Just In
- 46 min ago
ಭಾರತದಲ್ಲಿ ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಗೆ ಸಿದ್ದವಾದ ಎಲೆಕ್ಟ್ರಾನ್ ಇವಿ
- 14 hrs ago
ಆಕರ್ಷಕ ವಿನ್ಯಾಸದ 2022ರ ಹ್ಯುಂಡೈ ಟ್ಯೂಸಾನ್ ಎಸ್ಯುವಿಯ ವಿಶೇಷತೆಗಳು
- 14 hrs ago
ಪಾಸ್ಫೋರ್ಟ್ ಪ್ರಯೋಜನಗಳೇನು? ಏಕೆ ವಿವಿಧ ಬಣ್ಣಗಳಲ್ಲಿ ಲಭ್ಯವಿರುತ್ತವೆ ನೋಡಿ..
- 15 hrs ago
ಬ್ರೇಕ್ ಫೇಲ್ ಆದಾಗ ಕೇವಲ 8 ಸೆಕೆಂಡುಗಳಲ್ಲಿ ಕಾರು ನಿಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಸಲಹೆ
Don't Miss!
- Movies
ಮಗಳಿಗೆ ದುಬಾರಿ ಗಿಫ್ಟ್ ಕೊಟ್ಟ ನಟ ದುನಿಯಾ ವಿಜಯ್!
- News
ಏಡಿ ಕಣ್ಣಿಂದ ಕ್ಯಾಮೆರಾ- ಸೆಲ್ಫ್ ಡ್ರೈವಿಂಗ್ ಕಾರಿಗೆ ಭರ್ಜರಿ ಪುಷ್ಟಿ
- Lifestyle
ಶನಿದೋಷ ನಿವಾರಣೆ ಹಾಗೂ ಸಂಪತ್ತು ವೃದ್ಧಿಗೆ ಕೃಷ್ಣ ಜನ್ಮಾಷ್ಟಮಿಗೆ ಮಾಡಿ ಈ ವಿಶೇಷ ಪರಿಹಾರ
- Technology
ಧಮಾಕಾ ಕೊಡುಗೆ!..ಭರ್ಜರಿ ಡಿಸ್ಕೌಂಟ್ನಲ್ಲಿ ಹೊಸ ಸ್ಮಾರ್ಟ್ಟಿವಿ ನಿಮ್ಮದಾಗಿಸಿಕೊಳ್ಳಿ!
- Finance
ಆಗಸ್ಟ್ 17: ಭಾರತದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು
- Sports
ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಖರೀದಿಸುತ್ತೇನೆ ಎಂದ ಎಲಾನ್ ಮಸ್ಕ್!
- Education
Distance Education Courses And Colleges : ದೂರ ಶಿಕ್ಷಣ ಮೂಲಕ ಅಧ್ಯಯನಕ್ಕೆ ಉತ್ತಮ ಕೋರ್ಸ್ ಮತ್ತು ಕಾಲೇಜುಗಳ ವಿವರ
- Travel
ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಆನೆಗಳ ಶಿಬಿರಕ್ಕೆ ಭೇಟಿ ಕೊಡಿ
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್
ಹೊಸ ಕಾರುಗಳಲ್ಲಿ ಸುರಕ್ಷಾ ಗುಣಮಟ್ಟವನ್ನು ಸಾಬೀತುಪಡಿಸಲು ನ್ಯೂ ಕಾರ್ ಅಸ್ಸೆಸ್ಮೆಂಟ್ ಪ್ರೋಗ್ರಾಂ (ಎನ್‌ಸಿಎಪಿ) ಕಡ್ಡಾಯಗೊಳಿಸಲಾಗಿದ್ದು, ಸುರಕ್ಷತೆ ಇಲ್ಲದ ಕಾರುಗಳಿಗೆ ಮಾರಾಟಕ್ಕೆ ಹಂತ-ಹಂತವಾಗಿ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ.

ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ ಅಡಿಯಲ್ಲಿ ಕ್ರ್ಯಾಶ್ ಟೆಸ್ಟ್‌ಗೆ ಒಳಗಾಗುವ ಕಾರುಗಳಿಗೆ ಸೇಫ್ಟಿ ರೇಟಿಂಗ್ಸ್ ನೀಡಲಾಗುತ್ತಿದ್ದು, ಭಾರತದಲ್ಲಿ ನಿರ್ಮಾಣವಾಗುತ್ತಿರುವ ಪ್ರಮುಖ ಕಾರುಗಳು ಕ್ರ್ಯಾಶ್ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿವೆ. ಸದ್ಯ ಭಾರತದಲ್ಲಿ ನಿರ್ಮಾಣದ ಕಾರುಗಳು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ಗಾಗಿ ಜಾಗತಿಕ ಮಾರುಕಟ್ಟೆಯಲ್ಲಿನ ಮಾನದಂಡಗಳನ್ನು ಅನುಸರಿಸುತ್ತಿದ್ದು, ಶೀಘ್ರದಲ್ಲಿಯೇ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ಭಾರತದಲ್ಲಿ ಆರಂಭಗೊಳ್ಳುವುದು ಬಹುತೇಕ ಖಚಿತವಾಗಿದೆ.

ಭಾರತ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ (ಎನ್‌ಸಿಎಪಿ) ಆರಂಭಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈಗಾಗಗಲೇ ಹೊಸ ಯೋಜನೆಯ ಕರಡು ಅಧಿಸೂಚನೆಯನ್ನು ಅನುಮೋದಿಸಿದ್ದು, ಆತ್ಮನಿರ್ಭರ ಭಾರತ ಅಭಿಯಾನ ಯೋಜನೆ ಅಡಿ ಹೊಸ ಟೆಸ್ಟಿಂಗ್ ಪ್ರಕ್ರಿಯೆ ಚಾಲನೆ ನೀಡಲಾಗುತ್ತಿದೆ.

NCAP ಎಂದು ಕರೆಯಲ್ಪಡುವ ಹೊಸ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ ಆಟೋಮೊಬೈಲ್‌ಗಳ ಸುರಕ್ಷತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದು, ಮೊಟ್ಟ ಮೊದಲ ಬಾರಿಗೆ ಇದನ್ನು ಯುಎಸ್ ಎನ್‌ಸಿಎಪಿ ಹೆಸರಿನಲ್ಲಿ ಪರಿಚಯಿಸಲಾಯ್ತು. ತದನಂತರ ಹಲವಾರು ಮಾರ್ಪಾಡುಗಳೊಂದಿಗೆ ಇಂದು ಒಂಬತ್ತು ವಿವಿಧ ಬಗೆಯ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ಗಳು ಅಸ್ತಿತ್ವಕ್ಕೆ ಬಂದಿದ್ದು, ಸದ್ಯ ಭಾರತದಲ್ಲಿ ನಿರ್ಮಾಣವಾಗುವ ಕಾರುಗಳು ಗ್ಲೋಬಲ್ ಎನ್‌ಸಿಎಪಿ ಅಡಿಯಲ್ಲಿ ಸ್ವಯಂಪ್ರೇರಿತವಾಗಿ ಪರೀಕ್ಷೆಗೆ ಒಳಪಡುತ್ತಿವೆ.

ಗ್ಲೋಬಲ್ ಎನ್‌ಸಿಎಪಿ ಅದರಲ್ಲಿ ವಿಶ್ವದ ಪ್ರಮುಖ ಆಟೋ ಉತ್ಪಾದನಾ ಕಂಪನಿಯು ತಮ್ಮದೆ ಆದ ಕೆಲವು ಸುರಕ್ಷಾ ಮಾನದಂಡಗಳೊಂದಿಗೆ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಡೆಸುತ್ತಿದ್ದು, ಗ್ಲೋಬಲ್ ಎನ್‌ಸಿಎಪಿ ಜೊತೆ ಯುಎಸ್ ಎನ್‌ಸಿಎಪಿ, ಯುರೋ ಎನ್‌ಸಿಎಪಿ, ಏಷಿಯನ್ ಎನ್‌ಸಿಎಪಿ, ಜಪಾನ್ ಎನ್‌ಸಿಎಪಿ, ಚೀನಾ ಎನ್‌ಸಿಎಪಿ, ಕೊರಿಯನ್ ಎನ್‌ಸಿಎಪಿ, ಲ್ಯಾಟಿನ್ ಎನ್‌ಸಿಎಪಿ ಕಾರ್ಯನಿರ್ವಹಣೆಯಲ್ಲಿವೆ.

ಅದೇ ರೀತಿಯಾಗಿ ಇದೀಗ ದೇಶಿಯ ಮಾರುಕಟ್ಟೆಯಲ್ಲಿ ಕಾರುಗಳ ಸುರಕ್ಷತೆಯನ್ನು ಬಲಪಡಿಸಲು ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ಪರಿಚಯಿಸಲಾಗುತ್ತಿದ್ದು, ಭಾರತ್ ಎನ್‌ಸಿಎಪಿ ಜಾರಿಗೆ ಬಂದಲ್ಲಿ ಭಾರತದಲ್ಲಿ ಮಾರಾಟಗೊಳ್ಳುವ ಮತ್ತು ರಫ್ತುಗೊಳ್ಳುವ ಪ್ರತಿ ಕಾರು ಮಾದರಿಯು ಕೂಡಾ ಹೊಸ ಸುರಕ್ಷಾ ಮಾನದಂಡಗಳನ್ನು ಪಾಲನೆ ಮಾಡಬೇಕಾಗುತ್ತದೆ.

ಸದ್ಯ ಭಾರತದಲ್ಲಿ ಕೆಲವೇ ಕೆಲವು ಕಾರು ತಯಾರಕ ಕಂಪನಿಯು ಮಾತ್ರವೇ ಸ್ವಯಂಪ್ರೇರಣೆಯಿಂದ ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ಗೆ ಒಳಗಾಗುತ್ತಿದ್ದು, ಭಾರತ್ ಎನ್‌ಸಿಎಪಿ ಜಾರಿ ನಂತರ ಹೊಸದಾಗಿ ಮಾರಾಟಗೊಳ್ಳಲಿರುವ ಪ್ರತಿ ಕಾರು ಮಾದರಿಯು ಕ್ರ್ಯಾಶ್ ಟೆಸ್ಟಿಂಗ್‌ಗೆ ಒಳಗಾಗಬೇಕಾಗುತ್ತದೆ.

ಭಾರತದಲ್ಲಿ ಹೆಚ್ಚುತ್ತಿರುವ ವಾಹನಗಳ ಪರಿಣಾಮ ಅಪಘಾತಗಳ ಸಂಖ್ಯೆ ಕೂಡಾ ಸಾಕಷ್ಟು ಹೆಚ್ಚಳವಾಗುತ್ತಿದ್ದು, ಅಪಘಾತಗಳಲ್ಲಿ ಪ್ರಾಣಹಾನಿಯನ್ನು ತಗ್ಗಿಸಲು ವಾಹನಗಳಲ್ಲಿ ಸುರಕ್ಷಾ ಸೌಲಭ್ಯಗಳನ್ನು ನಿರಂತರವಾಗಿ ಸುಧಾರಣೆಗೊಳಿಸಲಾಗುತ್ತಿದೆ.

ಹೊಸ ಭಾರತ್ ಎನ್‌ಸಿಎಪಿ ರಚನೆ ಕುರಿತ ಮಾತನಾಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಹೊಸ ಯೋಜನೆಯ ಮೂಲಕ ಭಾರತೀಯ ಕಾರುಗಳ ಕ್ರ್ಯಾಶ್ ಟೆಸ್ಟಿಂಗ್ ಸೇಫ್ಟಿ ರೇಟಿಂಗ್ ಸುಧಾರಣೆಯು ಪ್ರಯಾಣಿಕರ ಸುರಕ್ಷತೆ ಹೆಚ್ಚಳದ ಜೊತೆಗೆ ಭಾರತೀಯ ವಾಹನಗಳ ರಫ್ತು ಗುಣಮಟ್ಟ ಹೆಚ್ಚಿಸುತ್ತದೆ ಎಂದಿದ್ದಾರೆ.

ಇನ್ನು ಕಳೆದ ಒಂದು ದಶಕದ ಅವಧಿಯಲ್ಲಿ ಪ್ರಯಾಣಿಕ ಕಾರುಗಳಲ್ಲಿ ಹಲವಾರು ಸುರಕ್ಷಾ ಮಾನದಂಡಗಳು ಸಾಕಷ್ಟು ಸುಧಾರಣೆಗೊಂಡಿದ್ದು, ಹೊಸ ವಾಹನಗಳಲ್ಲಿ ಗರಿಷ್ಠಿ ಸುರಕ್ಷತೆಗಾಗಿ ಅಂತರ್‌ರಾಷ್ಟ್ರೀಯ ಮಾನದಂಡಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಬೆಲೆ ಆಧಾರದ ಮೇಲೆ ಅತ್ಯುತ್ತಮ ಸುರಕ್ಷಾ ಫೀಚರ್ಸ್ ಹೊಂದಿರುವ ಹಲವಾರು ಪ್ರಯಾಣಿಕ ಬಳಕೆಯ ವಾಹನಗಳು ಖರೀದಿ ಲಭ್ಯವಿದ್ದರೂ ಎಂಟ್ರಿ ಲೆವಲ್ ಮತ್ತು ಮಧ್ಯಮ ಗಾತ್ರದ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.

ಹೀಗಾಗಿ ಪ್ರಯಾಣಿಕ ವಾಹನಗಳ ಸುರಕ್ಷತೆ ಕುರಿತು ಜಾಗತಿಕ ಮಟ್ಟದ ಅಭಿಯಾನ ಕೈಗೊಂಡಿರುವ ಗ್ಲೊಬಲ್ ಎಸ್‌ಸಿಎಪಿ ಸಂಸ್ಥೆಯು ಭಾರತದಲ್ಲಿ #SAFERCARSFORINDIA ಅಭಿಯಾನದಡಿ ಹೊಸ ಕಾರುಗಳ ಸುರಕ್ಷತೆಯನ್ನು ಸುಧಾರಿಸುತ್ತಿದ್ದು, ಕ್ರ್ಯಾಶ್ ಟೆಸ್ಟಿಂಗ್ ಮೂಲಕ ರೇಟಿಂಗ್ಸ್ ನೀಡುತ್ತಿದೆ.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸುರಕ್ಷಾ ಕಾರು ಮಾದರಿಯಾಗಿ ಗುರುತಿಸಲು ಕನಿಷ್ಠ 3 ಅಂಕಗಳ ಅವಶ್ಯಕತೆಯಿದ್ದು, ಗರಿಷ್ಠ 5 ಅಂಕಗಳನ್ನು ಗಿಟ್ಟಿಸಿಕೊಂಡಿರುವ ಕಾರುಗಳು ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿವೆ.

5 ಅಂಕಗಳನ್ನು ಪಡೆಯುವಲ್ಲಿ ಕೆಲವು ಬಜೆಟ್ ಬೆಲೆಯ ಕಾರುಗಳು ಸಹ ಯಶಸ್ವಿಯಾಗಿದ್ದು, ದೇಶದ ಜನಪ್ರಿಯ ಕಾರು ಉತ್ಪಾದನಾ ಕಂಪನಿಗಳಾದ ಮಹೀಂದ್ರಾ ಮತ್ತು ಟಾಟಾ ಅಗ್ರಸ್ಥಾನದಲ್ಲಿವೆ. ಆದರೆ ಕಾರುಗಳನ್ನು ಹಾಟ್ ಚಿಪ್ಸ್ ಮಾರಾಟ ಮಾಡುತ್ತಿರುವ ಮಾರುತಿ ಸುಜುಕಿ ಕಾರುಗಳ ಸುರಕ್ಷತೆಯು ಸಾಕಷ್ಟು ಸುಧಾರಿಸಬೇಕಿದ್ದು, ಮಾರುತಿ ಸುಜುಕಿ ಪ್ರಮುಖ ಕಾರುಗಳು ಸುರಕ್ಷತೆ ವಿಚಾರದಲ್ಲಿ ಸಾಕಷ್ಟು ಕಳಪೆಯಾಗಿವೆ.

ಬಜೆಟ್ ಬೆಲೆ ಹೊರತು ಮಾರುತಿ ಸುಜುಕಿ ಕಾರುಗಳ ಸುರಕ್ಷತೆಯಲ್ಲಿ ಸಾಕಷ್ಟು ಕಳಪೆಯಾಗಿದ್ದು, ಪ್ರಯಾಣಿಕರಿಗೆ ಅಪಘಾತಗಳ ಸಂದರ್ಭದಲ್ಲಿ ಹೆಚ್ಚಿನ ಸುರಕ್ಷತೆ ನೀಡುವಲ್ಲಿ ವಿಫಲವಾಗಿದೆ. ಹೀಗಾಗಿ ದೇಶಿಯ ಮಾರುಕಟ್ಟೆಯಲ್ಲಿ ಕಾರುಗಳ ಸುರಕ್ಷತೆ ಮಾನದಂಡಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಪ್ರತ್ಯೇಕವಾದ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ಸಾಕಷ್ಟು ಅವಶ್ಯಕತೆಯಿದೆ.