, ಹೊಸ ಫ್ರಂಟ್ ಗ್ರಿಲ್ ಜೊತೆ ಟ್ರೈ ಅರೊ ಡಿಸೈನ್, ಮರುವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್, ಕಲರ್ ಆಕ್ಸೆಂಟ್, ಹೊಸ ಅಲಾಯ್ ವೀಲ್ಹ್ ನೀಡಲಾಗಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

Tata Motors ಕಂಪನಿಯು ಹೊಸ Tigor EV ಮಾದರಿಗಾಗಿ ಮೊದಲ ಬಾರಿಗೆ 30ಕ್ಕೂ ಹೆಚ್ಚು ತಾಂತ್ರಿಕ ಅಂಶಗಳನ್ನು ನಿಯಂತ್ರಿಸಬಹುದಾದ ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ಬಳಕೆ ಮಾಡಲಾಗಿದ್ದು, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಕ್ಲೈಮೆಟ್ ಕಂಟ್ರೋಲ್, ಮೊಬೈಲ್ ಚಾರ್ಜಿಂಗ್ ಪೋರ್ಟ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು 316-ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ನೀಡಲಾಗಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಹಾಗೆಯೇ ಹೊಸ Nexon EV ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರಿನ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

Nexon EV ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಹೊಸ Nexon EV ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

30.2kWh ಬ್ಯಾಟರಿ ಪ್ಯಾಕ್‌ನೊಂದಿಗೆ ಎ‍ಆರ್‌ಎಐ ಪ್ರಮಾಣೀಕರಿಸಿದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

Nexon EV ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.56 ಲಕ್ಷ ಬೆಲೆ ಪಡೆದುಕೊಂಡಿದ್ದು, Nexon EV ಮಾದರಿಯಲ್ಲೇ ಬಹುತೇಕ ತಾಂತ್ರಿಕ ಅಂಶಗಳನ್ನು ಪಡೆದಿರುವ Tigor EV ಕಾರು ಕಂಪ್ಯಾಕ್ಟ್ ಸೆಡಾನ್ ಪ್ರಿಯರನ್ನು ಸೆಳೆಯಲಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಹೊಸ Tigor EV ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.10 ಲಕ್ಷದಿಂದ ರೂ. 12 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದ್ದು, ಹೊಸ ಕಾರಿನಲ್ಲಿ ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಿತ ಎಲೆಕ್ಟ್ರಿಕ್ ಮೋಟಾರ್ ಮೇಲೆ ಕಂಪನಿಯು ಎಂಟು ವರ್ಷಗಳ ಸ್ಟ್ಯಾಂಡರ್ಡ್ ವಾರಂಟಿ ನೀಡಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ರಿಮೋಟ್ ಲಾಕಿಂಗ್, ಡ್ಯುಯಲ್ ಏರ್‌ಬ್ಯಾಗ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಬಿಲಿಟಿ ಕಂಟ್ರೋಲ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯ ಹೊಂದಿದೆ.

Tata Nexon EV vs Tigor EV ಈ ಎರಡು ಕಾರುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಗರಿಷ್ಠ ಸೇಫ್ಟಿ ಫೀಚರ್ಸ್ ಹೊಂದಿರುವ Nexon EV ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ಸ್ ಹೊಂದಿದ್ದು, Tigor EV ಕಾರು 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದುವ ಮೂಲಕ ಎಂಟ್ರಿ ಲೆವಲ್ ಕಾರುಗಳಲ್ಲಿ ಅತ್ಯುತ್ತಮ ಕಾರು ಮಾದರಿಯಾಗಿದೆ. ಒಟ್ಟಿನಲ್ಲಿ Nexon EV ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮತ್ತು Tigor EV ಕಾರು ಕಂಪ್ಯಾಕ್ಟ್ ಸೆಡಾನ್ ಮಾದರಿಯಲ್ಲಿ Tigor EV ಮುನ್ನಡೆ ಸಾಧಿಸಲಿದೆ.

Most Read Articles

Kannada
English summary
Ziptron tech new tata tigor ev vs nexon ev comparison details
Story first published: Friday, August 20, 2021, 0:37 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X