India
YouTube

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ಸಾರ್ವಕಾಲಿಕ ದಾಖಲೆ ಕಾಣುತ್ತಿರುವ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಯಿಂದಾಗಿ ವಾಹನ ಸವಾರರು ಹೈರಾಣಾಗಿ ಹೋಗಿದ್ದು, ನಿಯಂತ್ರಣ ತಪ್ಪಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಗ್ಗಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಣಯ ಪ್ರಕಟಿಸಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ದಿನಂಪ್ರತಿ ಹೆಚ್ಚುತ್ತಿರುವ ಇಂಧನ ಬೆಲೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇಂಧನಗಳ ಮೇಲೆ ಅಬಕಾರಿ ಸುಂಕ(Excise Duty) ಪ್ರಮಾಣವನ್ನು ಕಡಿತ ಮಾಡಿದೆ. ಅಬಕಾರಿ ಸುಂಕ ಇಳಿಕೆ ಮಾಡಿರುವ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು, ಹೊಸ ದರ ಇಂದು ಮಧ್ಯರಾತ್ರಿಯಿಂದಲೇ ಅಧಿಕೃತವಾಗಿ ಜಾರಿಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲೆ ರೂ. 8 ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ರೂ. 6 ಇಳಿಕೆ ಮಾಡಿದ್ದು, ಇದರಿಂದ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ.9.50 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ರೂ.7 ಇಳಿಕೆಯಾಗಲಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಸದ್ಯ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ. 111.09 ಪೈಸೆ ಮತ್ತು ಡೀಸೆಲ್ ಬೆಲೆ ರೂ. 94.79 ಪೈಸೆಗೆ ಮಾರಾಟಗೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಅಬಕಾರಿ ಸುಂಕ ಇಳಿಕೆ ನಂತರ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. 101.59 ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ರೂ. 87.79 ಪೈಸೆಗೆ ಇಳಿಕೆಯಾಗಲಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಇಂಧನ ಮೇಲಿನ ಅಬಕಾರಿ ಸುಂಕ ಕಡಿತಯಿಂದಾಗಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ ಒಂದು ಲಕ್ಷ ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದ್ದು, ಅಬಕಾರಿ ಸುಂಕ ಇಳಿಕೆಯಿಂದ ತೆರಿಗೆದಾರರು, ಮಧ್ಯಮ ವರ್ಗ ಮತ್ತು ಬಡತನ ರೇಖೆಯಲ್ಲಿರುವವರಿಗೆ ಸಹಾಯವಾಗಲಿದೆ ಎನ್ನಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸರಣಿ ಟ್ವಿಟ್ ಮಾಡಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ನಿರಂತರ ಏರಿಕೆಯಿಂದ ಕೇವಲ ವಾಹನ ಮಾಲೀಕರಿಗೆ ಮಾತ್ರವಲ್ಲ ವಾಹನಗಳ ನಿರ್ವಹಣಾ ವೆಚ್ಚ ಹೆಚ್ಚಳದಿಂದ ಜನಸಾಮಾನ್ಯರಿಗೂ ಕೂಡಾ ಸಾಕಷ್ಟು ಹೊರೆಯಾಗುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿ ನಿರಂತರ ಒತ್ತಡ ನಡುವೆ ಕೇಂದ್ರ ಸರ್ಕಾರವು ಇದೀಗ ಮಹತ್ವದ ನಿರ್ಣಯ ಪ್ರಕಟಿಸಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ತೈಲ ಬೆಲೆಯ ಸಮರದಿಂದಾಗಿ ದುಬಾರಿಯಾಗುತ್ತಿರುವ ಇಂಧನ ಬೆಲೆಯನ್ನು ನಿಯಂತ್ರಿಸಲು ಹಲವು ಹೊಸ ಕ್ರಮಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರವು ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣವನ್ನು ಹಂತ-ಹಂತವಾಗಿ ಹೆಚ್ಚಿಸುತ್ತಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಪೆಟ್ರೋಲ್ ದರ ಇಳಿಕೆಗಾಗಿ 2025ರ ವೇಳೆಗೆ ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣವನ್ನು ಶೇ.20 ಹೆಚ್ಚಿಸುವ ಗುರಿ ಹೊಂದಿದ್ದು, ಎಥೆನಾಲ್ ಮಿಶ್ರಣ ಪ್ರಮಾಣವನ್ನು ಹಂತ-ಹಂತವಾಗಿ ಹೆಚ್ಚಿಸುತ್ತಿರುವ ಕೇಂದ್ರ ಸರ್ಕಾರವು ಇದೀಗ ಮೊದಲ ಹಂತದ ಅವಧಿಗೂ ಮುನ್ನ ಶೇ.10 ಎಥೆನಾಲ್ ಮಿಶ್ರಣದ ಗುರಿಯನ್ನು ತಲುಪಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಯೋಜನೆಯ ಪ್ರಕಾರ 2022ರ ಕೊನೆಯಲ್ಲಿ ಶೇ.5 ರಷ್ಟು ಎಥೆನಾಲ್ ಮಿಶ್ರಣ ಮಾಡುವ ಗುರಿಹೊಂದಲಾಗಿತ್ತು. ಆದರೆ ನಿಗದಿತ ಅವಧಿಗೂ ಮುನ್ನವೇ ಎಥೆನಾಲ್ ಪ್ರಮಾಣದ ಮಿಶ್ರಣವನ್ನು ಮೇ ಆರಂಭದಲ್ಲಿಯೇ ಗುರಿ ತಲುಪಲಾಗಿದ್ದು, ಈ ವರ್ಷಾಂತ್ಯಕ್ಕೆ ಇದರ ಪ್ರಮಾಣವು ಶೇ.12ಕ್ಕೆ ಹೆಚ್ಚಳವಾಗಬಹುದಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಹೆಚ್ಚುತ್ತಿರುವ ಪೆಟ್ರೋಲ್ ಬೆಲೆ ಇಳಿಕೆ ಹೊಸ ಯೋಜನೆಯು ಸಾಕಷ್ಟು ಸಹಕಾರಿಯಾಗುತ್ತಿದ್ದು, ಹೊಸ ಗುರಿಸಾಧನೆಯೊಂದಿಗೆ ಸರ್ಕಾರವು ಮುಂದಿನ ಅಕ್ಟೋಬರ್ ವೇಳೆಗೆ ಪೆಟ್ರೋಲ್ ಮೇಲಿನ ಹಸಿರು ತೆರಿಗೆ ಇಳಿಕೆಯನ್ನು ಪ್ರತಿ ಲೀಟರ್‌ಗೆ ರೂ.2 ರಷ್ಟು ಇಳಿಕೆ ಮಾಡಬಹುದಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ದೇಶದಲ್ಲಿ ಎಥೆನಾಲ್ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ತೈಲ ಸಚಿವಾಲಯ ಮತ್ತು ಸರ್ಕಾರದ ನೀತಿ ಆಯೋಗವು ಜಂಟಿಯಾಗಿ ಸಿದ್ಧಪಡಿಸಿದ ಮಿಶ್ರಣದ ಮಾರ್ಗಸೂಚಿಯಂತೆ 2022ರ ಅಂತ್ಯದ ವೇಳೆಗೆ ಶೇ. 5 ರಷ್ಟು ಮತ್ತು 2025ರ ವೇಳೆಗೆ ಶೇ.20 ರಷ್ಟು ಮಿಶ್ರಣ ಮಾಡುವ ಗುರಿಯನ್ನು ಹೊಂದಿತ್ತು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಇದೀಗ ನಿಗದಿತ ಅವಧಿಗೂ ಮುನ್ನ ಎಥೆನಾಲ್ ಮಿಶ್ರಣ ಪ್ರಮಾಣವು ಹೆಚ್ಚಳವಾಗಿರುವುದರಿಂದ ಮುಂಬರುವ ಕೇಂದ್ರದ ಚಳಿಗಾಲ ಅಧಿವೇಶನದ ವೇಳೆ ಹೊಸ ತೆರಿಗೆ ಕಡಿತ ಕುರಿತಂತೆ ಅಧಿಕೃತ ಸುತ್ತೋಲೆ ಹೊರಡಿಸಲಿರುವ ಕೇಂದ್ರ ಸರ್ಕಾರವು ಪೆಟ್ರೋಲ್ ಹೊರೆಯನ್ನು ತಗ್ಗಿಸಲಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಪೆಟ್ರೋಲ್‌ನಲ್ಲಿ ಶೇ.20 ರಷ್ಟು ಎಥೆನಾಲ್‌ ಮಿಶ್ರಣದ ಮೂಲಕ ಕೇಂದ್ರ ಸರ್ಕಾರವು ತೈಲ ಆಮದು ವಹಿವಾಟಿನಲ್ಲಿ ವಾರ್ಷಿಕವಾಗಿ 5 ಬಿಲಿಯನ್ ಡಾಲರ್(ರೂ.30,000 ಕೋಟಿ ರೂ.ಗಿಂತ ಹೆಚ್ಚು) ಉಳಿತಾಯ ಮಾಡಲಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಇದರೊಂದಿಗೆ ಕೇಂದ್ರ ಸರ್ಕಾರವು 2030ರ ವೇಳೆಗೆ ಶೇ.5 ರಷ್ಟು ಜೈವಿಕ ಡೀಸೆಲ್ ಅನ್ನು ಡೀಸೆಲ್‌ನೊಂದಿಗೆ ಮಿಶ್ರಣ ಮಾಡುವ ಗುರಿಯನ್ನು ಹೊಂದಲಾಗಿದ್ದು, ಇಂಧನ ಪರಿವರ್ತನೆ ಮತ್ತು ಹವಾಮಾನ ಕ್ರಿಯಾ ಯೋಜನೆಗಳ ಭಾಗವಾಗಿ ಶುದ್ಧ ಇಂಧನಗಳ ಅಳವಡಿಕೆಯನ್ನು ವೇಗಗೊಳಿಸಲಾಗುತ್ತಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ ಎಥೆನಾಲ್ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ವಿವಿಧ ಮೂಲಗಳ ಮೇಲೆ ಹೆಚ್ಚಿನ ಹೂಡಿಕೆ ಮಾಡುತ್ತಿದ್ದು, ಹೊಸ ಗುರಿಸಾಧನೆಗೆ ಕನಿಷ್ಠ 4 ಬಿಲಿಯನ್ ಲೀಟರ್‌ನಷ್ಟು ಎಥೆನಾಲ್ ಉತ್ಪಾದನೆಗಾಗಿ ಎಲ್ಲ ಅಗತ್ಯ ಕ್ರಮಕೈಗೊಳ್ಳಲಾಗಿದೆ.

Most Read Articles

Kannada
English summary
Centre government reduces excise duty on petrol and diesel details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X