ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಬಿವೈಡಿ ಇಂಡಿಯಾ ಕಂಪನಿಯು ಇದೇ ತಿಂಗಳು ಅಕ್ಟೋಬರ್ 11ರಂದು ತನ್ನ ಹೊಸ ಅಟ್ಟೊ 3 ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸಲು ಸಿದ್ದವಾಗುತ್ತಿದ್ದು, ಹೊಸ ಕಾರು ತನ್ನ ವಿಭಾಗದ ಕಾರುಗಳಲ್ಲಿಯೇ ಹಲವಾರು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಭಾರತದಲ್ಲಿ ಕಳೆದ ವರ್ಷ ಇ6 ಎಲೆಕ್ಟ್ರಿಕ್ ಎಂಪಿವಿ ಬಿಡುಗಡೆ ಮಾಡಿದ್ದ ಬಿವೈಡಿ ಕಂಪನಿಯು ಇದೀಗ ವಿನೂತನ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಅಟ್ಟೊ 3 ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಲೆಕ್ಟ್ರಿಕ್ ಎಸ್‌‌ಯುವಿ ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆಗೊಳ್ಳುತ್ತಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಮಾರಾಟಗೊಳ್ಳುತ್ತಿರುವ ಅಟ್ಟೊ 3 ಎಸ್‌ಯುವಿ ಮಾದರಿಯನ್ನು ಬಿವೈಡಿ ಕಂಪನಿಯು ಇದೀಗ ಭಾರತದಲ್ಲಿ ಕೆಲವು ಹೊಸ ಬದಲಾವಣೆಗಳೊಂದಿಗೆ ಪರಿಚಯಿಸುತ್ತಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿ ಜೆಡ್ಎಸ್ ಇವಿ ಮತ್ತು ಹ್ಯುಂಡೈ ಕೊನಾ ಇವಿ ಕಾರುಗಳಿಗೆ ಇದು ಉತ್ತಮ ಪ್ರತಿಸ್ಪರ್ಧಿ ಮಾದರಿಯಾಗಲಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಜಾಗತಿಕ ಮಾರುಕಟ್ಟೆಗಳಲ್ಲಿ ತನ್ನ ಗುರುತರ ಹೆಜ್ಜೆಯಿರಿಸುರುವ ಬಿವೈಡಿ ಕಂಪನಿಯು ಅಟ್ಟೊ 3 ಇವಿ ಕಾರು ಮಾದರಿಯನ್ನು ಸದ್ಯ ಸಿಂಗಪುರ್, ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಮಾರಾಟಗೊಳಿಸುತ್ತಿದ್ದು, ವಿದೇಶಿ ಮಾರುಕಟ್ಟೆಗಳಲ್ಲಿರುವ ಲೆಫ್ಟ್ ಹ್ಯಾಂಡ್ ಚಾಲಾನಾ ಶೈಲಿ ಹೊಂದಿರುವ ಹೊಸ ಕಾರನ್ನು ಇದೀಗ ದೇಶಿಯ ಮಾರುಕಟ್ಟೆಗಾಗಿ ರೈಟ್ ಹ್ಯಾಂಡ್ ಚಾಲನಾ ಶೈಲಿ ಸೇರಿದಂತೆ ಕೆಲವು ಹೊಸ ಬದಲಾವಣೆಗಳನ್ನು ಬಿಡುಗಡೆ ಮಾಡುತ್ತಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಹೊಸ ಕಾರಿನಲ್ಲಿ ಕಂಪನಿಯು ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್ ನೀಡಲಿದ್ದು, ಪ್ರೀಮಿಯಂ ಅನುಭವಕ್ಕಾಗಿ ಫ್ಲೊಟರಿಂಗ್ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ. ಸಾಮಾನ್ಯವಾಗಿ ಐಷಾರಾಮಿ ಕಾರುಗಳಲ್ಲಿ ಕಂಡುಬರುವ ಹೊಸ ಸೌಲಭ್ಯವು ಇದೀಗ ಬಿವೈಡಿ ಹೊಸ ಕಾರಿನಲ್ಲೂ ನೀಡಲಾಗುತ್ತಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಫ್ಲೊಟರಿಂಗ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಸೌಲಭ್ಯವು ಕಾರು ಚಾಲನೆಗೆ ಸಾಕಷ್ಟು ಸಹಕಾರಿಯಾಗಲಿದ್ದು, ಚಾಲನೆ ವೇಳೆ ತಮ್ಮ ಅನುಕೂಲಕ್ಕೆ ತಕ್ಕಂತೆ ಇನ್ಪೋಟೈನ್‌ಮೆಂಟ್ ಸಿಸ್ಟಂ ಡಿಸ್‌ಪ್ಲೇ ಅನ್ನು ಹೊಂದಾಣಿಕೆ ಮಾಡಿಕೊಳ್ಳಬಹುದಾಗಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಅಟ್ಟೊ 3 ಇವಿ ಹೊಸ ಕಾರು ಮಾದರಿಯನ್ನು ಬಿವೈಡಿ ಇಂಡಿಯಾ ಕಂಪನಿಯು ವಿದೇಶಿ ಮಾರುಕಟ್ಟೆಗಳಿಂದಲೇ ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟ ಮಾಡಲಿದ್ದು, ಸೆಮಿ ನಾಕ್ಡ್ ಡೌನ್ ಆಮದು ನೀತಿಯಡಿ ಮಾರಾಟಗೊಳ್ಳಲಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಬಿವೈಡಿ ಕಂಪನಿಯು ಭಾರತದಲ್ಲಿ ಸದ್ಯಕ್ಕೆ ಸಂಪೂರ್ಣವಾಗಿ ಸ್ಥಳೀಯ ಬಿಡಿಭಾಗಗಳಿಂದ ಉತ್ಪಾದನೆ ಮಾಡಲಾದ ಕಾರು ಮಾದರಿಗಿಂತಲೂ ವಿದೇಶಿ ಮಾರುಕಟ್ಟೆಯಿಂದ ಬಿಡಿಭಾಗಗಳನ್ನು ಆಮದು ಮಾಡಿ ಇಲ್ಲಿ ಮರುಜೋಡಣೆ ಮಾಡಿ ಮಾರಾಟ ಮಾಡುವ ಪ್ರಕ್ರಿಯೆಯನ್ನು ಅನುಸರಿಸಲು ನಿರ್ಧರಿಸಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಇದರಿಂದ ಹೊಸ ಅಟ್ಟೊ 3 ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಿಂತಲೂ ತುಸು ದುಬಾರಿ ಹೊಂದಿರಲಿದ್ದು, ಹೊಸ ಕಾರಿನಲ್ಲಿ ಕಂಪನಿಯು ಹಲವಾರು ಐಷಾರಾಮಿ ವೈಶಿಷ್ಟ್ಯತೆಗಳನ್ನು ಖಾತ್ರಿಪಡಿಸಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯು ಪ್ರತಿಸ್ಪರ್ಧಿ ಮಾದರಿಗಿಂತಲೂ ಹೆಚ್ಚಿನ ಲಾಂಗ್‌ವೀಲ್ಹ್ ಬೆಸ್ ಹೊಂದಿದ್ದು, ಆರಾಮದಾಯಕ ಪ್ರಯಾಣವನ್ನು ಒದಗಿಸುವುದರ ಜೊತೆಗೆ ಹೆಚ್ಚಿನ ಮೈಲೇಜ್ ಪ್ರೇರಣೆ ಹೊಂದಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಅಟ್ಟೊ 3 ಎಸ್‌ಯುವಿ ಮಾದರಿಯಲ್ಲಿ ಬಿವೈಡಿ ಕಂಪನಿಯು 60.48kWh ಮತ್ತು 49.92kWh ಬ್ಯಾಟರಿ ಪ್ಯಾಕ್ ಆಯ್ಕೆ ನೀಡುವ ಸಾಧ್ಯತೆಯಿದ್ದು, ಗ್ರಾಹಕರು ತಮ್ಮ ಅಗತ್ಯತೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್ ಖರೀದಿಸಬಹುದಾಗಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

60.48kWh ಬ್ಯಾಟರಿ ಪ್ಯಾಕ್ ಮಾದರಿಯು ಪ್ರತಿ ಚಾರ್ಜ್‌ಗೆ 420 ಕಿ.ಮೀ ಮೈಲೇಜ್ ಹೊಂದಿದ್ದರೆ 49.92kWh ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಮಾದರಿಯು 320 ಕಿ.ಮೀ ಮೈಲೇಜ್ ಹೊಂದಿದ್ದು, ಉತ್ತಮ ಮೈಲೇಜ್ ಪ್ರೇರಣೆಯೊಂದಿಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಹೊಸ ಕಾರಿನಲ್ಲಿ ಪರ್ಫಾಮೆನ್ಸ್ ಮೋಟಾರ್ ಕೇವಲ 7.3 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗಪಡೆದುಕೊಳ್ಳಲಿದ್ದು, 201 ಬಿಎಚ್‌ಪಿ ಮತ್ತು 310 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಎಂಟ್ರಿ ಲೆವಲ್ ಐಷಾರಾಮಿ ಕಾರು ಮಾದರಿಯಾಗಿ ಗುರುತಿಸಿಕೊಳ್ಳುತ್ತದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಜೊತೆಗೆ ಹೊಸ ಕಾರಿನಲ್ಲಿ ಕಂಪನಿಯು ಅಡ್ವಾನ್ಸ್ ಡ್ರೈವರ್ ಅಸಿಸ್ಟ್(ಎಡಿಎಎಸ್) ಸೌಲಭ್ಯವನ್ನು ಸಹ ಜೋಡಣೆ ಮಾಡಿದ್ದು, ಇದು ಹಲವಾರು ಸುರಕ್ಷಾ ಸೌಲಭ್ಯಗಳೊಂದಿಗೆ ಕಾರು ಚಾಲನೆಯನ್ನು ಸುರಕ್ಷಿತಗೊಳಿಸುತ್ತದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಹೊಸ ಕಾರಿನಲ್ಲಿರುವ ಇತರೆ ಫೀಚರ್ಸ್‌ಗಳು ಸಹ ಉತ್ತಮವಾಗಿದ್ದು, 4,455 ಎಂಎಂ ಉದ್ದಳತೆಯೊಂದಿಗೆ 1,875 ಅಗಲ, 2,720 ಎಂಎಂ ವ್ಹೀಲ್‌ಬೆಸ್ ಹೊಂದಿದೆ. ಇದು ಜೆಡ್ಎಸ್ ಇವಿಗಿಂತಲೂ 132 ಎಂಎಂ ಹೆಚ್ಚುವರಿ ಉದ್ದಳತೆಯೊಂದಿಗೆ ಅರಾಮದಾಯಕ ಪ್ರಯಾಣವನ್ನು ಖಾತ್ರಿಪಡಿಸುತ್ತದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿವೈಡಿ ಅಟ್ಟೊ 3

ಈ ಮೂಲಕ ಹೊಸ ಕಾರು ಭಾರತದಲ್ಲಿ ಪ್ರಮುಖ ಎರಡು ಬ್ಯಾಟರಿ ಆಯ್ಕೆ ಹೊಂದಿರುವುದರಿಂದ ಎಕ್ಸ್‌ಶೋರೂಂ ಪ್ರಕಾರ ರೂ. 20 ಲಕ್ಷದಿಂದ ರೂ. 24 ಲಕ್ಷದ ತನಕ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಪ್ರತಿಸ್ಪರ್ಧಿ ಮಾದರಿಗಿಂತಲೂ ತುಸು ಕಡಿಮೆ ಮೈಲೇಜ್‌ ಹೊಂದಿದ್ದರೂ ಫೀಚರ್ಸ್ ಮತ್ತು ತಂತ್ರಜ್ಞಾನ ಸೌಲಭ್ಯದಲ್ಲಿ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದೆ.

Most Read Articles

Kannada
Read more on ಬಿವೈಡಿ byd
English summary
Byd atto 3 electric to get rotating touchscreen system details
Story first published: [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X