ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ದೇಶದ ಜನಪ್ರಿಯ ಮತ್ತು ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಬಿಡುಗಡೆಗೊಳಿಸಲಿವೆ. ಇದರಲ್ಲಿ ಫೇಸ್‌ಲಿಫ್ಟ್‌ಗಳು, ಹೊಸ ತಲೆಮಾರಿನ ಆವೃತ್ತಿಗಳು ಮತ್ತು ಹೊಸ ಕಾರುಗಳನ್ನು ಒಳಗೊಂಡಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ಇದರಲ್ಲಿ ಎರ್ಟಿಗಾ ಎಂಪಿವಿಯು ಕೂಡ ಒಳಗೊಂಡಿದೆ. ಈ ಮಾರುತಿ ಸುಜುಕಿ ಎರ್ಟಿಗಾ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಂಪಿವಿ ಮಾದರಿಗಳಲ್ಲಿ ಒಂದಾಗಿದೆ. ಇದೀಗ ಮಾರುತಿ ಸುಜುಕಿ ಎರ್ಟಿಗಾ ಫೇಸ್‌ಲಿಫ್ಟ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ವಿಡಿಯೋ ಬಹಿರಂಗವಾಗಿದೆ. ಎಂಪಿವಿ ಮಾರ್ಚ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.ಎಂಆರ್‌ಡಿ ಕಾರ್ಸ್‌ನಿಂದ ಯೂಟ್ಯೂಬ್‌ನಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಲಾಗಿದೆ. ವೀಡಿಯೊದಲ್ಲಿ ಎರ್ಟಿಗಾ ಫೇಸ್‌ಲಿಫ್ಟ್ ಮಾದರಿಯಲ್ಲಿ ಯಾವುದೇ ಬದಲಾವಣೆಗಳನ್ನು ಹೆಚ್ಚು ಹೊಂದಿಲ್ಲ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ಹೊಸ ಮಾರುತಿ ಸುಜುಕಿ ಎರ್ಟಿಗಾ ಫೇಸ್‌ಲಿಫ್ಟ್ ಎಂಪಿವಿಯಲ್ಲಿ ಮುಂಭಾಗದ ಮತ್ತು ಹಿಂಭಾಗದ ಬಂಪರ್‌ಗಳು, ಹೆಡ್‌ಲ್ಯಾಂಪ್‌ಗಳು ಮತ್ತು ಟೈಲ್ ಲ್ಯಾಂಪ್‌ಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಮತ್ತು ಅಲಾಯ್ ವ್ಹೀಲ್ ಕೂಡ ಒಂದೇ ಆಗಿದೆ,

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ಹೊಸ ಮಾರುತಿ ಸುಜುಕಿ ಎರ್ಟಿಗಾ ಫೇಸ್‌ಲಿಫ್ಟ್ ಕಾರಿನಲ್ಲಿ ಒಳಾಂಗಣದಲ್ಲಿ ಕೆಲವು ನವೀಕರಣಗಳು ಇರಬಹುದು. ಅಪ್ಹೋಲ್ಸ್ಟರಿಗಾಗಿ ಹೊಸ ವಿನ್ಯಾಸ ಮತ್ತು ಡ್ಯಾಶ್‌ಬೋರ್ಡ್‌ಗಾಗಿ ಕೆಲವು ಹೊಸ ಅಂಶಗಳು ಇರಬಹುದು. ಎರ್ಟಿಗಾ ಫೇಸ್‌ಲಿಫ್ಟ್‌ನ ಒಳಭಾಗದ ಚಿತ್ರಗಳನ್ನು ಇನ್ನೂ ಬಹಿರಂಗವಾಗಿಲ್ಲ ಆದ್ದರಿಂದ ಇನ್ನೂ ಯಾವುದನ್ನೂ ದೃಢೀಕರಿಸಲಾಗಿಲ್ಲ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ಎಂಜಿನ್‌ನಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಇದು 1.5-ಲೀಟರ್, ಕೆ-ಸೀರಿಸ್, ನಾಲ್ಕು-ಸಿಲಿಂಡರ್, ನ್ಯಾಚುರಲ್ ಆಸ್ಪೈರಡ್ ಟ್ರೋಲ್ ಎಂಜಿನ್ ಆಗಿ ಮುಂದುವರಿಯುತ್ತದೆ. ಇದು 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ಪ್ರಮುಖ ಬದಲಾವಣೆಗಳು ಗೇರ್ ಬಾಕ್ಸ್ ನಲ್ಲಿರುತ್ತದೆ. ಪ್ರಸ್ತುತ, ಮಾರುತಿ ಸುಜುಕಿ ಎರ್ಟಿಗಾ 4-ಸ್ಫೀಡ್ ಟಾರ್ಕ್ ಕರ್ನ್ವಾಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಬಳಸುತ್ತದೆ, ಅದನ್ನು ಹೊಸ 6-ಸ್ಪೀಡ್ ಟಾರ್ಕ್ಟಾರ್ಕ್ ಕರ್ನ್ವಾಟರ್ ಯುನಿಟ್ ನೊಂದಿಗೆ ಬದಲಾಯಿಸುವ ನಿರೀಕ್ಷೆಯಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ಹೆಚ್ಚಿನ ತಯಾರಕರು ಈಗ ಭಾರತದಲ್ಲಿ 6-ಸ್ಪೀಡ್ ಅಥವಾ 7-ಸ್ಪೀಡ್ ಯುನಿಟ್ ಅನ್ನು ಬಳಸುತ್ತಿದ್ದಾರೆ. ಡ್ಯುಯಲ್-ಕ್ಲಚ್ ಯೂನಿಟ್‌ಗಳು ಮತ್ತು ಸಿವಿಟಿ ಗಳಂತಹ ಹೊಸ ರೀತಿಯ ಗೇರ್‌ಬಾಕ್ಸ್‌ಗಳು ಸಹ ಇವೆ. ಮಾರುತಿ ಸುಜುಕಿಯು ಟಾರ್ಕ್ಕರ್ನ್ವಾಟರ್ ಯುನಿಟ್ ಅನ್ನು ಆರಿಸಿಕೊಂಡಿರಬೇಕು ಏಕೆಂದರೆ ಇದು ಹಳೆಯ ರೀತಿಯ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಗಿರಬಹುದು ಆದರೆ ಇದು ಅತ್ಯಂತ ವಿಶ್ವಾಸಾರ್ಹವಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ಇದಲ್ಲದೆ, ಮಾರುತಿ ಸುಜುಕಿ ಅದರ ವಿಶ್ವಾಸಾರ್ಹತೆ ಮತ್ತು ಕಡಿಮೆ ವೆಚ್ಚದ ನಿರ್ವಹಣೆಗೆ ಹೆಸರುವಾಸಿಯಾಗಿದೆ. ಮಾರುತಿ ಸುಜುಕಿ ಎರ್ಟಿಗಾ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಕೊನೆಯಲ್ಲಿ 7,00,000 ಯೂನಿಟ್‌ಗಳು ಮಾರಾಟವಾಗಿ ಮಾರಾಟದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿತು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ಎರ್ಟಿಗಾ ಎಂಪಿವಿಯು ಅರೆನಾ ಡೀಲರುಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಎಂಪಿವಿಗಳ ಪಟ್ಟಿಯಲ್ಲಿ ಎರ್ಟಿಗಾ ನಂ.1 ಸ್ಥಾನದಲ್ಲಿದೆ. ಇತ್ತೀಚೆಗೆ ಎಂಪಿವಿಗಳ ವಿಭಾಗದಲ್ಲಿ ಪೈಪೋಟಿ ಹೆಚ್ಚಾಗುತ್ತಿದೆ. ಇದರಿಂದ ಮಾರುತಿ ಸುಜುಕಿ ಎರ್ಟಿಗಾದಲ್ಲಿ ಹಲವು ನವೀಕರಣಗಳನ್ನು ನಡೆಸುತ್ತಾ ಬಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ಇದೀಗ ಮಾರುತಿ ಸುಜುಕಿ ಕಂಪನಿಯು ಎರ್ಟಿಗಾ ಎಂಪಿವಿಯಲ್ಲಿ ಗಮನಾರ್ಹವಾದ ನವೀಕರಣವನ್ನು ನಡೆಸಲು ಸಜ್ಜಾಗಿದೆ. ಪ್ರಸುತ ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, 15 ಇಂಚಿನ ವ್ಹೀಲ್ ಗಳು, ಆಂಡ್ರಾಯ್ಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ 7 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಇದರೊಂದಿಗೆ ಈ ಎರ್ಟಿಗಾ ಎಂಪಿವಿಯೊಂದಿಗೆ ಪುಶ್-ಬಟನ್ ಸ್ಟಾರ್ಟ್-ಸ್ಟಾಪ್, ಹಿಂಭಾಗದ ಎಸಿಯೊಂದಿಗೆ ಆಟೋ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಕಪ್ ಹೋಲ್ಡರ್ಸ್ ಮತ್ತು ಸ್ಪೀಕರ್ ಆಡಿಯೊ ಸಿಸ್ಟಂ ಅನ್ನು ಒಳಗೊಂಡಿದೆ. ಈ ಮಾರುತಿ ಎರ್ಟಿಗಾ ಎಂಪಿವಿಯಲ್ಲಿ ಸುರಕ್ಷತೆಗಾಗಿ, ಎಂಪಿವಿ ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, ಇಎಸ್‌ಪಿ, ಹಿಲ್ ಹೋಲ್ಡ್ ಕಂಟ್ರೋಲ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಡ್ಯುಯಲ್ ಫ್ರಂಟಲ್ ಏರ್‌ಬ್ಯಾಗ್ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಆಂಕಾರೇಜ್‌ಗಳೊಂದಿಗೆ ಎಬಿಎಸ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ಮಾರುತಿ ಸುಜುಕಿ ಇಂಡಿಯಾ 2022ರ ಜನವರಿ ತಿಂಗಳ ಮಾರಾಟದ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಕಂಪನಿಯು 154,379 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ. 2021ರ ಜನವರಿ ತಿಂಗಳಿನಲ್ಲಿ 160,752 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದರು. ಇಂಡೋ-ಜಪಾನೀಸ್ ಕಾರು ತಯಾರಕರು ವರ್ಷದಿಂದ ವರ್ಷಕ್ಕೆ ಸುಮಾರು ಶೇ.4 ರಷ್ಟು ಕುಸಿತವನ್ನು ಕಂಡಿದ್ದಾರೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಎರ್ಟಿಗಾ ಫೇಸ್‌ಲಿಫ್ಟ್ ಕಾರು

ಎಲೆಕ್ಟ್ರಾನಿಕ್ ಯುನಿಟ್ ಗಳ ಕೊರತೆಯು ವಾಹನಗಳ ಉತ್ಪಾದನೆಯ ಮೇಲೆ ಸಣ್ಣ ಪರಿಣಾಮ ಬೀರಿತು. ಇದರಿಂದ ಮುಖ್ಯವಾಗಿ ದೇಶೀಯ ಮಾರುಕಟ್ಟೆಯ ಮಾರಾಟದ ಮೇಲೆ ಪರಿಣಾಮ ಬೀರುತ್ತದೆ ಎಂದು ಮಾರುತಿ ಸುಜುಕಿ ಹೇಳಿದೆ. ಮಾರುತಿ ಸುಜುಕಿ ಕಾರುಗಳ ದೀರ್ಘಾವಧಿಯ ಕಾಯುವಿಕೆ ಅವಧಿಯು ಗ್ರಾಹಕರ ಭಾವನೆಗಳನ್ನು ತಡೆಯುತ್ತಿದೆ ಎಂಬ ಅಂಶವನ್ನು ನಾವು ಪರಿಗಣಿಸಬೇಕು. ಇನ್ನು ಮಾರುತಿ ಸುಜುಕಿ ಕಂಪನಿಯು ಟಾಟಾ ಮೋಟಾರ್ಸ್‌ನಿಂದ ತೀವ್ರ ಸ್ಪರ್ಧೆಯನ್ನು ಎದುರಿಸುತ್ತಿದೆ.

Most Read Articles

Kannada
English summary
2022 maruti suzuki ertiga facelift test mule caught on camera details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X