ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಸಿಟ್ರನ್ ಕಂಪನಿಯು ಭಾರತದಲ್ಲಿ ತನ್ನ ಕಾರು ಮಾದರಿಯೊಂದಿಗೆ ದೇಶಿಯ ಆಟೋ ಉದ್ಯಮ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದು, ಶೀಘ್ರದಲ್ಲಿಯೇ ಕಂಪನಿಯು ತನ್ನ ಹೊಸ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೆ ಸಜ್ಜಾಗಿದೆ. ಸಿ3 ನಂತರ ಕಂಪನಿಯು ಪ್ರಸ್ತುತ ಮಾರಾಕಟ್ಟೆಯಲ್ಲಿ ಸಿ5 ಏರ್‌ಕ್ರಾಸ್ ಮಾದರಿಯಲ್ಲಿ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಯೋಜನೆ ಹೊಂದಿದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

2022ರಲ್ಲಿ ಮೊದಲ ಬಾರಿಗೆ ಸಿ5 ಏರ್‌ಕ್ರಾಸ್ ಕಾರು ಮಾದರಿಯನ್ನು ಬಿಡುಗಡೆ ಮಾಡಿದ್ದ ಸಿಟ್ರನ್ ಕಂಪನಿಯು ದುಬಾರಿ ಬೆಲೆ ನಡುವೆಯೂ ಉತ್ತಮ ಬೇಡಿಕೆ ದಾಖಲಿಸಿದ್ದು, ಇದೀಗ ಕಂಪನಿಯು ಫೇಸ್‌ಲಿಫ್ಟ್ ಮಾದರಿಯ ಮೂಲಕ ಹೊಸ ಕಾರಿಯಲ್ಲಿ ಪ್ರಮುಖ ಬದಲಾವಣೆಗಳಿಗೆ ಸಿದ್ದವಾಗುತ್ತಿದೆ. ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯು ಮುಂಬರುವ ಸೆಪ್ಟೆಂಬರ್ ಹೊತ್ತಿಗೆ ಬಿಡುಗಡೆಯ ನೀರಿಕ್ಷೆಗಳಿದ್ದು, ಹೊಸ ಕಾರು ಭಾರೀ ಪ್ರಮಾಣದ ವಿನ್ಯಾಸ ಬದಲಾವಣೆ ಪಡೆದುಕೊಳ್ಳಲಿದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಸಿಟ್ರನ್ ಚೆವ್ರಾನ್ ಲೋಗೋ ವಿನ್ಯಾಸದಲ್ಲೂ ಹೊಸ ಬದಲಾವಣೆ ನೀಡಲಾಗಿದ್ದು, ಮುಂಭಾಗದಲ್ಲಿರುವ ಏರ್ ವೆಂಟ್ಸ್ ಬಂಪರ್‌ನಲ್ಲಿ ದೊಡ್ಡದಾದ ಮತ್ತು ಒಳಹರಿವಿನ ದ್ವಾರಗಳಿಂದ ಆವೃತವಾಗಿದ್ದು, ಇದು ವಾಹನದ ವಾಯುಬಲ ವೈಜ್ಞಾನಿಕ ವೈಶಿಷ್ಟ್ಯತೆಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಇದರ ಹೊರತಾಗಿ ಹೊಸ ಕಾರಿನಲ್ಲಿ ಕಾಂಟ್ರಾಸ್ಟ್ ಇನ್ಸರ್ಟ್ ಜೊತೆಗೆ ಸೈಡ್ ಕ್ಲಾಡಿಂಗ್‌ ವಿನ್ಯಾಸವನ್ನು ಈ ಹಿಂದಿನಂತೆಯೇ ಉಳಿಸಿಕೊಳ್ಳಲಾಗಿದ್ದು, ಆದಾಗ್ಯೂ ಹೊಸ ಮಾದರಿಯಲ್ಲಿ ಎಲ್ಲಾ ರೂಪಾಂತರಗಳಿಗೆ ಈ ಬಾರಿ ಹೊಸ ವಿನ್ಯಾಸದ ಮಿಶ್ರಲೋಹದ ಚಕ್ರವನ್ನು ಬಳಸಲಾಗಿದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಹೊಸ ಕಾರಿನ ಒಳಾಂಗಣದ ಬಗ್ಗೆ ಮಾತನಾಡುವುದಾದರೆ ನೀವು ಇಲ್ಲೂ ಕೂಡಾ ಪ್ರಮುಖ ಬದಲಾವಣೆಗಳನ್ನು ಪಡೆದುಕೊಳ್ಳಲಿದ್ದು, ಗಮನಾರ್ಹವಾದ ಬದಲಾವಣೆ ಎಂದರೆ 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಎನ್ನಬಹುದು. ಇದರಲ್ಲಿ ಎರಡು ತುಂಡು ಘನ ಏರ್-ಕಾನ್ ವೆಂಟ್‌ಗಳನ್ನು ಪರದೆಯ ಕೆಳಭಾಗದಲ್ಲಿ ಇರಿಸಲಾಗಿದ್ದು, ಗೇರ್ ಲಿವರ್ ಅನ್ನು ಸ್ವಯಂಚಾಲಿತ ಗೇರ್‌ಬಾಕ್ಸ್‌ಗಾಗಿ ಟಾಗಲ್ ಸ್ವಿಚ್ ಘಟಕದೊಂದಿಗೆ ಬದಲಾಯಿಸಲಾಗಿದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಇದು ಪರಿಷ್ಕೃತ ಫಾಂಗ್ ಲ್ಯಾಂಪ್ ಮತ್ತು ಮುಂಭಾಗದ ಲಿಪ್ ನಲ್ಲಿ ಹೊಸ ಮೆಟಲಿಕ್ ಸ್ಟ್ರೀಪ್ ಪ್ರಯೋಜನವನ್ನುಸಹ ಪಡೆಯುತ್ತದೆ. ಇತರೆ ಗಮನಾರ್ಹವಾದ ಬಾಹ್ಯ ನವೀಕರಣಗಳಲ್ಲಿ ಗ್ಲೋಸ್ ಬ್ಲ್ಯಾಕ್ ಮೀರರ್ಸ್ ಮತ್ತು ಹೊಸ 18-ಇಂಚಿನ ಅಲಾಯ್ ವ್ಹೀಲ್ ಗಳು ಸೇರಿವೆ. ಈ ಎಸ್‍ಯುವಿಯ ಹಿಂಭಾಗವು ಯಾವುದೇ ಪ್ರಮುಖ ಬದಲಾವಣೆಗಳನ್ನು ಹೊಂದಿಲ್ಲ ಆದರೆ ಬ್ಲ್ಯಾಕ್ ಬಣ್ಣದ ಗ್ಲಾಸ್ ಹಿಂದೆ ಹೊಸ ಟೈಲ್‌ಲೈಟ್ ಕ್ಲಸ್ಟರ್‌ಗಳು ಮತ್ತು ತಾಜಾ ಎಲ್ಇಡಿ ಗ್ರಾಫಿಕ್ಸ್ ಅನ್ನು ಪಡೆಯುತ್ತದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಈ ಮೂಲಕ ಹೊಸ ಕಾರಿನ ಹೊರ ಮತ್ತ ಒಳ ವಿನ್ಯಾಸವನ್ನು ಗ್ರಾಹಕರ ಬೇಡಿಕೆಗೆ ತಕ್ಕಂತೆ ಅಭಿವೃದ್ದಿಗೊಳಿಸುತ್ತಿದ್ದು, ಹೊಸ ಮಾದರಿಯು 2022ರ ಸೆಪ್ಟೆಂಬರ್ ಹೊತ್ತಿಗೆ ಬಿಡುಗಡೆಯಾಗಬಹುದೆಂದು ನೀರಿಕ್ಷಿಸಲಾಗಿದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ದರ ಪರಿಷ್ಕರಣೆ ನಂತರ ಹೊಸ ಸಿ5 ಏರ್‌ಕ್ರಾಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 32.23 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 33.78 ಲಕ್ಷ ಬೆಲೆ ಹೊಂದಿದ್ದು, ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಮಧ್ಯಮ ಗಾತ್ರದ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್ ಹೊಂದಿರುವ ಹೊಸ ಕಾರಿನಲ್ಲಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ತುಸು ದುಬಾರಿ ಬೆಲೆ ಎನ್ನಿಸಿದರೂ ಹಲವು ಮಾದರಿಯ ಫೀಚರ್ಸ್‌ಗಳು ಈ ಕಾರಿನಲ್ಲಿವೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಸಿ5 ಏರ್‌ಕ್ರಾಸ್ ಕಾರಿನಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯವಿದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ. ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸೌಲಭ್ಯವಿದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದೆ.

ಭಾರತದಲ್ಲಿ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾದ ಸಿಟ್ರನ್

ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡಿದ್ದು, 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 177-ಬಿಎಚ್‌ಪಿ ಮತ್ತು 400ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಹ್ಯುಂಡೈ ಟ್ಯುಸಾನ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

More from DriveSpark

Article Published On: Monday, June 20, 2022, 16:09 [IST]
English summary
Citroen c5 aircross suv facelift could launch in soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+