ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಸಿಟ್ರನ್ ಕಂಪನಿಯು ಭಾರತದಲ್ಲಿ ತನ್ನ ಹೊಸ ಸಿ3 ಮೈಕ್ರೊ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆಯಾದರೂ ಹೊಸ ಕಾರಿನಲ್ಲಿ ಆಟೋಮ್ಯಾಟಿಕ್ ಆವೃತ್ತಿಯನ್ನು ನೀಡದಿರುವುದಿರುವುದಕ್ಕೆ ಹಲವಾರು ಸಂಭಾವ್ಯ ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಹೊಸ ಕಾರಿನಲ್ಲಿ ಸದ್ಯ ಮ್ಯಾನುವಲ್ ಮಾದರಿಯನ್ನು ಮಾತ್ರ ಮಾರಾಟ ಮಾಡುತ್ತಿರುವ ಸಿಟ್ರನ್ ನಿರ್ಧಾರಕ್ಕೆ ಹಲವಾರು ಸಂಭಾವ್ಯ ಗ್ರಾಹಕರು ಕಂಪನಿಗೆ ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆಗಾಗಿ ಮನವಿ ಮಾಡಿದ್ದು, ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಕುರಿತಂತೆ ಕಂಪನಿಯು ಸಹ ಪ್ರತಿಕ್ರಿಯೆಸಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಸಿ3 ಮಾದರಿಗಾಗಿ 2023ರ ಆರಂಭದಲ್ಲಿ ಹೊಸ ಆಟೋಮ್ಯಾಟಿಕ್ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರಿನಲ್ಲಿ 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲು ಮುಂದಾಗಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಹೊಸ ಗೇರ್‌ಬಾಕ್ಸ್ ಸೌಲಭ್ಯವನ್ನು ಸಿಟ್ರನ್ ಕಂನಿಯು ಜಪಾನಿನ ಗೇರ್‌ಬಾಕ್ಸ್ ತಯಾರಕ ಕಂಪನಿಯಾದ ಐಸಿನ್‌ನಿಂದ ಎರವಲು ಪಡೆಯಲಾಗುತ್ತಿದ್ದು, ಸ್ಕೋಡಾ ಮತ್ತು ಫೋಕ್ಸ್‌ವ್ಯಾಗನ್‌ನ ಪ್ರಮುಖ ಕಾರುಗಳಿಗೆ ಐಸಿನ್‌ನಿಂದ ನಿರ್ಮಾಣದ ಮಾಡಲಾದ ಟಾರ್ಕ್ ಕನ್ವರ್ಟರ್ ಗೇರ್‌‍‍‌ಬಾಕ್ಸ್ ಅನ್ನೇ ಎರವಲು ಪಡೆಯಲಾಗಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಜೊತೆಗೆ ಯುರೋಪಿನಲ್ಲಿರುವ ಸಿಟ್ರನ್ ಕಾರು ಮಾದರಿಗಳಿಗೂ ಐಸಿನ್‌ನಿಂದಲೇ ಎರವಲು ಪಡೆಯಲಾದ 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಬಳಕೆ ಮಾಡಲಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಸಿ3 ಮಾದರಿಯು ಕೂಡಾ ಮುಂಬರುವ ದಿನಗಳಲ್ಲಿ ಹೊಸ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಸಿಟ್ರನ್ ಕಂಪನಿಯು ಸದ್ಯ ಹೊಸ ಸಿ3 ಮಾದರಿಯಲ್ಲಿ ಎರಡು ಮಾದರಿಯ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ನೀಡಿದ್ದು, ಆರಂಭಿಕ ಮಾದರಿಯು 1.2-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ತ್ರಿ-ಸಿಲಿಂಡರ್ ಪ್ಯೂರ್‌ಟೆಕ್ ಪೆಟ್ರೋಲ್ ಎಂಜಿನ್‌ ಮತ್ತು ಹೈ ಎಂಡ್ ಮಾದರಿಯಲ್ಲಿ ಟರ್ಬೊ ಚಾರ್ಜ್ ವೈಶಿಷ್ಟ್ಯತೆಯ 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಆರಂಭಿಕ ವೆರಿಯೆಂಟ್‌ನಲ್ಲಿ ಕಂಪನಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆ ನೀಡಿದ್ದರೆ ಹೈ ಎಂಡ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಜೋಡಿಸಿದ್ದು, ಲೈವ್ ಮತ್ತು ಫೀಲ್ ಎನ್ನುವ ಎರಡು ವೆರಿಯೆಂಟ್‌ಗಳನ್ನು ಹೊಂದಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆ ಹೊಂದಿರುವ ಆರಂಭಿಕ ಮಾದರಿಯು 82 ಬಿಎಚ್‌ಪಿ ಮತ್ತು 115 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದರೆ 6-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆ ಹೊಂದಿರುವ ಟರ್ಬೊ ಪೆಟ್ರೋಲ್ ಆವೃತ್ತಿಯು 110 ಬಿಎಚ್‌ಪಿ, 190 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಲೈವ್ ವೆರಿಯೆಂಟ್‌ನಲ್ಲಿ 1.2-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಎಂಜಿನ್ ಮಾತ್ರ ಆಯ್ಕೆ ಲಭ್ಯವಿದ್ದರೆ ಫೀಲ್ ವೆರಿಯೆಂಟ್‌ನಲ್ಲಿ ನ್ಯಾಚುರಲಿ ಆಸ್ಪರೆಟೆಡ್ ಮತ್ತು ಟರ್ಬೊ ಪೆಟ್ರೋಲ್ ಆಯ್ಕೆ ಲಭ್ಯವಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 5.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.06 ಲಕ್ಷ ಬೆಲೆ ಹೊಂದಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಹಾಗೆಯೇ ಹೊಸ ಮೈಕ್ರೊ ಎಸ್‌ಯುವಿಯು ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದ್ದು, ದೊಡ್ಡದಾದ ಗ್ರಿಲ್‌ನೊಂದಿಗೆ ಕ್ರೋಮ್ ಫಿನ್ಸಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್‌ಲ್ಯಾಂಪ್, ಡಿಆರ್‌ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್‌ನೊಂದಿಗೆ ಗಮನಸೆಳೆಯುತ್ತದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಎರಡು ಬದಿಯಲ್ಲೂ ಸ್ಕಫ್ ಪ್ಲೇಟ್, ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್, ಸ್ಪ್ಲಿಟ್ ಟೈಲ್ ಲ್ಯಾಂಪ್ ಮತ್ತು 180 ಗ್ರೌಂಡ್ ಕಿಯರೆನ್ಸ್ ಆಕರ್ಷಕವಾಗಿದೆ. ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಬಿಡಿಭಾಗಗಗಳಿಂತಲೂ ಹೆಚ್ಚು ಆಕರ್ಷವಾಗಿರುವ ಮತ್ತು ಚಾಲನೆಗೆ ಪೂರಕವಾದ ಆಕ್ಸೆಸರಿಸ್ ಪ್ಯಾಕೇಜ್ ಸಹ ಪರಿಚಯಿಸಲಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸುಮಾರು 78 ಆಕ್ಸೆಸರಿಸ್‌ಗಳನ್ನು ಒಳಗೊಂಡಿರಲಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಹೊಸ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10.25-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್‍‌ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್‌ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯವಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಸಿ3 ಮಾದರಿಯ ಮತ್ತೊಂದು ವಿಶೇಷವೆಂದರೆ ಕಂಪನಿಯು ಬಜೆಟ್ ಕಾರಿನಲ್ಲೂ ವೈರ್‌ಲೆಸ್ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸೌಲಭ್ಯವನ್ನು ನೀಡುತ್ತಿದ್ದು, ಎಲ್ಇಡಿ ಡಿಆರ್‌ಎಲ್‌, ವೈರ್‌ಲೆಸ್ ಸ್ಮಾರ್ಟ್‌ಫೋನ್ ಸಂಪರ್ಕ, ಫೋಲ್ಡ್-ಫ್ಲಾಟ್ ಹಿಂದಿನ ಸೀಟ್, ಒನ್-ಟಚ್ ಡೌನ್ ವಿಂಡೋಸ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಇದಲ್ಲದೆ ಹೊಸ ಕಾರಿನಲ್ಲಿ ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಹೊಸ ಕಾರು ಅತ್ಯುತ್ತಮ ಕ್ಯಾಬಿನ್ ಸ್ಥಳಾವಕಾಶದೊಂದಿಗೆ ಹಿಂಬದಿಯ ಪ್ರಯಾಣಿಕರಿಗೆ 653 ಎಂಎಂ ಲೆಗ್‌ರೂಂನೊಂದಿಗೆ 2 ಲೀಟರ್ ಸಾಮರ್ಥ್ಯದ ಡೋರ್ ಪ್ಯಾಕೇಟ್, ಸ್ಮಾರ್ಟ್‌ಫೋನ್ ಹೋಲ್ಡರ್ ಮತ್ತು ಸೆಂಟರ್ ಕನ್ಸೊಲ್ ಹೊಂದಿದೆ.

ಸಿ3 ಮೈಕ್ರೊ ಎಸ್‌ಯುವಿಯಲ್ಲಿ ಪವರ್‌ಫುಲ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ ಸಿಟ್ರನ್

ಇನ್ನು ಹೊಸ ಕಾರಿನಲ್ಲಿ ಹಲವಾರು ಹೊಸ ಸುರಕ್ಷತಾ ವೈಶಿಷ್ಟ್ಯತೆಗಳನ್ನು ನೀಡಲಾಗಿದ್ದು, ಚಾಲಕ ಮತ್ತು ಪ್ರಯಾಣಿಕರ ಏರ್‌ಬ್ಯಾಗ್‌ಗಳು, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಹಿಂದಿನ ಬಾಗಿಲುಗಳಲ್ಲಿ ಚೈಲ್ಡ್ ಲಾಕ್, ಎಂಜಿನ್ ಇಮೊಬಿಲೈಜರ್ ಮತ್ತು ಸ್ಪೀಡ್-ಸೆನ್ಸಿಟಿವ್ ಡೋರ್ ಲಾಕ್ ಸೌಲಭ್ಯಗಳಿವೆ.

Article Published On: Friday, August 5, 2022, 18:53 [IST]
English summary
Citroen india could launch c3 automatic soon details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+