ಸಿ5 ಏರ್‌ಕ್ರಾಸ್ ಎಸ್‌ಯುವಿ ಬೆಲೆಯಲ್ಲಿ ರೂ.98 ಸಾವಿರ ತನಕ ಬೆಲೆ ಹೆಚ್ಚಿಸಿದ ಸಿಟ್ರನ್
ಸಿಟ್ರನ್ ಇಂಡಿಯಾ(Citroen India) ಕಂಪನಿಯು ತನ್ನ ಹೊಸ ಸಿ5 ಏರ್‌ಕ್ರಾಸ್ ಮಾದರಿಯೊಂದಿಗೆ ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಹೆಚ್ಚುತ್ತಿರುವ ಬಿಡಿಭಾಗಗಳ ವೆಚ್ಚ ನಿರ್ವಹಣೆಗಾಗಿ ಹೊಸ ಕಾರಿನ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಸಿಟ್ರನ್ ಇಂಡಿಯಾ ಸೇರಿದಂತೆ ಪ್ರಮುಖ ಕಾರು ಕಂಪನಿಗಳು ಬೆಲೆ ಹೆಚ್ಚಿಸಿವೆ.

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ.0.50 ರಿಂದ ಶೇ. 1.50 ರಷ್ಟು ಹೆಚ್ಚಳ ಮಾಡಲಾಗಿದೆ. ದರ ಏರಿಕೆಯು ಹೊಸ ವರ್ಷ ಮತ್ತು ಸಂಕ್ರಾಂತಿ ಹಬ್ಬದ ವಿಶೇಷವಾಗಿ ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ಹೊಸ ದರ ಪಟ್ಟಿಯಲ್ಲಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಮಾದರಿಯು ಎಕ್ಸ್‌ಶೋರೂಂ ಬೆಲೆಯಲ್ಲಿ ಸುಮಾರು ರೂ. 98 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದ್ದು, ಬೆಲೆ ಹೆಚ್ಚಳದ ನಂತರ ಆರಂಭಿಕ ಬೆಲೆಯು ಇದೀಗ ಎಕ್ಸ್‌ಶೋರೂಂ ಪ್ರಕಾರ ರೂ. 32.23 ಲಕ್ಷಕ್ಕೆ ಏರಿಕೆಯಾಗಿದೆ.

ನಮ್ಮ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ 10 ನಗರಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರುವ ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಮಾದರಿಯಾಗಿ ಮಾರಾಟಗೊಳ್ಳುತ್ತಿದ್ದು, ದರ ಪರಿಷ್ಕರಣೆ ನಂತರ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 32.23 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 33.78 ಲಕ್ಷ ಬೆಲೆ ಹೊಂದಿದೆ.

ಸಿ5 ಏರ್‌ಕ್ರಾಸ್ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದ್ದು, ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಮಧ್ಯಮ ಗಾತ್ರದ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್ ಹೊಂದಿರುವ ಹೊಸ ಕಾರಿನಲ್ಲಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ತುಸು ದುಬಾರಿ ಬೆಲೆ ಎನ್ನಿಸಿದರೂ ಹಲವು ಮಾದರಿಯ ಫೀಚರ್ಸ್‌ಗಳು ಈ ಕಾರಿನಲ್ಲಿವೆ.

ಸಿ5 ಏರ್‌ಕ್ರಾಸ್ ಕಾರಿನಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯವಿದೆ.

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ. ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸೌಲಭ್ಯವಿದೆ.

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದೆ.

ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡಿದ್ದು, 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 177-ಬಿಎಚ್‌ಪಿ ಮತ್ತು 400ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಹ್ಯುಂಡೈ ಟ್ಯುಸಾನ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಸಿಟ್ರನ್ ಇಂಡಿಯಾ ಕಂಪನಿಯು ಹೊಸದಾಗಿ ಕಾರು ಮಾರಾಟ ಆರಂಭದೊಂದಿಗೆ ಸದ್ಯಕ್ಕೆ ದೇಶದ ಪ್ರಮುಖ ಹತ್ತು ನಗರಗಳಲ್ಲಿ ಮಾತ್ರವೇ ಮಾರಾಟ ಪ್ರಕ್ರಿಯೆ ಚಾಲನೆ ನೀಡಿದ್ದು, ಮುಂದಿನ ಒಂದು ವರ್ಷದ ಅವಧಿಯಲ್ಲಿ ಮತ್ತಷ್ಟು ಹೊಸ ಕಾರು ಮಾರಾಟ ಮಳಿಗೆಗಳನ್ನು ದೇಶದ ಪ್ರಮುಖ ನಗರಗಳಿಗೆ ವಿಸ್ತರಿಸುವ ಸಿದ್ದತೆಯಲ್ಲಿದೆ.


Click it and Unblock the Notifications








