Just In
- 1 hr ago
ಭಾರತದಲ್ಲಿ ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಗೆ ಸಿದ್ದವಾದ ಎಲೆಕ್ಟ್ರಾನ್ ಇವಿ
- 14 hrs ago
ಆಕರ್ಷಕ ವಿನ್ಯಾಸದ 2022ರ ಹ್ಯುಂಡೈ ಟ್ಯೂಸಾನ್ ಎಸ್ಯುವಿಯ ವಿಶೇಷತೆಗಳು
- 15 hrs ago
ಪಾಸ್ಫೋರ್ಟ್ ಪ್ರಯೋಜನಗಳೇನು? ಏಕೆ ವಿವಿಧ ಬಣ್ಣಗಳಲ್ಲಿ ಲಭ್ಯವಿರುತ್ತವೆ ನೋಡಿ..
- 15 hrs ago
ಬ್ರೇಕ್ ಫೇಲ್ ಆದಾಗ ಕೇವಲ 8 ಸೆಕೆಂಡುಗಳಲ್ಲಿ ಕಾರು ನಿಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಸಲಹೆ
Don't Miss!
- Education
UGC Scholarship : ಯುಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
- News
ಆಗಸ್ಟ್ 17ರಂದು ಭಾರತದ ನಿಮ್ಮ ನಗರದಲ್ಲಿ ಪೆಟ್ರೋಲ್-ಡೀಸೆಲ್ ದರ ತಿಳಿಯಿರಿ
- Movies
ಮಗಳಿಗೆ ದುಬಾರಿ ಗಿಫ್ಟ್ ಕೊಟ್ಟ ನಟ ದುನಿಯಾ ವಿಜಯ್!
- Lifestyle
ಶನಿದೋಷ ನಿವಾರಣೆ ಹಾಗೂ ಸಂಪತ್ತು ವೃದ್ಧಿಗೆ ಕೃಷ್ಣ ಜನ್ಮಾಷ್ಟಮಿಗೆ ಮಾಡಿ ಈ ವಿಶೇಷ ಪರಿಹಾರ
- Technology
ಧಮಾಕಾ ಕೊಡುಗೆ!..ಭರ್ಜರಿ ಡಿಸ್ಕೌಂಟ್ನಲ್ಲಿ ಹೊಸ ಸ್ಮಾರ್ಟ್ಟಿವಿ ನಿಮ್ಮದಾಗಿಸಿಕೊಳ್ಳಿ!
- Finance
ಆಗಸ್ಟ್ 17: ಭಾರತದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು
- Sports
ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಖರೀದಿಸುತ್ತೇನೆ ಎಂದ ಎಲಾನ್ ಮಸ್ಕ್!
- Travel
ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಆನೆಗಳ ಶಿಬಿರಕ್ಕೆ ಭೇಟಿ ಕೊಡಿ
ಇದೇ ತಿಂಗಳು 20ರಂದು ಬಿಡುಗಡೆಯಾಗಲಿರುವ ಸಿಟ್ರನ್ ಸಿ3 ಕಾರಿನ ಅಧಿಕೃತ ಬುಕಿಂಗ್ ಆರಂಭ
ಸಿಟ್ರನ್ ಕಂಪನಿಯು ತನ್ನ ಬಹುನೀರಿಕ್ಷಿತ ಸಿ3 ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಇದೇ ತಿಂಗಳು 20ರಂದು ಬಿಡುಗಡೆ ಮಾಡಲಿದ್ದು, ಹೊಸ ಕಾರು ಖರೀದಿಗೆ ಕಂಪನಿಯು ಇದೀಗ ಅಧಿಕೃತ ಬುಕಿಂಗ್ ಆರಂಭಿಸಿದೆ.

ಹೊಸ ಸಿಟ್ರನ್ ಸಿ3 ಕಾರು ಮಾದರಿಗಾಗಿ ರೂ.21 ಸಾವಿರ ಮುಂಗಡದೊಂದಿಗೆ ಬುಕಿಂಗ್ ಆರಂಭವಾಗಿದ್ದು, ಕಂಪನಿಯು ಸದ್ಯ ಹೊಸ ಕಾರನ್ನು ದೇಶದ ಪ್ರಮುಖ 10 ನಗರಗಳಲ್ಲಿ ಮಾತ್ರ ಮಾರಾಟ ಮಾಡಲಿದೆ. ಹೊಸ ಕಾರು ಬಿಡುಗಡೆಯ ನಂತರ ಗ್ರಾಹಕರ ಬೇಡಿಕೆ ಆಧರಿಸಿ ಮಾರಾಟವನ್ನು ಇತರೆ ನಗರಗಳಿಗೂ ವಿಸ್ತರಿಸುವ ಯೋಜನೆಯಲ್ಲಿದ್ದು, ಹೀಗಾಗಿ ಹೊಸ ಕಾರು ಸದ್ಯಕ್ಕೆ ಸೀಮಿತ ನಗರಗಳಲ್ಲಿ ಮಾತ್ರ ಖರೀದಿಗೆ ಲಭ್ಯವಾಗಲಿದೆ.

ಸಿ3 ಮಾದರಿಯನ್ನು ಸಿಟ್ರನ್ ಕಂಪನಿಯು ವಿವಿಧ ಹಂತದ ಮಾರುಕಟ್ಟೆ ಅಧ್ಯಯನದೊಂದಿಗೆ ಹೊಸ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಸಬ್ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸಿ5 ಏರ್‌ಕ್ರಾಸ್ ನಂತರ ಸಿ3 ಮಾದರಿಯನ್ನು ಸಹ ಸ್ಥಳೀಕರಣದೊಂದಿಗೆ ಉತ್ತಮ ಬೆಲೆಯೊಂದಿಗೆ ಬಿಡುಗಡೆಗೊಳಿಸುವ ಯೋಜನೆ ಹೊಂದಿರುವ ಸಿಟ್ರನ್ ಕಂಪನಿಯು ಹೊಸ ಕಾರನ್ನು ಶೇ.90 ರಷ್ಟು ಸ್ಥಳೀಕರಣದೊಂದಿಗೆ ನಿರ್ಮಾಣಗೊಳಿಸುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹೊಸ ಉತ್ಪನ್ನವನ್ನು ಪರಿಚಯಿಸುತ್ತಿದೆ.

ಹೊಸ ಸಿ3 ಕಂಪ್ಯಾಕ್ಟ್ ಎಸ್‌ಯುವಿಯು ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದ್ದು, ದೊಡ್ಡದಾದ ಗ್ರಿಲ್‌ನೊಂದಿಗೆ ಕ್ರೋಮ್ ಫಿನ್ಸಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್‌ಲ್ಯಾಂಪ್, ಡಿಆರ್‌ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್‌ನೊಂದಿಗೆ ಗಮನಸೆಳೆಯುತ್ತದೆ.

ಹೊಸ ಕಾರಿನಲ್ಲಿ ಎರಡುಬದಿಯಲ್ಲೂ ಸ್ಕಫ್ ಪ್ಲೇಟ್, ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್, ಸ್ಪ್ಲಿಟ್ ಟೈಲ್ ಲ್ಯಾಂಪ್ ಮತ್ತು 180 ಗ್ರೌಂಡ್ ಕಿಯರೆನ್ಸ್ ಆಕರ್ಷಕವಾಗಿದೆ. ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಬಿಡಿಭಾಗಗಗಳಿಂತಲೂ ಹೆಚ್ಚು ಆಕರ್ಷವಾಗಿರುವ ಮತ್ತು ಚಾಲನೆಗೆ ಪೂರಕವಾದ ಆಕ್ಸೆಸರಿಸ್ ಪ್ಯಾಕೇಜ್ ಸಹ ಪರಿಚಯಿಸಲಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸುಮಾರು 78 ಆಕ್ಸೆಸರಿಸ್‌ಗಳನ್ನು ಒಳಗೊಂಡಿರಲಿದೆ.

ಹೊಸ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10.25-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್‍ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್‌ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯವಿದೆ.

ಸಿ3 ಮಾದರಿಯ ಮತ್ತೊಂದು ವಿಶೇಷವೆಂದರೆ ಕಂಪನಿಯು ಬಜೆಟ್ ಕಾರಿನಲ್ಲೂ ವೈರ್‌ಲೆಸ್ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸೌಲಭ್ಯವನ್ನು ನೀಡುತ್ತಿದ್ದು, ಎಲ್ಇಡಿ ಡಿಆರ್‌ಎಲ್, ವೈರ್‌ಲೆಸ್ ಸ್ಮಾರ್ಟ್‌ಫೋನ್ ಸಂಪರ್ಕ, ಫೋಲ್ಡ್-ಫ್ಲಾಟ್ ಹಿಂದಿನ ಸೀಟ್, ಒನ್-ಟಚ್ ಡೌನ್ ವಿಂಡೋಸ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರು ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ಹೊಂದಿದ್ದು, ಹೊಸ ಕಾರು ಅತ್ಯುತ್ತಮ ಕ್ಯಾಬಿನ್ ಸ್ಥಳಾವಕಾಶದೊಂದಿಗೆ ಹಿಂಬದಿಯ ಪ್ರಯಾಣಿಕರಿಗೆ 653 ಎಂಎಂ ಲೆಗ್‌ರೂಂನೊಂದಿಗೆ 2 ಲೀಟರ್ ಸಾಮರ್ಥ್ಯದ ಡೋರ್ ಪ್ಯಾಕೇಟ್, ಸ್ಮಾರ್ಟ್‌ಫೋನ್ ಹೋಲ್ಡರ್ ಮತ್ತು ಸೆಂಟರ್ ಕನ್ಸೊಲ್ ಹೊಂದಿದೆ.

ಸಿ3 ಕಾರಿನ ಸ್ಪೋರ್ಟಿ ಲುಕ್ ಹೆಚ್ಚಿಸಲು ಡ್ಯುಯಲ್ ಆಕ್ಸೆಂಟ್ ನೀಡುತ್ತಿರುವುದು ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದ್ದು, ಹೊಸ ಕಾರು ಒಟ್ಟು ಆರು ಸಿಂಗಲ್ ಟೋನ್ ಮತ್ತು ನಾಲ್ಕು ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಹೊಂದಿಲಿದೆ.

ಹೊಸ ಸಿ3 ಮಾದರಿಯಲ್ಲಿ ಸಿಟ್ರನ್ ಕಂಪನಿಯು ಎರಡು ಎಂಜಿನ್ ಆಯ್ಕೆಗಳನ್ನು ನೀಡಿದ್ದು, ಮೂಲ ರೂಪಾಂತರವು 1.2-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಮೂರು-ಸಿಲಿಂಡರ್ ಪ್ಯೂರ್‌ಟೆಕ್ 82 ಪೆಟ್ರೋಲ್ ಎಂಜಿನ್‌ನಿಂದ ಚಾಲಿತವಾಗಿದೆ. ಬೆಸ್ ಮಾದರಿಯು 80.8 ಬಿಎಚ್‌ಪಿ ಪವರ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಗರಿಷ್ಠ 115 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಬೆಸ್ ವೆರಿಯೆಂಟ್‌ನಲ್ಲಿ ಕಂಪನಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಮಾತ್ರ ನೀಡಲಾಗಿದೆ.

ಹೊಸ ಕಾರಿನಲ್ಲಿ ಮತ್ತೊಂದು ಶಕ್ತಿಶಾಲಿ ಮಾದರಿಯೆಂದರೆ ಅದು ಟರ್ಬೊ ಚಾರ್ಜ್ ವೈಶಿಷ್ಟ್ಯತೆ 1.2 ಲೀಟರ್ ಎಂಜಿನ್. ಇದನ್ನು ತಾಂತ್ರಿಕವಾಗಿ ಪ್ಯೂರ್‌ಟೆಕ್ 110 ಎಂಜಿನ್ ಎಂದು ಹೆಸರಿಸಲಾಗಿದ್ದು, ಇದು 108.4 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಈ ಎಂಜಿನ್‌ನಲ್ಲಿ ಕಂಪನಿಯು 6-ಸ್ಪೀಡ್ ಗೇರ್‌ಬಾಕ್ಸ್ ಜೋಡಿಸಿದೆ.

ಸಿಟ್ರನ್ ಕಂಪನಿಯು ಸದ್ಯಕ್ಕೆ ಹೊಸ ಕಾರಿನಲ್ಲಿ ಎರಡು ಎಂಜಿನ್ ಆಯ್ಕೆಗಳೊಂದಿಗೆ ಮ್ಯಾನುವಲ್ ಮಾದರಿಯನ್ನು ಮಾತ್ರ ಪರಿಚಯಿಸುತ್ತಿದ್ದು, ಗ್ರಾಹಕರ ಬೇಡಿಕೆ ಆಧರಿಸಿ ಮುಂಬರುವ ದಿನಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿಗಳು ಸಹ ಮಾರುಕಟ್ಟೆ ಪ್ರವೇಶಿಸಬಹುದಾಗಿದೆ.

ಇನ್ನು ಹೊಸ ಕಾರಿನಲ್ಲಿ ಹಲವಾರು ಸುರಕ್ಷತಾ ವೈಶಿಷ್ಟ್ಯತೆಗಳನ್ನು ನೀಡಲಾಗಿದ್ದು, ಚಾಲಕ ಮತ್ತು ಪ್ರಯಾಣಿಕರ ಏರ್‌ಬ್ಯಾಗ್‌ಗಳು, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಹಿಂದಿನ ಬಾಗಿಲುಗಳಲ್ಲಿ ಚೈಲ್ಡ್ ಲಾಕ್, ಎಂಜಿನ್ ಇಮೊಬಿಲೈಜರ್ ಮತ್ತು ಸ್ಪೀಡ್-ಸೆನ್ಸಿಟಿವ್ ಡೋರ್ ಲಾಕ್ ಸೌಲಭ್ಯಗಳಿವೆ.

ಸಿ3 ಮಾದರಿಯೊಂದಿಗೆ ಹೆಚ್ಚಿನ ಬೇಡಿಕೆಯ ನೀರಿಕ್ಷೆಯಲ್ಲಿರುವ ಕಂಪನಿಯು ಹೊಸ ಕಾರನ್ನು ಸ್ಪರ್ಧಾತ್ಮಕ ಬೆಲೆಗಳಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ.