Just In
- 13 hrs ago
ವ್ಯಾಗನ್ಆರ್ ಕಾರಿಗೆ ಸೆಡ್ಡು ಹೊಡೆಯಲಿದೆ 2022ರ ಕಿಯಾ ರೇ ಫೇಸ್ಲಿಫ್ಟ್
- 14 hrs ago
ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ
- 14 hrs ago
30.9 ಕಿ.ಮೀ ಮೈಲೇಜ್ನೊಂದಿಗೆ ಮಾರುತಿ ಸ್ವಿಫ್ಟ್ ಸಿಎನ್ಜಿ ಕಾರು ಬಿಡುಗಡೆ
- 15 hrs ago
ಅತಿ ಕಡಿಮೆ ಅವಧಿಯಲ್ಲಿ ಕಿಯಾ ಸೆಲ್ಟೋಸ್ ಹೊಸ ಮೈಲಿಗಲ್ಲು: ದೇಶದಲ್ಲಿ ದಾಖಲೆಯ ಮಾರಾಟ
Don't Miss!
- News
ಪಂಜಾಬ್: ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ರಾಜಕೀಯ- ಅಮರಿಂದರ್ ಸಿಂಗ್
- Lifestyle
Today Rashi Bhavishya: ಶನಿವಾರದ ದಿನ ಭವಿಷ್ಯ: ತುಲಾ, ಮೇಷ, ಮಕರ, ಕುಂಭ ರಾಶಿಯ ವ್ಯಾಪಾರಸ್ಥರಿಗೆ ಶುಭ ದಿನ
- Movies
ಅತ್ತ ಪೊಲೀಸ್, ಇತ್ತ ರೌಡಿ ಇಬ್ಬರನ್ನೂ ಎದುರಿಸುತ್ತಿರುವ ಕಂಠಿ!
- Sports
ಮಹಾರಾಜ ಟ್ರೋಫಿ: ಮಯಾಂಕ್ ಶತಕ; 15.4 ಓವರ್ಗಳಲ್ಲಿ 176 ರನ್ ಚಚ್ಚಿ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್!
- Finance
ಕ್ರಿಪ್ಟೋ ವಹಿವಾಟು: 370 ಕೋಟಿ ರೂಪಾಯಿ ಜಪ್ತಿ ಮಾಡಿದ ಇಡಿ
- Technology
ರೆಡ್ಮಿ K50 ಅಲ್ಟ್ರಾ ಮತ್ತು ಶಿಯೋಮಿ ಪ್ಯಾಡ್ 5 ಪ್ರೊ 12.4 ಬಿಡುಗಡೆ! ವಿಶೇಷತೆ ಏನು?
- Travel
75ನೇ ಸ್ವಾತೊಂತ್ರೋತ್ಸವವನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದೊಡನೆ ಸಂಬಂಧವಿರುವ ಭಾರತದ ಈ ಸ್ಮಾರಕಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಸಿಟ್ರನ್ ಸಿ3 ಮಿನಿ ಎಸ್‌ಯುವಿ
ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಸಿ3 ಮಿನಿ ಎಸ್‌ಯುವಿ ಮಾದರಿಯನ್ನು ಇದೇ ತಿಂಗಳು 20ರಂದು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಹೊಸ ಕಾರು ಈಗಾಗಲೇ ಪ್ರಮುಖ ಡೀಲರ್ಸ್‌ಗಳಲ್ಲಿ ಗ್ರಾಹಕರ ವೀಕ್ಷಣೆಗಾಗಿ ಪ್ರದರ್ಶನಗೊಳಿಸಲಾಗುತ್ತಿದೆ.

ಹೊಸ ಸಿ3 ಕಾರು ಮಾದರಿಗಾಗಿ ಸಿಟ್ರನ್ ಕಂಪನಿಯು ರೂ.21 ಸಾವಿರ ಮುಂಗಡದೊಂದಿಗೆ ಈಗಾಗಲೇ ಬುಕಿಂಗ್ ಸಹ ಆರಂಭಿಸಿದ್ದು, ಕಂಪನಿಯು ಸದ್ಯ ಹೊಸ ಕಾರನ್ನು ದೇಶದ ಪ್ರಮುಖ 10 ನಗರಗಳಲ್ಲಿ ಮಾತ್ರ ಮಾರಾಟ ಮಾಡುತ್ತಿದೆ. ಹೊಸ ಕಾರು ಬಿಡುಗಡೆಯ ನಂತರ ಗ್ರಾಹಕರ ಬೇಡಿಕೆಯನ್ನು ಆಧರಿಸಿ ಮಾರಾಟವನ್ನು ಇತರೆ ನಗರಗಳಿಗೂ ವಿಸ್ತರಿಸುವ ಯೋಜನೆಯಲ್ಲಿದೆ.

ಹೀಗಾಗಿ ಹೊಸ ಸಿ3 ಕಾರು ಸದ್ಯಕ್ಕೆ ಸೀಮಿತ ನಗರಗಳಲ್ಲಿ ಮಾತ್ರ ಖರೀದಿಗೆ ಲಭ್ಯವಾಗುತ್ತಿದ್ದು, ಈ ವರ್ಷಾಂತ್ಯಕ್ಕೆ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ ತನ್ನ ಮಾರಾಟ ಜಾಲವನ್ನು ಹೆಚ್ಚಿಸಲಿದೆ.

ಸಿ3 ಮಾದರಿಯನ್ನು ಸಿಟ್ರನ್ ಕಂಪನಿಯು ವಿವಿಧ ಹಂತದ ಮಾರುಕಟ್ಟೆ ಅಧ್ಯಯನದೊಂದಿಗೆ ಅಭಿವೃದ್ದಿಗೊಳಿಸಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಮಿನಿ ಎಸ್‌ಯುವಿ ವೈಶಿಷ್ಟ್ಯತೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಸಿ3 ಮಾದರಿಯು ಸದ್ಯ ಬಿಗ್ ಹ್ಯಾಚ್‌ಬ್ಯಾಕ್ ಮಾದರಿಗಾಗಿ ಮಾರಾಟಗೊಳ್ಳುತ್ತಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಈ ಹೊಸ ಕಾರನ್ನು ಮಿನಿ ಎಸ್‌ಯುವಿ ಅಥವಾ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗುರುತಿಸಲಾಗುತ್ತದೆ.

ಸಿ3 ಮಾದರಿಯನ್ನು ಕಂಪನಿಯು ಸಿ5 ಏರ್‌ಕ್ರಾಸ್ ಮಾದರಿಯಂತೆಯೇ ಶೇ.90ರಷ್ಟು ಸ್ಥಳೀಕರಣದೊಂದಿಗೆ ಉತ್ತಮ ಬೆಲೆಯೊಂದಿಗೆ ಬಿಡುಗಡೆಗೊಳಿಸುವ ಯೋಜನೆ ಹೊಂದಿದ್ದು, ಭಾರತೀಯ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹೊಸ ಉತ್ಪನ್ನವನ್ನು ಪರಿಚಯಿಸುತ್ತಿದೆ.

ಹೊಸ ಸಿ3 ಕಂಪ್ಯಾಕ್ಟ್ ಎಸ್‌ಯುವಿಯು ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದ್ದು, ದೊಡ್ಡದಾದ ಗ್ರಿಲ್‌ನೊಂದಿಗೆ ಕ್ರೋಮ್ ಫಿನ್ಸಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್‌ಲ್ಯಾಂಪ್, ಡಿಆರ್‌ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್‌ನೊಂದಿಗೆ ಗಮನಸೆಳೆಯುತ್ತದೆ.

ಹೊಸ ಕಾರಿನ ಎರಡುಬದಿಯಲ್ಲೂ ಸ್ಕಫ್ ಪ್ಲೇಟ್, ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್, ಸ್ಪ್ಲಿಟ್ ಟೈಲ್ ಲ್ಯಾಂಪ್ ಮತ್ತು 180 ಗ್ರೌಂಡ್ ಕಿಯರೆನ್ಸ್ ಆಕರ್ಷಕವಾಗಿದೆ. ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಬಿಡಿಭಾಗಗಗಳಿಂತಲೂ ಹೆಚ್ಚು ಆಕರ್ಷವಾಗಿರುವ ಮತ್ತು ಚಾಲನೆಗೆ ಪೂರಕವಾದ ಆಕ್ಸೆಸರಿಸ್ ಪ್ಯಾಕೇಜ್ ಸಹ ಪರಿಚಯಿಸಲಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸುಮಾರು 78 ಆಕ್ಸೆಸರಿಸ್‌ಗಳನ್ನು ಒಳಗೊಂಡಿರಲಿದೆ.

ಹೊಸ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10.25-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್‍ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್‌ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯವಿದೆ.

ಸಿ3 ಮಾದರಿಯ ಮತ್ತೊಂದು ವಿಶೇಷವೆಂದರೆ ಕಂಪನಿಯು ಬಜೆಟ್ ಕಾರಿನಲ್ಲೂ ವೈರ್‌ಲೆಸ್ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸೌಲಭ್ಯವನ್ನು ನೀಡುತ್ತಿದ್ದು, ಎಲ್ಇಡಿ ಡಿಆರ್‌ಎಲ್, ವೈರ್‌ಲೆಸ್ ಸ್ಮಾರ್ಟ್‌ಫೋನ್ ಸಂಪರ್ಕ, ಫೋಲ್ಡ್-ಫ್ಲಾಟ್ ಹಿಂದಿನ ಸೀಟ್, ಒನ್-ಟಚ್ ಡೌನ್ ವಿಂಡೋಸ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರು ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ಹೊಂದಿದ್ದು, ಹೊಸ ಕಾರು ಅತ್ಯುತ್ತಮ ಕ್ಯಾಬಿನ್ ಸ್ಥಳಾವಕಾಶದೊಂದಿಗೆ ಹಿಂಬದಿಯ ಪ್ರಯಾಣಿಕರಿಗೆ 653 ಎಂಎಂ ಲೆಗ್‌ರೂಂನೊಂದಿಗೆ 2 ಲೀಟರ್ ಸಾಮರ್ಥ್ಯದ ಡೋರ್ ಪ್ಯಾಕೇಟ್, ಸ್ಮಾರ್ಟ್‌ಫೋನ್ ಹೋಲ್ಡರ್ ಮತ್ತು ಸೆಂಟರ್ ಕನ್ಸೊಲ್ ಹೊಂದಿದೆ.

ಸಿ3 ಕಾರಿನ ಸ್ಪೋರ್ಟಿ ಲುಕ್ ಹೆಚ್ಚಿಸಲು ಡ್ಯುಯಲ್ ಆಕ್ಸೆಂಟ್ ನೀಡುತ್ತಿರುವುದು ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದ್ದು, ಹೊಸ ಕಾರು ಒಟ್ಟು ಆರು ಸಿಂಗಲ್ ಟೋನ್ ಮತ್ತು ನಾಲ್ಕು ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಹೊಂದಿಲಿದೆ.

ಹೊಸ ಸಿ3 ಮಾದರಿಯಲ್ಲಿ ಸಿಟ್ರನ್ ಕಂಪನಿಯು ಎರಡು ಎಂಜಿನ್ ಆಯ್ಕೆಗಳನ್ನು ನೀಡಿದ್ದು, ಮೂಲ ರೂಪಾಂತರವು 1.2-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಮೂರು-ಸಿಲಿಂಡರ್ ಪ್ಯೂರ್‌ಟೆಕ್ 82 ಪೆಟ್ರೋಲ್ ಎಂಜಿನ್‌ನಿಂದ ಚಾಲಿತವಾಗಿದೆ. ಬೆಸ್ ಮಾದರಿಯು 80.8 ಬಿಎಚ್‌ಪಿ ಪವರ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಗರಿಷ್ಠ 115 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಬೆಸ್ ವೆರಿಯೆಂಟ್‌ನಲ್ಲಿ ಕಂಪನಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಮಾತ್ರ ನೀಡಲಾಗಿದೆ.

ಹೊಸ ಕಾರಿನಲ್ಲಿ ಮತ್ತೊಂದು ಶಕ್ತಿಶಾಲಿ ಮಾದರಿಯೆಂದರೆ ಅದು ಟರ್ಬೊ ಚಾರ್ಜ್ ವೈಶಿಷ್ಟ್ಯತೆ 1.2 ಲೀಟರ್ ಎಂಜಿನ್. ಇದನ್ನು ತಾಂತ್ರಿಕವಾಗಿ ಪ್ಯೂರ್‌ಟೆಕ್ 110 ಎಂಜಿನ್ ಎಂದು ಹೆಸರಿಸಲಾಗಿದ್ದು, ಇದು 108.4 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಈ ಎಂಜಿನ್‌ನಲ್ಲಿ ಕಂಪನಿಯು 6-ಸ್ಪೀಡ್ ಗೇರ್‌ಬಾಕ್ಸ್ ಜೋಡಿಸಿದೆ.

ಸಿಟ್ರನ್ ಕಂಪನಿಯು ಸದ್ಯಕ್ಕೆ ಹೊಸ ಕಾರಿನಲ್ಲಿ ಎರಡು ಎಂಜಿನ್ ಆಯ್ಕೆಗಳೊಂದಿಗೆ ಮ್ಯಾನುವಲ್ ಮಾದರಿಯನ್ನು ಮಾತ್ರ ಪರಿಚಯಿಸುತ್ತಿದ್ದು, ಗ್ರಾಹಕರ ಬೇಡಿಕೆ ಆಧರಿಸಿ ಮುಂಬರುವ ದಿನಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿಗಳು ಸಹ ಮಾರುಕಟ್ಟೆ ಪ್ರವೇಶಿಸಬಹುದಾಗಿದೆ.

ಇನ್ನು ಹೊಸ ಕಾರಿನಲ್ಲಿ ಹಲವಾರು ಸುರಕ್ಷತಾ ವೈಶಿಷ್ಟ್ಯತೆಗಳನ್ನು ನೀಡಲಾಗಿದ್ದು, ಚಾಲಕ ಮತ್ತು ಪ್ರಯಾಣಿಕರ ಏರ್‌ಬ್ಯಾಗ್‌ಗಳು, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಹಿಂದಿನ ಬಾಗಿಲುಗಳಲ್ಲಿ ಚೈಲ್ಡ್ ಲಾಕ್, ಎಂಜಿನ್ ಇಮೊಬಿಲೈಜರ್ ಮತ್ತು ಸ್ಪೀಡ್-ಸೆನ್ಸಿಟಿವ್ ಡೋರ್ ಲಾಕ್ ಸೌಲಭ್ಯಗಳಿವೆ.

ಸಿ3 ಮಾದರಿಯೊಂದಿಗೆ ಹೆಚ್ಚಿನ ಬೇಡಿಕೆಯ ನೀರಿಕ್ಷೆಯಲ್ಲಿರುವ ಕಂಪನಿಯು ಹೊಸ ಕಾರನ್ನು ಸ್ಪರ್ಧಾತ್ಮಕ ಬೆಲೆಗಳಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ.