ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ನವೀಕರಿಸಿದ ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ (BMW X3 Facelift) ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಐಷಾರಾಮಿ ಎಸ್‍ಯುವಿಗಳಲ್ಲಿ ಒಂದಾಗಿದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಐಷಾರಾಮಿ ಕಾರು ತಯಾರಕರು ತನ್ನ ಈ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಈ ವರ್ಷದ ಮಧ್ಯಂತರ ಅವಧಿಯಲ್ಲಿ ಜಾಗತಿಕವಾಗಿ ಅನಾವರಣಗೊಳಿಸಿತು. ವರದಿಗಳ ಪ್ರಕಾರ, ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯು ಇದೇ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ. ಇದೀಗ ಬಿಎಂಡಬ್ಲ್ಯು ಕಂಪನಿಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಖರೀದಿಗಾಗಿ ಪ್ರಿ-ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಈ ಐಷಾರಾಮಿ ಎಸ್‍ಯುವಿಯನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯು ಸಾಕಷ್ಟು ಹೊಸ ನವೀಕರಣಗಳನ್ನು ಪಡೆದುಕೊಂಡಿದೆ. ಈ ಹೊಸ ಮಾದರಿಯು ಒಳಗೆ ಮತ್ತು ಹೊರಗೆ ಹಲವಾರು ಬದಲಾವಣೆಗಳನ್ನು ಪಡೆಯುತ್ತದೆ. ಇನ್ನು ಈ ಐಷಾರಾಮಿ ಎಸ್‍ಯುವಿಯು 20-ಇಂಚಿನ ಎಂ ಸ್ಪೋರ್ಟ್ ಅಲಾಯ್ ವ್ಹೀಲ್ ಅನ್ನು ಪಡೆಯುತ್ತದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಈ ಹೊಸ ಐಷಾರಾಮಿ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಬ್ಲ್ಯಾಕ್-ಔಟ್ ಸಿಗ್ನೇಚರ್ ಬಿಎಂಡಬ್ಲ್ಯು ಕಿಡ್ನಿ ಗ್ರಿಲ್ ಅನ್ನು ಹೊಂದಿದೆ. ಸ್ವೆಪ್‌ಬ್ಯಾಕ್ ಹೆಡ್‌ಲೈಟ್‌ಗಳು ಹೆಚ್ಚು ಸ್ಲೀಕರ್ ಆಗಿದೆ. ಇನ್ನು ಈ ಕಾರಿನಲ್ಲಿ ಎಲ್‌ಇಡಿ ಹೆಡ್‌ಲೈಟ್‌ಗಳು ಡಾರ್ಕ್ ಟಿಂಟ್ ಹೊಂದಿದೆ, ಹಿಂಭಾಗದಲ್ಲಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಈ ಹೊಸ ಫೇಸ್‌ಲಿಫ್ಟ್ ಮಾದರಿಯು ಸಾಕಷ್ಟು ಸ್ಪೋರ್ಟಿ ಆಗಿ ಕಾಣುತ್ತದೆ. ಈ ಎಸ್‍ಯುವಿಯು ವ್ಹೀಲ್ ಆರ್ಚರ್ ಸುತ್ತಲೂ ಸ್ಕಲಪಡಡ್ ಆಚರ್ಸ್, ಸ್ಪೋರ್ಟಿ ಬಂಪರ್ ವಿನ್ಯಾಸ ಮತ್ತು ಇತ್ಯಾದಿಗಳನ್ನು ಸಹ ಪಡೆಯುತ್ತದೆ. ಇದಲ್ಲದೆ ಎಸ್‍ಯುವಿಗೆ ಮಾಡಿದ ಎಲ್ಲಾ ಟ್ವೀಕ್‌ಗಳು ಎಕ್ಸ್3 ಅನ್ನು ಹಿಂದಿನ ಮಾದರಿಗಿಂತ ಭಿನ್ನವಾಗಿ ಕಾಣುವಂತೆ ಮಾಡುತ್ತದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಇದರ ಹೊಸ ಡ್ಯುಯಲ್-ಟೋನ್ ಅಲಾಯ್ ವ್ಹೀಲ್‌ಗಳನ್ನು ಸಹ ಪಡೆಯುತ್ತದೆ. ಈ ಹೊಸ ಐಷಾರಾಮಿ ಎಸ್‍ಯುವಿ ಒಳಭಾಗದಲ್ಲಿ ಹೊಸ ಐಡ್ರೈವ್ 9 ಆಪರೇಟಿಂಗ್ ಸಿಸ್ಟಂ, 12.3-ಇಂಚಿನ ಡಿಜಿಟಲ್ ಇನ್ ಟ್ರೂಮೆಂಟ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ಸ್ ಗಳನ್ನು ಕೂಡ ಹೊಂದಿರಲಿದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಇದರೊಂದಿಗೆ ಈ ಐಷಾರಾಮಿ ಕಾರಿನಲ್ಲಿ 16-ಸ್ಪೀಕರ್ ಹರ್ಮನ್ ಕಾರ್ಡನ್ ಸರೌಂಡ್ ಸೌಂಡ್ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್ ಅನ್ನು ಪಡೆಯಲಿದೆ ಎಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿ 2.0 ಲೀಟರ್ ಟ್ವಿನ್ ಪವರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 248 ಬಿಹೆಚ್‍ಪಿ ಪವರ್ ಮತ್ತು 360 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ, ಈ ಎಂಜಿನ್ ನೊಂದಿಗೆ 8-ಸ್ಪೀಡ್ ಸ್ಟೆಪ್ಟ್ರಾನಿಕ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಕೂಡ ಜೋಡಿಸಲಾಗುತ್ತದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಇನ್ನು ಇದರೊಂದಿಗೆ 2.0 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಕೂಡ ನೀಡಲಾಗುತ್ತದೆ. ಈ ಎಂಜಿನ್ 184 ಬಿಹೆಚ್‍ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಹೊಸ ಬಿಎಂಡಬ್ಲ್ಯು ಎಕ್ಸ್3 ಎಸ್‍ಯುವಿಯು ಕೇವಲ 6.3 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಜರ್ಮನಿ ಮೂಲದ ಜನಪ್ರಿಯ ಕಾರು ತಯಾರಕ ಸಂಸ್ಥೆಯಾದ ಬಿಎಂಡಬ್ಲ್ಯು ತನ್ನ ಹೊಸ ಬಿಎಂಡಬ್ಲ್ಯು 220ಐ ಬ್ಲ್ಯಾಕ್ ಶ್ಯಾಡೋ ಎಡಿಷನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಈ ಹೊಸ ಬಿಎಂಡಬ್ಲ್ಯು 220ಐ ಬ್ಲ್ಯಾಕ್ ಶ್ಯಾಡೋ ಎಡಿಷನ್ ಮಾದರಿಗೆ ಸ್ಟ್ಯಾಂಡರ್ಡ್ 220ಐ ಎಂ ಸ್ಪೋರ್ಟ್ ರೂಪಾಂತರಕ್ಕಿಂತ ಸುಮಾರು ರೂ.1.60 ಲಕ್ಷ ಹೆಚ್ಚು ದುಬಾರಿಯಾಗಿದೆ. ಕಂಪನಿಯು ಬಿಎಂಡಬ್ಲ್ಯು ಇಂಡಿವಿಜುವಲ್ ಹೈ-ಗ್ಲಾಸ್ ಶ್ಯಾಡೋ ಲೈನ್ ಪ್ಯಾಕೇಜ್ ಅನ್ನು ಸಹ ನೀಡುತ್ತಿದೆ ಮತ್ತು ಹೊಸ ಮಾದರಿಯು ಕೇವಲ 24 ಯುನಿಟ್‌ಗಳಿಗೆ ಸೀಮಿತವಾಗಿರುತ್ತದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಇದು ಲಿಮಿಟೆಡ್ ಎಡಿಷನ್ ಆಗಿದೆ. ಈ ಹೊಸ ಬಿಎಂಡಬ್ಲ್ಯು 220ಐ ಬ್ಲ್ಯಾಕ್ ಶ್ಯಾಡೋ ಎಡಿಷನ್ ಬ್ಲ್ಯಾಕ್ ಸಫೈರ್ ಮತ್ತು ಆಲ್ಪೈನ್ ವೈಟ್ ಹಾಗೂ ಸೆನ್ಸಾಟೆಕ್ ಬ್ಲಾಕ್ ಮತ್ತು ಸೆನ್ಸಾಟೆಕ್ ಆಯ್ಸ್ಟರ್ ಎಂಬ ಡ್ಯುಯಲ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಹೊಸ ಬಿಎಂಡಬ್ಲ್ಯು 220ಐ ಬ್ಲ್ಯಾಕ್ ಶ್ಯಾಡೋ ಎಡಿಷನ್ ಮುಂಭಾಗದಲ್ಲಿ ಬ್ಲ್ಯಾಕ್ ಮೆಶ್-ಶೈಲಿಯ ಎಂ ಗ್ರಿಲ್, ಬ್ಲ್ಯಾಕ್ ORVM ಗಳು, 18-ಇಂಚಿನ ಎಂ ಪರ್ಫಾರ್ಮೆನ್ಸ್ ವೈ ಸ್ಪೋಕ್ ಅಲಾಯ್ ವ್ಹೀಲ್ ಗಳು ಫ್ಲೋಟಿಂಗ್ ಹಬ್, ಎಂ ಪರ್ಫಾರ್ಮೆನ್ಸ್ ರಿಯರ್ ಸ್ಪಾಯ್ಲರ್ ಮತ್ತು ಬ್ಲ್ಯಾಕ್ ಕ್ರೋಮ್ ಎಕ್ಸಾಸ್ಟ್ ಟಿಪ್ಸ್‌ನೊಂದಿಗೆ ಜೆಟ್ ಬ್ಲ್ಯಾಕ್ ಮ್ಯಾಟ್‌ನಲ್ಲಿದೆ. ಕ್ಯಾಬಿನ್ ಒಳಗೂ ಸ್ಪೋರ್ಟಿ ಟ್ರೀಟ್ಮೆಂಟ್ ಮುಂದುವರೆಯುತ್ತದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಎಲ್ಲಾ ಅಪ್‌ಡೇಟ್‌ಗಳು ಮತ್ತು ಟ್ವೀಕ್‌ಗಳೊಂದಿಗೆ ಫೇಸ್‌ಲಿಫ್ಟೆಡ್ ಬಿಎಂಡಬ್ಲ್ಯು ಎಕ್ಸ್3 ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಮಾದರಿಯು ಭಾರತದಲ್ಲಿ ಬಿಡುಗಡೆಯಾದ ಬಳಿಕ ಮರ್ಸಿಡಿಸ್ ಬೆಂಝ್ ಜಿಎಲ್‌ಸಿ ಮತ್ತು ಮುಂಬರುವ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‌ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Monday, January 17, 2022, 10:23 [IST]
English summary
Bmw india started to accept the pre bookings for new x3 facelift suv details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+