ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆಯು ಹೆಚ್ಚಾಗುತ್ತಿದೆ. ಅಲ್ಲದೇ ದೇಶದಲ್ಲಿ ಇಂಧನ ಬೆಲೆಯು ಕೂಡ ದಾಖಲೆಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದರಿಂದ ಹೆಚ್ಚಿನ ಜನರು ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ.

ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಇದರಿಂದ ಬಹುತೇಕ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ಪ್ರಾರಂಭಿಸಿದೆ. ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ಜನಪ್ರಿಯ ವಾಹನ ತಯಾರಕ ಕಂಪನಿಯು ಸಂಪೂರ್ಣ ಎಲೆಕ್ಟ್ರಿಕ್ ವಾಹನಗಳ ಕಡೆ ಗಮನಹರಿಸುತ್ತಿದೆ. ಇದರ ನಡುವೆ ಫ್ರೆಂಚ್ ವಾಹನ ತಯಾರಕ ಸಿಟ್ರನ್ ಭಾರತದಲ್ಲಿ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ಯೋಜಿಸುತ್ತಿದೆ. ಕಂಪನಿಯ ಮೊದಲ ಎಲೆಕ್ಟ್ರಿಕ್ ಕಾರು ಹೆಚ್ಚು ಸ್ಥಳೀಯವಾಗಿರುವ CMP ಪ್ಲಾಟ್‌ಫಾರ್ಮ್ (90% ಕ್ಕಿಂತ ಹೆಚ್ಚು ಸ್ಥಳೀಯವಾಗಿ ಮೂಲದ ಯುನಿಟ್ ಗಳೊಂದಿಗೆ) ಆಧಾರದ ಮೇಲೆ ಸಬ್-4 ಮೀಟರ್ ಉದ್ದವಿರುತ್ತದೆ.

ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಶೀಘ್ರದಲ್ಲೇ ಬಿಡುಗಡೆಗೊಳ್ಳಲಿರುವ ಸಿಟ್ರನ್ ಸಿ3 ಹ್ಯಾಚ್‌ಬ್ಯಾಕ್‌ಗೆ ಆಧಾರವಾಗಿರುವ ಅದೇ ಪ್ಲಾಟ್‌ಫಾರ್ಮ್ ಆಗಿದೆ. ಇಲ್ಲಿ, ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರನ್ನು ಟಾಟಾ ಪಂಚ್ ಇವಿ ವಿರುದ್ಧ ಇರಿಸಲಾಗುವುದು, ಅದು ಅಭಿವೃದ್ಧಿ ಹಂತದಲ್ಲಿದೆ ಎಂದು ವರದಿಯಾಗಿದೆ.

ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಈ ಹೊಸ ಎಲೆಕ್ಟ್ರಿಕ್ ಪೀಪಲ್ ಮೂವರ್ಸ್ (MPVs) ಮತ್ತು ಹೆಚ್ಚಿನವುಗಳೊಂದಿಗೆ ಸಿಟ್ರನ್ ತನ್ನ ಭಾರತೀಯ ಇವಿ ಉತ್ಪನ್ನ ಪೋರ್ಟ್ಫೋಲಿಯೊವನ್ನು ಮತ್ತಷ್ಟು ವಿಸ್ತರಿಸುತ್ತದೆ. ಸ್ಟೆಲ್ಲಂಟಿಸ್ ಗ್ರೂಪ್‌ನ ಸಿಇಒ ಕಾರ್ಲೋಸ್ ತವರೆಸ್ ಅವರಿಂದ ಮಾಹಿತಿ ಬಹಿರಂಗಪಡಿಸಿದ್ದಾರೆ.

ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು ಕೈಗೆಟುಕುವ ಬೆಲೆಯಲ್ಲಿದೆ ಮತ್ತು ಬ್ರ್ಯಾಂಡ್‌ನ ಸ್ಮಾರ್ಟ್-ಕಾರ್ ಪ್ರೋಗ್ರಾಂ- ಸಿ-ಕ್ಯೂಬ್ಡ್ ಪ್ರೋಗ್ರಾಂ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಬಹಿರಂಗಪಡಿಸಿದರು. ಸಿ3 ಈ ಯೋಜನೆಯ ಅಡಿಯಲ್ಲಿ ಬರುವ ಮೊದಲ ಉತ್ಪಾದನಾ ಮಾದರಿಯಾಗಿದೆ.

ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಸಿ-ಕ್ಯೂಬ್ಡ್ ಪ್ರೋಗ್ರಾಂ "ಗ್ರಾಹಕರ ನಿರೀಕ್ಷೆಗಳನ್ನು ಪೂರೈಸಲು ಅಂತರಾಷ್ಟ್ರೀಯ, ಹೆಚ್ಚು ಸ್ಥಳೀಯ ಕಾರುಗಳನ್ನು ಅಭಿವೃದ್ಧಿಪಡಿಸುವುದನ್ನು" ಹೈಲೈಟ್ ಮಾಡುತ್ತದೆ ಎಂದು ಕಾರು ತಯಾರಕರು ಹೇಳುತ್ತಾರೆ. ತನ್ನ ಭವಿಷ್ಯದ ಉತ್ಪನ್ನಗಳ ಬೆಲೆಯನ್ನು ಸ್ಪರ್ಧಾತ್ಮಕವಾಗಿಸಲು ಮತ್ತು ಸ್ಥಳೀಕರಣದ ಮಟ್ಟವನ್ನು ಹೆಚ್ಚಿಸಲು, ಸಿಟ್ರನ್ ಪವರ್‌ಟ್ರೇನ್‌ಗಳ ಉತ್ಪಾದನೆ, ಜೋಡಣೆ ಮತ್ತು ವಿತರಣೆಗಾಗಿ CK ಬಿರ್ಲಾ ಗ್ರೂಪ್‌ನೊಂದಿಗೆ ಪಾಲುದಾರಿಕೆಯನ್ನು ಹೊಂದಿದೆ.

ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಇದು ಇಂಜಿನಿಯರಿಂಗ್‌ಗಾಗಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ನೊಂದಿಗೆ ಕೈಜೋಡಿಸಿತು. ಕಂಪನಿಯು ತನ್ನ ಮುಂಬರುವ ಇವಿಗಾಗಿ ಬ್ಯಾಟರಿಗಳು ಮತ್ತು ಘಟಕಗಳನ್ನು ಆರಂಭದಲ್ಲಿ ಆಮದು ಮಾಡಿಕೊಳ್ಳುತ್ತದೆ. ಈಗಿನಂತೆ, ಸ್ಥಳೀಯವಾಗಿ ಅವುಗಳನ್ನು ಮೂಲವಾಗಿ ಪಡೆಯುವ ಆಯ್ಕೆಯನ್ನು ಹೊಂದಿಲ್ಲ.

ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲು ಸಜ್ಜಾದ, ಸಿಟ್ರನ್ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಅಧಿಕೃತ ಚಾಲನೆ ನೀಡುವ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ವೇಳೆ ಸಾರ್ವಜನಿಕವಾಗಿ ಗಮನಸೆಳೆಯಿತು. ಹೊಸ ಕಾರುಗಳ ಉತ್ಪಾದನೆಗಾಗಿ ಸ್ಥಳೀಯವಾಗಿ ಲಭ್ಯವಾಗುವ ಬಿಡಿಭಾಗಗಳಿಗೆ ಆದ್ಯತೆ ನೀಡಿರುವ ಸಿಟ್ರನ್ ಕಂಪನಿಯು ಶೇ.90 ರಷ್ಟು ಸ್ಥಳೀಕರಣಗೊಳಿಸುವಲ್ಲಿ ಯಶಸ್ವಿಯಾಗಿದೆ.

ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಸಿ5 ಏರ್‌ಕ್ರಾಸ್ ನಂತರ ಇದೀಗ ಸಿ3 ಮಾದರಿಯನ್ನು ಸಹ ಸ್ಥಳೀಕರಣದೊಂದಿಗೆ ಉತ್ತಮ ಬೆಲೆಯೊಂದಿಗೆ ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸಿಟ್ರನ್ ಕಂಪನಿಯು ಐಷಾರಾಮಿ ಕಾರುಗಳ ಜೊತೆ ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲೂ ಮುಂಚೂಣಿ ಹೊಂದಿದೆ. ಕಂಪನಿಯು ಭಾರತೀಯ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹೊಸ ಉತ್ಪನ್ನಗಳನ್ನು ಪರಿಚಯಿಸುತ್ತಿದೆ.

ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಕಂಪನಿಯ ಸಿ5 ಏರ್‌ಕ್ರಾಸ್ ಮಾದರಿಯು ಕೆಲವು ಹೊಸ ವೈಶಿಷ್ಟ್ಯತೆಗಳೊಂದಿಗೆ ದುಬಾರಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದ್ದು, ಮುಂಬರುವ ಕಾರು ಸಿ3 ಕಾರು ಮಾದರಿಯು ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಬಜೆಟ್ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿದೆ. ಸಿ3 ಕಂಪ್ಯಾಕ್ಟ್ ಎಸ್‌ಯುವಿಯು ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದ್ದು, ದೊಡ್ಡದಾದ ಗ್ರಿಲ್‌ನೊಂದಿಗೆ ಕ್ರೋಮ್ ಫಿನ್ಸಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್‌ಲ್ಯಾಂಪ್, ಡಿಆರ್‌ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್ ಗಮನಸೆಳೆಯುತ್ತದೆ.

ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಹೊಸ ಕಾರಿನಲ್ಲಿ ಎರಡುಬದಿಯಲ್ಲೂ ಸ್ಕಫ್ ಪ್ಲೇಟ್, ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್, ಸ್ಪ್ಲಿಟ್ ಟೈಲ್ ಲ್ಯಾಂಪ್ ಮತ್ತು 180 ಗ್ರೌಂಡ್ ಕಿಯರೆನ್ಸ್ ಆಕರ್ಷಕವಾಗಿದೆ. ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಬಿಡಿಭಾಗಗಗಳಿಂತಲೂ ಹೆಚ್ಚು ಆಕರ್ಷವಾಗಿರುವ ಮತ್ತು ಚಾಲನೆಗೆ ಪೂರಕವಾದ ಆಕ್ಸೆಸರಿಸ್ ಪ್ಯಾಕೇಜ್ ಸಹ ಪರಿಚಯಿಸಲಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸುಮಾರು 78 ಆಕ್ಸೆಸರಿಸ್‌ಗಳನ್ನು ಒಳಗೊಂಡಿರಲಿದೆ.

ಟಾಟಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಬರಲಿದೆ ಹೊಸ ಸಿಟ್ರನ್ ಎಲೆಕ್ಟ್ರಿಕ್ ಕಾರು

ಈ ಹೊಸ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್‍‌ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್‌ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಅನ್ನು ಹೊಂದಿದೆ.

Most Read Articles

Kannada
English summary
Citroen planning to launch electric car in india will arrive in next year details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X