ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಇವಿ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೇಶಾದ್ಯಂತ ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನ ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿರುವುದು ಮಹತ್ವದ ಬದಲಾವಣೆಗೆ ಕಾರಣವಾಗುತ್ತಿದೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿ ಯಲ್ಲಿ ಹೊಸ ಮೈಲಿಗಲ್ಲು

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡಲಾಗುತ್ತಿರುವುದರಿಂದ ಇವಿ ವಾಹನಗಳ ಬಳಕೆಗೆ ಸಾರ್ವಜನಿಕರು ಆದ್ಯತೆ ನೀಡುತ್ತಿದ್ದಾರೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಕರ್ನಾಟಕದಲ್ಲೂ ಸಹ ಇವಿ ವಾಹನ ನೋಂದಣಿ ಪ್ರಮಾಣದ ಕಳೆದ ತಿಂಗಳಿನಿಂದ ಸಾಕಷ್ಟು ಏರಿಕೆಯಾಗಿದೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಕಳೆದ ಕೆಲ ತಿಂಗಳ ಹಿಂದೆ ಒಟ್ಟಾರೆ ವಾಹನಗಳ ನೋಂದಣಿ ಪ್ರಮಾಣದಲ್ಲಿ ಶೇ.1ರಿಂದ ಶೇ.2 ರಷ್ಟಿದ್ದ ಇವಿ ವಾಹನಗಳ ನೋಂದಣಿ ಪ್ರಮಾಣ ಇದೀಗ ಶೇ.4ಕ್ಕೆ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಹೆಚ್ಚಳ ಪರಿಣಾಮ ಇವಿ ವಾಹನಗಳು ಇನ್ನು ಹೆಚ್ಚಿನ ಮಟ್ಟದಲ್ಲಿ ರಸ್ತೆಗಿಳಿಯುತ್ತಿವೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯ ಪ್ರಮುಖ ಜಿಲ್ಲಾ ಕೇಂದ್ರಗಳಲ್ಲಿ ಇವಿ ವಾಹನ ಮಾರಾಟವು ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ರಾಜ್ಯ ಸಾರಿಗೆ ಇಲಾಖೆಯಲ್ಲಿ ಮೊದಲ ಬಾರಿಗೆ ಇವಿ ವಾಹನಗಳ ನೋಂದಣಿ ಪ್ರಮಾಣ 1 ಲಕ್ಷ ಮಾದರಿಗಳ ಗುರಿತಲುಪಿದೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಇವಿ ವಾಹನಗಳ ನೋಂದಣಿ ಮೊದಲ ಸ್ಥಾನದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳು ಮೊದಲ ಸ್ಥಾನದಲ್ಲಿದ್ದು, ತದನಂತರ ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಬೇಡಿಕೆ ಹೊಂದಿದ್ದು, ಇವಿ ವಾಹನಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ಕೂಡಾ ಹೆಚ್ಚಳವಾಗುತ್ತಿದೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿ ಯಲ್ಲಿ ಹೊಸ ಮೈಲಿಗಲ್ಲು

ಮಾಹಿತಿಗಳ ಪ್ರಕಾರ ದೇಶಾದ್ಯಂತ ಇದುವರೆಗೆ ಸುಮಾರು 10 ಲಕ್ಷ ಇವಿ ವಾಹನಗಳು ನೋಂದಣಿಯಾಗಿವೆ ಎನ್ನಲಾಗಿದ್ದು, ಸಾಮಾನ್ಯ ವಾಹನಗಳ ನೋಂದಣಿ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ಇದು ತೀರಾ ಕಡಿಮೆ ಪ್ರಮಾಣ ಎನ್ನಬಹುದು. ಹೀಗಾಗಿ ಇವಿ ವಾಹನಗಳ ಉತ್ತೇಜನಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಇವಿ ವಾಹನಗಳ ಹೆಚ್ಚಳಕ್ಕೆ ಮುಖ್ಯವಾಗಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲಾಗುತ್ತಿದೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಇವಿ ವಾಹನ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಸಹ ಕ್ರಮ ಕೈಗೊಳ್ಳಲಾಗುತ್ತಿದೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆಯನ್ನು ಆರಂಭಿಸುತ್ತಿವೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಕೇಂದ್ರ ವಿದ್ಯುತ್ ಸಚಿವಾಲಯದ ಪ್ರಕಾರ ದೇಶದ ಪ್ರಮುಖ ಒಂಬತ್ತು ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯು ಕಳೆದ ನಾಲ್ಕು ತಿಂಗಳಲ್ಲಿ 2.5 ಪಟ್ಟು ಹೆಚ್ಚಾಗಿದೆ ಎಂದಿದೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿ ಯಲ್ಲಿ ಹೊಸ ಮೈಲಿಗಲ್ಲು

ಇವಿ ವಾಹನಗಳಿಗೆ ಪೂರಕವಾಗಿ ಈಗಗಾಲೇ ದೇಶದ ಪ್ರಮುಖ ನಗರಗಳಲ್ಲಿ ಸಾವಿರಾರು ಸಾರ್ವಜನಿಕ ಬಳಕೆಯ ಫಾಸ್ಟ್ ಇವಿ ಚಾರ್ಜಿಂಗ್ ನಿಲ್ದಾಣಗಳು ಕಾರ್ಯನಿರ್ವಹಣೆ ಮಾಡುತ್ತಿದ್ದು, ಪ್ರಸ್ತುತ ಭಾರತದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಬಳಕೆ ತ್ವರಿತ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಇದಕ್ಕಾಗಿ ಇವಿ ಚಾರ್ಜಿಂಗ್ ಮೂಲಸೌಕರ್ಯಕ್ಕಾಗಿ ಪರಿಷ್ಕೃತ ಏಕೀಕೃತ ಮಾರ್ಗಸೂಚಿಗಳು ಮತ್ತು ಮಾನದಂಡಗಳನ್ನು ಹೊರಡಿಸಿದ್ದು, ವಿದ್ಯುತ್ ಸಚಿವಾಲಯದ ಪ್ರಕಾರ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆ ಮತ್ತು ಅಳವಡಿಕೆಯನ್ನು ಉತ್ತೇಜಿಸಲು ಕೇಂದ್ರವು ಹಲವಾರು ಉಪಕ್ರಮಗಳನ್ನು ತೆಗೆದುಕೊಂಡಿದೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಮುಂದಿನ ಎರಡು ವರ್ಷಗಳಲ್ಲಿ ಬೆಳೆಯುತ್ತಿರುವ ಇವಿ ವಾಹನ ಮಾರುಕಟ್ಟೆಗಾಗಿ ದೇಶಾದ್ಯಂತ 20 ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ನಿಲ್ದಾಣಗಳು ಕಾರ್ಯನಿರ್ಹವಣೆ ಹೊಂದಿರುವ ಅಂದಾಜು ಮಾಡಲಾಗಿದ್ದು, ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಜೊತೆಗೆ ಬ್ಯಾಟರಿ ವಿನಿಮಯ ಕೇಂದ್ರಗಳ ಮೇಲೆ ಹೆಚ್ಚಿನ ಗಮನಹರಿಸಲಾಗುತ್ತಿದೆ.

ಕರ್ನಾಟಕದಲ್ಲಿನ ಇವಿ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಈ ಮೂಲಕ ಎಲೆಕ್ಟ್ರಿಕ್ ವಾಹನಗಳಿಗೆ ಕೊನೆಯ ಮೈಲಿ ತನಕವೂ ಚಾರ್ಜಿಂಗ್ ಸೌಲಭ್ಯ ದೊರೆಯುವಂತೆ ಯೋಜನೆ ರೂಪಿಸಲಾಗುತ್ತಿದ್ದು, ಪ್ರಮುಖ ಪೆಟ್ರೋಲಿಯಂ ಕಂಪನಿಗಳು ಕೂಡಾ ಇವಿ ನಿಲ್ದಾಣಗಳನ್ನು ಹೆಚ್ಚಿಸಲು ಪೆಟ್ರೋಲ್ ಬಂಕ್‌ಗಳಲ್ಲಿಯೇ ಚಾರ್ಜಿಂಗ್ ಪಾಯಿಂಟ್‌ಗಳನ್ನು ನಿರ್ಮಾಣಕ್ಕೆ ಚಾಲನೆ ನೀಡಿವೆ.

Article Published On: Saturday, April 16, 2022, 20:05 [IST]
English summary
Electric vehicle registrations crosses 1 lakh unit in karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+