ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಇವಿ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೇಶಾದ್ಯಂತ ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿರುವುದು ಮಹತ್ವದ ಬದಲಾವಣೆಗೆ ಕಾರಣವಾಗುತ್ತಿದೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡಲಾಗುತ್ತಿರುವುದರಿಂದ ಇವಿ ವಾಹನಗಳ ಬಳಕೆಗೆ ಸಾರ್ವಜನಿಕರು ಆದ್ಯತೆ ನೀಡುತ್ತಿದ್ದಾರೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇವಿ ವಾಹನ ನೋಂದಣಿಯಲ್ಲಿ ಸಾಕಷ್ಟು ಹೆಚ್ಚಳವಾಗಿದೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ದೆಹಲಿಯಲ್ಲಿ ಫೆಬ್ರವರಿ ಅವಧಿಯಲ್ಲಿನ ಇವಿ ವಾಹನಗಳ ನೋಂದಣಿ ಪ್ರಮಾಣವು ಈ ಹಿಂದಿಗಿಂತಲೂ ಹೆಚ್ಚು ದಾಖಲಾಗಿದ್ದು, ಒಟ್ಟಾರೆ ನೋಂದಣಿಯಾಗಿರುವ ವಾಹನಗಳಲ್ಲಿ ಶೇ. 8.2 ರಷ್ಟು ಇವಿ ವಾಹನ ಮಾದರಿಗಳಾಗಿವೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಕಳೆದ ಕೆಲ ತಿಂಗಳಿನಿಂದ ಒಟ್ಟಾರೆ ವಾಹನಗಳ ನೋಂದಣಿ ಪ್ರಮಾಣದಲ್ಲಿ ಶೇ.2, ಶೇ. 3 ರಷ್ಟು ಪಾಲು ಹೊಂದಿದ್ದ ಇವಿ ವಾಹನಗಳ ನೋಂದಣಿ ಪ್ರಮಾಣ ಇದೀಗ ಗರಿಷ್ಠ ಪ್ರಮಾಣಕ್ಕೆ ಏರಿಕೆ ಕಂಡಿದ್ದು, ಸದ್ಯ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಪರಿಣಾಮ ಇವಿ ವಾಹನಗಳು ಇನ್ನು ಹೆಚ್ಚಿನ ಮಟ್ಟದಲ್ಲಿ ರಸ್ತೆಗಿಳಿಯಲಿವೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಮಾಹಿತಿಗಳ ಪ್ರಕಾರ ದೇಶಾದ್ಯಂತ ಇದುವರೆಗೆ ಸುಮಾರು 10 ಲಕ್ಷ ಇವಿ ವಾಹನಗಳು ನೋಂದಣಿಯಾಗಿ ಎನ್ನಲಾಗಿದ್ದು, ಸಾಮಾನ್ಯ ವಾಹನಗಳ ನೋಂದಣಿ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ತೀರಾ ಕಡಿಮೆ ಪ್ರಮಾಣ ಎನ್ನಬಹುದು. ಹೀಗಾಗಿ ಇವಿ ವಾಹನಗಳ ಉತ್ತೇಜನಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಇವಿ ವಾಹನಗಳ ಹೆಚ್ಚಳಕ್ಕೆ ಮುಖ್ಯವಾಗಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲಾಗುತ್ತಿದೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಇಂಧನ ಚಾಲಿತ ವಾಹನಗಳ ಬಳಕೆ ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಇವಿ ವಾಹನ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಸಹ ಕ್ರಮ ಕೈಗೊಳ್ಳಲಾಗುತ್ತಿದೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆಯನ್ನು ಆರಂಭಿಸುತ್ತಿವೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಇವಿ ವಾಹನಗಳಿಗೆ ಪೂರಕವಾಗಿ ಈಗಗಾಲೇ ನೂರಾರು ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿರುವ ದೆಹಲಿ ಸರ್ಕಾರವು ಇದೀಗ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದು, ದೆಹಲಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳ ಆವರಣಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿದೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯು ಇವಿ ವಾಹನ ಬಳಕೆಗೆ ಅನುಕೂಲವಾಗುವಂತೆ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಸ್ಥಳ ಲಭ್ಯತೆ ಆಧಾರಿಸಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಜೋಡಣೆ ಮಾಡಲಿದೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಇದರ ಜೊತೆ ಇವಿ ವಾಹನಗಳಿಗೆ ಪೂರಕವಾಗಿ ಈಗಗಾಲೇ ನೂರಾರು ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿರುವ ದೆಹಲಿ ಸರ್ಕಾರವು ಇದೀಗ ಗ್ರಾಹಕರ ಬೇಡಿಕೆಯೆಂತೆ ಖಾಸಗಿ ಬಳಕೆಯ ಇವಿ ಚಾರ್ಜಿಂಗ್ ನಿಲ್ದಾಣಗಳ ಜೋಡಣೆಗೆ ಚಾಲನೆ ನೀಡಿದೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ದೆಹಲಿ ಸರ್ಕಾರವು ತನ್ನ ಸಿಂಗಲ್-ವಿಂಡೋ ಸೌಲಭ್ಯದ ಅಡಿಯಲ್ಲಿ ಖಾಸಗಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಪ್ರತ್ಯೇಕವಾದ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸುತ್ತಿದ್ದು, ಕಳೆದ ನವೆಂಬರ್‌ನಲ್ಲಿ ಪ್ರಾರಂಭವಾದ ಸಿಂಗಲ್-ವಿಂಡೋ ಸೌಲಭ್ಯದ ಮೂಲಕ ಖಾಸಗಿ ಮತ್ತು ಅರೆ-ಸಾರ್ವಜನಿಕ ಸ್ಥಳಗಳಲ್ಲಿ ಪ್ರತ್ಯೇಕವಾದ ಚಾರ್ಜಿಂಗ್ ಪಾಯಿಂಟ್‌ಗಳ ಅಭಿವೃದ್ದಿಗೆ ಚಾಲನೆ ನೀಡಲಾಗಿದೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಖಾಸಗಿ ಚಾರ್ಜಿಂಗ್ ನಿಲ್ದಾಣವು ನಿಗದಿಪಡಿಸಿದ ಮಾಲೀಕರಿಗೆ ಮಾತ್ರ ಬಳಕೆ ಮಾಡಬಹುದಾಗಿದ್ದು, ಅರೆ ಸಾರ್ವಜನಿಕ ಸ್ಥಳಗಳಾದ ಅಪಾರ್ಟ್‌ಮೆಂಟ್‌ಗಳು, ಹೌಸಿಂಗ್ ಗ್ರೂಪ್ ಸೊಸೈಟಿಗಳು, ಆಸ್ಪತ್ರೆಗಳು, ಮಾಲ್‌ಗಳು ಮತ್ತು ಥಿಯೇಟರ್‌ಗಳಲ್ಲಿ ಒಂದು ನಿರ್ದಿಷ್ಟ ಮಟ್ಟದ ಗ್ರಾಹಕರು ಅಥವಾ ಜನರ ಗುಂಪಿಗೆ ಚಾರ್ಜಿಂಗ್ ಮೂಲಸೌಕರ್ಯವನ್ನು ತ್ವರಿತವಾಗಿ ವಿಸ್ತರಿಸುವ ಯೋಜನೆ ಇದಾಗಿದೆ.

ಇಂಧನ ದರ ಏರಿಕೆ ಪರಿಣಾಮ ಹೆಚ್ಚಳವಾದ ಇವಿ ವಾಹನಗಳ ನೋಂದಣಿ ಪ್ರಮಾಣ

ಸಿಂಗಲ್-ವಿಂಡೋ ಸೌಲಭ್ಯದ ಅಡಿಯಲ್ಲಿ ದೆಹಲಿ ವಿದ್ಯುತ್ ನಿಯಮ ಮಂಡಳಿಯು ವಾಹನ ಮಾಲೀಕರು ಅರ್ಜಿ ಸಲ್ಲಿಸಿದ 7 ದಿನಗಳ ಒಳಗಾಗಿ ಸ್ಥಳ ಲಭ್ಯತೆ ಆಧಾರಿಸಿ ಫಾಸ್ಟ್ ಚಾರ್ಜಿಂಗ್ ನಿರ್ಮಿಸಿಕೊಡುತ್ತಿದ್ದು, ಖಾಸಗಿ ಮತ್ತು ಸಾರ್ವಜನಿಕ ಚಾರ್ಜಿಂಗ್ ಮೂಲಸೌಕರ್ಯವನ್ನು ಹೆಚ್ಚಿಸುತ್ತಿದೆ.

Most Read Articles

Kannada
English summary
Electric vehicles registration spike in delhi details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X