ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿರುವುದು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡಲಾಗುತ್ತಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಇವಿ ವಾಹನ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಇವಿ ವಾಹನಗಳಿಗೆ ಪೂರಕವಾಗಿ ಈಗಗಾಲೇ ನೂರಾರು ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿರುವ ದೆಹಲಿ ಸರ್ಕಾರವು ಇದೀಗ ಗ್ರಾಹಕರ ಬೇಡಿಕೆಯೆಂತೆ ಖಾಸಗಿ ಬಳಕೆಯ ಇವಿ ಚಾರ್ಜಿಂಗ್ ನಿಲ್ದಾಣಗಳ ಜೋಡಣೆಗೆ ಚಾಲನೆ ನೀಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ದೆಹಲಿ ಸರ್ಕಾರವು ತನ್ನ ಸಿಂಗಲ್-ವಿಂಡೋ ಸೌಲಭ್ಯದ ಅಡಿಯಲ್ಲಿ ಖಾಸಗಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಪ್ರತ್ಯೇಕವಾದ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸುತ್ತಿದ್ದು, ಕಳೆದ ನವೆಂಬರ್‌ನಲ್ಲಿ ಪ್ರಾರಂಭವಾದ ಸಿಂಗಲ್-ವಿಂಡೋ ಸೌಲಭ್ಯದ ಮೂಲಕ ಖಾಸಗಿ ಮತ್ತು ಅರೆ-ಸಾರ್ವಜನಿಕ ಸ್ಥಳಗಳಲ್ಲಿ ಪ್ರತ್ಯೇಕವಾದ ಚಾರ್ಜಿಂಗ್ ಪಾಯಿಂಟ್‌ಗಳ ಅಭಿವೃದ್ದಿಗೆ ಚಾಲನೆ ನೀಡಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಖಾಸಗಿ ಚಾರ್ಜಿಂಗ್ ನಿಲ್ದಾಣವು ನಿಗದಿಪಡಿಸಿದ ಮಾಲೀಕರಿಗೆ ಮಾತ್ರ ಬಳಕೆ ಮಾಡಬಹುದಾಗಿದ್ದು, ಅರೆ ಸಾರ್ವಜನಿಕ ಸ್ಥಳಗಳಾದ ಅಪಾರ್ಟ್‌ಮೆಂಟ್‌ಗಳು, ಹೌಸಿಂಗ್ ಗ್ರೂಪ್ ಸೊಸೈಟಿಗಳು, ಆಸ್ಪತ್ರೆಗಳು, ಮಾಲ್‌ಗಳು ಮತ್ತು ಥಿಯೇಟರ್‌ಗಳಲ್ಲಿ ಒಂದು ನಿರ್ದಿಷ್ಟ ಮಟ್ಟದ ಗ್ರಾಹಕರು ಅಥವಾ ಜನರ ಗುಂಪಿಗೆ ಚಾರ್ಜಿಂಗ್ ಮೂಲಸೌಕರ್ಯವನ್ನು ತ್ವರಿತವಾಗಿ ವಿಸ್ತರಿಸುವ ಯೋಜನೆ ಇದಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಸಿಂಗಲ್-ವಿಂಡೋ ಸೌಲಭ್ಯದ ಅಡಿಯಲ್ಲಿ ದೆಹಲಿ ವಿದ್ಯುತ್ ನಿಯಮ ಮಂಡಳಿಯು ವಾಹನ ಮಾಲೀಕರು ಅರ್ಜಿ ಸಲ್ಲಿಸಿದ 7 ದಿನಗಳ ಒಳಗಾಗಿ ಸ್ಥಳ ಲಭ್ಯತೆ ಆಧಾರಿಸಿ ಫಾಸ್ಟ್ ಚಾರ್ಜಿಂಗ್ ನಿರ್ಮಿಸಿಕೊಡುತ್ತಿದ್ದು, ಖಾಸಗಿ ಮತ್ತು ಸಾರ್ವಜನಿಕ ಚಾರ್ಜಿಂಗ್ ಮೂಲಸೌಕರ್ಯವನ್ನು ಹೆಚ್ಚಿಸುತ್ತಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಇದಲ್ಲದೆ ರಾಷ್ಟ್ರ ರಾಜಧಾನಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೆಹಲಿ ಸರ್ಕಾರವು ಕಳೆದ ವರ್ಷ ಚಾರ್ಜಿಂಗ್ ನಿಲ್ದಾಣಗಳಿಗೆ ಸಬ್ಸಿಡಿ ಯೋಜನೆಯನ್ನು ಪ್ರಾರಂಭಿಸಿತ್ತು. ಇದರ ಅಡಿಯಲ್ಲಿ ದೆಹಲಿ ಸರ್ಕಾರವು ಯಾವುದೇ ಖಾಸಗಿ ಆಸ್ತಿ, ಮಾಲ್, ಆಸ್ಪತ್ರೆ ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಸಹಾಯಧನವನ್ನು ನೀಡುತ್ತಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಈ ಮೂಲಕ ಎಲೆಕ್ಟ್ರಿಕ್ ವಾಹನಗಳಿಗೆ ಕೊನೆಯ ಮೈಲಿ ತನಕವೂ ಚಾರ್ಜಿಂಗ್ ಸೌಲಭ್ಯ ದೊರೆಯುವಂತೆ ಯೋಜನೆ ರೂಪಿಸಲಾಗುತ್ತಿದ್ದು, ಪ್ರಮುಖ ಪೆಟ್ರೋಲಿಯಂ ಕಂಪನಿಗಳು ಕೂಡಾ ಇವಿ ನಿಲ್ದಾಣಗಳನ್ನು ಹೆಚ್ಚಿಸಲು ಪೆಟ್ರೋಲ್ ಬಂಕ್‌ಗಳಲ್ಲಿಯೇ ಚಾರ್ಜಿಂಗ್ ಪಾಯಿಂಟ್‌ಗಳನ್ನು ನಿರ್ಮಾಣಕ್ಕೆ ಚಾಲನೆ ನೀಡಿವೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಸರ್ಕಾರಿ ಸ್ವಾಮ್ಯದ ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ (ಸಿಇಎಸ್ಎಲ್) ಸಂಸ್ಥೆಯು ದೇಶಾದ್ಯಂತ ಸಾವಿರಾರು ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಹೊಸ ಯೋಜನೆಯಡಿ ಭಾರತ್ ಪೆಟ್ರೋಲಿಯಂ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಹಂತ-ಹಂತವಾಗಿ 7 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಯೋಜನೆ ಸಿದ್ದಪಡಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಭಾರತ್ ಪೆಟ್ರೋಲಿಯಂ ಕಂಪನಿಯ ಹೊಸ ಪ್ರಕಟನೆಯಲ್ಲಿ ಮುಂದಿನ ಅಕ್ಟೋಬರ್ ವೇಳೆಗೆ ದೇಶದ ಪ್ರಮುಖ ಕಡೆಗಳಲ್ಲಿ ಒಂದು ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದಿರುವುದಾಗಿ ಭರವಸೆ ನೀಡಿದ್ದು, ಇಂಧನ ಚಾಲಿತ ಬದಲಾಗಿ ಪರಿಸರ ಸ್ನೇಹಿ ವಾಹನಗಳನ್ನು ಉತ್ತೇಜಿಸಲು ಎಲ್ಲಾ ಮೂಲಭೂತ ಸೌಕರ್ಯ ಒದಗಿಸುವುವಲ್ಲಿ ಕಂಪನಿಯು ಬದ್ದವಾಗಿದೆ ಎಂದಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಅತಿ ಕಡಿಮೆ ಅವಧಿಯ ಹೆಚ್ಚಿನ ಪ್ರಮಾಣದ ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ಪರಿಚಯಿಸಲಾಗುತ್ತಿದ್ದು, ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಸಹಕಾರಿಯಾಗುವಂತೆ ಹೊಸ ಯೋಜನೆ ರೂಪಿಸಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಖಾಸಗಿ ಇವಿ ಬಳಕೆದಾರರಿಗೆ ಪ್ರತ್ಯೇಕ ಚಾರ್ಜಿಂಗ್ ನಿಲ್ದಾಣ ಪರಿಚಯ

ಇದರಿಂದ ಕೇವಲ ನಗರಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುವ ಇವಿ ವಾಹನಗಳ ಮೂಲಕ ದೂರದ ಪ್ರಯಾಣಕ್ಕೂ ಅನುಕೂಲಕರವಾಗಲಿದ್ದು, ಹೆಚ್ಚುತ್ತಿರುವ ಇಂಧನ ಬೆಲೆ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುತ್ತಿದೆ.

Article Published On: Tuesday, February 8, 2022, 12:25 [IST]
English summary
Delhi government to start installs private electric vehicles charger facility
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+