Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದೇಶಾದ್ಯಂತ 1500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಚಾಲನೆ ನೀಡಿದ ಅದಾನಿ ಟೋಟಲ್ ಗ್ಯಾಸ್
ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡಲಾಗುತ್ತಿದೆ.

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ.

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸಿವೆ.

ದೇಶದ ಅತಿ ದೊಡ್ಡ ತೈಲ ಮಾರಾಟ ಸಂಸ್ಥೆಗಳಲ್ಲಿ ಒಂದಾಗಿರುವ ಅದಾನಿ ಟೋಟಲ್ ಗ್ಯಾಸ್ ಕೂಡಾ ಭವಿಷ್ಯದ ವಾಹನಗಳಿಗೆ ಸುಸ್ಥಿರ ಚಾರ್ಜಿಂಗ್ ಸೌಲಭ್ಯ ಒದಗಿಸುವ ಬೃಹತ್ ಯೋಜನೆ ರೂಪಿಸಿದ್ದು, ದೇಶದ ಪ್ರಮುಖ ನಗರಗಳಲ್ಲಿ ಕಾರ್ಯನಿರ್ವಹಣೆಯಲ್ಲಿರುವ ಪೆಟ್ರೋಲ್ ಮತ್ತು ಸಿಎನ್‌ಜಿ ಬಂಕ್‌ಗಳಲ್ಲಿಯೇ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯವನ್ನು ತೆರೆಯಲಾಗುತ್ತಿದೆ.

ಅಹಮದಾಬಾದ್‌ನ ಮಣಿನಗರದ ಎಟಿಜಿಎಲ್‌ನ ಸಿಎನ್‌ಜಿ ಸ್ಟೇಷನ್‌ನಲ್ಲಿ ಅದಾನಿ ಟೋಟಲ್ ಗ್ಯಾಸ್ ಕಂಪನಿಯು ತನ್ನ ಮೊದಲ ಇವಿ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ ನೀಡಿದ್ದು, ಮುಂದಿನ ಒಂದು ವರ್ಷದೊಳಗೆ ದೇಶಾದ್ಯಂತ ಒಟ್ಟು 1,500 ಚಾರ್ಜಿಂಗ್ ನಿಲ್ದಾಣದ ಹೊಂದುವ ಗುರಿಹೊಂದಿದೆ.

ಉದಯೋನ್ಮುಖ ವ್ಯಾಪಾರ ಅವಕಾಶವನ್ನು ಸಮಯೋಚಿತವಾಗಿ ಬಳಸಿಕೊಳ್ಳಲು ನಾವು ಯೋಜಿಸುತ್ತಿದ್ದೇವೆ ಎಂದಿರುವ ಅದಾನಿ ಟೋಟಲ್ ಗ್ಯಾಸ್‌ನ ಸಿಇಒ ಸುರೇಶ್ ಪಿ ಮಂಗ್ಲಾನಿಯವರು ಹೊಸ ಯೋಜನೆ ಅಡಿ ಮುಂಬರುವ ಕೆಲವೇ ದಿನಗಳಲ್ಲಿ ಇನ್ನು ಹೆಚ್ಚಿನ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಸುಳಿವು ನೀಡಿದ್ದಾರೆ.

ಇದರಿಂದ ಕೇವಲ ನಗರಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುವ ಇವಿ ವಾಹನಗಳ ಮೂಲಕ ದೂರದ ಪ್ರಯಾಣಕ್ಕೂ ಅನುಕೂಲಕರವಾಗಲಿದ್ದು, ಹೆಚ್ಚುತ್ತಿರುವ ಇಂಧನ ಬೆಲೆ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುತ್ತಿದೆ.

ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆ ಅಡಿ ಇದೀಗ ಮತ್ತೆ ಇವಿ ವಾಹನಗಳ ಖರೀದಿ ಮೇಲೆ ಪ್ರೋತ್ಸಾಹ ಧನ ಹೆಚ್ಚಿಸಿದೆ.

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕಳೆದ ಕೆಲ ತಿಂಗಳಿನಿಂದ ಒಟ್ಟಾರೆ ವಾಹನಗಳ ನೋಂದಣಿ ಪ್ರಮಾಣದಲ್ಲಿ ಶೇ.2, ಶೇ. 3 ರಷ್ಟು ಪಾಲು ಹೊಂದಿದ್ದ ಇವಿ ವಾಹನಗಳ ನೋಂದಣಿ ಪ್ರಮಾಣ ಇದೀಗ ಗರಿಷ್ಠ ಪ್ರಮಾಣಕ್ಕೆ ಏರಿಕೆ ಕಂಡಿದ್ದು, ಸದ್ಯ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಪರಿಣಾಮ ಇವಿ ವಾಹನಗಳು ಇನ್ನು ಹೆಚ್ಚಿನ ಮಟ್ಟದಲ್ಲಿ ರಸ್ತೆಗಿಳಿಯಲಿವೆ.

ಮಾಹಿತಿಗಳ ಪ್ರಕಾರ ದೇಶಾದ್ಯಂತ ಇದುವರೆಗೆ ಸುಮಾರು 10 ಲಕ್ಷ ಇವಿ ವಾಹನಗಳು ನೋಂದಣಿಯಾಗಿ ಎನ್ನಲಾಗಿದ್ದು, ಸಾಮಾನ್ಯ ವಾಹನಗಳ ನೋಂದಣಿ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ತೀರಾ ಕಡಿಮೆ ಪ್ರಮಾಣ ಎನ್ನಬಹುದು. ಹೀಗಾಗಿ ಇವಿ ವಾಹನಗಳ ಉತ್ತೇಜನಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಇವಿ ವಾಹನಗಳ ಹೆಚ್ಚಳಕ್ಕೆ ಮುಖ್ಯವಾಗಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲಾಗುತ್ತಿದೆ.