ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಜನಪ್ರಿಯ ಕಾರು ತಯಾರಕ ಸಂಸ್ಥೆ ಕಿಯಾ ಅಂತರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಫೇಸ್‌ಲಿಫ್ಟೆಡ್ ಸೆಲ್ಟೋಸ್ ಅನ್ನು ಪರಿಚಯಿಸಿತು. ಈ ವರ್ಷದ ಕೊನೆಯಲ್ಲಿ ಅಥವಾ 2023ರ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಹೊಸ ಪ್ರತಿಸ್ಪರ್ಧಿಗಳು ಬರುವುದರೊಂದಿಗೆ ಅದರ ವಿಭಾಗದಲ್ಲಿ ಪೈಪೋಟಿಯು ಹೆಚ್ಚು ತೀವ್ರವಾಗುತ್ತಿದೆ ಮತ್ತು ಬೆಳೆಯುತ್ತಿರುವ ಸ್ಪರ್ಧೆಗೆ ಫೇಸ್‌ಲಿಫ್ಟ್ ಮಾದರಿಯೊಂದಿಗೆ ಪೈಪೋಟಿ ನೀಡುತ್ತದೆ. ದಕ್ಷಿಣ ಕೊರಿಯಾದಲ್ಲಿ ಹೊಸ ಕಿಯಾ ಸೆಲ್ಟೋಸ್ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳ ಆಯ್ಕೆಯೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಿತು. ಮೊದಲ ಎಂಜಿನ್ ಆಯ್ಕೆಯು 2.0-ಲೀಟರ್ ನ್ಯಾಚುರಲ್ ಆಸ್ಪೈರಡ್ ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 148 ಬಿಹೆ‍ಪಿ ಪವರ್ ಮತ್ತು 180 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ಸಿವಿಟಿ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಮತ್ತೊಂದೆಡೆ, 1.6-ಲೀಟರ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 196 ಬಿಹೆಚ್‍ಪಿ ಪವರ್ ಮತ್ತು 265 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದಲ್ಲದೆ, ಈ ಪವರ್ ಮತ್ತು ಟಾರ್ಕ್ ಫಿಗರ್ ಅನ್ನು ಗರಿಷ್ಠವಾಗಿ ಬಳಸಿಕೊಳ್ಳಲು, ಕಿಯಾ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಬಳಸಲು ಸಹ ಆಯ್ಕೆ ಮಾಡಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಎರಡೂ ಪವರ್‌ಟ್ರೇನ್ ಆಯ್ಕೆಗಳೊಂದಿಗೆ 2 ವ್ಹೀಲ್ ಡೈವ್ ಮತ್ತು 4 ವ್ಹೀಲ್ ಡ್ರೈವ್ ಸಿಸ್ಟಂಗಳ ಆಯ್ಕೆಯನ್ನು ನೀಡಲಾಗಿದೆ. ದಕ್ಷಿಣ ಕೊರಿಯಾದಲ್ಲಿ ಹೆಚ್ಚು ಪವರ್ ಫುಲ್ 1.6-ಲೀಟರ್, ಟರ್ಬೋಚಾರ್ಜ್ಡ್ ಎಂಜಿನ್ ಹೊಂದಿರುವ ಕಿಯಾ ಸೆಲ್ಟೋಸ್ ಆರಂಭಿಕ ಬೆಲೆಯು ಭಾರತೀಯ ಕರೆನ್ಸಿಗೆ ಪರಿವರ್ತಿಸಿದಾಗ ರೂ 13.16 ಲಕ್ಷವಾಗಿದೆ, ಈ ಹೊಸ ಕಿಯಾ ಸೆಲ್ಟೋಸ್ ಎಸ್‍ಯುವಿಯು ಹೊರಭಾಗವು ಬಹಳಷ್ಟು ಸಣ್ಣ ಬದಲಾವಣೆಗಳನ್ನು ಒಳಗೊಂಡಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಈ ಹೊಸ ಕಿಯಾ ಸೆಲ್ಟೋಸ್ ಎಸ್‌ಯುವಿಯ ಫೇಸ್‌ಲಿಫ್ಟೆಡ್ ಮಾದರಿ ಈಗ ಹೊರಹೋಗುವ ಮಾದರಿಗಿಂತ ಹೆಚ್ಚು ಪ್ರೀಮಿಯಂ ಮತ್ತು ಪ್ರಬುದ್ಧವಾಗಿ ಕಾಣುತ್ತದೆ. ಹೊಸ ನವೀಕರಿಸಿದ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಪೂರ್ಣ-ಅಗಲ ಲೈಟ್ ಬಾರ್‌ನೊಂದಿಗೆ ದೊಡ್ಡ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿವೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಎಸ್‍ಯುವಿಯಲ್ಲಿ ಸ್ಕ್ವಾರಿಶ್ ಫ್ರಂಟ್ ಗ್ರಿಲ್, ಮರುವಿನ್ಯಾಸಗೊಳಿಸಲಾದ ಮುಂಭಾಗದ ಬಂಪರ್, ಹೊಸ ಸ್ಕಿಡ್ ಪ್ಲೇಟ್‌ಗಳು ಮತ್ತು ಹೊಸ LED ಫಾಗ್ ಲ್ಯಾಂಪ್‌ಗಳನ್ನು ಹೊಂದಿದೆ. ಇದರ ಜೊತೆಗೆ, 2022ರ ಸೆಲ್ಟೋಸ್‌ನ ಫೇಸ್‌ಲಿಫ್ಟೆಡ್ ಆವೃತ್ತಿಯ ಎಕ್ಸಾಸ್ಟ್ ಟಿಪ್ ಹಿಂಬದಿಯ ಬಂಪರ್‌ನ ಅಡಿಯಲ್ಲಿ ಅಚ್ಚುಕಟ್ಟಾಗಿ ಹಿಡಿಯಲ್ಪಟ್ಟಂತೆ ತೋರುತ್ತಿದೆ ಮತ್ತು ಲೈಟ್ ಬಾರ್ ಮಧ್ಯದಲ್ಲಿ ಕಿಯಾ ಲೋಗೋವನ್ನು ಹೊಂದಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಈ ಬದಲಾವಣೆಗಳ ಹೊರತಾಗಿಯೂ, 2022ರ ಕಿಯಾ ಸೆಲ್ಟೋಸ್‌ನ ಸಿಲೂಯೆಟ್ ಎಸ್‍ಯುವಿಯ ಹೊರಹೋಗುವ ಆವೃತ್ತಿಗೆ ಬಹುತೇಕ ಒಂದೇ ಆಗಿರುತ್ತದೆ. ಹೊಸ ಎಸ್‍ಯುವಿಯ ಒಳಭಾಗದಲ್ಲಿನವೀಕರಣಗಳು ಕ್ಯಾಬಿನ್ ಅನ್ನು ಹೆಚ್ಚು ದುಬಾರಿಯಾಗಿ ಕಾಣುವಂತೆ ಮಾಡಲು ಹಲವಾರು ವಿನ್ಯಾಸ ಬದಲಾವಣೆಗಳನ್ನು ಪಡೆದುಕೊಂಡಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಎರಡು 10.25-ಇಂಚಿನ ಡಿಸ್ ಪ್ಲೇ ಮತ್ತು ಹೊಸ ರೋಟರಿ-ಶೈಲಿಯ ಗೇರ್ ಸೆಲೆಕ್ಟರ್ ನಾಬ್ ಇರುವಿಕೆಯು ಅತ್ಯಂತ ಗಮನಾರ್ಹ ಬದಲಾವಣೆಯಾಗಿದೆ. ಇದರ ಜೊತೆಗೆ, ದಕ್ಷಿಣ ಕೊರಿಯಾದಲ್ಲಿ ನವೀಕರಿಸಿದ 2022ರ ಕಿಯಾ ಸೆಲ್ಟೋಸ್ ಎಸ್‍ಯುವಿಯು ADAS ಮತ್ತು ಆಕ್ಟಿವ್ ಸೇಫ್ಟಿ ಸಿಸ್ಟಂ ಸ್ಫೋಟ್ಸ್ ವೈಶಿಷ್ಟ್ಯಗಳಾದ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ (ACC), ಸಕ್ರಿಯ ಲೇನ್ ಅಸಿಸ್ಟ್, ಬ್ಲೈಂಡ್-ಸ್ಪಾಟ್ ಮಾನಿಟರಿಂಗ್ ಸಿಸ್ಟಮ್, ಆಟೋ ಎಮರ್ಜನ್ಸಿ ಬ್ರೇಕಿಂಗ್ ಮತ್ತು ಇತ್ಯಾಧಿಗಳನ್ನು ಹೊಂದಿರಲಿದೆ,

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಈ ಎಸ್‍ಯುವಿಯ ಹೆಡ್ಸ್-ಅಪ್ ಡಿಸ್ಪ್ಲೇ, ವೈರ್‌ಲೆಸ್ ಚಾರ್ಜಿಂಗ್, ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯುನಿಟ್, ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ, ಸಂಪರ್ಕಿತ ಕಾರ್ ಟೆಕ್, 360-ಡಿಗ್ರಿ ಕ್ಯಾಮೆರಾ, ಪನೋರಮಿಕ್ ಸನ್‌ರೂಫ್, ಮುಂಭಾಗ ಮತ್ತು ಹಿಂಭಾಗದ ಪಾರ್ಕಿಂಗ್ ಸೆನ್ಸರ್ ಗಳು ಮತ್ತು ಇನ್ನೂ ಹೆಚ್ಚಿನ ಇತರ ವೈಶಿಷ್ಟ್ಯಗಳನ್ನು ಹೊಂದಿದೆ. ಇದರೊಂದಿಗೆ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ತಂತ್ರಜ್ಞಾನವನ್ನು ಹೊಂದಿರುತ್ತದೆ,

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಕಂಪನಿಯು ಬಿಡುಗಡೆಗೊಳಿಸಿದ ಮೊದಲ ಮಾದರಿ ಸೆಲ್ಟೋಸ್ ಎಸ್‍ಯುವಿಯಾಗಿದೆ. ಈ ಸೆಲ್ಟೋಸ್ ಎಸ್‍ಯುವಿಯು ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ಭಾರತೀಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಯಶ್ವಸಿಯಾಗಿದೆ. ಭಾರತದ ಗ್ರಾಹಕರು ಈ ಸೆಲ್ಟೋಸ್ ಎಸ್‍‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ. ಬಿಡುಗಡೆಯಾದಾಗಿನಿಂದ ಸೆಲ್ಟೋಸ್ ಎಸ್‍‍ಯುವಿ ಜನಪ್ರಿಯವಾಗುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ,

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಮಾರಾಟದಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತ್ತು. ಸೆಲ್ಟೋಸ್ ಯಶಸ್ಸು ಭಾರತದಲ್ಲಿ ದಕ್ಷಿಣ ಕೊರಿಯಾದ ವಾಹನ ತಯಾರಕರಾದ ಕಿಯಾಗೆ ಅಡಿಪಾಯ ಹಾಕಿತು. ಈಗ, ಕಿಯಾ ಮಾದರಿಯನ್ನು ತಾಜಾವಾಗಿರಿಸಲು ಮತ್ತು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಲು ಫೇಸ್‌ಲಿಫ್ಟೆಡ್ ಸೆಲ್ಟೋಸ್ ಬರುವ ಸಾಧ್ಯತೆಗಳಿದೆ. ಈ ಹೊಸ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಅನ್ನು ಭಾರತದಲ್ಲಿಯೂ ಪರೀಕ್ಷಿಸಲಾಗಿದೆ, ಮತ್ತು ಇದು ಮುಂದಿನ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಹೊಸ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟೆಡ್ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂದು ಕಿಯಾ ಅಧಿಕೃತವಾಗಿ ಹೇಳಿಲ್ಲ, ಆದರೆ 2023 ಆಟೋ ಎಕ್ಸ್‌ಪೋದಲ್ಲಿ ಇದು ಬಿಡುಗಡೆಯಾಗುವ ಸಾಧ್ಯತೆಗಳಿದೆ, ಪ್ರಸ್ತುತ, ಕಿಯಾ ಸೆಲ್ಟೋಸ್ ಗಿಂತ ಫೇಸ್‌ಲಿಫ್ಟೆಡ್ ಆವೃತ್ತಿ ತುಸು ದುಬಾರಿಯಾಗಿರುತ್ತದೆ ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
2023 kia seltos facelift suv to get new features updates details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X