ಎಂಪಿವಿ ಕಾರುಗಳಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡಲಿದೆ ಹೊಸ ಕಿಯಾ ಕಾರೆನ್ಸ್
ಕಿಯಾ ಇಂಡಿಯಾ ಕಂಪನಿಯು ಇದೇ ತಿಂಗಳು ತನ್ನ ಹೊಸ ಕಾರೆನ್ಸ್ ಎಂಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಕಿಯಾ ಕಂಪನಿಯು ಸೆಲ್ಟೊಸ್, ಸೊನೆಟ್ ಮತ್ತು ಕಾರ್ನಿವಾಲ್ ನಂತರ ನಾಲ್ಕನೇ ಕಾರು ಮಾದರಿಯಾಗಿ ಕಾರೆನ್ಸ್ ಎಂಯುವಿಯನ್ನು ಬಿಡುಗಡೆ ಮಾಡುತ್ತಿದ್ದು, ಮಧ್ಯಮ ಕ್ರಮಾಂಕದ ಎಸ್‌ಯುವಿ ಮತ್ತು ಎಂಪಿವಿ ಕಾರುಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿರುವ ಹೊಸ ಕಾರು ಹಲವಾರು ಪ್ರಯೋಗಾತ್ಮಕ ವಿಧಾನಗಳನ್ನು ಆಧರಿಸಿ ನಿರ್ಮಾಣಗೊಂಡಿದೆ.

ಹೊಸ ಕಾರು ವಿವಿಧ ಐದು ವೆರಿಯೆಂಟ್‌ಗಳಿಗೆ ಅನುಗುಣವಾಗಿ ಮೂರನೇ ಸಾಲಿನ ಆಸನಗಳೊಂದಿಗೆ 6 ಮತ್ತು 7 ಆಸನಗಳ ಆಯ್ಕೆ ಹೊಂದಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆಯು ಸಹ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮವಾಗಿದೆ.

ಕಾರೆನ್ಸ್ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸೆಲ್ಟೊಸ್ ಎಸ್‌ಯುವಿ ಮಾದರಿಯಲ್ಲಿರುವಂತೆ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಎಂಜಿನ್ ಆಯ್ಕೆಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.

ಹೊಸ ಕಾರಿನಲ್ಲಿರುವ 1.5-ಲೀಟರ್ ಪೆಟ್ರೋಲ್ ಮಾದರಿಯು 113-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 138-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಹಾಗೆಯೇ 1.5-ಲೀಟರ್ ಡೀಸೆಲ್ ಮಾದರಿಯು 113.4-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಇಂಧನ ದಕ್ಷತೆಯಲ್ಲೂ ಹೊಸ ಕಾರು ಗ್ರಾಹಕರನ್ನು ಆಕರ್ಷಿಸಲಿದೆ.

ಕಾರೆನ್ಸ್ ಕಾರಿನ 1.5 ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 15.7 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 1.4 ಲೀಟರ್ ಟರ್ಬೊ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 16.2 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 16.5 ಕಿ.ಮೀ ಮೈಲೇಜ್ ನೀಡುತ್ತದೆ.

ಹಾಗೆಯೇ 1.5 ಲೀಟರ್ ಡೀಸೆಲ್ ಮಾದರಿಯಲ್ಲಿನ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 21.3 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 18.3 ಕಿ.ಮೀ ಮೈಲೇಜ್ ನೀಡಲಿದೆ. ಹೊಸ ಕಾರು ಸೆಲ್ಟೊಸ್ ಮಾದರಿಗಿಂತಲೂ ಹೆಚ್ಚಿನ ಮೈಲೇಜ್ ನೀಡಲಿದ್ದು, ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.
| ಎಂಜಿನ್ ಆಯ್ಕೆ | ಕಾರೆನ್ಸ್ ಮೈಲೇಜ್ | ಸೆಲ್ಟೊಸ್ ಮೈಲೇಜ್ | ಎಂಜಿನ್ಆಕ್ಸಿಲೇಟರ್ 0-100ಕಿ.ಮೀ(ಪ್ರತಿ ಗಂಟೆಗೆ)
|
| 1.5 ಲೀಟರ್ ಪೆಟ್ರೋಲ್ ಮ್ಯಾನುವಲ್ | 15.7 ಕಿ.ಮೀ | 16.5 ಕಿ.ಮೀ | 11.5 ಸೆಕೆಂಡ್‌ಗಳು |
| 1.4 ಲೀಟರ್ ಟರ್ಬೊ ಪೆಟ್ರೋಲ್ ಮ್ಯಾನುವಲ್ | 16.2 ಕಿ.ಮೀ | 16.1 ಕಿ.ಮೀ | 10 ಸೆಕೆಂಡ್‌ಗಳು |
| 1.4 ಲೀಟರ್ ಟರ್ಬೊ ಪೆಟ್ರೋಲ್ ಡಿಸಿಟಿ | 16.5 ಕಿ.ಮೀ | 16.5 ಕಿ.ಮೀ | 10.2 ಸೆಕೆಂಡ್‌ಗಳು |
| 1.5 ಲೀಟರ್ ಡೀಸೆಲ್ ಮ್ಯಾನುವಲ್ | 21.3 ಕಿ.ಮೀ | 21.0 ಕಿ.ಮೀ | 12.4 ಸೆಕೆಂಡ್‌ಗಳು |
| 1.5 ಡೀಸೆಲ್ ಆಟೋಮ್ಯಾಟಿಕ್ | 18.4 ಕಿ.ಮೀ | 18.0 ಕಿ.ಮೀ | 13.4 ಸೆಕೆಂಡ್‌ಗಳು |

ಮಾಹಿತಿಗಳ ಪ್ರಕಾರ, ಕಿಯಾ ಕಂಪನಿಯು ಹೊಸ ಕಾರೆನ್ಸ್ ಕಾರಿನ 1.5 ಲೀಟರ್ ಪೆಟ್ರೋಲ್ ಮಾದರಿಯಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಮಾದರಿಯನ್ನು ಮಾತ್ರ ಬಿಡುಗಡೆ ಮಾಡುತ್ತಿದ್ದು, 1.4 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯಲ್ಲಿ ಮ್ಯಾನುವಲ್ ಮತ್ತು ಡ್ಯಯಲ್ ಕ್ಲಚ್ ಆಟೋಮ್ಯಾಟಿಕ್ ಮಾದರಿಯನ್ನು ಮತ್ತು 1.5 ಡೀಸೆಲ್ ಮಾದರಿಯಲ್ಲಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.

ಹೊಸ ಕಾರಿನಲ್ಲಿ ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವುದು ಕೂಡಾ ಗ್ರಾಹಕರ ಆಯ್ಕೆಗೆ ಪ್ರಮುಖ ಅಂಶವಾಗಲಿದ್ದು, ಹೊಸ ಕಾರಿನಲ್ಲಿ ಕಂಪನಿಯು ಟೈಗರ್ ನೋಸ್ ಹೊಂದಿರುವ ಸಿಗ್ನಿಚೆರ್ ಗ್ರಿಲ್ ಜೊತೆ ಏರ್ ಡ್ಯಾಮ್, ವಿಭಜಿತವಾಗಿ ಎಲ್ಇಡಿ ಹೆಡ್‌ಲ್ಯಾಂಪ್, ವೈ ಆಕಾರದ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ ಮತ್ತು ಬಲಿಷ್ಠವಾಗಿರುವ ಫ್ರಂಟ್ ಬಂಪರ್ ಜೋಡಿಸಿದೆ.

ಫ್ರಂಟ್ ಹೆಡ್‌ಲ್ಯಾಂಪ್‌ಗೆ ಹೊಂದಿಕೊಂಡಂತೆ ನೀಡಲಾಗಿರುವ ಕ್ರಿಸ್ ಲೈನ್ ಕಾರನ್ನು ಸುತ್ತುವರಿದಿರುವುದು ಕೂಡಾ ಪ್ರೀಮಿಯಂ ಲುಕ್ ಹೆಚ್ಚಿಸಲು ಸಹಕಾರಿಯಾಗಿದ್ದು, ಬಾಡಿ ಕ್ಲ್ಯಾಡಿಂಗ್, 17 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್, ವ್ಹೀಲ್ ಆರ್ಚ್, ಎಲ್ಇಡಿ ಟೈಲ್ ಲ್ಯಾಂಪ್, ಸ್ಟೈಲಿಶ್ ರಿಯರ್ ಬಂಪರ್, ಫ್ಲಕ್ಸ್ ಸಿಲ್ವರ್ ಇನ್ಸರ್ಟ್ ಜೊತೆ ಆಕರ್ಷಕವಾದ ರಿಯರ್ ಸ್ಪಾಯ್ಲರ್ ನೀಡಲಾಗಿದೆ.

ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ ಸಾಫ್ಟ್ ಟಚ್ ಡ್ಯಾಶ್‌ಬೋರ್ಡ್, 10.25 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಫೂರ್ಣ ಪ್ರಮಾಣದ ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ಮಲ್ಟಿ ಫಂಕ್ಷನ್ ಹೊಂದಿರುವ ಸ್ಟೀರಿಂಗ್ ವ್ಹೀಲ್, ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ನೀಡಲಾಗಿದೆ.

ಹೊಸ ಕಾರಿನಲ್ಲಿ ಒಂದೇ ಸೂರಿನಡಿ ಹತ್ತಾರು ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸುವ ಯುವಿಓ ಕಾರ್ ಕನೆಕ್ಟ್ ಫೀಚರ್ಸ್ ಸಹ ನೀಡಿದ್ದು, ವೆಂಟಿಲೆಟೆಡ್ ಸೀಟುಗಳು, 64 ಆಂಬಿಯೆಂಟ್ ಲೈಟಿಂಗ್ಸ್, ಸೀಟ್ ಬ್ಯಾಕ್ ಟೇಬಲ್, ಕಪ್ ಹೋಲ್ಡರ್ಸ್, ಏರ್ ಪ್ಯೂರಿಫೈಯರ್ ಸೌಲಭ್ಯಗಳಿವೆ.

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಹೊಸ ಕಾರು 4,540 ಎಂಎಂ ಉದ್ದ, 1,800 ಎಂಎಂ ಅಗಲ, 1,708 ಎತ್ತರ ಮತ್ತು 2,780 ಎಂಎಂ ವ್ಹೀಲ್ ಬೆಸ್ ಹೊಂದಿದ್ದು, ಮೂರನೇ ಸಾಲಿನಲ್ಲಿರುವ ಆಸನಗಳು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚು ಒಳಾಂಗಣದೊಂದಿಗೆ ವಯಸ್ಕ ಪ್ರಯಾಣಿಕರೂ ಸಹ ಆರಾಮವಾಗಿ ಕುಳಿತುಕೊಳ್ಳಬಹುದು.

ಈ ಮೂಲಕ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18 ಲಕ್ಷದ ತನಕ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದೆಂದು ಅಂದಾಜಿಸಲಾಗಿದ್ದು, 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರುವ ಹ್ಯುಂಡೈ ಅಲ್ಕಾಜರ್, ಮಹೀಂದ್ರಾ ಎಕ್ಸ್‌ಯುವಿ700 ಮತ್ತು ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ ಮತ್ತು ಎಂಪಿವಿ ಕಾರು ಮಾದರಿಗಳಾದ ಎರ್ಟಿಗಾ ಹಾಗೂ ಇನೋವಾ ಕ್ರಿಸ್ಟಾ ಆರಂಭಿಕ ಮಾದರಿಗಳಿಗೂ ಇದು ಪೈಪೋಟಿ ನೀಡಲಿದೆ.


Click it and Unblock the Notifications








