ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿದ್ದಂತೆ ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ಮೂಲಸೌಕರ್ಯವೂ ಸಹ ಉತ್ತಮಗೊಳ್ಳುತ್ತಿದ್ದು, ಕೇಂದ್ರ ವಿದ್ಯುತ್ ಸಚಿವಾಲಯದ ಪ್ರಕಾರ ದೇಶದ ಪ್ರಮುಖ ಒಂಬತ್ತು ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯು ಕಳೆದ ನಾಲ್ಕು ತಿಂಗಳಲ್ಲಿ 2.5 ಪಟ್ಟು ಹೆಚ್ಚಾಗಿದೆ ಎಂದಿದೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಇವಿ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೇಶಾದ್ಯಂತ ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿರುವುದು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡಲಾಗುತ್ತಿರುವುದು ಇವಿ ವಾಹನಗಳ ಬಳಕೆಗೆ ಸಾರ್ವಜನಿಕ ಆದ್ಯತೆ ನೀಡುತ್ತಿದ್ದಾರೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಇವಿ ವಾಹನ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಇವಿ ವಾಹನಗಳಿಗೆ ಪೂರಕವಾಗಿ ಈಗಗಾಲೇ ದೇಶದ ಪ್ರಮುಖ ನಗರಗಳಲ್ಲಿ ಸಾವಿರಾರು ಸಾರ್ವಜನಿಕ ಬಳಕೆಯ ಫಾಸ್ಟ್ ಇವಿ ಚಾರ್ಜಿಂಗ್ ನಿಲ್ದಾಣಗಳು ಕಾರ್ಯನಿರ್ವಹಣೆ ಮಾಡುತ್ತಿದ್ದು, ಪ್ರಸ್ತುತ ಭಾರತದಲ್ಲಿ ಸುಮಾರು 1,640 ಸಾರ್ವಜನಿಕ ಬಳಕೆ ತ್ವರಿತ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಇದರಲ್ಲಿ 940 ಇವಿ ಚಾರ್ಜಿಂಗ್ ಕೇಂದ್ರಗಳು ದೇಶದ ಪ್ರಮುಖ ನಗರಳಾದ ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ, ಸೂರತ್, ಪುಣೆ, ಕೋಲ್ಕತ್ತಾ, ಅಹಮದಾಬಾದ್ ಮತ್ತು ಹೈದರಾಬಾದ್ ನಗರಗಳಲ್ಲಿ ಹರಡಿಕೊಂಡಿದ್ದು, ಮಾಹಿತಿಗಳ ಪ್ರಕಾರ ಅಕ್ಟೋಬರ್ 2021 ಮತ್ತು ಜನವರಿ 2022 ರ ನಡುವೆ ಈ ಒಂಬತ್ತು ನಗರಗಳಲ್ಲಿ ಹೊಸದಾಗಿ 678 ಸಾರ್ವಜನಿಕ ಇವಿ ಚಾರ್ಜಿಂಗ್ ಕೇಂದ್ರಗಳು ಹೊಸದಾಗಿ ಆರಂಭಗೊಂಡಿವೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಜನವರಿ 14 ರಂದು ವಿದ್ಯುತ್ ಸಚಿವಾಲಯವು ಇವಿ ಚಾರ್ಜಿಂಗ್ ಮೂಲಸೌಕರ್ಯಕ್ಕಾಗಿ ಪರಿಷ್ಕೃತ ಏಕೀಕೃತ ಮಾರ್ಗಸೂಚಿಗಳು ಮತ್ತು ಮಾನದಂಡಗಳನ್ನು ಹೊರಡಿಸಿದ್ದು, ವಿದ್ಯುತ್ ಸಚಿವಾಲಯದ ಪ್ರಕಾರ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆ ಮತ್ತು ಅಳವಡಿಕೆಯನ್ನು ಉತ್ತೇಜಿಸಲು ಕೇಂದ್ರವು ಹಲವಾರು ಉಪಕ್ರಮಗಳನ್ನು ತೆಗೆದುಕೊಂಡಿದೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಮುಂದಿನ ಎರಡು ವರ್ಷಗಳಲ್ಲಿ ಬೆಳೆಯುತ್ತಿರುವ ಇವಿ ವಾಹನ ಮಾರುಕಟ್ಟೆಗಾಗಿ ದೇಶಾದ್ಯಂತ 20 ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ನಿಲ್ದಾಣಗಳು ಕಾರ್ಯನಿರ್ಹವಣೆ ಹೊಂದಿರುವ ಅಂದಾಜು ಮಾಡಲಾಗಿದ್ದು, ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಜೊತೆಗೆ ಬ್ಯಾಟರಿ ವಿನಿಮಯ ಕೇಂದ್ರಗಳ ಮೇಲೆ ಹೆಚ್ಚಿನ ಗಮನಹರಿಸಲಾಗುತ್ತಿದೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಈ ಮೂಲಕ ಎಲೆಕ್ಟ್ರಿಕ್ ವಾಹನಗಳಿಗೆ ಕೊನೆಯ ಮೈಲಿ ತನಕವೂ ಚಾರ್ಜಿಂಗ್ ಸೌಲಭ್ಯ ದೊರೆಯುವಂತೆ ಯೋಜನೆ ರೂಪಿಸಲಾಗುತ್ತಿದ್ದು, ಪ್ರಮುಖ ಪೆಟ್ರೋಲಿಯಂ ಕಂಪನಿಗಳು ಕೂಡಾ ಇವಿ ನಿಲ್ದಾಣಗಳನ್ನು ಹೆಚ್ಚಿಸಲು ಪೆಟ್ರೋಲ್ ಬಂಕ್‌ಗಳಲ್ಲಿಯೇ ಚಾರ್ಜಿಂಗ್ ಪಾಯಿಂಟ್‌ಗಳನ್ನು ನಿರ್ಮಾಣಕ್ಕೆ ಚಾಲನೆ ನೀಡಿವೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಸರ್ಕಾರಿ ಸ್ವಾಮ್ಯದ ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ (ಸಿಇಎಸ್ಎಲ್) ಸಂಸ್ಥೆಯು ದೇಶಾದ್ಯಂತ ಸಾವಿರಾರು ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಹೊಸ ಯೋಜನೆಯಡಿ ಭಾರತ್ ಪೆಟ್ರೋಲಿಯಂ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಹಂತ-ಹಂತವಾಗಿ 7 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಯೋಜನೆ ಸಿದ್ದಪಡಿಸಿದೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಭಾರತ್ ಪೆಟ್ರೋಲಿಯಂ ಕಂಪನಿಯ ಹೊಸ ಪ್ರಕಟನೆಯಲ್ಲಿ ಮುಂದಿನ ಅಕ್ಟೋಬರ್ ವೇಳೆಗೆ ದೇಶದ ಪ್ರಮುಖ ಕಡೆಗಳಲ್ಲಿ ಒಂದು ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದಿರುವುದಾಗಿ ಭರವಸೆ ನೀಡಿದ್ದು, ಇಂಧನ ಚಾಲಿತ ಬದಲಾಗಿ ಪರಿಸರ ಸ್ನೇಹಿ ವಾಹನಗಳನ್ನು ಉತ್ತೇಜಿಸಲು ಎಲ್ಲಾ ಮೂಲಭೂತ ಸೌಕರ್ಯ ಒದಗಿಸುವುವಲ್ಲಿ ಕಂಪನಿಯು ಬದ್ದವಾಗಿದೆ ಎಂದಿದೆ.

ಇವಿ ವಾಹನಗಳಿಗೆ ಬೇಡಿಕೆ- ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಯಲ್ಲಿ ಗಮನಾರ್ಹ ಬೆಳವಣಿಗೆ

ಅತಿ ಕಡಿಮೆ ಅವಧಿಯ ಹೆಚ್ಚಿನ ಪ್ರಮಾಣದ ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ಪರಿಚಯಿಸಲಾಗುತ್ತಿದ್ದು, ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಸಹಕಾರಿಯಾಗುವಂತೆ ಹೊಸ ಯೋಜನೆ ರೂಪಿಸಲಾಗಿದೆ.

Article Published On: Tuesday, February 22, 2022, 9:03 [IST]
English summary
Electric vehicles charging stations doubled in metro cities
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+