ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹುನೀರಿಕ್ಷಿತ ಕಾರುಗಳಿವು!

ದೇಶಾದ್ಯಂತ ಹೊಸ ಕಾರುಗಳ ಮಾರಾಟವು ಸಾಕಷ್ಟು ಏರಿಕೆಯಾಗುತ್ತಿದ್ದು, ಶೀಘ್ರದಲ್ಲಿ ಮತ್ತಷ್ಟು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದಗೊಳ್ಳುತ್ತಿವೆ. ಹೊಸ ಕಾರುಗಳ ಪಟ್ಟಿಯಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಮಾದರಿಗಳು ಸಹ ಗಮನಸೆಳೆಯಲಿವೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ದೀಪಾವಳಿಗೂ ಮುನ್ನ ದೇಶಿಯ ಮಾರುಕಟ್ಟೆಯಲ್ಲಿ ಪ್ರಮುಖ ಕಾರು ಕಂಪನಿಗಳು ತನ್ನ ಹೊಸ ಉತ್ಪನ್ನಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರು ಮಾದರಿಗಳು ಗ್ರಾಹಕರ ನೀರಿಕ್ಷೆಯೆಂತೆ ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿವೆ. ಹಾಗಾದಾರೆ ಬಿಡುಗಡೆಯಾಗಲಿರುವ ಹೊಸ ಕಾರುಗಳು ಯಾವವು? ಮತ್ತು ಅವುಗಳು ವಿಶೇಷತೆ ಮತ್ತು ನೀರಿಕ್ಷಿತ ಬೆಲೆ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ

ಮಾರುತಿ ಸುಜುಕಿ ಕಂಪನಿಯು ತನ್ನ ಬಹುನಿರೀಕ್ಷಿತ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿ ಈ ತಿಂಗಳಾಂತ್ಯ ಬಿಡುಗಡೆಗೆ ಸಜ್ಜಾಗುತ್ತಿದ್ದು, ಹೊಸ ಕಾರಿನಲ್ಲಿ 3 ಗೇರ್‌ಬಾಕ್ಸ್ ಸಂಯೋಜನೆಯೊಂದಿಗೆ ಎರಡು ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಗ್ರಾಂಡ್ ವಿಟಾರಾ ಮಾದರಿಗಳಾಗಿ ವಿವಿಧ ಟ್ಯೂನ್ ಹೊಂದಿರುವ 1.5 ಲೀಟರ್ ಟಿಎನ್‌ಜಿಎ ಅಟ್ಕಿನ್ಸನ್ ಸೈಕಲ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಮತ್ತು 1.5 ಲೀಟರ್ ಕೆ15ಸಿ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಇದರಲ್ಲಿ ಸ್ಟ್ರಾಂಗ್ ಹೈಬ್ರಿಡ್ ಮಾದರಿಯು ಪ್ರತಿ ಲೀಟರ್‌ಗೆ 27.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಹೊಸ ಗ್ರಾಂಡ್ ವಿಟಾರಾ ಕಾರು ವಿಶೇಷ ವೈಶಿಷ್ಟ್ಯತೆಗಳೊಂದಿಗೆ 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಹೊಂದಿದ್ದು, ಇದು ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೊತೆಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.20 ಲಕ್ಷ ಬೆಲೆ ಹೊಂದಿರಲಿದೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಟಾಟಾ ಟಿಯಾಗೋ ಇವಿ

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೇ ತಿಂಗಳು 28 ರಂದು ಹೊಸ ಟಿಯಾಗೋ ಎಲೆಕ್ಟ್ರಿಕ್ ಕಾರನ್ನು ಅನಾವರಣಗೊಳಿಸಲಿದ್ದು, ಹೊಸ ಇವಿ ಕಾರು ಮುಂಬರುವ ದೀಪಾವಳಿ ಹೊತ್ತಿಗೆ ಖರೀದಿಗೆ ಲಭ್ಯವಾಗಲಿದೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ ಬಿಡುಗಡೆಯ ನಂತರ ಮೂರನೇ ಎಲೆಕ್ಟ್ರಿಕ್ ಮಾದರಿಯಾಗಿರುವ ಟಿಯಾಗೋ ಇವಿಯು ಟಿಗೋರ್ ಇವಿ ಮಾದರಿಯಲ್ಲಿ ಪ್ರಮುಖ ತಾಂತ್ರಿಕ ಸೌಲಭ್ಯಗಳನ್ನು ಹೊಂದಬಹುದಾಗಿದ್ದು, ಇದು ರೂ.10 ಲಕ್ಷ ಬಜೆಟ್‌ನಲ್ಲಿ ಅತ್ಯುತ್ತಮ ಮೈಲೇಜ್ ಹೊಂದಿರುವ ಇವಿ ಕಾರು ಮಾದರಿಯಾಗಿ ಗುರುತಿಸಿಕೊಳ್ಳಲಿದೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಮಹೀಂದ್ರಾ ಎಕ್ಸ್‌ಯುವಿ300 ಸ್ಪೋರ್ಟ್ಜ್

ಹೊಸ ಮಹೀಂದ್ರಾ ಎಕ್ಸ್‌ಯುವಿ300 ಎಸ್‍ಯುವಿಯು ಶೀಘ್ರದಲ್ಲಿಯೇ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಫೇಸ್‌ಲಿಫ್ಟ್ ಮಾದರಿಯು ಹೊಸ ವಿನ್ಯಾಸ ಮತ್ತು ಉನ್ನತೀಕರಿಸಿದ ಎಂಜಿನ್‌ನಲ್ಲಿ ಗಮನಾರ್ಹ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಹೊಸ ಎಕ್ಸ್‌ಯುವಿ300 ಎಸ್‍ಯುವಿಯು ಮೊದಲಿಗಿಂತ ಹೆಚ್ಚು ಟರ್ಬೊ ಪವರ್ ಅನ್ನು ಹೊಂದಿರಲಿದ್ದು, ಹೊಸ ಕಾರು ಸಾಮಾನ್ಯ ಪೆಟ್ರೋಲ್ ಮಾದರಿಯೊಂದಿಗೆ ಹೆಚ್ಚಿನ ಪರ್ಫಾಮೆನ್ಸ್ ಹೊಂದಿರುವ 1.2 ಲೀಟರ್ T-GDI mStallion ಎಂಜಿನ್ ನೊಂದಿಗೆ ಬರಲಿದೆ. ಈ ಎಂಜಿನ್ 130 ಬಿಹೆಚ್‍ಪಿ ಪವರ್ ಮತ್ತು 220 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದ್ದು, ತುಸು ದುಬಾರಿ ಬೆಲೆ ಹೊಂದಿರುತ್ತದೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಮರ್ಸಿಡಿಸ್-ಎಎಂಜಿ ಇಕ್ಯೂಎಸ್ 53 4ಮ್ಯಾಟಿಕ್ ಪ್ಲಸ್

ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಉನ್ನತ ಕಾರ್ಯಕ್ಷಮತೆಯ ಬ್ರ್ಯಾಂಡ್‌ನ ಮೊದಲ ಆಲ್-ಎಲೆಕ್ಟ್ರಿಕ್ ಸರಣಿಯ ಉತ್ಪಾದನಾ ಮಾದರಿಯಾದ ಮರ್ಸಿಡಿಸ್-ಎಎಂಜಿ ಇಕ್ಯೂಎಸ್ 53 4ಮ್ಯಾಟಿಕ್ ಪ್ಲಸ್ ಅನ್ನು ಇದೇ ತಿಂಗಳು ಆಗಸ್ಟ್ 24 ರಂದು ಭಾರತದಲ್ಲಿ ಬಿಡುಗಡೆ ಮಾಡುತ್ತಿದೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಸ್ಟ್ಯಾಂಡರ್ಡ್ ಮರ್ಸಿಡಿಸ್-ಎಎಂಜಿ ಇಕ್ಯೂಎಸ್ 53 4ಮ್ಯಾಟಿಕ್ ಪ್ಲಸ್ ನಲ್ಲಿ 649 ಬಿಎಚ್‌ಪಿ ಪವರ್ ನೀಡಲಾಗಿದ್ದರೆ ಡೈನಾಮಿಕ್ ಪ್ಲಸ್ ಪ್ಯಾಕೇಜ್‌ನೊಂದಿಗೆ ಅಳವಡಿಸಲಾಗಿರುವ ರೇಸ್ ಸ್ಟಾರ್ಟ್ ಮೋಡ್‌ನಲ್ಲಿ 751 ಬಿಎಚ್‌ಪಿ ಉತ್ಪಾದಿಸಬಲ್ಲದು. ಈ ಮೂಲಕ ಇದು ಸೊನ್ನೆಯಿಂದ ನೂರು ಕಿ.ಮೀ ವೇಗವನ್ನು ಕೇವಲ 3.4 ಸೆಕೆಂಡುಗಳಲ್ಲಿ ಸಾಧಿಸಬಹುದಾಗಿದ್ದು, ಗರಿಷ್ಠ 360 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಬಿವೈಡಿ ಅಟ್ಟೊ 3

ಭಾರತದಲ್ಲಿ ಮೊದಲ ಹಂತದಲ್ಲಿ ಇ6 ಎಂಪಿವಿ ಕಾರು ಬಿಡುಗಡೆ ಮಾಡಿದ್ದ ಕಂಪನಿಯು ಇದೀಗ ಎಸ್‌ಯುವಿ ವಿಭಾಗಕ್ಕೆ ಹೊಸ ಅಟ್ಟೊ 3 ಪರಿಚಯಿಸುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಂಪನಿಯು ಈಗಾಗಲೇ ಟೀಸರ್ ಸಹ ಪ್ರಕಟಿಸುವ ಮೂಲಕ ಹೊಸ ಕಾರು ಬಿಡುಗಡೆ ಯೋಜನೆಯನ್ನು ಖಾತ್ರಿಪಡಿಸಿದೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಮಾರಾಟಗೊಳ್ಳುತ್ತಿರುವ ಬಿವೈಡಿ ಅಟ್ಟೊ 3 ಎಸ್‌ಯುವಿ ಮಾದರಿಯು ಇದೀಗ ಭಾರತದಲ್ಲಿ ಕೆಲವು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿ ಜೆಡ್ಎಸ್ ಇವಿ ಮತ್ತು ಹ್ಯುಂಡೈ ಕೊನಾ ಇವಿ ಕಾರುಗಳಿಗೆ ಇದು ಉತ್ತಮ ಪೈಪೋಟಿಯಾಗಲಿದೆ.

ಮುಂಬರುವ ದೀಪಾವಳಿ ಹೊತ್ತಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿರುವ ಬಹನೀರಿಕ್ಷಿತ ಕಾರುಗಳಿವು!

ಅಟ್ಟೊ 3 ಎಸ್‌ಯುವಿ ಮಾದರಿಯಲ್ಲಿ ಬಿವೈಡಿ ಕಂಪನಿಯು 60.48kWh ಮತ್ತು 49.92kWh ಬ್ಯಾಟರಿ ಪ್ಯಾಕ್ ಆಯ್ಕೆ ನೀಡುವ ಸಾಧ್ಯತೆಯಿದ್ದು, ಗ್ರಾಹಕರು ತಮ್ಮ ಅಗತ್ಯತೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್ ಖರೀದಿಸಬಹುದಾಗಿದೆ. 60.48kWh ಬ್ಯಾಟರಿ ಪ್ಯಾಕ್ ಮಾದರಿಯು ಪ್ರತಿ ಚಾರ್ಜ್‌ಗೆ 420 ಕಿ.ಮೀ ಮೈಲೇಜ್ ಹೊಂದಿದ್ದರೆ 49.92kWh ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಮಾದರಿಯು 320 ಕಿ.ಮೀ ಮೈಲೇಜ್ ಹೊಂದಿದ್ದು, ಉತ್ತಮ ಮೈಲೇಜ್ ಪ್ರೇರಣೆಯೊಂದಿಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

Most Read Articles

Kannada
English summary
5 new cars to enter the market before diwali details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X