ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಬಹುನೀರಿಕ್ಷಿತ ಸಿಟ್ರನ್‌‌ ಇಂಡಿಯಾ(Citroen India) ನಿರ್ಮಾಣದ ಹೊಸ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು 2022ರ ಮೊದಲಾರ್ಧದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಸಿಟ್ರನ್ ಕಂಪನಿಯು ಭಾರತದಲ್ಲಿ ಅನಾವರಣಗೊಳಿಸಿದ್ದು, ಹೊಸ ಕಾರು ಮಾದರಿಯ ಉತ್ಪಾದನಾ ಆವೃತ್ತಿಯ ಅನಾವರಣಕ್ಕೂ ಮುನ್ನ ಕಂಪನಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿದೆ. ಸಿ5 ಏರ್‌ಕ್ರಾಸ್ ಬಿಡುಗಡೆಗೊಳಿಸಿದ ನಂತರ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಫ್ರೆಂಚ್ ಕಾರು ಉತ್ಪಾದನಾ ಕಂಪನಿಯು ಇದೀಗ ಎರಡನೇ ಕಾರು ಮಾದರಿಯಾಗಿ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸುತ್ತಿದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಕಂಪನಿಯ ಸಿ3 ಕಾರಿನ ಉತ್ಪಾದನಾ ಮಾದರಿಯನ್ನು ಮುಂಬರುವ ಮೇ ವೇಳೆಗೆ ಅನಾವರಣಗೊಳಿಸುವ ಸಾಧ್ಯತೆಗಳಿದ್ದು, ಉತ್ಪಾದನಾ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡುವ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ವೇಳೆ ಸಾರ್ವಜನಿಕವಾಗಿ ಗಮನಸೆಳೆದಿದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರುಗಳ ಉತ್ಪಾದನೆಗಾಗಿ ಸ್ಥಳೀಯವಾಗಿ ಲಭ್ಯವಾಗುವ ಬಿಡಿಭಾಗಗಳಿಗೆ ಆದ್ಯತೆ ನೀಡಿರುವ ಸಿಟ್ರನ್ ಕಂಪನಿಯು ಶೇ.90 ರಷ್ಟು ಸ್ಥಳೀಕರಣಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಸಿ5 ಏರ್‌ಕ್ರಾಸ್ ನಂತರ ಇದೀಗ ಸಿ3 ಮಾದರಿಯನ್ನು ಸಹ ಸ್ಥಳೀಕರಣದೊಂದಿಗೆ ಉತ್ತಮ ಬೆಲೆಯೊಂದಿಗೆ ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಕಂಪನಿಯು ಐಷಾರಾಮಿ ಕಾರುಗಳ ಜೊತೆ ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲೂ ಮುಂಚೂಣಿ ಹೊಂದಿದ್ದು, ಕಂಪನಿಯು ಭಾರತೀಯ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹೊಸ ಉತ್ಪನ್ನಗಳನ್ನು ಪರಿಚಯಿಸುತ್ತಿದೆ. ಸಿ5 ಏರ್‌ಕ್ರಾಸ್ ಮಾದರಿಯು ಕೆಲವು ಹೊಸ ವೈಶಿಷ್ಟ್ಯತೆಗಳೊಂದಿಗೆ ದುಬಾರಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದ್ದು, ಸಿ3 ಕಾರು ಮಾದರಿಯು ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿ3 ಕಂಪ್ಯಾಕ್ಟ್ ಎಸ್‌ಯುವಿಯು ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದ್ದು, ದೊಡ್ಡದಾದ ಗ್ರಿಲ್‌ನೊಂದಿಗೆ ಕ್ರೋಮ್ ಫಿನ್ಸಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್‌ಲ್ಯಾಂಪ್, ಡಿಆರ್‌ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್ ಗಮನಸೆಳೆಯುತ್ತದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನಲ್ಲಿ ಎರಡುಬದಿಯಲ್ಲೂ ಸ್ಕಫ್ ಪ್ಲೇಟ್, ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್, ಸ್ಪ್ಲಿಟ್ ಟೈಲ್ ಲ್ಯಾಂಪ್ ಮತ್ತು 180 ಗ್ರೌಂಡ್ ಕಿಯರೆನ್ಸ್ ಆಕರ್ಷಕವಾಗಿದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ ಕಂಪನಿಯು ನೀಡುವ ಸ್ಟ್ಯಾಂಡರ್ಡ್ ಬಿಡಿಭಾಗಗಗಳಿಂತಲೂ ಹೆಚ್ಚು ಆಕರ್ಷವಾಗಿರುವ ಮತ್ತು ಚಾಲನೆಗೆ ಪೂರಕವಾದ ಆಕ್ಸೆಸರಿಸ್ ಪ್ಯಾಕೇಜ್ ಸಹ ಪರಿಚಯಿಸಲಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸುಮಾರು 78 ಆಕ್ಸೆಸರಿಸ್‌ಗಳನ್ನು ಒಳಗೊಂಡಿರಲಿದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್‍‌ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್‌ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯವಿದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರು ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ಹೊಂದಿದ್ದು, ಹೊಸ ಕಾರು ಅತ್ಯುತ್ತಮ ಕ್ಯಾಬಿನ್ ಸ್ಥಳಾವಕಾಶದೊಂದಿಗೆ ಹಿಂಬದಿಯ ಪ್ರಯಾಣಿಕರಿಗೆ 653 ಎಂಎಂ ಲೆಗ್‌ರೂಂನೊಂದಿಗೆ 2 ಲೀಟರ್ ಸಾಮರ್ಥ್ಯದ ಡೋರ್ ಪ್ಯಾಕೇಟ್, ಕಪ್ ಹೋಲ್ಡರ್, ಸ್ಮಾರ್ಟ್‌ಫೋನ್ ಹೋಲ್ಡರ್, ಸೆಂಟರ್ ಕನ್ಸೊಲ್ ಜೊತೆಗೆ ಆರ್ಮ್ ರೆಸ್ಟ್ ಹೊಂದಿದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿ3 ಕಾರಿನ ಸ್ಪೋರ್ಟಿ ಲುಕ್ ಹೆಚ್ಚಿಸಲು ಡ್ಯುಯಲ್ ಆಕ್ಸೆಂಟ್ ನೀಡುತ್ತಿರುವ ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದ್ದು, ಹೊಸ ಕಾರು ಒಟ್ಟು ನಾಲ್ಕು ಸಿಂಗಲ್ ಮತ್ತು ಡ್ಯುಯಲ್ ಟೋನ್ ಬಣ್ಣದ ಆಯ್ಕೆ ಹೊಂದಿರಲಿವೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಐಸ್ ವೈಟ್, ಪ್ಲ್ಯಾಟಿನಂ ಗ್ರೇ, ಆರ್ಟೆನ್ಸ್ ಗ್ರೇ, ಜೆಸ್ಟಿ ಆರೇಂಜ್ ಸಿಂಗಲ್ ಟೋನ್ ಬಣ್ಣಗಳೊಂದಿಗೆ ಆರ್ಟೆನ್ಸ್ ಗ್ರೇ ಮತ್ತು ಜೆಸ್ಟಿ ಆರೇಂಜ್ ರೂಫ್ ಹೊಂದಿರುವ ಎರಡು ಡ್ಯುಯಲ್ ಟೋನ್ ಮಾದರಿಗಳು ಖರೀದಿಗೆ ಲಭ್ಯವಿರಲಿದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯ ಕಾರು ಮಾದರಿಯನ್ನು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸಿರುವ ಸಿಟ್ರನ್ ಕಂಪನಿಯು ತಾಂತ್ರಿಕ ಅಂಶಗಳ ಮಾಹಿತಿಯ ಹೊರತಾಗಿಯು ಎಂಜಿನ್ ಆಯ್ಕೆಯ ಕುರಿತಾಗಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನ ಬಿಡುಗಡೆಯ ವೇಳೆಯಲ್ಲಿ ಎಂಜಿನ್ ಮಾಹಿತಿಯು ಲಭ್ಯವಾಗಲಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು ಫ್ಲೆಕ್ಸ್ ಫ್ಯೂಲ್ ತಂತ್ರಜ್ಞಾನ ಹೊಂದಿರುವ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ ಎನ್ನಲಾಗಿದೆ.

ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಚ್ಚ ಹೊಸ ಸಿ3 ಮಾದರಿಯನ್ನು ಸಿಟ್ರನ್ ಕಂಪನಿಯ ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ಮಾರುಕಟ್ಟೆಗಳನ್ನು ಪರಿಚಯಿಸುತ್ತಿದ್ದು, ಹೊಸ ಕಾರು ಈಗಾಗಲೇ ಲ್ಯಾಟಿನ್ ಅಮೆರಿಕದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಹೊಸ ಕಾರು ಮಾದರಿಯು ಭಾರತದಲ್ಲಿ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ.

More from DriveSpark

Article Published On: Monday, February 21, 2022, 18:36 [IST]
English summary
Citroen c3 cmpact suv spied testing details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+