14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ಎಂಜಿ ಮೋಟಾರ್ ಇಂಡಿಯಾ ತನ್ನ ಅತ್ಯಂತ ಜನಪ್ರಿಯ ಹೆಕ್ಟರ್ ಎಸ್‍ಯುವಿಯನ್ನು ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ 2022ರ ಎಂಜಿ ಹೆಕ್ಟರ್ ಎಸ್‍ಯುವಿಯು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ಭಾರತದಲ್ಲಿ ತ್ವರಿತವಾಗಿ ತನ್ನನ್ನು ತಾನು ಗುರುತಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಬ್ರಾಂಡ್‌ಗಳಲ್ಲಿ ಎಂಜಿ ಕೂಡ ಒಂದಾಗಿದೆ. ಹೆಕ್ಟರ್, ಗ್ಲೋಸ್ಟರ್, ಆಸ್ಟರ್ ಮತ್ತು ಜೆಡ್ಎಸ್ ಇವಿ ಯಂತಹ ಮಾದರಿಗಳನ್ನು ಹೊಂದಿವೆ. ಎಂಜಿ ಮೋಟಾರ್ ಇಂಡಿಯಾ ಮೊದಲು ಬಿಡುಗಡೆಗೊಳಿಸಿದ ಮಾದರಿ ಹೆಕ್ಟರ್ ಆಗಿದೆ. ಈ ಎಸ್‍ಯುವಿಯನ್ನು 2019ರಲ್ಲಿ ಬಿಡುಗಡೆಗೊಳಿಸಲಾಗಿತ್ತು. ಇದನ್ನು 2021 ರಲ್ಲಿ ನವೀಕರಿಸಲ್ಪಟ್ಟಿದೆ. ಮತ್ತು ಇದೀಗ ಭಾರತದಲ್ಲಿ ನ್ಯೂ ಜನರೇಷನ್ ಅನ್ನು ಪ್ರಾರಂಭಿಸಲು ಸಿದ್ಧವಾಗುತ್ತಿದೆ.

14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ಮಿಡ್ ಸೈಜ್ ಎಸ್‍ಯುವಿ ವಿಭಾಗದಲ್ಲಿ ಹೆಕ್ಟರ್ ಹೆಚ್ಚು ಮಾರಾಟವಾದ ಎಸ್‍ಯುವಿಗಳಲ್ಲಿ ಒಂದಾಗಿದೆ. ಆದರೆ ಮಹೀಂದ್ರಾ XUV700 ಆಗಮನದೊಂದಿಗೆ, ಹೆಕ್ಟರ್ ಬೇಡಿಕೆಯಲ್ಲಿ ಕುಸಿತವಾಗಿದೆ. ಟಾಟಾ ಸಫಾರಿ ಮತ್ತು ಹ್ಯಾರಿಯರ್ ಸಹ ಎಂಜಿ ಹೆಕ್ಟರ್ ಅನ್ನು ಮಾರಾಟದಲ್ಲಿ ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ನ್ಯೂ ಜನರೇಷನ್ ಹೆಕ್ಟರ್ ಮಾದರಿಯ ಸಹಾಯದಿಂದ, ಕಳೆದುಹೋದ ಕೆಲವು ಮಾರುಕಟ್ಟೆ ಪಾಲನ್ನು ಮರಳಿ ಪಡೆಯಲು ಎಂಜಿ ಆಶಿಸುತ್ತಿದೆ. ಹೆಕ್ಟರ್ ಸ್ಪಾಟ್ ಟೆಸ್ಟ್ ನಡೆಸುವ ಸ್ಪೈ ಚಿತ್ರಗಳು ಈಗಗಾಲೇ ಬಹಿರಂಗವಾಗಿದೆ. ವಿನ್ಯಾಸದ ಮುಂಭಾಗದಲ್ಲಿ, ಗ್ರಿಲ್, ಹೆಡ್‌ಲೈಟ್‌ಗಳು ಮತ್ತು ಹೊಸ LED ಟೈಲ್-ಲೈಟ್‌ಗಳೊಂದಿಗೆ ಟೈಲ್ ವಿಭಾಗವನ್ನು ಒಳಗೊಂಡಂತೆ ಮುಂಭಾಗದ ಫಾಸಿಕ ಎಂಜಿ ಬದಲಾಯಿಸುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ.

14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ಒಳಭಾಗದಲ್ಲಿ, ಸ್ವಲ್ಪ ಮರುವಿನ್ಯಾಸದೊಂದಿಗೆ ಸ್ವಲ್ಪ ಹೆಚ್ಚು ಪ್ರೀಮಿಯಂ ಒಳಾಂಗಣಗಳೊಂದಿಗೆ ಬರಲಿದೆ. ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಕನಿಷ್ಟ ಬೆಜೆಲ್‌ಗಳೊಂದಿಗೆ ದೊಡ್ಡದಾಗಬಹುದು ಮತ್ತು ಸಾಫ್ಟ್‌ವೇರ್ ಮುಂಭಾಗದಲ್ಲಿ ಸ್ವಲ್ಪ ಉತ್ತಮ ಗ್ರಾಫಿಕ್ಸ್ ಆಗಬಹುದು.

14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ಈ ಹೊಸ ಎಸ್‍ಯುವಿಯ ಒಳಗಿನ ಫಸ್ಟ್ ಲುಕ್ ಈಗ ಬಹಿರಂಗವಾಗಿದೆ. ಇದು ವಿಭಾಗದಲ್ಲಿ 14 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂನಲ್ಲಿ ದೊಡ್ಡದಾಗಿದೆ. ಗೇರ್ ಲಿವರ್ ಕೂಡ ಹೊಸದು. ಡ್ಯಾಶ್‌ಬೋರ್ಡ್ ಎಲ್ಲಾ ಕಪ್ಪು ಮತ್ತು ಹೊಸ ವಿನ್ಯಾಸದೊಂದಿಗೆ ಕಾಣುತ್ತದೆ.

14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ವೈಶಿಷ್ಟ್ಯಗಳ ಪಟ್ಟಿಯಲ್ಲಿ ಇತರ ಪ್ರಮುಖ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ. ಎಮರ್ಜೆನ್ಸಿ ಬ್ರೇಕಿಂಗ್ ಸಿಸ್ಟಂಗಳು, ರೇಡಾರ್ ಆಧಾರಿತ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್‌ನೊಂದಿಗೆ ಪಾರ್ಕಿಂಗ್ ಅಸಿಸ್ಟ್, ಲೇನ್ ಕೀಪ್ ಅಸಿಸ್ಟ್, ಲೇನ್ ಡಿಪಾರ್ಚರ್ ವಾರ್ನಿಂಗ್ ಮುಂತಾದ ಡ್ರೈವರ್ ಏಡ್ಸ್‌ಗಳ ಅಭಿವೃದ್ಧಿಯಲ್ಲಿ ಎಂಜಿ ಹೂಡಿಕೆ ಮಾಡಿದೆ.

14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ಕಂಪನಿಯ ಪ್ರಮುಖ ಗ್ಲೊಸ್ಟರ್ ಎಸ್‌ಯುವಿ ಮತ್ತು ಆಸ್ಟರ್‌ನಲ್ಲಿ ಈ ವೈಶಿಷ್ಟ್ಯಗಳನ್ನು ನಾವು ನೋಡಿದ್ದೇವೆ. ಆದ್ದರಿಂದ, ಹೆಕ್ಟರ್ ಈ ಲೆವೆಲ್-2 ಎಡಿಎಎಸ್ ಸಿಸ್ಟಂಗಳನ್ನು ಪಡೆಯುವ ಸಮಯ ಬಂದಿದೆ.

14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ಈ ಹೊಸ ಎಸ್‍ಯುವಿ ಹುಡ್ ಅಡಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ. ಈ ಎಂಜಿ ಹೆಕ್ಟರ್ ಎಸ್‍ಯುವಿಯಲ್ಲಿ 1.5 ಲೀಟರ್ ಟಬೋಜಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 143 ಬಿಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇನ್ನು ಈ ಎಸ್‍ಯುವಿಯಲ್ಲಿ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 143 ಬಿಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿ ಹೆಕ್ಟರ್ ಉತ್ತಮ ಸ್ಪೇಸ್ ಅನ್ನು ಮತ್ತು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿರುವ ಎಸ್‍ಯುವಿಯಾಗಿದೆ. ಈ ಎಂಜಿ ಹೆಕ್ಟರ್ ಎಸ್‍ಯುವಿ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಜೀಪ್ ಕಂಪಾಸ್, ಮಹೀಂದ್ರಾ ಎಕ್ಸ್‌ಯುವಿ 500 ಮತ್ತು ಟಾಟಾ ಹ್ಯಾರಿಯರ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತಿದೆ.

14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಎಂಜಿ ಮೋಟಾರ್ ಇಂಡಿಯಾ 2022ರ ಜೂನ್ ತಿಂಗಳಿನಲ್ಲಿ 4,503 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಇದೇ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇಕಡಾ 27 ರಷ್ಟು ಬೆಳವಣಿಗೆಯನ್ನು ವರದಿ ಮಾಡಿದೆ. ಎಂಜಿ ಮೋಟಾರ್ ಇಂಡಿಯಾ ಕಂಪನಿಗೆ ಮಾರಾಟದಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿಯು ಉತ್ತಮ ಕೊಡುಗೆಯನ್ನು ನೀಡುತ್ತಿದೆ. ಕಂಪನಿಯು ನವೀಕರಿಸಿದ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿಯು ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿತ್ತು. ಇನ್ನು ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆಯಾದಾಗಿನಿಂದ 5,000 ಕ್ಕೂ ಹೆಚ್ಚು ಕಾರುಗಳ ಮಾರಾಟವನ್ನು ದಾಖಲಿಸಿದೆ. ಕಂಪನಿಯು ಹೊಸ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿಗಾಗಿ ತಿಂಗಳಿಗೆ 1,000 ಬುಕ್ಕಿಂಗ್‌ಗಳನ್ನು ದಾಖಲಿಸುತ್ತಿದೆ.

14 ಇಂಚಿನ ದೊಡ್ಡ ಟಚ್‌ಸ್ಕ್ರೀನ್‌ನೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಹೆಕ್ಟರ್ ಎಸ್‍ಯುವಿ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಹೊಸ 2022ರ ಎಂಜಿ ಹೆಕ್ಟರ್ ಎಸ್‍ಯುವಿಯು ಹೊಸ ನವೀಕರಣಗಳನ್ನು ಪಡೆಯಲಿದೆ. ಇದೀಗ ಕಂಪನಿಯು ಟಚ್‌ಸ್ಕ್ರೀನ್ ಅನ್ನು ಟೀಸರ್ ಮೂಲಕ ಬಹಿರಂಗಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಎಸ್‍ಯುವಿಯ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಲಿದೆ,

Most Read Articles

Kannada
English summary
2022 mg hector suv get 14 inch portrait style hd infotainement screen details
Story first published: Tuesday, July 26, 2022, 16:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X