ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಭಾರತದಲ್ಲಿ ಸಿಟ್ರನ್‌‌ ಕಂಪನಿಯು ತನ್ನ ಬಹುನೀರಿಕ್ಷಿತ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮುಂದಿನ ತಿಂಗಳು ಜೂನ್ ಕೊನೆಯಲ್ಲಿ ಇಲ್ಲವೇ ಜುಲೈ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಖರೀದಿಗಾಗಿ ಆಸಕ್ತ ಗ್ರಾಹಕರಿಂದ ಸಿಟ್ರನ್ ಡೀಲರ್ಸ್‌ಗಳು ಬುಕಿಂಗ್ ಆರಂಭಿಸಿದ್ದಾರೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಸಿಟ್ರನ್ ಇಂಡಿಯಾ ಕಂಪನಿಯು ಈಗಾಗಲೇ ಅನಾವರಣಗೊಳಿಸಿದ್ದು, ಹೊಸ ಕಾರು ಮಾದರಿಯ ಉತ್ಪಾದನಾ ಆವೃತ್ತಿಯ ಅನಾವರಣದೊಂದಿಗೆ ಬಿಡುಗಡೆ ಸಿದ್ದವಾಗುತ್ತಿದೆ. ಸದ್ಯ ಸಿ5 ಏರ್‌ಕ್ರಾಸ್ ಬಿಡುಗಡೆಗೊಳಿಸಿರುವ ಸಿಟ್ರನ್ ಕಂಪನಿಯು ಹೊಸ ಮಾದರಿಯೊಂದಿಗೆ ಕಾರು ಮಾರಾಟ ಜಾಲವನ್ನು ವಿಸ್ತರಿಸುತ್ತಿದ್ದು, ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಹೊಸ ಕಾರುಗಳ ಉತ್ಪಾದನೆಗಾಗಿ ಸ್ಥಳೀಯವಾಗಿ ಲಭ್ಯವಾಗುವ ಬಿಡಿಭಾಗಗಳಿಗೆ ಆದ್ಯತೆ ನೀಡಿರುವ ಸಿಟ್ರನ್ ಕಂಪನಿಯು ಶೇ.90 ರಷ್ಟು ಸ್ಥಳೀಕರಣಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಸಿ5 ಏರ್‌ಕ್ರಾಸ್ ನಂತರ ಇದೀಗ ಸಿ3 ಮಾದರಿಯನ್ನು ಸಹ ಸ್ಥಳೀಕರಣದೊಂದಿಗೆ ಉತ್ತಮ ಬೆಲೆಯೊಂದಿಗೆ ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಜಾಗತಿಕ ಮಾರುಕಟ್ಟೆಯಲ್ಲಿ ಸಿಟ್ರನ್ ಕಂಪನಿಯು ಐಷಾರಾಮಿ ಕಾರುಗಳ ಜೊತೆ ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲೂ ಮುಂಚೂಣಿ ಹೊಂದಿದ್ದು, ಕಂಪನಿಯು ಭಾರತೀಯ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹೊಸ ಉತ್ಪನ್ನಗಳನ್ನು ಪರಿಚಯಿಸುತ್ತಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಕಂಪನಿಯ ಸಿ5 ಏರ್‌ಕ್ರಾಸ್ ಮಾದರಿಯು ಕೆಲವು ಹೊಸ ವೈಶಿಷ್ಟ್ಯತೆಗಳೊಂದಿಗೆ ದುಬಾರಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದ್ದು, ಮುಂಬರುವ ಕಾರು ಸಿ3 ಕಾರು ಮಾದರಿಯು ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಬಜೆಟ್ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಸಿ3 ಕಂಪ್ಯಾಕ್ಟ್ ಎಸ್‌ಯುವಿಯು ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದ್ದು, ದೊಡ್ಡದಾದ ಗ್ರಿಲ್‌ನೊಂದಿಗೆ ಕ್ರೋಮ್ ಫಿನ್ಸಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್‌ಲ್ಯಾಂಪ್, ಡಿಆರ್‌ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್ ಗಮನಸೆಳೆಯುತ್ತದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಹೊಸ ಕಾರಿನಲ್ಲಿ ಎರಡುಬದಿಯಲ್ಲೂ ಸ್ಕಫ್ ಪ್ಲೇಟ್, ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್, ಸ್ಪ್ಲಿಟ್ ಟೈಲ್ ಲ್ಯಾಂಪ್ ಮತ್ತು 180 ಗ್ರೌಂಡ್ ಕಿಯರೆನ್ಸ್ ಆಕರ್ಷಕವಾಗಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಬಿಡಿಭಾಗಗಗಳಿಂತಲೂ ಹೆಚ್ಚು ಆಕರ್ಷವಾಗಿರುವ ಮತ್ತು ಚಾಲನೆಗೆ ಪೂರಕವಾದ ಆಕ್ಸೆಸರಿಸ್ ಪ್ಯಾಕೇಜ್ ಸಹ ಪರಿಚಯಿಸಲಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸುಮಾರು 78 ಆಕ್ಸೆಸರಿಸ್‌ಗಳನ್ನು ಒಳಗೊಂಡಿರಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಹೊಸ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್‍‌ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್‌ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯವಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರು ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ಹೊಂದಿದ್ದು, ಹೊಸ ಕಾರು ಅತ್ಯುತ್ತಮ ಕ್ಯಾಬಿನ್ ಸ್ಥಳಾವಕಾಶದೊಂದಿಗೆ ಹಿಂಬದಿಯ ಪ್ರಯಾಣಿಕರಿಗೆ 653 ಎಂಎಂ ಲೆಗ್‌ರೂಂನೊಂದಿಗೆ 2 ಲೀಟರ್ ಸಾಮರ್ಥ್ಯದ ಡೋರ್ ಪ್ಯಾಕೇಟ್, ಕಪ್ ಹೋಲ್ಡರ್, ಸ್ಮಾರ್ಟ್‌ಫೋನ್ ಹೋಲ್ಡರ್, ಸೆಂಟರ್ ಕನ್ಸೊಲ್ ಜೊತೆಗೆ ಆರ್ಮ್ ರೆಸ್ಟ್ ಹೊಂದಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಸಿ3 ಕಾರಿನ ಸ್ಪೋರ್ಟಿ ಲುಕ್ ಹೆಚ್ಚಿಸಲು ಡ್ಯುಯಲ್ ಆಕ್ಸೆಂಟ್ ನೀಡುತ್ತಿರುವ ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದ್ದು, ಹೊಸ ಕಾರು ಒಟ್ಟು ನಾಲ್ಕು ಸಿಂಗಲ್ ಮತ್ತು ಡ್ಯುಯಲ್ ಟೋನ್ ಬಣ್ಣದ ಆಯ್ಕೆ ಹೊಂದಿರಲಿವೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಹೊಸ ಕಾರು ಐಸ್ ವೈಟ್, ಪ್ಲ್ಯಾಟಿನಂ ಗ್ರೇ, ಆರ್ಟೆನ್ಸ್ ಗ್ರೇ, ಜೆಸ್ಟಿ ಆರೇಂಜ್ ಸಿಂಗಲ್ ಟೋನ್ ಬಣ್ಣಗಳೊಂದಿಗೆ ಆರ್ಟೆನ್ಸ್ ಗ್ರೇ ಮತ್ತು ಜೆಸ್ಟಿ ಆರೇಂಜ್ ರೂಫ್ ಹೊಂದಿರುವ ಎರಡು ಡ್ಯುಯಲ್ ಟೋನ್ ಮಾದರಿಗಳು ಖರೀದಿಗೆ ಲಭ್ಯವಿರಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಹೊಸ ಕಾರಿನ ಎಂಜಿನ್ ಮಾಹಿತಿಯು ಬಿಡುಗಡೆಯ ವೇಳೆಯಲ್ಲಿ ಲಭ್ಯವಾಗಲಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು ಫ್ಲೆಕ್ಸ್ ಫ್ಯೂಲ್ ತಂತ್ರಜ್ಞಾನ ಹೊಂದಿರುವ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ ಎನ್ನಲಾಗಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಮಾದರಿಗಾಗಿ ಬುಕಿಂಗ್ ಆರಂಭ

ಸಿ3 ಮಾದರಿಯು ಟಾಟಾ ಪಂಚ್ ಮಾದರಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು ಮಾದರಿಯು ಭಾರತದಲ್ಲಿ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ.

Most Read Articles

Kannada
English summary
Citroen c3 compact suv unofficial booking starts ahead of launch
Story first published: Thursday, May 26, 2022, 2:13 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X