ಇವಿ ವಾಹನಗಳ ದರವು ಜನಸಾಮಾನ್ಯರ ಕೈಗೆಟುವಂತಿರಬೇಕು- ಸಿಎಂ ಬಸವರಾಜ ಬೊಮ್ಮಾಯಿ

ಬೆಸ್ಕಾಂ ವತಿಯಿಂದ ಆಯೋಜಿಸಲಾಗಿರುವ ಇವಿ ಅಭಿಯಾನ ಮತ್ತು ಇವಿ ಎಕ್ಸ್‌ಪೋ ಕಾರ್ಯಕ್ರಮಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇವಿ ವಾಹನಗಳ ದರವು ಜನಸಾಮಾನ್ಯರ ಕೈಗೆಟುವಂತಿರಬೇಕು- ಬಸವರಾಜ ಬೊಮ್ಮಾಯಿ

ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯುವ ಉದ್ದೇಶದೊಂದಿಗೆ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವುದಕ್ಕಾಗಿ ಇಂಧನ ಇಲಾಖೆ ಹಾಗೂ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವತಿಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇವಿ ಅಭಿಯಾನ ಮತ್ತು ಇವಿ ಎಕ್ಸ್‌ಪೋ ಹಮ್ಮಿಕೊಂಡಿದ್ದವು.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಜುಲೈ 1 ರಿಂದ 6ರ ತನಕ ಇವಿ ಎಕ್ಸ್‌ಪೋ ಹಮ್ಮಿಕೊಳ್ಳಲಾಗಿದ್ದು, ನವೀಕರಿಸಬಹುದಾದ ಇಂಧನಗಳಿಗೆ ಒತ್ತು ಕೊಡುವ ಅವಶ್ಯಕತೆ ಹೆಚ್ಚಿದೆ ಎಂದು ಇವಿ ಎಕ್ಸ್‌ಪೋ ಉದ್ಘಾಟಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಇದೇ ವೇಳೆ ಇವಿ ವಾಹನ ತಯಾಕರಲ್ಲಿ ಮನವಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು ಇವಿ ವಾಹನಗಳ ದರವು ಜನಸಾಮಾನ್ಯರ ಕೈಗೆಟುವಂತಿರಬೇಕು ಅಂದಾಗ ಮಾತ್ರ ಇವಿ ವಾಹನ ಬಳಕೆ ಹೆಚ್ಚಾಗಲು ಸಾಧ್ಯವೆಂದರು. ಸದ್ಯ ಪರಿಸ್ಥಿತಿ ಇವಿ ವಾಹನಗಳ ಹೆಚ್ಚಿನ ದರದಿಂದಾಗಿ ಅವುಗಳ ಅಳವಡಿಕೆ ಹೊರೆಯಾಗಲಿದ್ದು, ಮುಂಬರುವ ದಿನಗಳಲ್ಲಿ ಸಾಮಾನ್ಯರೂ ಖರೀದಿಸುವಂತಹ ಇವಿ ವಾಹನಗಳ ಉತ್ಪಾದನೆ ಅಗತ್ಯವಿದೆ ಎಂದರು.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಜೊತೆಗೆ ಇವಿ ವಾಹನಗಳಿಗೆ ಅಗತ್ಯವಾದ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ದವಿರುವುದಾಗಿ ಭರವಸೆ ನೀಡಿದ್ದಲ್ಲದೆ ಇವಿ ವಾಹನ ತಯಾರಕ ಕಂಪನಿಗಳು ಬ್ಯಾಟರಿ ವಿನಿಯಮ ಕೇಂದ್ರಗಳ ಸ್ಥಾಪನೆಯ ಮೇಲೂ ಹೆಚ್ಚಿನ ಗಮನಹರಿಸುವಂತೆ ಮನವಿ ಮಾಡಿದರು.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಚಾರ್ಜಿಂಗ್ ನಿಲ್ದಾಣಗಳಿಂತಲೂ ಭವಿಷ್ಯದಲ್ಲಿ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಬೇಡಿಕೆ ಹೆಚ್ಚಳವಾಗುವ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ಬಿಎಂಟಿಸಿ ಸಾರಿಗೆ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಇವಿ ಬಸ್‌ಗಳ ಅಳವಡಿಕೆಯ ಸುಳಿವು ನೀಡಿದರು.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಶೀಘ್ರದಲ್ಲಿಯೇ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾರ್ವಜನಿಕ ಸಾರಿಗೆಗಾಗಿ ಇವಿ ಬಸ್‌ಗಳನ್ನು ಅಳವಡಿಸಿಕೊಳ್ಳಲು ಕುರಿತು ನಿರ್ಧಾರ ಪ್ರಕಟವಾಗಲಿದ್ದು, ಹೊಸ ಇವಿ ನೀತಿ ಮೂಲಕ ಮಾಲಿನ್ಯ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸುವ ಯೋಜನೆ ರೂಪಿಸಲಾಗಿದೆ.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೇಶಾದ್ಯಂತ ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿವೆ. ಇದರಲ್ಲಿ ಕೇಂದ್ರದ ಫೇಮ್ 2 ಸಬ್ಸಡಿ ಯೋಜನೆಯು ಪ್ರಮುಖವಾಗಿದ್ದು, ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಇವಿ ವಾಹನಗಳ ಉತ್ತೇಜನಕ್ಕೆ ವಿವಿಧ ಸಬ್ಸಡಿ ಯೋಜನೆಗಳನ್ನು ಅಳವಡಿಸಿಕೊಳ್ಳುತ್ತಿವೆ.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರೋತ್ಸಾಹದಿಂದಾಗಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಸಬ್ಸಡಿ ಯೋಜನೆಗಳಿಂದಾಗಿ ಇವಿ ವಾಹನಗಳ ಬಳಕೆಗೆ ಸಾರ್ವಜನಿಕರು ಆದ್ಯತೆ ನೀಡುತ್ತಿದ್ದಾರೆ. ಕರ್ನಾಟಕದಲ್ಲೂ ಸಹ ಇವಿ ವಾಹನಗಳ ಅಳವಡಿಕೆಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ಯೋಜನೆಗಳನ್ನು ಘೋಷಣೆ ಮಾಡಿದ್ದು, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಇವಿ ವಾಹನಗಳು ಸಾಕಷ್ಟು ಸಂಖ್ಯೆಯಲ್ಲಿ ರಸ್ತೆಗಿಳಿದಿವೆ.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದ ಸಬ್ಸಡಿ ಯೋಜನೆ ಜಾರಿ ನಂತರ ಇದುವರೆಗೆ ಕರ್ನಾಟಕದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಹೆಚ್ಚಳ ಪರಿಣಾಮ ಇವಿ ವಾಹನಗಳ ಸಂಖ್ಯೆಯು ನಿಧಾನವಾಗಿ ಏರಿಕೆಯಾಗುತ್ತಿದೆ.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಮಾತ್ರವಲ್ಲದೆ ಹೊಸದಾಗಿ ಇವಿ ವಾಹನ ಉತ್ಪಾದನೆಗೆ ಪೂರಕವಾದ ಸ್ಟಾರ್ಟ್‌ಅಪ್ ಕಂಪನಿಗಳಿಗೂ ರಾಜ್ಯ ಸರ್ಕಾರವು ಹಲವಾರು ಸಬ್ಸಡಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಗಳಿಂದಾಗಿ ಕರ್ನಾಟಕದಲ್ಲಿ ಇದೀಗ 45ಕ್ಕೂ ಹೆಚ್ಚು ಇವಿ ವಾಹನಗಳಿಗೆ ಸಂಬಂಧಿಸಿತ ಸ್ಟಾರ್ಟ್ಅಪ್ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯಗಳ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಂಡ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಹೊಂದಿರುವ ಕರ್ನಾಟಕದಲ್ಲಿ ಪ್ರಮುಖ ಇವಿ ವಾಹನ ತಯಾರಕ ಕಂಪನಿಗಳು ಉತ್ಪಾದನೆಯನ್ನು ಕೈಗೊಳ್ಳುತ್ತಿದ್ದು, ಇವಿ ವಾಹನಗಳ ಹೆಚ್ಚುತ್ತಿದ್ದಂತೆ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳನ್ನು ಸಹ ಹೆಚ್ಚಳ ಮಾಡಲಾಗುತ್ತಿದೆ.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಈ ಮೊದಲು ರಾಜಧಾನಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಇವಿ ವಾಹನ ಬಳಕೆಯು ಇದೀಗ ಪ್ರಮುಖ ಜಿಲ್ಲಾ ಕೇಂದ್ರಗಳಲ್ಲೂ ಕೂಡಾ ಹೆಚ್ಚುತ್ತಿದ್ದು, ಇವಿ ವಾಹನಗಳಿಗೆ ಪೂರಕವಾಗಿ ರಾಜ್ಯ ಸರ್ಕಾರವು ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ನಿಲ್ದಾಣಗಳ ಆರಂಭಿಸುತ್ತಿದೆ.

ಕಂಪನಿಗಳಿಗೆ ಸಲಹೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಇವಿ ವಾಹನಗಳ ನೋಂದಣಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳು ಮೊದಲ ಸ್ಥಾನದಲ್ಲಿದ್ದು, ತದನಂತರ ಎಲೆಕ್ಟ್ರಿಕ್ ಕಾರುಗಳು ಮತ್ತು ತ್ರಿ-ಚಕ್ರ ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಬೇಡಿಕೆ ಹೊಂದಿದ್ದು, ಮಾಹಿತಿಗಳ ಪ್ರಕಾರ ದೇಶಾದ್ಯಂತ ಇದುವರೆಗೆ ಸುಮಾರು 11 ಲಕ್ಷಕ್ಕೂ ಅಧಿಕ ಇವಿ ವಾಹನಗಳು ನೋಂದಣಿಯಾಗಿವೆ ಎನ್ನಲಾಗಿದೆ.

Most Read Articles

Kannada
English summary
Electric vehicles should be affordable for the common man basavaraj s bommai
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X