ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಎರಡನೇ ಕಾರು ಮಾದರಿಯಾಗಿ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮುಂದಿನ ತಿಂಗಳು 20ರಂದು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಾಗಿ ಸಿಟ್ರನ್ ಕಂಪನಿಯು ಈಗಾಗಲೇ ಅಧಿಕೃತ ಬುಕಿಂಗ್ ಕೂಡಾ ಆರಂಭಿದ್ದು, ಹೊಸ ಕಾರು ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಪ್ರಮುಖ ಎರಡು ಮಾದರಿಗಳಲ್ಲಿ ಬಿಡುಗಡೆಯಾಗಲಿದೆ. ಹೊಸ ಕಾರು ಲೈವ್ ಮತ್ತು ಫೀಲ್ ಎನ್ನುವ ಎರಡು ಮಾದರಿಗಳನ್ನು ಹೊಂದಿರಲಿದ್ದು, ಹೊಸ ಕಾರು ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಹೊಸ ಕಾರುಗಳ ಉತ್ಪಾದನೆಗಾಗಿ ಸ್ಥಳೀಯವಾಗಿ ಲಭ್ಯವಾಗುವ ಬಿಡಿಭಾಗಗಳಿಗೆ ಆದ್ಯತೆ ನೀಡಿರುವ ಸಿಟ್ರನ್ ಕಂಪನಿಯು ಶೇ.90 ರಷ್ಟು ಸ್ಥಳೀಕರಣಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಸಿ5 ಏರ್‌ಕ್ರಾಸ್ ನಂತರ ಇದೀಗ ಸಿ3 ಮಾದರಿಯನ್ನು ಸಹ ಸ್ಥಳೀಕರಣದೊಂದಿಗೆ ಉತ್ತಮ ಬೆಲೆಯೊಂದಿಗೆ ಬಿಡುಗಡೆಗೊಳಿಸಲಿದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಜಾಗತಿಕ ಮಾರುಕಟ್ಟೆಯಲ್ಲಿ ಸಿಟ್ರನ್ ಕಂಪನಿಯು ಐಷಾರಾಮಿ ಕಾರುಗಳ ಜೊತೆ ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲೂ ಮುಂಚೂಣಿ ಹೊಂದಿದ್ದು, ಕಂಪನಿಯು ಭಾರತೀಯ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹೊಸ ಉತ್ಪನ್ನಗಳನ್ನು ಅಮೂಲಾಗ್ರ ಬದಲಾವಣೆಣೆಯೊಂದಿಗೆ ಪರಿಚಯಿಸುತ್ತಿದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಸಿ3 ಕಾರು ಮಾದರಿಯು ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಬಜೆಟ್ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿದ್ದು, ಹೊಸ ಕಾರು 3,981 ಎಂಎಂ ಉದ್ದಳತೆಯೊಂದಿಗೆ 1,733 ಎಂಎಂ ಅಗಲ, 1,586 ಎಂಎಂ ಎತ್ತರ ಮತ್ತು 2,540 ಎಂಎಂ ವ್ಹೀಲ್‌ಬೆಸ್ ಮತ್ತು 180 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿರಲಿದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಹೊಸ ಕಾರಿನ ಉದ್ದಳತೆಯು ಟಾಟಾ ನೆಕ್ಸಾನ್ ಮತ್ತು ಹ್ಯುಂಡೈ ವೆನ್ಯೂ ಮಾದರಿಗಳಿಂತಲೂ 15 ಎಂಎಂ ನಷ್ಟು ಕಡಿಮೆ ಹೊಂದಿದ್ದರೂ ಹೊಸ ಕಾರಿನ ವ್ಹೀಲ್‌ಬೆಸ್ ಪ್ರತಿಸ್ಪರ್ಧಿ ಮಾದರಿಗಳಿಂತಲೂ 42 ಎಂಎಂ ನಷ್ಟು ಹೆಚ್ಚುವರಿ ವ್ಹೀಲ್‌ಬೆಸ್‌ನೊಂದಿಗೆ ಹಿಂಬದಿಯ ಆಸನದಲ್ಲಿರುವ ಪ್ರಯಾಣಿಕರಿಗೆ ಉತ್ತಮ ಸ್ಥಳಾವಕಾಶ ಒದಗಿಸಲಿದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಸಿ3 ಕಂಪ್ಯಾಕ್ಟ್ ಎಸ್‌ಯುವಿಯು ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದ್ದು, ದೊಡ್ಡದಾದ ಗ್ರಿಲ್‌ನೊಂದಿಗೆ ಕ್ರೋಮ್ ಫಿನ್ಸಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್‌ಲ್ಯಾಂಪ್, ಡಿಆರ್‌ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್ ಗಮನಸೆಳೆಯುತ್ತದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರಿನಲ್ಲಿ ಎರಡು ಬದಿಯಲ್ಲೂ ಸ್ಕಫ್ ಪ್ಲೇಟ್, ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್ ಮತ್ತು ಸ್ಪ್ಲಿಟ್ ಟೈಲ್ ಲ್ಯಾಂಪ್‌ಗಳು ಆಕರ್ಷಕವಾಗಿವೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಹೊಸ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್‍‌ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್‌ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯವಿದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರು ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ಹೊಂದಿದ್ದು, ಹೊಸ ಕಾರು ಅತ್ಯುತ್ತಮ ಕ್ಯಾಬಿನ್ ಸ್ಥಳಾವಕಾಶದೊಂದಿಗೆ ಹಿಂಬದಿಯ ಪ್ರಯಾಣಿಕರಿಗೆ 653 ಎಂಎಂ ಲೆಗ್‌ರೂಂನೊಂದಿಗೆ 2 ಲೀಟರ್ ಸಾಮರ್ಥ್ಯದ ಡೋರ್ ಪ್ಯಾಕೇಟ್, ಕಪ್ ಹೋಲ್ಡರ್, ಸ್ಮಾರ್ಟ್‌ಫೋನ್ ಹೋಲ್ಡರ್, ಸೆಂಟರ್ ಕನ್ಸೊಲ್ ಜೊತೆಗೆ ಆರ್ಮ್ ರೆಸ್ಟ್ ಹೊಂದಿದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಸಿ3 ಕಾರಿನ ಸ್ಪೋರ್ಟಿ ಲುಕ್ ಹೆಚ್ಚಿಸಲು ಡ್ಯುಯಲ್ ಆಕ್ಸೆಂಟ್ ನೀಡುತ್ತಿರುವ ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದ್ದು, ಹೊಸ ಕಾರು ಒಟ್ಟು ನಾಲ್ಕು ಸಿಂಗಲ್ ಮತ್ತು ಡ್ಯುಯಲ್ ಟೋನ್ ಬಣ್ಣದ ಆಯ್ಕೆ ಹೊಂದಿರಲಿವೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಹೊಸ ಕಾರು ಐಸ್ ವೈಟ್, ಪ್ಲ್ಯಾಟಿನಂ ಗ್ರೇ, ಆರ್ಟೆನ್ಸ್ ಗ್ರೇ, ಜೆಸ್ಟಿ ಆರೇಂಜ್ ಸಿಂಗಲ್ ಟೋನ್ ಬಣ್ಣಗಳೊಂದಿಗೆ ಆರ್ಟೆನ್ಸ್ ಗ್ರೇ ಮತ್ತು ಜೆಸ್ಟಿ ಆರೇಂಜ್ ರೂಫ್ ಹೊಂದಿರುವ ಎರಡು ಡ್ಯುಯಲ್ ಟೋನ್ ಮಾದರಿಗಳು ಖರೀದಿಗೆ ಲಭ್ಯವಿರಲಿದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಮಾಹಿತಿಗಳ ಪ್ರಕಾರ ಹೊಸ ಕಾರಿನಲ್ಲಿ ಕಂಪನಿಯು 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಪರಿಚಯಿಸುತ್ತಿದ್ದು, 1.2-ಲೀಟರ್ ಪೆಟ್ರೋಲ್ ಮಾದರಿಯನ್ನು ಕಂಪನಿಯು ನ್ಯಾಚುರಲಿ ಆಸ್ಪೆರೆಡ್ ಮತ್ತು ಟರ್ಬೊ ಮಾದರಿಗಳಲ್ಲಿ ಅಭಿವೃದ್ದಿಗೊಳಿಸಿದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಕಂಪನಿಯು ಸದ್ಯಕ್ಕೆ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡುತ್ತಿದ್ದು, 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 81 ಬಿಎಚ್‌ಪಿ, 115 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.2-ಲೀಟರ್ ಟರ್ಬೊ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 108 ಬಿಎಚ್‌ಪಿ, 190 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಜುಲೈ 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲಿಯೇ ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿರುವ ಹೊಸ ಕಾರು ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದ್ದು, ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ 19.8 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಟರ್ಬೊ ಮಾದರಿಯು 19.4 ಕಿ.ಮೀ ಮೈಲೇಜ್ ನೀಡಲಿದೆ.

Most Read Articles

Kannada
English summary
Citroen c3 details revealed launch set for july 20th details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X