ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಆರಂಭಿಸಿದ ಬಿವೈಡಿ

ಬಿವೈಡಿ ಇಂಡಿಯಾ ಕಂಪನಿಯು ತನ್ನ ಹೊಸ ಇ6 ಎಲೆಕ್ಟ್ರಿಕ್ ಎಂಪಿವಿ ಕಾರು ಬಿಡುಗಡೆಯ ಮೂಲಕ ಎಲೆಕ್ಟ್ರಿಕ್ ವಾಹನ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಕಳೆದ ನವೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಹೊಸ ಕಾರಿನ ವಿತರಣೆಯನ್ನು ಇಂದು ಅಧಿಕೃತವಾಗಿ ಆರಂಭಿಸಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಬಿವೈಡಿ ಹೊಸ ಕಾರು ಇ6 ಎಲೆಕ್ಟ್ರಿಕ್ ಎಂಪಿವಿ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅತ್ಯಧಿಕ ಮೈಲೇಜ್ ರೇಂಜ್ ಫೀಚರ್ಸ್ ಹೊಂದಿದ್ದು, ಹೊಸ ಕಾರು ಸದ್ಯ ದೇಶದ ಪ್ರಮುಖ ಎಂಟು ನಗರಗಳಲ್ಲಿ ಖರೀದಿಗೆ ಲಭ್ಯವಿದೆ. ಹೊಸ ಕಾರಿನ ಬುಕ್ಕಿಂಗ್ ಆಧರಿಸಿದ ಕಂಪನಿಯು ಮೊದಲ ಬ್ಯಾಚ್‌ನಲ್ಲಿ ಸುಮಾರು 30 ಯುನಿಟ್ ವಿತರಣೆ ಮಾಡಿದ್ದು, ಹಂತ-ಹಂತವಾಗಿ ಹೊಸ ಕಾರಿನ ವಿತರಣೆ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಬಿವೈಡಿ ಇವಿ ಎಲೆಕ್ಟ್ರಿಕ್ ಎಂಪಿವಿ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.15 ಲಕ್ಷ ಬೆಲೆ ಹೊಂದಿದ್ದು, ಹೊಸ ಎಲೆಕ್ಟ್ರಿಕ್ ಕಾರನ್ನು ಕಂಪನಿಯು ಸದ್ಯ ಬಿ2ಬಿ ಉದ್ದೇಶಗಳಿಗೆ ಮಾತ್ರ ಮಾರಾಟ ಮಾಡುತ್ತಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಬಿ2ಬಿ(ಬ್ಯುಸಿನೆಸ್ ಟು ಬ್ಯುಸಿನೆಸ್) ಉದ್ದೇಶಗಳಿಗಾಗಿ ಮಾತ್ರವೇ ಪರಿಚಯಿಸಲಾಗಿರುವ ಹೊಸ ಇ6 ಕಾರನ್ನು ಫ್ಲೀಟ್ ಆಪರೇಟರ್‌ಗಳು, ಹೋಟೆಲ್ ಉದ್ಯಮಗಳಿಗೆ ಮತ್ತು ಇತರೆ ಕಾರ್ಪೊರೇಟ್ ಸಂಸ್ಥೆಗಳು ಮಾತ್ರ ಖರೀದಿಸಬಹುದಾಗಿದ್ದು, ಮುಂಬರುವ ಕೆಲ ತಿಂಗಳ ನಂತರ ಹೊಸ ಕಾರನ್ನು ವ್ಯಯಕ್ತಿಕ ಕಾರು ಬಳಕೆದಾರರಿಗೂ ಕೂಡಾ ಖರೀದಿಸುವ ಅವಕಾಶ ನೀಡುವುದಾಗಿ ಕಂಪನಿಯು ಮಾಹಿತಿ ನೀಡಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಬಿವೈಡಿ ಕಂಪನಿಯು ನಮ್ಮ ಬೆಂಗಳೂರಿನಲ್ಲಿ ಪಿಪಿಎಸ್ ಮೋಟಾರ್ಸ್ ಗ್ರೂಪ್ಸ್ ಜೊತೆಗೂಡಿ ಹೊಸ ಕಾರು ಮಾರಾಟ ಆರಂಭಿಸಿದ್ದು, ಚೆನ್ನೈನಲ್ಲಿ ಕೆಯುಎನ್ ಆಟೋ ಗ್ರೂಪ್, ಹೈದ್ರಾಬಾದ್‌ನಲ್ಲಿ ಮ್ಯಾಡಿ ಗ್ರೂಪ್, ಅಹಮದಾಬಾದ್‌ನಲ್ಲಿ ಕಾರ್ಗೊ ಮೋಟಾರ್ಸ್, ಕೊಚ್ಚಿಯಲ್ಲಿ ಇವಿಎಂ ಆಟೋಕಾರ್ಫ್ಟ್, ದೆಹಲಿಯಲ್ಲಿ ಲ್ಯಾಂಡ್‌ಮಾರ್ಕ್ ಆಟೋಮೊಬೈಲ್ಸ್ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಮಲ್ಟಿ ಪರ್ಪಸ್ ವೆಹಿಕಲ್(ಎಂಪಿವಿ) ಮಾದರಿಯಾಗಿರುವ ಇ6 ಇವಿ ಕಾರು 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, 71.6kWh 'ಬ್ಲೇಡ್' ಲಿಥಿಯಂ ಫೆರೋ ಫಾಸ್ಫೇಟ್ (LiFePO4) ಬ್ಯಾಟರಿ ಪ್ಯಾಕ್‌ ಜೋಡಣೆ ಹೊಂದಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಹೊಸ ಕಾರಿನಲ್ಲಿ ಬ್ಲೇಡ್ ಲಿಥಿಯಂ ಫೆರೋ ಫಾಸ್ಫೇಟ್ ಬ್ಯಾಟರಿ ಪ್ಯಾಕ್‌ AC ಮತ್ತು DC ಚಾರ್ಜಿಂಗ್ ಮಾನದಂಡಗಳನ್ನು ಬೆಂಬಲಿಸಲಿದ್ದು, WLTP ಮಾನದಂಡಗಳ ಪ್ರಕಾರ ಹೊಸ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 415 ಕಿ.ಮೀ ನಿಂದ ಗರಿಷ್ಠ 520 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಹೊಸ ಕಾರಿನ ಮೈಲೇಜ್ ಪ್ರಮಾಣವು ಕಾರಿನಲ್ಲಿರುವ ವಿವಿಧ ಡ್ರೈವಿಂಗ್ ಮೋಡ್ ಆಧರಿಸಿ ನಿರ್ಧಾರವಾಗಲಿದ್ದು, ಹೊಸ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಹೊಸ ಕಾರಿನಲ್ಲಿರುವ ಎಸಿ ಚಾರ್ಜರ್ ಮೂಲಕ ಚಾರ್ಜ್ ಮಾಡಿದಾಗ ಪೂರ್ತಿಯಾಗಿ ಚಾರ್ಜ್ ಆಗಲು ಗರಿಷ್ಠ 6 ಗಂಟೆಗಳ ಕಾಲ ಸಮಯ ತೆಗೆದುಕೊಳ್ಳಲಿದ್ದರೆ ಡಿಸಿ ಚಾರ್ಜರ್ ಮೂಲಕ ಚಾರ್ಜ್ ಮಾಡಿದರೆ ಕೇವಲ 35 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜ್ ಆಗಲಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಇ6 ಕಾರಿನಲ್ಲಿರುವ ಕೋಬಾಲ್ಟ್-ಮುಕ್ತ LiFePO4 ಬ್ಯಾಟರಿ ಪ್ಯಾಕ್ ಹೆಚ್ಚು ಸುರಕ್ಷಿತವಾಗಿದ್ದು, ಸ್ಫೋಟ ಮುಕ್ತವಾಗಿರುವ ಈ ಬ್ಯಾಟರಿ ಹೆಚ್ಚು ವಿಶ್ವಾರ್ಹತೆ ಮತ್ತು ಆರ್ಥಿಕ ಕಾರ್ಯಸಾಧ್ಯತೆ ಮೇಲೆ ಅಭಿವೃದ್ದಿಗೊಂಡಿದೆ. ಅತ್ಯುತ್ತಮ-ಇನ್-ಕ್ಲಾಸ್ ವೈಶಿಷ್ಟ್ಯಗಳೊಂದಿಗೆ ಉತ್ತಮವಾದ ಚಾಲನಾ ಅನುಭವವನ್ನು ಒದಗಿಸುವ ಹೊಸ ಕಾರು 4,695 ಎಂಎಂ ಉದ್ದ, 1,810 ಎಂಎಂ ಅಗಲ ಮತ್ತು 1,670 ಎಂಎಂ ಎತ್ತರ ಹೊಂದಿದ್ದು, 570 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಪಡೆದುಕೊಂಡಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಹಾಗೆಯೇ ಸ್ಪೋರ್ಟಿ ವಿನ್ಯಾಸದೊಂದಿಗೆ ಹೊಸ ಇ6 ಎಂಪಿವಿ ಕಾರಿನಲ್ಲಿ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್‌, ಕ್ರೋಮ್ ಬಾರ್‌ ಒಳಗೊಂಡ ಬಿವೈಡಿ ಲೊಗೊ, ಆಕರ್ಷಕ ಸ್ಪಾಯ್ಲರ್, ಸ್ಲಿಕ್ ಎಲ್ಇಡಿ ಟೈಲ್‌ಲೈಟ್‌ ಸೇರಿದಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಒಳಗೊಂಡಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಹೊಸ ಕಾರಿನಲ್ಲಿ ಹೊರಭಾಗದಲ್ಲಿರುವಂತೆ ಒಳಭಾಗದಲ್ಲಿರುವ ಫೀಚರ್ಸ್‌ಗಳು ಕೂಡಾ ಆಕರ್ಷಕವಾಗಿದ್ದು, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್‌ನೊಂದಿಗೆ 10 ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಲೆದರ್ ಸೀಟ್‌ಗಳು, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಮತ್ತು ಫ್ರಂಟ್ ಪ್ಯಾಸೆಂಜರ್ ಸೀಟ್‌ಗಳು ಮತ್ತು ಏರ್ ಫಿಲ್ಟರ್ ಸಿಸ್ಟಂ ಹೊಂದಿದೆ.

ಭಾರತದಲ್ಲಿ ಮೊದಲ ಬ್ಯಾಚ್ ಇ6 ಎಲೆಕ್ಟ್ರಿಕ್ ಕಾರು ವಿತರಣೆ ಮಾಡಿದ ಬಿವೈಡಿ

ಇನ್ನು ಹೊಸ ಕಾರಿನಲ್ಲಿ ಹಲವಾರು ಸುರಕ್ಷತಾ ವೈಶಿಷ್ಟ್ಯತೆಗಳಿದ್ದು, 6 ಏರ್‌ಬ್ಯಾಗ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್ ಹೊಂದಿದೆ. ಹಾಗೆಯೇ ಹೊಸ ಕಾರಿನ ಖರೀದಿ ಮೇಲೆ ಕಂಪನಿಯು 3 ವರ್ಷಗಳ ಸ್ಟ್ಯಾಂಡರ್ಡ್ ವಾರಂಟಿ ನೀಡಿದ್ದು, ಮೋಟಾರ್ ಮತ್ತು ಬ್ಯಾಟರಿ ಪ್ಯಾಕ್ ಮೇಲೆ 8 ವರ್ಷಗಳ ಕಾಲ ವಾರಂಟಿ ನೀಡಿದೆ.

More from DriveSpark

Article Published On: Friday, January 28, 2022, 15:31 [IST]
English summary
Byd e6 frst batch electric mpv delivery starts
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+