Just In
- 1 hr ago
ಇವಿಗಳ ಅಬ್ಬರ... 2023 ಜನವರಿಯಲ್ಲಿ ಅತಿ ಹೆಚ್ಚು ಮಾರಾಟ ಕಂಡ ಎಲೆಕ್ಟ್ರಿಕ್ ಸ್ಕೂಟರ್ಗಳಿವು!
- 1 hr ago
ಕಡಿಮೆ ಬೆಲೆಯ ಟಾಟಾ ಎಲೆಕ್ಟ್ರಿಕ್ ಕಾರಿನ ವಿತರಣೆ ಪ್ರಾರಂಭ: 2,000 ಕಾರುಗಳ ಹಸ್ತಾಂತರ
- 2 hrs ago
ಮಾರುತಿ, ಟಾಟಾ ಕಾರುಗಳ ಪ್ರಾಬಲ್ಯದ ನಡುವೆ ದಾಖಲೆ ಮಟ್ಟದ ಮಾರಾಟವಾದ ಹ್ಯುಂಡೈ ಕ್ರೆಟಾ
- 3 hrs ago
13 ಉದ್ಯೋಗಿಗಳಿಗೆ ಹೊಸ ಟೊಯೋಟಾ ಗ್ಲಾನ್ಜಾ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಕಂಪನಿ
Don't Miss!
- Finance
ಅದಾನಿ ಕಳೆದುಕೊಂಡಿದ್ದು ಎಷ್ಟು ಲಕ್ಷ ಕೋಟಿ? ಕುಸಿಯುತ್ತಿವೆ ಷೇರುಗಳು- ಭಾರತದ ಶ್ರೀಮಂತನಿಗೆ ಮಂದೇನು ಕಾದಿದೆ?
- News
Namma Metro:ರೈಲ್ವೆ ಹಳಿಗೆ ಅಡ್ಡಲಾಗಿ ವೆಬ್ ಗರ್ಡರ್ ನಿರ್ಮಿಸಿ BMRCL, ಏನಿದು?
- Movies
Sathya: ದಿವ್ಯಾ ಹೇಳಿದ ಸುಳ್ಳಿನಿಂದ ಸಂಕಷ್ಟಕ್ಕೆ ಸಿಲುಕಿದ ಬಾಲ
- Sports
Border-Gavaskar Trophy: ಭಾರತ ವಿರುದ್ಧ ಮೊದಲ ಪಂದ್ಯದಲ್ಲಿ ಈ ವೇಗಿ ಬೌಲಿಂಗ್ ಮಾಡಲ್ಲ; ಪ್ಯಾಟ್ ಕಮ್ಮಿನ್ಸ್
- Lifestyle
ಗಂಡ-ಹೆಂಡತಿ ಜಗಳವಾಡಿದರೆ ಈ ಪ್ರಯೋಜನಗಳೂ ಇವೆ!
- Technology
ಕ್ಯಾನನ್ ಕಂಪೆನಿಯಿಂದ ಹೊಸ ಪ್ರಿಂಟರ್ ಬಿಡುಗಡೆ! ಏನೆಲ್ಲಾ ಸೌಲಭ್ಯವಿದೆ ಗೊತ್ತಾ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ವೈಯಕ್ತಿಕ ಕಾರು ಬಳಕೆದಾರರಿಗೂ ಖರೀದಿಗೆ ಲಭ್ಯ ಬಿವೈಡಿ ಇ6 ಎಲೆಕ್ಟ್ರಿಕ್ ಕಾರು
ಬಿವೈಡಿ ಕಂಪನಿಯು ಭಾರತದಲ್ಲಿ ತನ್ನ ಹೊಸ ಇ6 ಎಲೆಕ್ಟ್ರಿಕ್ ಎಂಪಿವಿ ಕಾರು ಮಾದರಿಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.
Recommended Video
ಗ್ರಾಹಕರ ಬೇಡಿಕೆ ಹೆಚ್ಚಳ ಹಿನ್ನಲೆಯಲ್ಲಿ ಕಂಪನಿಯು ಇದೀಗ ಹೊಸ ಕಾರನ್ನು ಇದೀಗ ವೈಯಕ್ತಿಕ ಕಾರು ಬಳಕೆದಾರರಿಗೂ ಖರೀದಿಗೆ ಅವಕಾಶ ನೀಡಿದೆ.

ಇ6 ಎಲೆಕ್ಟ್ರಿಕ್ ಕಾರು ಮಾದರಿಯನ್ನು ಬಿಡುಗಡೆ ಮಾಡಿದ್ದ ಆರಂಭದಲ್ಲಿ ಕಂಪನಿಯು ಬಿಟುಬಿ(ಬ್ಯುಸಿನೆಸ್ ಟು ಬ್ಯುಸಿನೆಸ್) ಉದ್ದೇಶಗಳಿಗೆ ಮಾತ್ರ ಖರೀದಿಗೆ ಅವಕಾಶ ನೀಡಿತ್ತು. ಕಂಪನಿಯು ಗ್ರಾಹಕರ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವ್ಯಯಕ್ತಿಕ ಕಾರು ಖರೀದಿದಾರರಿಗೂ ಖರೀದಿಗೆ ಅವಕಾಶ ನೀಡಿದ್ದು, ಆಸಕ್ತ ಗ್ರಾಹಕರು ಇದೀಗ ಬುಕಿಂಗ್ ಮಾಡಬಹುದಾಗಿದೆ.

ಬಿವೈಡಿ ಹೊಸ ಕಾರು ಇ6 ಎಲೆಕ್ಟ್ರಿಕ್ ಎಂಪಿವಿ ಕಾರು ಅತ್ಯುತ್ತಮ ಫೀಚರ್ಸ್ ಮತ್ತು ಅತ್ಯಧಿಕ ಮೈಲೇಜ್ ರೇಂಜ್‌ನೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಶೀಘ್ರದಲ್ಲಿಯೇ ಹೊಸ ಕಾರು ದೇಶದ ಪ್ರಮುಖ ನಗರಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಬಿ2ಬಿ(ಬ್ಯುಸಿನೆಸ್ ಟು ಬ್ಯುಸಿನೆಸ್) ಉದ್ದೇಶಗಳಿಗಾಗಿ ಮಾತ್ರವೇ ಪರಿಚಯಿಸಲಾಗಿದ್ದ ಹೊಸ ಇ6 ಕಾರು ಹೆಚ್ಚಿನ ಸಂಖ್ಯೆಯಲ್ಲಿ ಈಗಾಗಲೇ ಫ್ಲೀಟ್ ಆಪರೇಟರ್‌ಗಳು, ಹೋಟೆಲ್ ಉದ್ಯಮಗಳು ಮತ್ತು ಇತರೆ ಕಾರ್ಪೊರೇಟ್ ಸಂಸ್ಥೆಗಳು ಅಳವಡಿಸಿಕೊಂಡಿದ್ದು, ಇದೀಗ ಕಂಪನಿಯು ವೈಯಕ್ತಿಕ ಕಾರು ಖರೀದಿದಾರರಿಗೂ ಅವಕಾಶ ನೀಡಿರುವುದು ಹೆಚ್ಚಿನ ಬೇಡಿಕೆಗೆ ಕಾರಣವಾಗಲಿದೆ.

ಬಿವೈಡಿ ಕಂಪನಿಯು ಸದ್ಯ ನಮ್ಮ ಬೆಂಗಳೂರಿನಲ್ಲಿ ಪಿಪಿಎಸ್ ಮೋಟಾರ್ಸ್ ಗ್ರೂಪ್ಸ್ ಜೊತೆಗೆ ಇ6 ಕಾರು ಮಾರಾಟ ಮಾಡುತ್ತಿದ್ದರೆ ಚೆನ್ನೈನಲ್ಲಿ ಕೆಯುಎನ್ ಆಟೋ ಗ್ರೂಪ್‌ನೊಂದಿಗೆ, ಹೈದ್ರಾಬಾದ್‌ನಲ್ಲಿ ಮ್ಯಾಡಿ ಗ್ರೂಪ್‌ನೊಂದಿಗೆ, ಅಹಮದಾಬಾದ್‌ನಲ್ಲಿ ಕಾರ್ಗೊ ಮೋಟಾರ್ಸ್‌ನೊಂದಿಗೆ, ಕೊಚ್ಚಿಯಲ್ಲಿ ಇವಿಎಂ ಆಟೋಕಾರ್ಫ್ಟ್ ಸಂಸ್ಥೆಯೊಂದಿಗೆ ಮತ್ತು ದೆಹಲಿಯಲ್ಲಿ ಲ್ಯಾಂಡ್‌ಮಾರ್ಕ್ ಆಟೋಮೊಬೈಲ್ಸ್ ಸಂಸ್ಥೆಯೊಂದಿಗಿನ ಪಾಲುದಾರಿಕೆಯಲ್ಲಿ ಮಾರಾಟಗೊಳಿಸುತ್ತಿದೆ.

ಮಲ್ಟಿ ಪರ್ಪಸ್ ವೆಹಿಕಲ್(ಎಂಪಿವಿ) ಮಾದರಿಯಾಗಿರುವ ಇ6 ಇವಿ ಕಾರು 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, 71.6kWh 'ಬ್ಲೇಡ್' ಲಿಥಿಯಂ ಫೆರೋ ಫಾಸ್ಫೇಟ್ (LiFePO4) ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿದೆ.

ಹೊಸ ಕಾರಿನಲ್ಲಿ ಬ್ಲೇಡ್ ಲಿಥಿಯಂ ಫೆರೋ ಫಾಸ್ಫೇಟ್ ಬ್ಯಾಟರಿ ಪ್ಯಾಕ್ AC ಮತ್ತು DC ಫಾಸ್ಟ್ ಚಾರ್ಜಿಂಗ್ ಮಾನದಂಡಗಳನ್ನು ಬೆಂಬಲಿಸಲಿದ್ದು, WLTP ಮಾನದಂಡಗಳ ಪ್ರಕಾರ ಹೊಸ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 415 ಕಿ.ಮೀ ನಿಂದ ಗರಿಷ್ಠ 520 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹೊಸ ಕಾರಿನ ಮೈಲೇಜ್ ಪ್ರಮಾಣವು ಕಾರಿನಲ್ಲಿರುವ ವಿವಿಧ ಡ್ರೈವಿಂಗ್ ಮೋಡ್ ಆಧರಿಸಿ ನಿರ್ಧಾರವಾಗಲಿದ್ದು, ಹೊಸ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಹೊಸ ಕಾರಿನಲ್ಲಿರುವ ಎಸಿ ಚಾರ್ಜರ್ ಮೂಲಕ ಚಾರ್ಜ್ ಮಾಡಿದಾಗ ಪೂರ್ತಿಯಾಗಿ ಚಾರ್ಜ್ ಆಗಲು ಗರಿಷ್ಠ 6 ಗಂಟೆಗಳ ಕಾಲ ಸಮಯ ತೆಗೆದುಕೊಳ್ಳಲಿದ್ದರೆ ಡಿಸಿ ಚಾರ್ಜರ್ ಮೂಲಕ ಚಾರ್ಜ್ ಮಾಡಿದರೆ ಕೇವಲ 35 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜ್ ಆಗಲಿದೆ.

ಇ6 ಕಾರಿನಲ್ಲಿರುವ ಕೋಬಾಲ್ಟ್-ಮುಕ್ತ LiFePO4 ಬ್ಯಾಟರಿ ಪ್ಯಾಕ್ ಹೆಚ್ಚು ಸುರಕ್ಷಿತವಾಗಿದ್ದು, ಸ್ಫೋಟ ಮುಕ್ತವಾಗಿರುವ ಈ ಬ್ಯಾಟರಿ ಹೆಚ್ಚು ವಿಶ್ವಾರ್ಹತೆ ಮತ್ತು ಆರ್ಥಿಕ ಕಾರ್ಯಸಾಧ್ಯತೆ ಮೇಲೆ ಅಭಿವೃದ್ದಿಗೊಂಡಿದೆ.

ಅತ್ಯುತ್ತಮ-ಇನ್-ಕ್ಲಾಸ್ ವೈಶಿಷ್ಟ್ಯಗಳೊಂದಿಗೆ ಉತ್ತಮವಾದ ಚಾಲನಾ ಅನುಭವವನ್ನು ಒದಗಿಸುವ ಹೊಸ ಕಾರು 4,695 ಎಂಎಂ ಉದ್ದ, 1,810 ಎಂಎಂ ಅಗಲ ಮತ್ತು 1,670 ಎಂಎಂ ಎತ್ತರ ಹೊಂದಿದ್ದು, 570 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಪಡೆದುಕೊಂಡಿದೆ.

ಹಾಗೆಯೇ ಸ್ಪೋರ್ಟಿ ವಿನ್ಯಾಸದೊಂದಿಗೆ ಹೊಸ ಇ6 ಎಂಪಿವಿ ಕಾರಿನಲ್ಲಿ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್, ಕ್ರೋಮ್ ಬಾರ್ ಒಳಗೊಂಡ ಬಿವೈಡಿ ಲೊಗೊ, ಆಕರ್ಷಕ ಸ್ಪಾಯ್ಲರ್, ಸ್ಲಿಕ್ ಎಲ್ಇಡಿ ಟೈಲ್‌ಲೈಟ್ ಸೇರಿದಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಒಳಗೊಂಡಿದೆ.

ಹೊಸ ಕಾರಿನಲ್ಲಿ ಹೊರಭಾಗದಲ್ಲಿರುವಂತೆ ಒಳಭಾಗದಲ್ಲಿರುವ ಫೀಚರ್ಸ್‌ಗಳು ಕೂಡಾ ಆಕರ್ಷಕವಾಗಿದ್ದು, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್‌ನೊಂದಿಗೆ 10 ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಲೆದರ್ ಸೀಟ್‌ಗಳು, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಮತ್ತು ಫ್ರಂಟ್ ಪ್ಯಾಸೆಂಜರ್ ಸೀಟ್‌ಗಳು ಮತ್ತು ಏರ್ ಫಿಲ್ಟರ್ ಸಿಸ್ಟಂ ಹೊಂದಿದೆ.

ಇನ್ನು ಹೊಸ ಕಾರಿನಲ್ಲಿ ಹಲವಾರು ಸುರಕ್ಷತಾ ವೈಶಿಷ್ಟ್ಯತೆಗಳಿದ್ದು, 6 ಏರ್‌ಬ್ಯಾಗ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್ ಹೊಂದಿದೆ. ಹೊಸ ಕಾರಿನ ಖರೀದಿ ಮೇಲೆ ಕಂಪನಿಯು 3 ವರ್ಷಗಳ ಸ್ಟ್ಯಾಂಡರ್ಡ್ ವಾರಂಟಿ ನೀಡಿದ್ದು, ಮೋಟಾರ್ ಮತ್ತು ಬ್ಯಾಟರಿ ಪ್ಯಾಕ್ ಮೇಲೆ 8 ವರ್ಷಗಳ ಕಾಲ ವಾರಂಟಿ ನೀಡಿದೆ.