ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮೂಲಕ ಎಲೆಕ್ಟ್ರಿಕ್ ಕಾರು ಅಗ್ರಸ್ಥಾನ ಕಾಯ್ದುಕೊಂಡಿದ್ದು, ಕಂಪನಿಯು ಶೀಘ್ರದಲ್ಲೇ 2022ರ ಆವೃತ್ತಿಯನ್ನು ಹಲವು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಲು ಸಿದ್ದಗೊಳ್ಳುತ್ತಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ(Nexon EV), ಟಿಗೋರ್ ಇವಿ(Tigor EV) ಮತ್ತು ಎಕ್ಸ್‌ಪ್ರೆಸ್-ಟಿ ಇವಿ(XPres-T EV) ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ನೆಕ್ಸಾನ್ ಇವಿ ಮಾದರಿಯನ್ನು ಮುಂದಿನ ತಿಂಗಳು ಹೊಸ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಉನ್ನತೀಕರಿಸುವ ಸಿದ್ದತೆಯಲ್ಲಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ನೆಕ್ಸಾನ್ ಇವಿ ಮಾದರಿಯು 2019ರಲ್ಲಿ ಮೊದಲ ಬಿಡುಗಡೆಯ ನಂತರ ಹಲವಾರು ಹೊಸ ಬದಲವಾಣೆಗಳನ್ನು ಪಡೆದುಕೊಂಡಿದ್ದು, ಇದೀಗ 2022ರ ಮಾದರಿಯೊಂದಿಗೆ ಅಧಿಕ ಮೈಲೇಜ್ ರೇಂಜ್ ಹೊಂದಿರುವ ಹೊಸ ಬ್ಯಾಟರಿ ಪ್ಯಾಕ್ ಜೋಡಣೆ ಪಡೆದುಕೊಳ್ಳಲಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಸದ್ಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95kW ಎಲೆಕ್ಟ್ರಿಕ್ ಮೋಟಾರ್ ಮತ್ತು 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸದಂತೆ ಹೊಸ ಕಾರು ಇಕೋ ಡ್ರೈವ್ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 2022ರ ಆವೃತ್ತಿಯಲ್ಲಿ ಮೈಲೇಜ್ ರೇಂಜ್ ಪ್ರಮಾಣವನ್ನು 380 ಕಿ.ಮೀ ನಿಂದ 420 ಕಿ.ಮೀ ಹೆಚ್ಚಿಸುವ ಸಾಧ್ಯತೆಗಳಿವೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ನೆಕ್ಸಾನ್ ಇವಿ ಮಾದರಿಯಲ್ಲಿ ಹೆಚ್ಚಿನ ಮೈಲೇಜ್ ರೇಂಜ್ ಹೊಂದಿರುವ ಮಾದರಿಗಾಗಿ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಕಂಪನಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಸಿದ್ದಪಡಿಸುತ್ತಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಜೊತೆಗೆ ನೆಕ್ಸಾನ್ ಇವಿ ಕಾರಿನ ಎಲೆಕ್ಟ್ರಿಕ್ ಮೋಟಾರ್ ಉನ್ನತೀಕರಿಸುವ ಮೂಲಕ ಕಾರಿನ ಪರ್ಫಾಮೆನ್ಸ್ ಹೆಚ್ಚಿಸಲಾಗುತ್ತಿದ್ದು, ಉನ್ನತೀಕರಿಸಿದ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ 7 ಬಿಎಚ್‌ಪಿ ಹೆಚ್ಚುವರಿ ಶಕ್ತಿ ಪೂರೈಕೆಯೊಂದಿಗೆ ಕಾರಿನ ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಕಾರಿಯಾಗಲಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ನೆಕ್ಸಾನ್ ಇವಿ ಮಾದರಿಯು 127 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಸುಧಾರಿತ ತಂತ್ರಜ್ಞಾನದೊಂದಿಗೆ ಉನ್ನತೀಕರಿಸಲಾಗುತ್ತಿರುವ ಹೊಸ ಮಾದರಿಯು ಪ್ರಸ್ತುತ ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ 95kW ಎಲೆಕ್ಟ್ರಿಕ್ ಮೋಟಾರ್ ಮೂಲಕವೇ 134 ಬಿಎಚ್‌ಪಿ ಉತ್ಪಾದನಾ ವೈಶಿಷ್ಟ್ಯತೆ ಹೊಂದಿರಲಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಇದರೊಂದಿಗೆ ಹೊಸ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಪ್ರಮುಖ ಸೇಫ್ಟಿ ಫೀಚರ್ಸ್‌ಗಳನ್ನು ಉನ್ನತೀಕರಿಸುತ್ತಿದ್ದು, ಹೊಸ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಆಗಿ ಆಲ್ ವ್ಹೀಲ್ ಡಿಸ್ಕ್ ಸೇರಿದಂತೆ ಕೆಲವು ಹೊಸ ತಾಂತ್ರಿಕ ಅಂಶಗಳನ್ನು ಸೇರ್ಪಡೆಗೊಳಿಸಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಇನ್ನು ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರುಗಳ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಜಿಪ್‌ಟ್ರಾನ್ ತಂತ್ರಜ್ಞಾನವು ಟಾಟಾ ಕಂಪನಿಯನ್ನು ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವಂತೆ ಮಾಡಿದ್ದು, ಎಲೆಕ್ಟ್ರಿಕ್ ಕಾರುಗಳ ಕಾರ್ಯಕ್ಷಮತೆ, ಬ್ಯಾಟರಿ ದಕ್ಷತೆ ಮತ್ತು ಗ್ರಾಹಕರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಯಲ್ಲಿ ಸಹಕಾರಿಯಾಗುತ್ತಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ನೆಕ್ಸಾನ್ ಇವಿ ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ ಹೈ-ವೊಲ್ಟೆಜ್ ಆರ್ಕಿಟೆಕ್ಚರ್ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನವು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳಿಂದ ಕೂಡಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಜೊತೆಗೆ ಜಿಪ್‌ಟ್ರಾನ್ ತಂತ್ರಜ್ಞಾನವು ರೀಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿ ಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲದ ಬಾಳಿಕೆಗೆ ಸಹಕರಿಸಲಿದೆ.

ಹೊಸ ಬ್ಯಾಟರಿ ಪ್ಯಾಕ್ ಜೊತೆಗೆ ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ 2022ರ ನೆಕ್ಸಾನ್ ಇವಿ

ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.29 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.90 ಲಕ್ಷ ಬೆಲೆ ಪಡೆದುಕೊಂಡಿದ್ದು, ನವೀಕೃತ ಮಾದರಿಯು ಪ್ರಸ್ತುತ ಮಾದರಿಯ ಬೆಲೆಗಿಂತಲೂ ರೂ.50 ಸಾವಿರದಿಂದ ರೂ.1 ಲಕ್ಷದ ತನಕ ಹೆಚ್ಚುವರಿ ಬೆಲೆ ಹೊಂದಬಹುದಾಗಿದೆ.

Most Read Articles

Kannada
English summary
2022 tata nexon ev to offer all wheel disc brakes and longer range details
Story first published: Saturday, January 29, 2022, 12:47 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X