ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ನವೀಕರಿಸಿದ ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ (BMW X3 Facelift) ಮಾದರಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.59.90 ಲಕ್ಷದಿಂದ ಪ್ರಾರಂಭವಾಗುತ್ತದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಎಸ್‍ಯುವಿಯು 30ಐ ಸ್ಪೋರ್ಟ್ಎಕ್ಸ್ ಪ್ಲಸ್ (30i SportX Plus) ಮತ್ತು 30ಐ ಎಂ ಸ್ಪೋರ್ಟ್ (30i M Sport) ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಬಿಎಂಡಬ್ಲ್ಯು ಕಂಪನಿಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಖರೀದಿಗಾಗಿ ಬಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಈ ಐಷಾರಾಮಿ ಎಸ್‍ಯುವಿಯನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ನವೀಕರಿಸಿದ ಹೊಸ ಬಿಎಂಡಬ್ಲ್ಯು ಎಕ್ಸ್3 ಎಸ್‍ಯುವಿಯು ಹಿಂದಿನ ಮಾದರಿಗಿಂತ ಹೆಚ್ಚು ಸ್ಪೋರ್ಟಿಯರ್ ಲುಕ್ ಅನ್ನು ಹೊಂದಿದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಹೊಸ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿಯಲ್ಲಿ ಮರುವಿನ್ಯಾಸಗೊಳಿಸಲಾದ ಬಿಎಂಡಬ್ಲ್ಯು ಕಿಡ್ನಿ ಗ್ರಿಲ್, ಫ್ಲಾಟರ್ ಹೆಡ್‌ಲೈಟ್‌ಗಳು ಮತ್ತು ಹೊಸ ಮುಂಭಾಗದ ಏಪ್ರನ್‌ನೊಂದಿಗೆ, ಹೊಸ ಬಿಎಂಡಬ್ಲ್ಯು ಎಕ್ಸ್3 ಸಂಪೂರ್ಣವಾಗಿ ರಿಫ್ರೆಶ್ ವಿನ್ಯಾಸವನ್ನು ಹೊಂದಿದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಹೆಚ್ಚು ಗಮನಾರ್ಹವಾದ ಆಕಾರದ ಮತ್ತು ದೊಡ್ಡದಾದ ಬಿಎಂಡಬ್ಲ್ಯುಕಿಡ್ನಿ ಗ್ರಿಲ್ ಈಗ ಸಿಂಗಲ್-ಪೀಸ್ ಫ್ರೇಮ್ ಅನ್ನು ಒಳಗೊಂಡಿದೆ. ಮ್ಯಾಟ್ರಿಕ್ಸ್ ಫಂಕ್ಷನ್‌ನೊಂದಿಗೆ ಮುಂಭಾಗದ ವೈಶಿಷ್ಟ್ಯ ಅಡಾಪ್ಟಿವ್ ಎಲ್ಇಡಿ ಹೆಡ್‌ಲೈಟ್‌ಗಳನ್ನು ಸಹ ಪಡೆಯುತ್ತದೆ. ಈ ಎಸ್‍ಯುವಿ ಹೊಸ ಸ್ಲಿಮ್ಮರ್ ಎಲ್ಇಡಿ ಟೈಲ್‌ಲೈಟ್‌ಗಳ ಜೊತೆಗೆ ಮುಂಭಾಗ ಮತ್ತು ಹಿಂಭಾಗದಲ್ಲಿ ರಿಪ್ರೊಫೈಲ್ಡ್ ಬಂಪರ್‌ಗಳನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ 19-ಇಂಚಿನ ಅಲಾಯ್ ವ್ಹೀಲ್ ಎದ್ದು ಕಾಣುವಂತಿದೆ,

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಬಿಎಂಡಬ್ಲ್ಯು ಎಕ್ಸ್3 ಎಸ್‍ಯುವಿಯ ಒಳಭಾಗದಲ್ಲಿ ಕೆಲವು ಸೂಕ್ಷ್ಮ ಬದಲಾವಣೆಗಳನ್ನು ಪಡೆಯುತ್ತದೆ. ಡ್ಯಾಶ್‌ಬೋರ್ಡ್‌ನಲ್ಲಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಜೊತೆಗೆ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಇನ್ನು ನವೀಕರಿಸಿದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಹರ್ಮನ್-ಕಾರ್ಡನ್ ಮ್ಯೂಸಿಕ್ ಸಿಸ್ಟಂ, 360-ಡಿಗ್ರಿ ಪಾರ್ಕಿಂಗ್ ಕ್ಯಾಮೆರಾ, ಪನರೋಮಿಕ್ ಸನ್ ರೂಫ್, ಆಂಬಿಯೆಂಟ್ ಲೈಟಿಂಗ್, ಮೂರು-ವಲಯ ಕ್ಲೈಮೇಂಟ್ ಕಂಟ್ರೋಲ್ ಸೇರಿದಂತೆ ಇತ್ಯಾದಿ ಫೀಚರ್ಸ್ ಗಳನ್ನು ಹೊಂದಿವೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಬಿಎಂಡಬ್ಲ್ಯು ಎಕ್ಸ್3 ಎಸ್‍ಯುವಿ 2.0-ಲೀಟರ್, ನಾಲ್ಕು-ಸಿಲಿಂಡರ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 252 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ, ಈ ಎಂಜಿನ್ ನೊಂದಿಗೆ 8-ಸ್ಪೀಡ್ ಸ್ಟೆಪ್ಟ್ರಾನಿಕ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಕೂಡ ಜೋಡಿಸಲಾಗುತ್ತದೆ. ಇನ್ನು ಈ ಎಸ್‍ಯುವಿಯಲ್ಲಿ ಡೀಸೆಲ್ ರೂಪಾಂತರವು ನಂತರ ಸಾಲಿಗೆ ಸೇರುವ ಸಾಧ್ಯತೆಯಿದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಹೊಸ ಎಸ್‍ಯುವಿ ಕೇವಲ 6.6 ಸೆಕೆಂಡ್‌ಗಳಲ್ಲಿ ಗಂಟೆಗೆ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಈ ಎಸ್‍ಯುವಿ ಗಂಟೆಗೆ 235 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಬಿಎಂಡಬ್ಲ್ಯು ಎಕ್ಸ್3 ಮಾದರಿಯು ಪವರ್ ಫುಲ್ ಎಸ್‍ಯುವಿಯಾಗಿದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಇ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ, ಆರು ಏರ್‌ಬ್ಯಾಗ್‌ಗಳು, ಅಟೆನ್ಟಿವ್‌ನೆಸ್ ಅಸಿಸ್ಟೆನ್ಸ್, ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್ (DSC) ಕಾರ್ನರಿಂಗ್ ಬ್ರೇಕ್ ಕಂಟ್ರೋಲ್ (CBC), ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್ ಜೊತೆಗೆ ಆಟೋ ಹೋಲ್ಡ್, ಸೈಡ್-ಇಂಪ್ಯಾಕ್ಟ್ ಪ್ರೊಟೆಕ್ಷನ್, ಎಲೆಕ್ಟ್ರಾನಿಕ್ ವೆಹಿಕಲ್ ಇಮೊಬಿಲೈಸರ್ ಮತ್ತು ಕ್ರ್ಯಾಶ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟಿಂಗ್ ಮತ್ತು ಇತರ ಫೀಚರ್ಸ್ ಗಳನ್ನು ನೀಡಿದೆ,

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಬಿಎಂಡಬ್ಲ್ಯು ಗ್ರೂಪ್ ಇಂಡಿಯಾದ ಅಧ್ಯಕ್ಷ ವಿಕ್ರಮ್ ಪವಾಹ್ ಅವರು ಮಾತನಾಡಿ, ಹೊಸ ನವೀಕರಣಗಳೊಂದಿಗೆ ಬಿಎಂಡಬ್ಲ್ಯು ಎಕ್ಸ್3 ಪ್ರೀಮಿಯಂ ಮಿಡ್ ಸೈಜ್ ಎಸ್‍ಯುವಿ ವಿಭಾಗದಲ್ಲಿ ಮಾಡೆಲ್‌ನ ಟ್ರೈಲ್‌ಬ್ಲೇಜಿಂಗ್ ಯಶಸ್ಸನ್ನು ಮುಂದುವರಿಸಲಿದೆ. ರಿಫ್ರೆಶ್ ಮಾಡಿದ ವಿನ್ಯಾಸ ಮತ್ತು ಚಾಲನಾ ಕಾರ್ಯಕ್ಷಮತೆ ಬಿಎಂಡಬ್ಲ್ಯು ಎಕ್ಸ್3 ಅನ್ನು ಐಷಾರಾಮಿ ಮತ್ತು ಪ್ರಾಯೋಗಿಕ ಕಾರಾಗಿ ಮಾಡುತ್ತದೆ, ಅದು ರಸ್ತೆಯಲ್ಲಿ ಮತ್ತು ಆಫ್-ರೋಡ್‌ನಲ್ಲಿ ಚುರುಕಾಗಿರುತ್ತದೆ. ಪವರ್ ಫುಲ್ ಡ್ರೈವ್, , ಸ್ಪೋರ್ಟಿ ಡೈನಾಮಿಕ್ಸ್ ಮತ್ತು ಸೌಕರ್ಯಗಳ ವಿಶಿಷ್ಟ ಸಂಯೋಜನೆಯೊಂದಿಗೆ ಥ್ರಿಲ್ ಮತ್ತು ಸಂತೋಷವನ್ನು ನೀವು ಅನುಭವಿಸುವಿರಿ. ಎಂದು ಹೇಳಿದರು.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಇನ್ನು ಜರ್ಮನಿ ಮೂಲದ ಜನಪ್ರಿಯ ಕಾರು ತಯಾರಕ ಸಂಸ್ಥೆಯಾದ ಬಿಎಂಡಬ್ಲ್ಯು ತನ್ನ ಹೊಸ ಬಿಎಂಡಬ್ಲ್ಯು 220ಐ ಬ್ಲ್ಯಾಕ್ ಶ್ಯಾಡೋ ಎಡಿಷನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಈ ಹೊಸ ಬಿಎಂಡಬ್ಲ್ಯು 220ಐ ಬ್ಲ್ಯಾಕ್ ಶ್ಯಾಡೋ ಎಡಿಷನ್ ಮಾದರಿಗೆ ಸ್ಟ್ಯಾಂಡರ್ಡ್ 220ಐ ಎಂ ಸ್ಪೋರ್ಟ್ ರೂಪಾಂತರಕ್ಕಿಂತ ಸುಮಾರು ರೂ.1.60 ಲಕ್ಷ ಹೆಚ್ಚು ದುಬಾರಿಯಾಗಿದೆ. ಕಂಪನಿಯು ಬಿಎಂಡಬ್ಲ್ಯು ಇಂಡಿವಿಜುವಲ್ ಹೈ-ಗ್ಲಾಸ್ ಶ್ಯಾಡೋ ಲೈನ್ ಪ್ಯಾಕೇಜ್ ಅನ್ನು ಸಹ ನೀಡುತ್ತಿದೆ ಮತ್ತು ಹೊಸ ಮಾದರಿಯು ಕೇವಲ 24 ಯುನಿಟ್‌ಗಳಿಗೆ ಸೀಮಿತವಾಗಿರುತ್ತದೆ.

ಭಾರತದಲ್ಲಿ ಹೊಸ BMW X3 ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ

ಎಲ್ಲಾ ಹೊಸ ಅಪ್‌ಡೇಟ್‌ಗಳು ಮತ್ತು ಟ್ವೀಕ್‌ಗಳೊಂದಿಗೆ ಫೇಸ್‌ಲಿಫ್ಟೆಡ್ ಬಿಎಂಡಬ್ಲ್ಯು ಎಕ್ಸ್3 ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಝ್ ಜಿಎಲ್‌ಸಿ, ಆಡಿ ಕ್ಯೂ5 ಫೇಸ್‌ಲಿಫ್ಟ್, ಲೆಕ್ಸರ್ ಎನ್ಎಕ್ಸ್, ಮತ್ತು ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಎಸ್‌ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Thursday, January 20, 2022, 14:42 [IST]
English summary
Bmw launched x3 facelift suv in india find here price and other details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+