ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಹೆಚ್ಚುತ್ತಿರುವ ಇಂಧನಗಳ ಬೆಲೆ ಪರಿಣಾಮ ವಾಹನ ನಿರ್ವಹಣಾ ವೆಚ್ಚದಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಇಂಧನಗಳ ಬೆಲೆ ಹೊಡೆತಕ್ಕೆ ಸಿಲುಕಿರುವ ವಾಹನ ಮಾಲೀಕರು ನಿಧಾನವಾಗಿ ಇದೀಗ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡುತ್ತಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ವಾಹನಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಹೊಸ ಸಬ್ಸಡಿ ಯೋಜನೆಗಳ ಪರಿಣಾಮ ಇವಿ ವಾಹನ ಬಳಕೆಯಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿದ್ದು, ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲೂ ವಿವಿಧ ರಾಜ್ಯ ಸರ್ಕಾರಗಳು ಸಹ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ದೆಹಲಿ ಸರ್ಕಾರವು ಕಳೆದ 1 ವರ್ಷದ ಅವಧಿಯಲ್ಲಿ ಸಾವಿರಾರು ವಾಹನಗಳಿಗೆ ಫೇಮ್ 2 ಜೊತೆಗೆ ರಾಜ್ಯದ ಮಟ್ಟದಲ್ಲೂ ಹೆಚ್ಚಿನ ಸಬ್ಸಡಿ ನೀಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ದೆಹಲಿಯಲ್ಲಿ ಹೊಸ ಸಬ್ಸಡಿ ಯೋಜನೆ ಪರಿಣಾಮ ಕಳೆದ ಕೆಲ ತಿಂಗಳಿನಿಂದ ನೀರಿಕ್ಷೆಗೂ ಮೀರಿ ಬೇಡಿಕೆ ದಾಖಲಾಗಿದ್ದು, ಇವಿ ವಾಹನಗಳ ನೋಂದಣಿ ಹೆಚ್ಚುತ್ತಿದ್ದಂತೆ ದೆಹಲಿ ಸರ್ಕಾರವು ತನ್ನ ಸಬ್ಸಡಿ ಯೋಜನೆಯಲ್ಲಿ ಕೆಲವು ಬದಲಾವಣೆಗೆ ತಂದಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ದೆಹಲಿ ಸರ್ಕಾರವು ತನ್ನ ಸಬ್ಸಡಿ ಯೋಜನೆಯಲ್ಲಿ ಕಾರುಗಳಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಯೋಜನೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದ್ದರೂ ದ್ವಿಚಕ್ರ ವಾಹನಗಳು, ಆಟೋ ರಿಕ್ಷಾ ಮತ್ತು ಲಘು ವಾಣಿಜ್ಯ ವಾಹನಗಳ ಸಬ್ಸಡಿ ಮುಂದುವರಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಜೊತೆಗೆ ಇದೀಗ ಹೊಸ ಪ್ರೊತ್ಸಾಹಕ ಯೋಜನೆ ಅಡಿ ದೆಹಲಿ ಸರ್ಕಾರವು ದೆಹಲಿ ನಿವಾಸಿಗಳಿಗೆ ಮಾತ್ರ ಅನ್ವಯಿಸುವಂತೆ ಇವಿ ತ್ರಿ ಚಕ್ರ ವಾಹಗಳು ಮತ್ತು ಲಘು ಇವಿ ವಾಣಿಜ್ಯ ವಾಹನಗಳ ಖರೀದಿಗೆ ಸಹಕಾರಿಯಾಗುವಂತೆ ಇವಿ ವಾಹನಗಳ ಮೇಲಿನ ಸಾಲದ ಬಡ್ಡಿಯಲ್ಲಿ ಶೇ. 5 ರಷ್ಟು ಕಡಿತಗೊಳಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಹೊಸ ಯೋಜನೆಗಾಗಿ ದೆಹಲಿ ಸರ್ಕಾರವು ಸಾರ್ವಜನಿಕ ವಲಯದ ಎನರ್ಜಿ ಎಫಿಷಿಯನ್ಸಿ ಸರ್ವೀಸಸ್ (EESL) ಸಂಪೂರ್ಣ ಸ್ವಾಮ್ಯದ ಕಂಪನಿಯಾದ ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ (CESL) ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ವಿಶೇಷ ವರ್ಗದ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಾಲದ ಮೇಲೆ ಶೇಕಡಾ 5 ರಷ್ಟು ಬಡ್ಡಿ ರಿಯಾಯಿತಿ ಘೋಷಣೆ ಮಾಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಬಡ್ಡಿ ರಿಯಾಯಿತಿ ಯೋಜನೆ ಅಡಿ ಗ್ರಾಹಕರು ಲಘು ವಾಣಿಜ್ಯ ವಾಹನಗಳ ಖರೀದಿ ಮೇಲೆ ರೂ. 30 ಸಾವಿರ ತನಕ ಉಳಿತಾಯ ಮಾಡಬಹುದಾಗಿದ್ದು, ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ದೆಹಲಿ ಸರ್ಕಾರ ಇವಿ ವಾಹನಗಳಿಗೆ ಮೀಸಲಾದ ಎಲೆಕ್ಟ್ರಿಕ್ ವಾಹನ ಪೋರ್ಟಲ್ ಅನ್ನು ಸಹ ಪ್ರಾರಂಭಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಎಲೆಕ್ಟ್ರಿಕ್ ವಾಹನಗಳ ಬಳಕೆದಾರರಿಗೆ ಒಂದೇ ಸ್ಥಳದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಒದಗಿಸುವುದು ಈ ಪೋರ್ಟಲ್ ಉದ್ದೇಶವಾಗಿದ್ದು, ಮಾರುಕಟ್ಟೆಯಲ್ಲಿ ಲಭ್ಯವಿರುವ ಎಲ್ಲಾ ರೀತಿಯ ಎಲೆಕ್ಟ್ರಿಕ್ ವಾಹನಗಳ ಮಾದರಿಗಳು, ಚಾರ್ಜಿಂಗ್ ಸ್ಟೇಷನ್‌ಗಳು ಮತ್ತು ಸಬ್ಸಿಡಿಗಳ ಕುರಿತಾದ ಮಾಹಿತಿ ಈ ಪೋರ್ಟಲ್‌ನಲ್ಲಿ ಲಭ್ಯವಿರುತ್ತದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಇದರೊಂದಿಗೆ ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಭಾರತದಲ್ಲಿ ಹೆಚ್ಚುತ್ತಿರುವ ಇವಿ ವಾಹನಗಳಿಗೆ ಪೂರಕವಾಗಿ ವಿವಿಧ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಇವಿ ವಾಹನಗಳ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ಹೆಚ್ಚಿಸಿದ್ದು, ಚಾರ್ಜಿಂಗ್ ಕೇಂದ್ರಗಳ ಹೆಚ್ಚಳಕ್ಕೆ ಪ್ರಮುಖ ಕಂಪನಿಗಳು ವಿಶೇಷ ಆಸಕ್ತಿ ವಹಿಸಿವೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಹೆಚ್ಚುತ್ತಿರುವ ಇಂಧನ ದರಗಳು ಮತ್ತು ಮಾಲಿನ್ಯ ಸಮಸ್ಯೆಯಿಂದಾಗಿ ಕಳೆದ ಕೆಲವು ವರ್ಷಗಳಿಂದ ವಿದ್ಯುತ್ ವಾಹನಗಳ ಪ್ರಾಮುಖ್ಯತೆಯು ತೀವ್ರವಾಗಿ ಹೆಚ್ಚುತ್ತಿದ್ದು, ಅದಕ್ಕೆ ತಕ್ಕಂತೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಕಿರುವ ಚಾರ್ಜಿಂಗ್ ಸೌಲಭ್ಯ ಒದಗಿಸುವುದು ಕೂಡಾ ಪ್ರಮುಖವಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಖರೀದಿಸುವ ಗ್ರಾಹಕರಿಗೆ ಹೊಸ ಸಬ್ಸಡಿ ಘೋಷಣೆ

ಈ ನಿಟ್ಟಿನಲ್ಲಿ ವಿವಿಧ ಚಾರ್ಜರ್ ಕಂಪನಿಗಳು ಸಹಭಾಗೀತ್ವ ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, 2025ರ ವೇಳೆಗೆ ಪ್ರಮುಖ ಚಾರ್ಜರ್ ಕಂಪನಿಗಳು ದೇಶಾದ್ಯಂತ ಸುಮಾರು 50 ಸಾವಿರ ಹೆಚ್ಚು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಜೊತೆಗೆ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ತೆರೆಯುವ ಗುರಿಹೊಂದಿವೆ.

Most Read Articles

Kannada
English summary
Delhi government announces 5 percent rebate on ev loan interest
Story first published: Saturday, January 22, 2022, 21:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X