ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ Toyota Land Cruiser ಎಸ್‍ಯುವಿ

ಜಪಾನ್ ಮೂಲದ ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ(Toyota) ತನ್ನ 2022ರ ಲ್ಯಾಂಡ್ ಕ್ರೂಸರ್(Land Cruiser) ಎಸ್‍ಯುವಿಯನ್ನು ಆಸ್ಟ್ರೇಲಿಯನ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ (ANCAP) ಕ್ರ್ಯಾಶ್ ಟೆಸ್ಟ್‌ಗೆ ಒಳಪಡಿಸಿದೆ. ಈ ಕ್ರ್ಯಾಶ್ ಟೆಸ್ಟ್‌ನಲ್ಲಿ 2022ರ ಲ್ಯಾಂಡ್ ಕ್ರೂಸರ್ ಪರಿಪೂರ್ಣ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ Toyota Land Cruiser ಎಸ್‍ಯುವಿ

ಕ್ರ್ಯಾಶ್ ಟೆಸ್ಟ್‌ಗೆ ಒಳಪಡಿಸಿದೆ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಆಸ್ಟ್ರೇಲಿಯನ್ ಮತ್ತು ನ್ಯೂಜಿಲೆಂಡ್ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿರುವ ಮಾದರಿಯಾಗಿದೆ. ಈ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಕ್ರ್ಯಾಶ್ ಟೆಸ್ಟ್‌ನಲ್ಲಿ ವಯಸ್ಕ ಪ್ರಯಾಣಿಕರ ರಕ್ಷಣೆಗಾಗಿ ಶೇಕಡಾ 89 ರಷ್ಟು ಅಂಕಗಳನ್ನು ಮತ್ತು ಮಕ್ಕಳ ರಕ್ಷಣೆಗಾಗಿ ಶೇಕಡಾ 88 ರಷ್ಟು ಅಂಕಗಳನ್ನು ಪಡೆದುಕೊಂಡಿದೆ. ಈ ಎಸ್‍ಯುವಿ ಸೈಕ್ಲಿಸ್ಟ್‌ಗಳು ಮತ್ತು ಪಾದಚಾರಿಗಳ ಸುರಕ್ಷತೆಗಾಗಿ ಗಮನಾರ್ಹವಾಗಿ ಉತ್ತಮವಾಗಿದೆ, 81 ಪ್ರತಿಶತ ಅಂಕಗಳನ್ನು ಗಳಿಸಿದೆ. ಒಟ್ಟಿನಲ್ಲಿ ಶೇ.77ರಷ್ಟು ಭದ್ರಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ Toyota Land Cruiser ಎಸ್‍ಯುವಿ

ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಲಭ್ಯವಿರುವ ಲ್ಯಾಂಡ್ ಕ್ರೂಸರ್ ಮಾದರಿಯು ಡ್ಯುಯಲ್ ಏರ್‌ಬ್ಯಾಗ್‌ಗಳು, ಆಟೋನೊಮಸ್ ಎಮರ್ಜನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೇನ್ ನಿರ್ಗಮನ ವಾರ್ನಿಂಗ್ ಮತ್ತು ಅಡಾಪ್ಟಿವ್ ಕ್ರೂಸ್ ಕಂಟ್ರೋಲ್‌ನೊಂದಿಗೆ ಬರುತ್ತದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ Toyota Land Cruiser ಎಸ್‍ಯುವಿ

ಈ ಲ್ಯಾಂಡ್ ಕ್ರೂಸರ್ ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಜನಪ್ರಿಯ ಮತ್ತು ಐಕಾನಿಕ್ ಎಸ್‍ಯುವಿಗಳಲ್ಲಿ ಒಂದಾಗಿದೆ. ಟೊಯೊಟಾ ಕಂಪನಿಯು ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951 ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿತು. ಇದುವರೆಗೂ 170 ದೇಶಗಳಲ್ಲಿ ಲ್ಯಾಂಡ್ ಕ್ರೂಸರ್‌ನ 1.04 ಕೋಟಿ ಯೂನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ Toyota Land Cruiser ಎಸ್‍ಯುವಿ

ಈ ನ್ಯೂ ಜನರೇಷನ್ ಮಾದರಿಯನ್ನು ಹಿಂದಿನದಕ್ಕಿಂತ ಹೆಚ್ಚು ಆಧುನಿಕ ಮತ್ತು ಪ್ರೀಮಿಯಂ ಮಾದರಿಯಾಗಿದೆ. ಲ್ಯಾಂಡ್ ಕ್ರೂಸರ್' ಬ್ರ್ಯಾಂಡ್ ಹೆಸರು ಇಂದಿಗೂ ಜನಪ್ರಿಯ ಬ್ರ್ಯಾಂಡ್ ಆಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಟೊಯೊಟಾ ತನ್ನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951ರಲ್ಲಿ ಬಿಡುಗಡೆಗೊಳಿಸಿತ್ತು.

ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ Toyota Land Cruiser ಎಸ್‍ಯುವಿ

ಕಳೆದ ಕೆಲವು ವರ್ಷಗಳಿಗಿಂದ ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಜನಪ್ರಿಯತೆ ಮತ್ತು ಬೇಡಿಕೆಯು ಕಡಿಮೆಯಾಗಿದೆ. ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಒಂದು ಕಾಲದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದ ಎಸ್‍ಯುವಿ ಆಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ Toyota Land Cruiser ಎಸ್‍ಯುವಿ

ಇನ್ನು ನ್ಯೂ ಜನರೇಷನ್ ಟೋಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ 3.5-ಲೀಟರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 409 ಬಿಹೆಚ್‍ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 10-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ಈ ಗೇರ್ ಬಾಕ್ಸ್ ಇಂಧನ ಬಳಕೆ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಹಿಂದಿನದಕ್ಕಿಂತ ಶೇ.10 ಕಡಿಮೆ ಮಾಡುತ್ತದೆ ಎಂದು ಹೇಳಲಾಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ Toyota Land Cruiser ಎಸ್‍ಯುವಿ

ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೊಸ ಟಿಎನ್‌ಜಿಎ (ಟೊಯೊಟಾ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್) ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಬ್ರಾಂಡ್‌ನ ಮೊದಲ ಬಾಡಿ-ಆನ್-ಫ್ರೇಮ್ ವಾಹನ ಇದಾಗಿದೆ, ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ ಕೆಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡಲಾಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ Toyota Land Cruiser ಎಸ್‍ಯುವಿ

ಈ ಬ್ರ್ಯಾಂಡ್‌ನ ಹೊಸ ಪ್ರಮುಖ ಎಸ್ಯುವಿ ಹೆಚ್ಚು ಪ್ರಮುಖವಾದ ಗ್ರಿಲ್, ಹೊಸ ಲೈಟಿಂಗ್ ಸೆಟಪ್, ಪರಿಷ್ಕೃತ ಟೈಲ್‌ಗೇಟ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್‌ಗಳನ್ನು ಪಡೆಯುತ್ತದೆ. ಈ ಹೊಸ ಎಸ್‍ಯುವಿಯ ಇಂಟಿರಿಯರ್ ನಲ್ಲಿ ದೊಡ್ಡ ಟ್ಯಾಬ್ಲೆಟ್ ಶೈಲಿಯ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಹೊಸ ಡ್ಯಾಶ್‌ಬೋರ್ಡ್ ವಿನ್ಯಾಸವನ್ನು ಒಳಗೊಂಡಿದೆ.

ಪ್ರಸ್ತುತ ಮಾದರಿಯಂತಲ್ಲದೆ 4 ಹೈ ಮತ್ತು 4 ಲೋ ಮೋಡ್‌ಗಳನ್ನು ಹೊಂದಿರುವ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಎಸ್‍ಯುವಿಯಲ್ಲಿ ಫಿಸಿಕಲ್ ಡಯಲ್‌ಗಳನ್ನು ಹೊಂದಿರುವ ಗೇಜ್ ಕ್ಲಸ್ಟರ್ ಮತ್ತು ಇನ್ಫೋ ಡಿಸ್ ಪ್ಲೇ, ಹೀಟಡ್ ಸೀಟುಗಳು, ಜೆಬಿಎಲ್ ಆಡಿಯೋ, ಟೊಯೊಟಾ ಸೇಫ್ಟಿ ಸೆನ್ಸ್ ಪ್ಯಾಕೇಜ್ ಮತ್ತು ಇತರ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಕೂಡ ಒಳಗೊಂಡಿವೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ Toyota Land Cruiser ಎಸ್‍ಯುವಿ

ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ವಿಶ್ವದ ಮೊದಲ ಎಲೆಕ್ಟ್ರಾನಿಕ್ ಕೈನೆಟಿಕ್ ಡೈನಾಮಿಕ್ ಸಸ್ಪೆಂಕ್ಷನ್ ಸಿಸ್ಟಮ್ (ಇ-ಕೆಡಿಎಸ್ಎಸ್) ಅನ್ನು ಒಳಗೊಂಡಿದೆ. ಮಲ್ಟಿ-ಟೆರೈನ್ ಮಾನಿಟರ್ ಅನ್ನು ಒಳಗೊಂಡಿರುವ ಬ್ರ್ಯಾಂಡ್‌ನ ಮೊದಲ ಮಾದರಿಯಾಗಿದೆ, ಇನ್ನು ಐಕಾನಿಕ್ ಆಫ್-ರೋಡರ್ ಲ್ಯಾಂಡ್ ಕ್ರೂಸರ್ ಬ್ರ್ಯಾಂಡ್‌ನ 70 ವರ್ಷದ ಸಂಭ್ರಮದ ಭಾಗವಾಗಿ 70ನೇ ಆನಿವರ್ಸರಿ ಎಡಿಷನ್ ಅನ್ನು ಕಳೆದ ವರ್ಷ ಪರಿಚಯಿಸಿದರು. ಆನಿವರ್ಸರಿ ಎಡಿಷನ್ ಮಾದರಿಯು ಲ್ಯಾಂಡ್ ಕ್ರೂಸರ್ 70 ಸೀರಿಸ್ ಅನ್ನು ಆಧರಿಸಿದೆ. ಇದನ್ನು ಮೊದಲು 1984 ರಲ್ಲಿ ಪ್ರಾರಂಭಿಸಲಾಯಿತು ಮತ್ತು ಆಸ್ಟ್ರೇಲಿಯಾ ಮತ್ತು ಮಧ್ಯಪ್ರಾಚ್ಯದಂತಹ ಕೆಲವು ಮಾರುಕಟ್ಟೆಗಳಲ್ಲಿ ಇನ್ನೂ ಮಾರಾಟದಲ್ಲಿದೆ. ಈ ಎಸ್‍ಯುವಿ ತನ್ನ ರೆಟ್ರೊ-ಶೈಲಿಯ ವಿನ್ಯಾಸವನ್ನು ಹೊಂದಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ Toyota Land Cruiser ಎಸ್‍ಯುವಿ

ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಉತ್ತಮ ಆಫ್-ರೋಡ್ ಎಸ್‍ಯುವಿಯಾಗಿದೆ. ಎಲ್ಲಾ ಕಡೆಗಳಲ್ಲಿಯು ಧೈರ್ಯವಾಗಿ ಈ ಕರೆದೊಯ್ಯಬಹುದು. ಈ ಐಕಾನಿಕ್ ಆಫ್-ರೋಡರ್ ಲ್ಯಾಂಡ್ ಕ್ರೂಸರ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿಯು ಬಿಡುಗಡೆಯಾಗುವ ಸಾಧ್ಯತೆಗಳಿದೆ.

Most Read Articles

Kannada
Read more on ಟೊಯೊಟಾ toyota
English summary
2022 toyota land cruiser suv gets 5 star rating in ancap crash test details
Story first published: Thursday, January 13, 2022, 15:22 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X