ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸಿವೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಸರ್ಕಾರಿ ಸ್ವಾಮ್ಯದ ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ (ಸಿಇಎಸ್ಎಲ್) ಸಂಸ್ಥೆಯು ದೇಶಾದ್ಯಂತ ಸಾವಿರಾರು ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಸರ್ಕಾರಿ ಸ್ವಾಮ್ಯದ ಅತಿ ದೊಡ್ಡ ತೈಲ ಮಾರಾಟ ಸಂಸ್ಥೆಯಾಗಿರುವ ಭಾರತ್ ಪೆಟ್ರೋಲಿಯಂ ಕೂಡಾ ಇವಿ ನಿಲ್ದಾಣಗಳನ್ನು ಹೆಚ್ಚಿಸಲು ಹೊಸ ಯೋಜನೆ ರೂಪಿಸಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಹೊಸ ಯೋಜನೆಯ ಪ್ರಕಾರ ಭಾರತ್ ಪೆಟ್ರೋಲಿಯಂ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಹಂತ-ಹಂತವಾಗಿ 7 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಯೋಜನೆ ಸಿದ್ದಪಡಿಸಿದ್ದು, ಅಸ್ತಿತ್ವದಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇವಿ ನಿಲ್ದಾಣಗಳನ್ನು ತೆರೆಯಲಾಗುತ್ತದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಭಾರತ್ ಪೆಟ್ರೋಲಿಯಂ ಕಂಪನಿಯ ಹೊಸ ಪ್ರಕಟನೆಯಲ್ಲಿ ಮುಂದಿನ ಅಕ್ಟೋಬರ್ ವೇಳೆಗೆ ದೇಶದ ಪ್ರಮುಖ ಕಡೆಗಳಲ್ಲಿ ಒಂದು ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದಿರುವುದಾಗಿ ಭರವಸೆ ನೀಡಿದ್ದು, ಇಂಧನ ಚಾಲಿತ ಬದಲಾಗಿ ಪರಿಸರ ಸ್ನೇಹಿ ವಾಹನಗಳನ್ನು ಉತ್ತೇಜಿಸಲು ಎಲ್ಲಾ ಮೂಲಭೂತ ಸೌಕರ್ಯ ಒದಗಿಸುವುವಲ್ಲಿ ಕಂಪನಿಯು ಬದ್ದವಾಗಿದೆ ಎಂದಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಅತಿ ಕಡಿಮೆ ಅವಧಿಯ ಹೆಚ್ಚಿನ ಪ್ರಮಾಣದ ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ಪರಿಚಯಿಸಲಾಗುತ್ತಿದ್ದು, ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಸಹಕಾರಿಯಾಗುವಂತೆ ಹೊಸ ಯೋಜನೆ ರೂಪಿಸಲಾಗಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಇದರೊಂದಿಗೆ ಪ್ರಮುಖ ತೈಲ ಕಂಪನಿಗಳು ಸಹ ಖಾಸಗಿ ಸಹಭಾಗಿತ್ವದಲ್ಲಿ ಹೆಚ್ಚಿನ ಸಂಖ್ಯೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದ್ದು, ಅತಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಮಟ್ಟದ ಚಾರ್ಜ್ ಮಾಡಬಹುದಾಗಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಇದರಿಂದ ಕೇವಲ ನಗರಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುವ ಇವಿ ವಾಹನಗಳ ಮೂಲಕ ದೂರದ ಪ್ರಯಾಣಕ್ಕೂ ಅನುಕೂಲಕರವಾಗಲಿದ್ದು, ಹೆಚ್ಚುತ್ತಿರುವ ಇಂಧನ ಬೆಲೆ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುತ್ತಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆ ಅಡಿ ಇದೀಗ ಮತ್ತೆ ಇವಿ ವಾಹನಗಳ ಖರೀದಿ ಮೇಲೆ ಪ್ರೋತ್ಸಾಹ ಧನ ಹೆಚ್ಚಿಸಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಆದರೆ ಭಾರತದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಯನ್ನು ತಗ್ಗಿಸಲು ತುರ್ತಾಗಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಹೆಚ್ಚಿಸಲು ಮುಂದಾಗಿರುವ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಗೆ ಕೆಲವು ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಸಬ್ಸಡಿ ಪ್ರಮಾಣವನ್ನು ಚಾಲ್ತಿಯಲ್ಲಿರುವ ಪ್ರಮಾಣಕ್ಕಿಂತ ಶೇ.50 ರಷ್ಟು ಹೆಚ್ಚಳ ಮಾಡಿದೆ.

ಶೀಘ್ರದಲ್ಲಿಯೇ 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಭಾರತ್ ಪೆಟ್ರೋಲಿಯಂ

ಹೊಸ ತಿದ್ದುಪಡಿಯ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಸಬ್ಸಿಡಿ ಪ್ರಮಾಣವನ್ನು ಬ್ಯಾಟರಿ ಪ್ಯಾಕ್ ಆಧರಿಸಿ ಪ್ರತಿ ಕಿಲೋವ್ಯಾಟ್‌ಗೆ ರೂ. 15 ಸಾವಿರ ಏರಿಕೆ ಮಾಡಲಾಗಿದ್ದು, ಹೊಸ ತಿದ್ದುಪಡಿಯ ನಂತರ ಪ್ರತಿ ಇವಿ ಸ್ಕೂಟರ್ ಖರೀದಿ ಮೇಲೆ ಗ್ರಾಹಕರು ರೂ. 5 ಸಾವಿರದಿಂದ ರೂ.30 ಸಾವಿರದಷ್ಟು ಉಳಿತಾಯ ಮಾಡಬಹುದಾಗಿದೆ.

Article Published On: Thursday, January 13, 2022, 19:06 [IST]
English summary
Bpcl announced first 1000 ev charging facilities will be ready soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+