India
YouTube

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು!

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೇಶಾದ್ಯಂತ ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿವೆ. ಇದರಲ್ಲಿ ಕೇಂದ್ರದ ಫೇಮ್ 2 ಸಬ್ಸಡಿ ಯೋಜನೆಯು ಪ್ರಮುಖವಾಗಿದ್ದು, ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಇವಿ ವಾಹನಗಳ ಉತ್ತೇಜನಕ್ಕೆ ವಿವಿಧ ಸಬ್ಸಡಿ ಯೋಜನೆಗಳನ್ನು ಅಳವಡಿಸಿಕೊಂಡಿವೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರೋತ್ಸಾಹದಿಂದಾಗಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಸಬ್ಸಡಿ ಯೋಜನೆಗಳಿಂದಾಗಿ ಇವಿ ವಾಹನಗಳ ಬಳಕೆಗೆ ಸಾರ್ವಜನಿಕರು ಆದ್ಯತೆ ನೀಡುತ್ತಿದ್ದಾರೆ. ಕರ್ನಾಟಕದಲ್ಲೂ ಸಹ ಇವಿ ವಾಹನಗಳ ಅಳವಡಿಕೆಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ಯೋಜನೆಗಳನ್ನು ಘೋಷಣೆ ಮಾಡಿದ್ದು, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಇವಿ ವಾಹನಗಳು ಸಾಕಷ್ಟು ಸಂಖ್ಯೆಯಲ್ಲಿ ರಸ್ತೆಗಿಳಿದಿವೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ರಾಜ್ಯ ಸರ್ಕಾರದ ಸಬ್ಸಡಿ ಯೋಜನೆ ಜಾರಿ ನಂತರ ಇದುವರೆಗೆ ಕರ್ನಾಟಕದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಹೆಚ್ಚಳ ಪರಿಣಾಮ ಇವಿ ವಾಹನಗಳ ಸಂಖ್ಯೆಯು ನಿಧಾನವಾಗಿ ಏರಿಕೆಯಾಗುತ್ತಿದೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಮಾತ್ರವಲ್ಲದೆ ಹೊಸದಾಗಿ ಇವಿ ವಾಹನ ಉತ್ಪಾದನೆಗೆ ಪೂರಕವಾದ ಸ್ಟಾರ್ಟ್‌ಅಪ್ ಕಂಪನಿಗಳಿಗೂ ರಾಜ್ಯ ಸರ್ಕಾರವು ಹಲವಾರು ಸಬ್ಸಡಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಗಳಿಂದಾಗಿ ಕರ್ನಾಟಕದಲ್ಲಿ ಇದೀಗ 45ಕ್ಕೂ ಹೆಚ್ಚು ಇವಿ ವಾಹನಗಳಿಗೆ ಸಂಬಂಧಿಸಿದ ಸ್ಟಾರ್ಟ್ಅಪ್ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ರಾಜ್ಯಗಳ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಂಡ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಹೊಂದಿರುವ ಕರ್ನಾಟಕದಲ್ಲಿ ಪ್ರಮುಖ ಇವಿ ವಾಹನ ತಯಾರಕ ಕಂಪನಿಗಳು ಉತ್ಪಾದನೆಯನ್ನು ಕೈಗೊಳ್ಳುತ್ತಿದ್ದು, ಇವಿ ವಾಹನಗಳ ಹೆಚ್ಚುತ್ತಿದ್ದಂತೆ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳನ್ನು ಸಹ ಹೆಚ್ಚಳ ಮಾಡಲಾಗುತ್ತಿದೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ರಾಜ್ಯ ಸರ್ಕಾರದ ಬದ್ದತೆ ತೋರಿದ ಪರಿಣಾಮ ಇವಿ ವಾಹನ ನೋಂದಣಿಯಲ್ಲಿ ಹೆಚ್ಚಳವಾಗಿರುವ ಬಗ್ಗೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾಹಿತಿ ಹಂಚಿಕೊಂಡಿದ್ದು, ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿವೆ ಎಂದಿದ್ದಾರೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಈ ಮೊದಲು ರಾಜಧಾನಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಇವಿ ವಾಹನ ಬಳಕೆಯು ಇದೀಗ ಪ್ರಮುಖ ಜಿಲ್ಲಾ ಕೇಂದ್ರಗಳಲ್ಲೂ ಕೂಡಾ ಹೆಚ್ಚುತ್ತಿದ್ದು, ಇವಿ ವಾಹನಗಳಿಗೆ ಪೂರಕವಾಗಿ ರಾಜ್ಯ ಸರ್ಕಾರವು ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ನಿಲ್ದಾಣಗಳ ಆರಂಭಿಸುತ್ತಿದೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಇವಿ ವಾಹನಗಳ ನೋಂದಣಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳು ಮೊದಲ ಸ್ಥಾನದಲ್ಲಿದ್ದು, ತದನಂತರ ಎಲೆಕ್ಟ್ರಿಕ್ ಕಾರುಗಳು ಮತ್ತು ತ್ರಿ-ಚಕ್ರ ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಬೇಡಿಕೆ ಹೊಂದಿದ್ದು, ಮಾಹಿತಿಗಳ ಪ್ರಕಾರ ದೇಶಾದ್ಯಂತ ಇದುವರೆಗೆ ಸುಮಾರು 10 ಲಕ್ಷ ಇವಿ ವಾಹನಗಳು ನೋಂದಣಿಯಾಗಿವೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಸಾಮಾನ್ಯ ವಾಹನಗಳ ನೋಂದಣಿ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ಇದು ಕಡಿಮೆ ಪ್ರಮಾಣವಾಗಿದ್ದರೂ ಮುಂಬರುವ ವರ್ಷಗಳಲ್ಲಿ ಇವಿ ನೋಂದಣಿಯು ಹೆಚ್ಚಳವಾಗುವ ಸಾಧ್ಯತೆಗಳಿದ್ದು, ಇವಿ ವಾಹನಗಳ ಸಂಖ್ಯೆ ಹೆಚ್ಚಿದಂತೆ ಸೂಕ್ತವಾದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುವುದು ಹೊಸ ಸವಾಲಾಗಿದೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಭವಿಷ್ಯ ಯೋಜನೆಗಳ ಮೇಲೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬರೋಬ್ಬರಿ ಒಂದು ಸಾವಿರ ಹೊಸ ಇವಿ ಚಾರ್ಜಿಂಗ್‌ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಇತ್ತೀಚೆಗೆ ರಾಜ್ಯ ಇಂಧನ ಸಚಿವ ವಿ ಸುನಿಲ್‌ ಕುಮಾರ್‌ ಮಾಹಿತಿ ಹಂಚಿಕೊಂಡಿದ್ದರು.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಜುಲೈ ತಿಂಗಳಾಂತ್ಯಕ್ಕೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ, ಪ್ರವಾಸಿ ತಾಣಗಳು, ಹೆದ್ದಾರಿ ಮತ್ತು ಪ್ರಮುಖ ಸರ್ಕಾರಿ ಕಚೇರಿಗಳ ಆವರಣದಲ್ಲಿ ಕನಿಷ್ಠ ಒಂದು ಸಾವಿರ ವಿದ್ಯುತ್‌ ಚಾರ್ಜಿಂಗ್‌ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಇಂಧನ ಸಚಿವರು ಭರವಸೆ ನೀಡಿದ್ದು, ಹೊಸ ಯೋಜನೆ ಅಡಿಯಲ್ಲಿ ಈಗಾಗಲೇ ಪ್ರಮುಖ ಜಿಲ್ಲಾ ಕೇಂದ್ರಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಜೊತಗೆ ಇವಿ ವಾಹನಗಳಿಗೆ ಅಗತ್ಯವಾದ ವಿದ್ಯುತ್ ಪೂರೈಕೆಗಾಗಿ ಎಲ್ಲಾ ಸಿದ್ದತೆ ಮಾಡಿಕೊಂಡಿರುವುದಾಗಿ ಹೇಳಿರುವ ಇಂಧನ ಸಚಿವರು ನವೀಕರಿಸಬಹುದಾದ ಇಂಧನ ನೀತಿಯು 5 ವರ್ಷಗಳಿಗೆ ಘೋಷಣೆ ಆಗಿದ್ದು, ಹೊಸ ನೀತಿಯಡಿ 30 ಸಾವಿರ ಮೆಗಾವ್ಯಾಟ್​ ವಿದ್ಯುತ್ ಉತ್ಪಾದ‌ನೆ ಗುರಿ ಹೊಂದಲಾಗಿದೆ ಎಂದಿದ್ದಾರೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಕೇಂದ್ರ ವಿದ್ಯುತ್ ಸಚಿವಾಲಯದ ಪ್ರಕಾರ ದೇಶದ ಪ್ರಮುಖ ಒಂಬತ್ತು ನಗರಗಳಲ್ಲಿ ಸಾರ್ವಜನಿಕ ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯು ಕಳೆದ ಐದು ತಿಂಗಳ ಅವಧಿಯಲ್ಲಿ 2.5 ಪಟ್ಟು ಹೆಚ್ಚಾಗಿದೆ ಎನ್ನಲಾಗಿದ್ದು, ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಿದರೆ ಮಾತ್ರವೇ ಗ್ರಾಹಕರು ಇವಿ ವಾಹನಗಳ ಅಳವಡಿಕೆಗೆ ಆಸಕ್ತಿ ತೋರುವುದಾಗಿ ವಿದ್ಯುತ್ ಸಚಿವಾಲಯದ ಸ್ಪಷ್ಟಪಡಿಸಿದೆ.

ಕರ್ನಾಟಕದಲ್ಲಿನ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಹೊಸ ಮೈಲಿಗಲ್ಲು

ಹೀಗಾಗಿ ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದ್ದು, ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ನಿಲ್ದಾಣಗಳು ಕಾರ್ಯನಿರ್ವಹಣೆ ಆರಂಭಿಸುವ ಸಿದ್ದತೆಯಲ್ಲಿವೆ.

Most Read Articles

Kannada
English summary
Electric vehicles registrations crosses 1 lakh unit in karnataka details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X