Just In
Don't Miss!
- Lifestyle
ಆಯುರ್ವೇದ ಔಷಧಿ ಸೇವಿಸುವ ಮುನ್ನ ಈ ಎಚ್ಚರಿಕೆಗಳನ್ನು ನೀವು ತೆಗೆದುಕೊಳ್ಳಲೇಬೇಕು
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಾರಿನ ಇಂಟಿರಿಯರ್ ಡಿಸೈನ್ ಮಾಹಿತಿ ಬಹಿರಂಗ
ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಎರಡನೇ ಕಾರು ಮಾದರಿಯಾದ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು 2022ರ ಮೊದಲಾರ್ಧದಲ್ಲಿ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.

ಹೊಸ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಸಿಟ್ರನ್ ಕಂಪನಿಯು ಭಾರತದಲ್ಲಿ ಈಗಾಗಲೇ ಅನಾವರಣಗೊಳಿಸಿದ್ದು, ಹೊಸ ಕಾರು ಮಾದರಿಯ ಉತ್ಪಾದನಾ ಆವೃತ್ತಿಯ ಅನಾವರಣಕ್ಕೂ ಮುನ್ನ ಕಂಪನಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿದೆ. ಸಿ5 ಏರ್‌ಕ್ರಾಸ್ ಬಿಡುಗಡೆಗೊಳಿಸಿದ ನಂತರ ಇದೀಗ ಎರಡನೇ ಕಾರು ಮಾದರಿಯಾಗಿ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಹಲವಾರು ಪ್ರಾಯೋಗಿಕ ಮಾದರಿಯಾಗಿ ಅಭಿವೃದ್ದಿಗೊಳ್ಳುತ್ತಿದೆ.

ಸಿಟ್ರನ್ ಕಂಪನಿಯ ಸಿ3 ಕಾರಿನ ಉತ್ಪಾದನಾ ಮಾದರಿಯನ್ನು ಮುಂಬರುವ ಮೇ ವೇಳೆಗೆ ಅನಾವರಣಗೊಳಿಸುವ ಸಾಧ್ಯತೆಗಳಿದ್ದು, ಉತ್ಪಾದನಾ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡುವ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ವೇಳೆ ಸಾರ್ವಜನಿಕವಾಗಿ ಗಮನಸೆಳೆದಿದೆ.

ಹೊಸ ಕಾರುಗಳ ಉತ್ಪಾದನೆಗಾಗಿ ಸ್ಥಳೀಯವಾಗಿ ಲಭ್ಯವಾಗುವ ಬಿಡಿಭಾಗಗಳಿಗೆ ಆದ್ಯತೆ ನೀಡಿರುವ ಸಿಟ್ರನ್ ಕಂಪನಿಯು ಶೇ.90 ರಷ್ಟು ಸ್ಥಳೀಕರಣಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಸಿ5 ಏರ್‌ಕ್ರಾಸ್ ನಂತರ ಇದೀಗ ಸಿ3 ಮಾದರಿಯನ್ನು ಸಹ ಸ್ಥಳೀಕರಣದೊಂದಿಗೆ ಉತ್ತಮ ಬೆಲೆಯೊಂದಿಗೆ ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಹೊಸ ಮಾದರಿಯ ಇಂಟಿರಿಯರ್ ಈ ಬಾರಿ ಗಮನಸೆಳೆದಿದ್ದು, ಮಧ್ಯಮ ಕ್ರಮಾಂಕದ ರೂಪಾಂತರವಾಗಿದ್ದರೂ ಹೊಸ ಕಾರಿನಲ್ಲಿ 10 ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಪವರ್ ವಿಂಗ್ ಮಿರರ್‌ಗಳು, ಏರ್-ಕಾನ್ ವೆಂಟ್‌ಗಳು, ಡಿಂಪಲ್ ಎಫೆಕ್ಟ್ ಅನ್ನು ಸಹ ಬಳಸಿರುವುದು ಸ್ಪಷ್ಟವಾಗಿದೆ.

ಸಿಟ್ರನ್ ಕಂಪನಿಯು ಸದ್ಯ ಐಷಾರಾಮಿ ಕಾರುಗಳ ಜೊತೆ ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲೂ ಮುಂಚೂಣಿ ಹೊಂದಿದ್ದು, ಕಂಪನಿಯು ಭಾರತೀಯ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹೊಸ ಉತ್ಪನ್ನಗಳನ್ನು ಪರಿಚಯಿಸುತ್ತಿದೆ. ಸಿ5 ಏರ್‌ಕ್ರಾಸ್ ಮಾದರಿಯು ಕೆಲವು ಹೊಸ ವೈಶಿಷ್ಟ್ಯತೆಗಳೊಂದಿಗೆ ದುಬಾರಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದ್ದು, ಸಿ3 ಕಾರು ಮಾದರಿಯು ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿದೆ.

ಸಿ3 ಕಂಪ್ಯಾಕ್ಟ್ ಎಸ್‌ಯುವಿಯು ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದ್ದು, ದೊಡ್ಡದಾದ ಗ್ರಿಲ್‌ನೊಂದಿಗೆ ಕ್ರೋಮ್ ಫಿನ್ಸಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್‌ಲ್ಯಾಂಪ್, ಡಿಆರ್‌ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್ ಗಮನಸೆಳೆಯುತ್ತದೆ.

ಹೊಸ ಕಾರಿನಲ್ಲಿ ಎರಡು ಬದಿಯಲ್ಲೂ ಸ್ಕಫ್ ಪ್ಲೇಟ್, ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್, ಸ್ಪ್ಲಿಟ್ ಟೈಲ್ ಲ್ಯಾಂಪ್ ಮತ್ತು 180 ಗ್ರೌಂಡ್ ಕಿಯರೆನ್ಸ್ ಆಕರ್ಷಕವಾಗಿದೆ.

ಸಿಟ್ರನ್ ಕಂಪನಿಯು ಸಿ3 ಕಾರಿನಲ್ಲಿ ನೀಡುವ ಸ್ಟ್ಯಾಂಡರ್ಡ್ ಬಿಡಿಭಾಗಗಗಳಿಂತಲೂ ಹೆಚ್ಚು ಆಕರ್ಷವಾಗಿರುವ ಮತ್ತು ಚಾಲನೆಗೆ ಪೂರಕವಾದ ಆಕ್ಸೆಸರಿಸ್ ಪ್ಯಾಕೇಜ್ ಸಹ ಪರಿಚಯಿಸಲಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸುಮಾರು 78 ಆಕ್ಸೆಸರಿಸ್‌ಗಳನ್ನು ಒಳಗೊಂಡಿರಲಿದೆ.

ಹೊಸ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್‍ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್‌ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯವಿದೆ.

ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರು ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ಹೊಂದಿದ್ದು, ಹೊಸ ಕಾರು ಅತ್ಯುತ್ತಮ ಕ್ಯಾಬಿನ್ ಸ್ಥಳಾವಕಾಶದೊಂದಿಗೆ ಹಿಂಬದಿಯ ಪ್ರಯಾಣಿಕರಿಗೆ 653 ಎಂಎಂ ಲೆಗ್‌ರೂಂನೊಂದಿಗೆ 2 ಲೀಟರ್ ಸಾಮರ್ಥ್ಯದ ಡೋರ್ ಪ್ಯಾಕೇಟ್, ಕಪ್ ಹೋಲ್ಡರ್, ಸ್ಮಾರ್ಟ್‌ಫೋನ್ ಹೋಲ್ಡರ್, ಸೆಂಟರ್ ಕನ್ಸೊಲ್ ಜೊತೆಗೆ ಆರ್ಮ್ ರೆಸ್ಟ್ ಹೊಂದಿದೆ.

ಸಿ3 ಕಾರಿನ ಸ್ಪೋರ್ಟಿ ಲುಕ್ ಹೆಚ್ಚಿಸಲು ಡ್ಯುಯಲ್ ಆಕ್ಸೆಂಟ್ ನೀಡುತ್ತಿರುವ ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದ್ದು, ಹೊಸ ಕಾರು ಒಟ್ಟು ನಾಲ್ಕು ಸಿಂಗಲ್ ಮತ್ತು ಡ್ಯುಯಲ್ ಟೋನ್ ಬಣ್ಣದ ಆಯ್ಕೆ ಹೊಂದಿರಲಿವೆ.

ಹೊಸ ಕಾರು ಐಸ್ ವೈಟ್, ಪ್ಲ್ಯಾಟಿನಂ ಗ್ರೇ, ಆರ್ಟೆನ್ಸ್ ಗ್ರೇ, ಜೆಸ್ಟಿ ಆರೇಂಜ್ ಸಿಂಗಲ್ ಟೋನ್ ಬಣ್ಣಗಳೊಂದಿಗೆ ಆರ್ಟೆನ್ಸ್ ಗ್ರೇ ಮತ್ತು ಜೆಸ್ಟಿ ಆರೇಂಜ್ ರೂಫ್ ಹೊಂದಿರುವ ಎರಡು ಡ್ಯುಯಲ್ ಟೋನ್ ಮಾದರಿಗಳು ಖರೀದಿಗೆ ಲಭ್ಯವಿರಲಿದೆ.

ಸದ್ಯ ಕಾರು ಮಾದರಿಯನ್ನು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸಿರುವ ಸಿಟ್ರನ್ ಕಂಪನಿಯು ತಾಂತ್ರಿಕ ಅಂಶಗಳ ಮಾಹಿತಿಯ ಹೊರತಾಗಿಯು ಎಂಜಿನ್ ಆಯ್ಕೆಯ ಕುರಿತಾಗಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಹೀಗಾಗಿ ಹೊಸ ಕಾರಿನ ಬಿಡುಗಡೆಯ ವೇಳೆಯಲ್ಲಿ ಎಂಜಿನ್ ಮಾಹಿತಿಯು ಲಭ್ಯವಾಗಲಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು ಫ್ಲೆಕ್ಸ್ ಫ್ಯೂಲ್ ತಂತ್ರಜ್ಞಾನ ಹೊಂದಿರುವ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ ಎನ್ನಲಾಗಿದೆ.

ಹೊಸ ಸಿ3 ಮಾದರಿಯನ್ನು ಸಿಟ್ರನ್ ಕಂಪನಿಯ ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ಮಾರುಕಟ್ಟೆಗಳನ್ನು ಪರಿಚಯಿಸುತ್ತಿದ್ದು, ಹೊಸ ಕಾರು ಈಗಾಗಲೇ ಲ್ಯಾಟಿನ್ ಅಮೆರಿಕದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಹೊಸ ಕಾರು ಮಾದರಿಯು ಭಾರತದಲ್ಲಿ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ.