ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಸಿಟ್ರನ್ ಇಂಡಿಯಾ ಕಂಪನಿಯು ಸಿ3 ಮೈಕ್ರೊ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

Recommended Video

Mahindra Scorpio Classic Launched | Price At Rs 11.99 Lakh | Scorpio Classic Vs Scorpio N In Kannada

ಹೀಗಾಗಿ ಕಂಪನಿಯು ಶೀಘ್ರದಲ್ಲಿಯೇ ಹೊಸ ಕಾರು ಮಾದರಿಯಲ್ಲಿ ಸಿಎನ್‌ಜಿ ಆವೃತ್ತಿಯ ಬಿಡುಗಡೆಯ ಸಿದ್ದತೆಯಲ್ಲಿದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ದುಬಾರಿ ಇಂಧನಗಳ ಪರಿಣಾಮ ಹೊಸ ಕಾರು ಖರೀದಿದಾರರು ಹೆಚ್ಚು ಮೈಲೇಜ್ ಪ್ರೇರಿತ ಸಿಎನ್‌ಜಿ ಕಾರುಗಳತ್ತ ಮುಖ ಮಾಡುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಉತ್ಪಾದನಾ ಕಂಪನಿಗಳು ಸಹ ಹೆಚ್ಚು ಮೈಲೇಜ್ ಪ್ರೇರಿತ ಸಿಎನ್‌ಜಿ ಮಾದರಿಗಳನ್ನು ಪರಿಚಯಿಸುತ್ತಿವೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಸಿಎನ್‌ಜಿ ಕಾರಗಳ ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಕಂಪನಿಯು ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಮಾರುತಿ ಸುಜುಕಿ ಪ್ರಮುಖ ಸಿಎನ್‌ಜಿ ಕಾರುಗಳಿಗೆ ಪೈಪೋಟಿಯಾಗಿ ಸಿಟ್ರನ್ ಸೇರಿದಂತೆ ಪ್ರಮುಖ ಕಾರು ಉತ್ಪಾದನಾ ಕಂಪನಿಗಳು ಮುಂಬರುವ ದಿನಗಳಲ್ಲಿ ವಿವಿಧ ಸಿಎನ್‌ಜಿ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿವೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಸಿಎನ್‌ಜಿ ಕಾರುಗಳು ಪೆಟ್ರೋಲ್ ಕಾರುಗಳೊಂದಿಗೆ ಸಂಯೋಜನೆ ಹೊಂದಿದ್ದು, ಇವು ಡೀಸೆಲ್ ಕಾರು ಮಾದರಿಗಳಿಂತಲೂ ಹೆಚ್ಚಿನ ಮೈಲೇಜ್ ಜೊತೆಗೆ ಪರಿಸರ ಸ್ನೇಹಿ ಮಾದರಿಗಳಾಗಿವೆ. ಹೀಗಾಗಿ ಹೊಸ ಕಾರು ಬಿಡುಗಡೆಯಾಗಿ ಸಿಟ್ರನ್ ಕಂಪನಿಯು ಸಿ3 ಸಿಎನ್‌ಜಿ ಮಾದರಿಯ ರೋಡ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಮಾದರಿಯು ಮುಂಬರುವ ಕೆಲವು ತಿಂಗಳಿನಲ್ಲಿ ಮಾರುಕಟ್ಟೆ ಪ್ರವೇಶಿಸಬಹುದಾಗಿದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಪರ್ಯಾಯ ಇಂಧನ ವ್ಯವಸ್ಥೆಯಾಗಿ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) [Compressed natural gas] ವಾಹನಗಳನ್ನು ಬಳಕೆ ಮಾಡಲಾಗುತ್ತಿದ್ದು, ಇದು ವಾತಾವರಣಕ್ಕೆ ಹೊರಬಿಡುವ ಮಾಲಿನ್ಯದ ಪ್ರಮಾಣವೂ ಕಡಿಮೆಯಾಗಿದ್ದು, ಮಿತವ್ಯಯವೆನಿಸಿಕೊಂಡಿದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಹೀಗಿದ್ದರೂ ಪೆಟ್ರೋಲ್ ಅಥವಾ ಡೀಸೆಲ್ ಕಾರುಗಳಿಗೆ ಹೋಲಿಸಿದಾಗ ಸಿಎನ್‌ಜಿ ಕಾರುಗಳ ಎಂಜಿನ್ ಕಾರ್ಯಕ್ಷಮತೆ ಸ್ವಲ್ಪ ಕಡಿಮೆಯಾಗಿರಲಿದ್ದು, ಆದರೆ ಅದರಲ್ಲಿನ ಇಂಧನ ದಕ್ಷತೆ ಹೆಚ್ಚಿರುತ್ತದೆ. ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಂಪನಿಗಳು ಸಿಎನ್‌ಜಿ ಮಾದರಿಗಳ ಮೇಲೆ ಗಮನಹರಿಸುತ್ತಿದ್ದು, ಸಿಟ್ರನ್ ಸಿ3 ಕಾರು ಮಾದರಿಯು 1.2 ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಸಿಎನ್‌ಜಿ ಕಿಟ್ ಹೊಂದಿರುತ್ತದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಸಿಟ್ರನ್ ಕಂಪನಿಯು ಹೊಸ ಸಿ3 ಮಾದರಿಯಲ್ಲಿ ಸಿಟ್ರನ್ ಕಂಪನಿಯು ಎರಡು ಎಂಜಿನ್ ಆಯ್ಕೆಗಳನ್ನು ನೀಡಿದ್ದು, ಆರಂಭಿಕ ಮಾದರಿಯು 1.2-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ತ್ರಿ-ಸಿಲಿಂಡರ್ ಪ್ಯೂರ್‌ಟೆಕ್ 82 ಪೆಟ್ರೋಲ್ ಎಂಜಿನ್‌ ಮತ್ತು ಹೈ ಎಂಡ್ ಮಾದರಿಯಲ್ಲಿ ಟರ್ಬೊ ಚಾರ್ಜ್ ವೈಶಿಷ್ಟ್ಯತೆಯ 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಆರಂಭಿಕ ವೆರಿಯೆಂಟ್‌ನಲ್ಲಿ ಕಂಪನಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆ ನೀಡಿದ್ದರೆ ಹೈ ಎಂಡ್ ಮಾದರಿಯಲ್ಲಿ 6-ಸ್ಪೀಡ್ ಗೇರ್‌ಬಾಕ್ಸ್‌ ಜೋಡಿಸಿದ್ದು, ಹೊಸ ಕಾರಿನಲ್ಲಿ ಸದ್ಯಕ್ಕೆ ಮ್ಯಾನುವಲ್ ಆಯ್ಕೆ ಮಾತ್ರ ನೀಡುತ್ತಿರುವ ಮುಂಬರುವ ದಿನಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿ ಪರಿಚಯಿಸುವುದಾಗಿ ಹೇಳಿಕೊಂಡಿದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆ ಹೊಂದಿರುವ ಆರಂಭಿಕ ಮಾದರಿಯು 82 ಬಿಎಚ್‌ಪಿ ಮತ್ತು 115 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದರೆ 6-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆ ಹೊಂದಿರುವ ಟರ್ಬೊ ಪೆಟ್ರೋಲ್ ಆವೃತ್ತಿಯು 110 ಬಿಎಚ್‌ಪಿ, 190 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಲೈವ್ ವೆರಿಯೆಂಟ್‌ನಲ್ಲಿ 1.2-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಎಂಜಿನ್ ಮಾತ್ರ ಆಯ್ಕೆ ಲಭ್ಯವಿದ್ದರೆ ಫೀಲ್ ವೆರಿಯೆಂಟ್‌ನಲ್ಲಿ ನ್ಯಾಚುರಲಿ ಆಸ್ಪರೆಟೆಡ್ ಮತ್ತು ಟರ್ಬೊ ಪೆಟ್ರೋಲ್ ಆಯ್ಕೆ ಲಭ್ಯವಿದೆ. ಹಾಗೆಯೇ ಹೊಸ ಮೈಕ್ರೊ ಎಸ್‌ಯುವಿಯು ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದ್ದು, ದೊಡ್ಡದಾದ ಗ್ರಿಲ್‌ನೊಂದಿಗೆ ಕ್ರೋಮ್ ಫಿನ್ಸಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್‌ಲ್ಯಾಂಪ್, ಡಿಆರ್‌ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್‌ನೊಂದಿಗೆ ಗಮನಸೆಳೆಯುತ್ತದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಸಿ3 ಕಾರು ಮಾದರಿಯು ಲೈವ್ ಮತ್ತು ಫೀಲ್ ಎನ್ನುವ ಎರಡು ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರಿನ ಆರಂಭಿಕ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ರೂ. 5.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.06 ಲಕ್ಷ ಬೆಲೆಯೊಂದಿಗೆ ಎಂಟ್ರಿ ಲೆವೆಲ್ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಎರಡು ಬದಿಯಲ್ಲೂ ಸ್ಕಫ್ ಪ್ಲೇಟ್, ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್, ಸ್ಪ್ಲಿಟ್ ಟೈಲ್ ಲ್ಯಾಂಪ್ ಮತ್ತು 180 ಗ್ರೌಂಡ್ ಕಿಯರೆನ್ಸ್ ಆಕರ್ಷಕವಾಗಿದೆ. ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಬಿಡಿಭಾಗಗಗಳಿಂತಲೂ ಹೆಚ್ಚು ಆಕರ್ಷವಾಗಿರುವ ಮತ್ತು ಚಾಲನೆಗೆ ಪೂರಕವಾದ ಆಕ್ಸೆಸರಿಸ್ ಪ್ಯಾಕೇಜ್ ಸಹ ಪರಿಚಯಿಸಲಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸುಮಾರು 78 ಆಕ್ಸೆಸರಿಸ್‌ಗಳನ್ನು ಒಳಗೊಂಡಿರಲಿದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಹೊಸ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10.25-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್‍‌ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್‌ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯವಿದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಸಿ3 ಮಾದರಿಯ ಮತ್ತೊಂದು ವಿಶೇಷವೆಂದರೆ ಕಂಪನಿಯು ಬಜೆಟ್ ಕಾರಿನಲ್ಲೂ ವೈರ್‌ಲೆಸ್ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸೌಲಭ್ಯವನ್ನು ನೀಡುತ್ತಿದ್ದು, ಎಲ್ಇಡಿ ಡಿಆರ್‌ಎಲ್‌, ವೈರ್‌ಲೆಸ್ ಸ್ಮಾರ್ಟ್‌ಫೋನ್ ಸಂಪರ್ಕ, ಫೋಲ್ಡ್-ಫ್ಲಾಟ್ ಹಿಂದಿನ ಸೀಟ್, ಒನ್-ಟಚ್ ಡೌನ್ ವಿಂಡೋಸ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಇದಲ್ಲದೆ ಹೊಸ ಕಾರಿನಲ್ಲಿ ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಹೊಸ ಕಾರು ಅತ್ಯುತ್ತಮ ಕ್ಯಾಬಿನ್ ಸ್ಥಳಾವಕಾಶದೊಂದಿಗೆ ಹಿಂಬದಿಯ ಪ್ರಯಾಣಿಕರಿಗೆ 653 ಎಂಎಂ ಲೆಗ್‌ರೂಂನೊಂದಿಗೆ 2 ಲೀಟರ್ ಸಾಮರ್ಥ್ಯದ ಡೋರ್ ಪ್ಯಾಕೇಟ್, ಸ್ಮಾರ್ಟ್‌ಫೋನ್ ಹೋಲ್ಡರ್ ಮತ್ತು ಸೆಂಟರ್ ಕನ್ಸೊಲ್ ಹೊಂದಿದೆ.

ಸಿಎನ್‌ಜಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಸಿಟ್ರನ್ ಸಿ3 ಮೈಕ್ರೊ ಎಸ್‌ಯುವಿ

ಇನ್ನು ಹೊಸ ಕಾರಿನಲ್ಲಿ ಹಲವಾರು ಹೊಸ ಸುರಕ್ಷತಾ ವೈಶಿಷ್ಟ್ಯತೆಗಳನ್ನು ನೀಡಲಾಗಿದ್ದು, ಚಾಲಕ ಮತ್ತು ಪ್ರಯಾಣಿಕರ ಏರ್‌ಬ್ಯಾಗ್‌ಗಳು, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಹಿಂದಿನ ಬಾಗಿಲುಗಳಲ್ಲಿ ಚೈಲ್ಡ್ ಲಾಕ್, ಎಂಜಿನ್ ಇಮೊಬಿಲೈಜರ್ ಮತ್ತು ಸ್ಪೀಡ್-ಸೆನ್ಸಿಟಿವ್ ಡೋರ್ ಲಾಕ್ ಸೌಲಭ್ಯಗಳಿವೆ.

Source: GaadiWaadi

Most Read Articles

Kannada
English summary
Citroen c3 cng variant spotted testing details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X