ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಭಾರತದಲ್ಲಿ ಇಂಧನ ಬೆಲೆ ಗಗನಕ್ಕೇರಿದೆ. ಇದರಿಂದ ಪಾರಾಗಲು ಹೆಚ್ಚಿನ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯು ಹೆಚ್ಚಾಗುತ್ತಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಇದರ ನಡುವೆ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಕೂಡ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುತ್ತಿದೆ. ಇದರೊಂದಿಗೆ ಹಲವು ಎಲೆಕ್ಟ್ರಿಕ್ ಬ್ರ್ಯಾಂಡ್ ಗಳು ಕೂಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಬಿಡುಗಡೆಗೊಳಿಸುತ್ತಿದೆ. ಇನ್ನು ಈಗಾಗಲೇ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಾಗಿದೆ. ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳು ಉತ್ತಮ ಬೇಡಿಕೆಯನ್ನು ಮಾರಾಟವಾಗುತ್ತಿದೆ. ಕಳೆದ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳ ಮಾಹಿತಿ ಇಲ್ಲಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಟಾಟಾ ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿಯ ಸಂಯೋಜಿತ ಮಾರಾಟವು 2022ರ ಫೆಬ್ರವರಿ ತಿಂಗಳಿನಲ್ಲಿ 2,264 ಯುನಿಟ್‌ಗಳಷ್ಟಿದೆ, ಕಳೆದ ವರ್ಷದ ಇದೇ ಅವಧಿಯಲ್ಲಿ 434 ಯುನಿಟ್‌ಗಳಿಗೆ ಹೋಲಿಸಿದರೆ ವರ್ಷಕ್ಕೆ 421.6 ಶೇಕಡಾ ಹೆಚ್ಚಳವಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ನೆಕ್ಸಾನ್ ಇವಿ 2020 ರ ಆರಂಭದಲ್ಲಿ ಮಾರುಕಟ್ಟೆಗೆ ಪಾದಾರ್ಪಣೆ ಮಾಡಿದಾಗಿನಿಂದ ಸ್ವದೇಶಿ ತಯಾರಕರಿಗೆ ಭಾರಿ ಹಿಟ್ ಆಗಿದೆ ಮತ್ತು ಇದು 2021 ರಲ್ಲಿ ಹೆಚ್ಚು ಮಾರಾಟವಾದ ಪ್ರಯಾಣಿಕ ಎಲೆಕ್ಟ್ರಿಕ್ ವಾಹನವಾಗಿದೆ. ಎಲೆಕ್ಟ್ರಿಕ್ ಎಸ್‌ಯುವಿ ಈ ವರ್ಷ ತನ್ನ ಶ್ರೇಣಿಗೆ ಹೊಸ ರೂಪಾಂತರವನ್ನು ಸೇರಿಸುವ ಸಾಧ್ಯತೆಯಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಏಕೆಂದರೆ ಒಂದು ದೊಡ್ಡ ಬ್ಯಾಟರಿ ಪ್ಯಾಕ್ ಅನ್ನು ಒಂದೇ ಚಾರ್ಜ್‌ನಲ್ಲಿ ಸುಮಾರು 400 ಕಿಮೀ ಡ್ರೈವಿಂಗ್ ರೇಂಜ್ ಅನ್ನು ಕ್ಲೈಮ್ ಮಾಡಬಹುದೆಂದು ಊಹಿಸಲಾಗಿದೆ. ಇನ್ನು ಟಾಟಾ ನೆಕ್ಸಾನ್ ಇವಿ 2020 ರ ಆರಂಭದಲ್ಲಿ ಮಾರುಕಟ್ಟೆಗೆ ಪಾದಾರ್ಪಣೆ ಮಾಡಿದಾಗಿನಿಂದ ಸ್ವದೇಶಿ ತಯಾರಕರಿಗೆ ಭಾರಿ ಹಿಟ್ ಆಗಿದೆ. 2021 ರಲ್ಲಿ ಹೆಚ್ಚು ಮಾರಾಟವಾದ ಪ್ರಯಾಣಿಕ ಎಲೆಕ್ಟ್ರಿಕ್ ವಾಹನವಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಎಲೆಕ್ಟ್ರಿಕ್ ಎಸ್‌ಯುವಿ ಈ ವರ್ಷ ತನ್ನ ಶ್ರೇಣಿಗೆ ಹೊಸ ರೂಪಾಂತರವನ್ನು ಸೇರಿಸುವ ಸಾಧ್ಯತೆಯಿದೆ ಈ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಸನ್‌ರೂಫ್, ರೈನ್ ಸೆನ್ಸಾಸಿಂಗ್, ಇಂಟಿಗ್ರೇಟೆಡ್ ಟರ್ನ್ ಇಂಡೀಕೇಟರ್, ಎಲ್ಲಾ ಪವರ್ ವಿಂಡೋಸ್, ಕೀಲೆಸ್ ಎಂಟ್ರಿ ಅಂಡ್ ಗೋ, ಕೂಲ್ಡ್ ಗ್ಲೋವ್ ಬಾಕ್ಸ್, ಹ್ಯಾಂಡ್ಸ್-ಫ್ರೀ ಟೈಲ್‌ಗೇಟ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿವೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಈ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಸಿಂಕ್ರೊನಸ್ ಮೋಟರ್ ಅನ್ನು ಹೊಂದಿದೆ. ಇದರಲ್ಲಿ 30.2 ಕಿಲೋವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿಯನ್ನು ಹೊಂದಿದೆ. ಈ ಇವಿ ಮಾದರಿಯು ಒಟ್ಟು 127 ಬಿಹೆಚ್‌ಪಿ ಮತ್ತು 245 ಎನ್‌ಎಂ ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಲೆಕ್ಟ್ರಿಕ್ ಕಾರು ಕೇವಲ 9.9 ಸೆಕೆಂಡುಗಳಲ್ಲಿ 100 ಕಿ.ಮೀ ವೇಗವನ್ನು ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಆರ್ಎಐ ಪ್ರಕಾರ ಈ ನೆಕ್ಸಾನ್ ಇವಿ ಮಾದರಿಯು 312 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಆರಂಭದಲ್ಲಿ ಟಿಗೋರ್ ಇವಿ ಪರಿಚಯಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ತದನಂತರ ನೆಕ್ಸಾನ್ ಇವಿ ಮಾದರಿಯನ್ನು ಪರಿಚಯಿಸಿತ್ತು. ಕಂಪನಿಯು ಇತ್ತೀಚೆಗೆ ವಾಣಿಜ್ಯ ಬಳಕೆದಾರರಿಗಾಗಿ ಹೊಸದಾಗಿ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯ ಮಾರಾಟಕ್ಕೆ ಚಾಲನೆ ನೀಡಿದ್ದು, ಟಿಗೋರ್ ಇವಿ ಹೊಸ ಮಾದರಿಯು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಇನ್ನು ಎಂಜಿ ಜೆಡ್ಎಸ್ ಇವಿ 2021 ರಲ್ಲಿ ಅನುಗುಣವಾದ ತಿಂಗಳಲ್ಲಿ 127 ಯೂನಿಟ್‌ಗಳ ವಿರುದ್ಧ 38 ಯುನಿಟ್‌ಗಳೊಂದಿಗೆ ಶೇ.70 ಮಾರಾಟ ಕುಸಿತದೊಂದಿಗೆ ಎರಡನೇ ಸ್ಥಾನದಲ್ಲಿದೆ. ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಭಾರತದಲ್ಲಿ ಮೊದಲ ಬಾರಿಗೆ 2019ರಲ್ಲಿ ಬಿಡುಗಡೆ ನಂತರ ಹಲವಾರು ಅಪ್‌ಡೆಟ್ ಪಡೆದುಕೊಂಡಿದೆ. ಮೈಲೇಜ್ ಪ್ರಮಾಣದಲ್ಲಿ ಹೆಚ್ಚಳ ಮೂಲಕ ಇವಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

2022ರ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ಈ ಹಿಂದಿನಂತೆ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಬಿಡುಗಡೆಗೊಂಡಿದೆ. ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ವಿಸ್ತರಿತ ಬ್ಯಾಟರಿ ಪ್ಯಾಕ್ ಮತ್ತು ಸುಧಾರಿತ ಕಾರ್ ಕನೆಕ್ಟ್ ಫೀಚರ್ಸ್‌ಗಳೊಂದಿಗೆ 2021 ಮಾದರಿಗಿಂತ ರೂ. 60 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಬೆಲೆ ಏರಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ ಸಾಕಷ್ಟು ಹೊಸ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

2020 ರಲ್ಲಿ ಅದೇ ಅವಧಿಯಲ್ಲಿ 10 ಯುನಿಟ್‌ಗಳ ವಿರುದ್ಧ 12 ಯುನಿಟ್‌ಗಳು ದಾಖಲಾಗಿದ್ದು, 20 ಪ್ರತಿಶತದಷ್ಟು ಹೆಚ್ಚಳದೊಂದಿಗೆ ಮಹೀಂದ್ರಾ ಇವೆರಿಟೊ ಕಳೆದ ತಿಂಗಳು ದೇಶದಲ್ಲಿ ಹೆಚ್ಚು ಮಾರಾಟವಾದ ಮೂರನೇ ಪ್ರಯಾಣಿಕ ಎಲೆಕ್ಟ್ರಿಕ್ ಕಾರ್ ಆಗಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಬಿವೈಡಿ ಇ6 ಕಾರು 10 ಯುನಿಟ್‌ಗಳ ಮಾರಾಟವಾಗಿವೆ. ಮಲ್ಟಿ ಪರ್ಪಸ್ ವೆಹಿಕಲ್(ಎಂಪಿವಿ) ಮಾದರಿಯಾಗಿರುವ ಇ6 ಇವಿ ಕಾರು 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, 71.6kWh 'ಬ್ಲೇಡ್' ಲಿಥಿಯಂ ಫೆರೋ ಫಾಸ್ಫೇಟ್ (LiFePO4) ಬ್ಯಾಟರಿ ಪ್ಯಾಕ್‌ ಜೋಡಣೆ ಹೊಂದಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಬಿವೈಡಿ ಇ6 ಕಾರು ಕಾರಿನಲ್ಲಿ ಬ್ಲೇಡ್ ಲಿಥಿಯಂ ಫೆರೋ ಫಾಸ್ಫೇಟ್ ಬ್ಯಾಟರಿ ಪ್ಯಾಕ್‌ AC ಮತ್ತು DC ಚಾರ್ಜಿಂಗ್ ಮಾನದಂಡಗಳನ್ನು ಬೆಂಬಲಿಸಲಿದ್ದು, WLTP ಮಾನದಂಡಗಳ ಪ್ರಕಾರ ಹೊಸ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 415 ಕಿ.ಮೀ ನಿಂದ ಗರಿಷ್ಠ 520 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ಹೊಸ ಕಾರಿನ ಮೈಲೇಜ್ ಪ್ರಮಾಣವು ಕಾರಿನಲ್ಲಿರುವ ವಿವಿಧ ಡ್ರೈವಿಂಗ್ ಮೋಡ್ ಆಧರಿಸಿ ನಿರ್ಧಾರವಾಗಲಿದ್ದು, ಹೊಸ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಕಳೆದ ತಿಂಗಳು ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯ 7 ಯುನಿಟ್ ಗಳು ಮಾರಾಟವಾಗಿವೆ. ಈ ಐಷಾರಾಮಿ ಎಲೆಕ್ಟ್ರಿಕ್ ಕಾರು ಮಾದರಿಗಳಲ್ಲೇ ಹಲವಾರು ಹೊಸ ಮಾದರಿಯ ಸುಧಾರಿತ ತಂತ್ರಜ್ಞಾನ ಸೌಲಭ್ಯಗಳನ್ನು ಹೊಂದಿರುವ ಹೊಸ ಇ-ಟ್ರಾನ್ ಕಾರು ಗ್ರಾಹಕರ ಬೇಡಿಕೆಯೆಂತೆ ಇ-ಟ್ರಾನ್ 50, ಇ-ಟ್ರಾನ್ 55 ಮತ್ತು ಇ-ಟ್ರಾನ್ 55 ಸ್ಪೋರ್ಟ್‌ಬ್ಯಾಕ್ ಎನ್ನುವ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳಿವು..

ಇ-ಟ್ರಾನ್ ಕಾರಿನ ಆರಂಭಿಕ ಮಾದರಿಯಲ್ಲಿ ಆಡಿ ಕಂಪನಿಯು 71 ಕಿ.ವ್ಯಾ ಬ್ಯಾಟರಿ ಪ್ಯಾಕ್‌ ಜೋಡಣೆ ಮಾಡಿದ್ದು, ಇದು 308 ಬಿಹೆಚ್‌ಪಿ ಹಾಗೂ 540 ಎನ್ಎಂ ಟಾರ್ಕ್ ಉತ್ಪಾದಿಸುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 380 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಹೊಸ ಕಾರಿನ ಮಧ್ಯಮ ಆವೃತ್ತಿ ಮತ್ತು ಹೈ ಎಂಡ್ ಮಾದರಿಯಾದ 55 ಮತ್ತು 55 ಸ್ಪೋರ್ಟ್‌ಬ್ಯಾಕ್‌ನಲ್ಲಿ ಆಡಿ ಕಂಪನಿಯು 95 ಕಿ.ವ್ಯಾ ಬ್ಯಾಟರಿ ಪ್ಯಾಕ್‌ ಜೋಡಣೆ ಮಾಡಿದ್ದು, ಇದು 402 ಬಿಹೆಚ್‌ಪಿ ಹಾಗೂ 664 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 480 ಕಿ.ಮೀ ಮೈಲೇಜ್ ಹಿಂದಿರುಗಿಸಬಲ್ಲದು.

Most Read Articles

Kannada
English summary
Electric car sales in february 2022 find here all details
Story first published: Saturday, March 12, 2022, 20:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X