India
YouTube

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರಾಟವು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ.

Recommended Video - Watch Now!
Toyota Urban Cruiser Hyryder Kannada Walkaround | ಹೈಬ್ರಿಡ್ ಎಂಜಿನ್, ಗೇರ್ ಬಾಕ್ಸ್, ವೈಶಿಷ್ಟ್ಯತೆಗಳು..

ವಿವಿಧ ಕಂಪನಿಗಳು ಕಳೆದ ತಿಂಗಳು ಜೂನ್‌ನಲ್ಲಿ ಇವಿ ಕಾರುಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡಿದ್ದು, ಹೊಸ ತಲೆಮಾರಿನ ಗ್ರಾಹಕರನ್ನು ಹೆಚ್ಚು ಸೆಳೆಯುತ್ತಿವೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಇವಿ ಕಾರು ಮಾದರಿಗಳು ಖರೀದಿಗೆ ಲಭ್ಯವಿದ್ದು, ಅತ್ಯುತ್ತಮ ಮೈಲೇಜ್ ಮತ್ತು ಬೆಲೆ ವಿಚಾರವಾಗಿ ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಟಾಟಾ ಮೋಟಾರ್ಸ್ ಜೊತೆ ಇತರೆ ಇವಿ ಕಾರು ಉತ್ಪಾದನಾ ಕಂಪನಿಗಳು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಜೂನ್ ತಿಂಗಳ ಮಾರಾಟ ವರದಿ ಇಲ್ಲಿದೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಟಾಟಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ ಮ್ಯಾಕ್ಸ್, ನೆಕ್ಸಾನ್ ಇವಿ, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಜೂನ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 3,507 ಯುನಿಟ್ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಜೂನ್ ಅವಧಿಯಲ್ಲಿನ ಇವಿ ಕಾರು ಮಾರಾಟವು ಕಳೆದ ವರ್ಷದ ಜೂನ್ ಅವಧಿಯಲ್ಲಿನ 658 ಯುನಿಟ್ ಮಾರಾಟಕ್ಕೆ ಹೋಲಿಕೆ ಮಾಡಿದರೆ ಕಳೆದ ತಿಂಗಳು ಶೇ.433 ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಎಂಜಿ ಮೋಟಾರ್

ಭಾರತದಲ್ಲಿ ಎಂಜಿ ಮೋಟಾರ್ ಕೇವಲ ಜೆಡ್ಎಸ್ ಎಲೆಕ್ಟ್ರಿಕ್ ಕಾರನ್ನು ಮಾತ್ರ ಮಾರಾಟ ಮಾಡುತ್ತಿದೆ. ಕಂಪನಿಯು ಕಳೆದ ತಿಂಗಳು 232 ಯುನಿಟ್ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಜೂನ್‌ನಲ್ಲಿ 160 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಇದೀಗ ಕಂಪನಿಯು 145ರಷ್ಟು ಬೆಳವಣೆಗೆ ಉತ್ತಮ ಬೇಡಿಕೆ ಪಡೆದುಕೊಂಡಿದೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಎಂಜಿ ಮೋಟಾರ್ ಕಂಪನಿಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ ಈ ಹಿಂದೆ ಪ್ರತಿ ಚಾರ್ಜ್‌ಗೆ 419 ಕಿ.ಮೀ ಒದಗಿಸುತ್ತಿದ್ದ 44.5 kWh ಬ್ಯಾಟರಿ ಪ್ಯಾಕ್ ಅನ್ನು 50.3 kWh ಅಡ್ವಾನ್ಸ್ ಬ್ಯಾಟರಿ ಪ್ಯಾಕ್‌ಗೆ ಉನ್ನತೀಕರಿಸಿದ್ದು, ಹೊಸ ಬ್ಯಾಟರಿ ಪ್ಯಾಕ್ ಪ್ರತಿ ಚಾರ್ಜ್‌ಗೆ ಗರಿಷ್ಠ 461 ಕಿ.ಮೀ ಮೈಲೇಜ್ ನೀಡುತ್ತಿರುವ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಹ್ಯುಂಡೈ

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹುಂಡೈ ಮೋಟಾರ್ ಇಂಡಿಯಾ ಕಂಪನಿಯು ಕೋನಾ ಇವಿ ಕಾರಿನ ಮೂಲಕ ಮೂರನೇ ಸ್ಥಾನದಲ್ಲಿದ್ದು, ಕಂಪನಿಯು ಕಳೆದ ತಿಂಗಳು 52 ಯುನಿಟ್ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 12 ಯುನಿಟ್‌ ಮಾರಾಟ ಮಾಡಿದ್ದ ಕಂಪನಿಯು ಈ ವರ್ಷ ಶೇ. 333 ರಷ್ಟು ಹೆಚ್ಚಳ ಮಾಡಿದೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಭಾರತದಲ್ಲಿ ಸದ್ಯಕ್ಕೆ 39.2kWh ಬ್ಯಾಟರಿ ಪ್ಯಾಕ್ ಹೊಂದಿರುವ ಕೋನಾ ಇವಿ ಮಾದರಿಯು ಪ್ರತಿ ಚಾರ್ಜ್‌ಗೆ 452 ಕಿ.ಮೀ ಮೈಲೇಜ್ ಹೊಂದಿದ್ದು, ಕೋನಾ ಇವಿ ಫೇಸ್‌ಲಿಫ್ಟ್ ಮಾದರಿಯು ಶೀಘ್ರದಲ್ಲಿಯೇ ರಸ್ತೆಗಿಳಿಯಲು ಸಜ್ಜಾಗುತ್ತಿದೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಬಿವೈಡಿ

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಬಿವೈಡಿ ಇಂಡಿಯಾ ಕಂಪನಿಯು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದು, ಕಳೆದ ತಿಂಗಳು ಕಂಪನಿಯು 48 ಯುನಿಟ್ ಇವಿ6 ಕಾರುಗಳನ್ನು ಮಾರಾಟ ಮಾಡಿ ನಾಲ್ಕನೇ ಕಾಯ್ದುಕೊಂಡಿದೆ. ಬಿವೈಡಿ ಹೊಸ ಕಾರು ಇ6 ಎಲೆಕ್ಟ್ರಿಕ್ ಎಂಪಿವಿ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅತ್ಯಧಿಕ ಮೈಲೇಜ್ ರೇಂಜ್ ಫೀಚರ್ಸ್ ಹೊಂದಿದ್ದು, ಹೊಸ ಕಾರು ಸದ್ಯ ದೇಶದ ಪ್ರಮುಖ ಎಂಟು ನಗರಗಳಲ್ಲಿ ಖರೀದಿಗೆ ಲಭ್ಯವಿದೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಬಿವೈಡಿ ಇವಿ ಎಲೆಕ್ಟ್ರಿಕ್ ಎಂಪಿವಿ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.15 ಲಕ್ಷ ಬೆಲೆ ಹೊಂದಿದ್ದು, ಹೊಸ ಎಲೆಕ್ಟ್ರಿಕ್ ಕಾರನ್ನು ಕಂಪನಿಯು ಸದ್ಯ ಬಿ2ಬಿ ಉದ್ದೇಶಗಳಿಗೆ ಮಾತ್ರ ಮಾರಾಟ ಮಾಡುತ್ತಿದೆ. ಹೊಸ ಕಾರು 71.6kWh 'ಬ್ಲೇಡ್' ಲಿಥಿಯಂ ಫೆರೋ ಫಾಸ್ಫೇಟ್ (LiFePO4) ಬ್ಯಾಟರಿ ಪ್ಯಾಕ್‌ ಜೋಡಣೆ ಹೊಂದಿದ್ದು, ಹೊಸ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 415 ಕಿ.ಮೀ ನಿಂದ ಗರಿಷ್ಠ 520 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಮಹೀಂದ್ರಾ & ಮಹೀಂದ್ರಾ

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಆಂಡ್ ಮಹೀಂದ್ರಾ ಐದನೇ ಸ್ಥಾನದಲ್ಲಿದೆ. ಕಳೆದ ತಿಂಗಳು ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಒಟ್ಟು 20 ಎಲೆಕ್ಟ್ರಿಕ್ ಪ್ರಯಾಣಿಕ ವಾಹನಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷ ಇದೇ ತಿಂಗಳಲ್ಲಿ ಕಂಪನಿಯು ಒಟ್ಟು 8 ವಾಹನಗಳನ್ನು ಮಾರಾಟ ಮಾಡಿದ್ದ ಕಂಪನಿಯು ಇದೀಗ 150 ಪ್ರತಿಶತದಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಆಡಿ ಇಂಡಿಯಾ

ಭಾರತದಲ್ಲಿ ಇ-ಟ್ರಾನ್ ಎಲೆಕ್ಟ್ರಿಕ್ ಕಾರು ಮಾದರಿಯ ಮಾರಾಟದೊಂದಿಗೆ ಆಡಿ ಕಂಪನಿಯು ಕಳೆದ ತಿಂಗಳು ಶೇ. 1300 ರಷ್ಟು ಬೆಳವಣಿಗೆ ಸಾಧಿಸಿದ್ದು, ಕಂಪನಿಯು ಕಳೆದ ತಿಂಗಳು ಒಟ್ಟು 14 ಯುನಿಟ್ ಮಾರಾಟ ಮಾಡಿದೆ.

ಇವಿ ಕಾರು ಮಾರಾಟ: ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ

ಇದಲ್ಲದೇ ಬಿಎಂಡಬ್ಲ್ಯು ಇಂಡಿಯಾ, ಜಾಗ್ವಾರ್ ಲ್ಯಾಂಡ್ ರೋವರ್, ಪೋರ್ಷೆ, ಮರ್ಸಿಡಿಸ್-ಬೆಂಝ್ ಮತ್ತು ಇತರೆ ಕೆಲವು ಕಂಪನಿಗಳು ಇವಿ ಕಾರು ಮಾರಾಟ ಪಟ್ಟಿಯಲ್ಲಿ ಉತ್ತಮ ಬೆಳವಣಿಗೆ ಸಾಧಿಸಿದ್ದು, ಎಲೆಕ್ಟ್ರಿಕ್ ಪ್ಯಾಸೆಂಜರ್ ವಾಹನಗಳ ವಿಭಾಗದಲ್ಲಿ ಕಳೆದ ತಿಂಗಳು ಒಟ್ಟು 3,089 ಯುನಿಟ್ ಮಾರಾಟಗೊಂಡಿವೆ. ಇದು ಕಳೆದ ವರ್ಷದ ಜೂನ್‌ನಲ್ಲಿ ಮಾರಾಟಗೊಂಡಿದ್ದ 766 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ ಈ ವರ್ಷದ ಕಾರುಗಳ ಮಾರಾಟವು ಶೇ. 303 ರಷ್ಟು ಹೆಚ್ಚಳವಾಗಿದೆ.

Most Read Articles

Kannada
English summary
Electric passenger vehicles sales report june 2022
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X