Just In
- 6 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 6 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 7 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 7 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇವಿ ವಾಹನ ಮಾರಾಟ: ಡಿಸೆಂಬರ್ ತಿಂಗಳಿನಲ್ಲಿ ಅತಿಹೆಚ್ಚು ಇವಿ ವಾಹನ ನೋಂದಣಿ
ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚವು ಸಹ ಸಾಕಷ್ಟು ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿವೆ.
ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲಿ ದೆಹಲಿ ಸರ್ಕಾರವು ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ತದನಂತರ ವಿವಿಧ ಸರ್ಕಾರವು ಸಹ ರಾಜ್ಯ ಮಟ್ಟದಲ್ಲಿ ಹೊಸ ಇವಿ ನೀತಿ ಅಳವಡಿಸಿಕೊಳ್ಳುತ್ತಿವೆ.
ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಹೊರತುಪಡಿಸಿ ವಿವಿಧ ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇಂಧನಗಳ ಬೆಲೆ ಹೆಚ್ಚಳ ಮತ್ತು ಇವಿ ವಾಹನಗಳಿಗೆ ನೀಡಲಾಗುತ್ತಿರುವ ಸಬ್ಸಡಿ ಯೋಜನೆಗಳಿಂದಾಗಿ ಇವಿ ವಾಹನ ಮಾರಾಟವು ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಕಳೆದ ಡಿಸೆಂಬರ್ ಅವಧಿಯಲ್ಲಿ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ.
ಜೆಎಂಕೆ ರಿಸರ್ಚ್ ಅಂಡ್ ಅನಾಲಿಟಿಕ್ಸ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿದ ವರದಿ ಪ್ರಕಾರ 2021ರ ಡಿಸೆಂಬರ್ ನಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಒಂದೇ ತಿಂಗಳಲ್ಲಿ 50,000 ಯುನಿಟ್ಗಳನ್ನು ದಾಟಿದ ಮೊದಲ ತಿಂಗಳು ಎಂದು ಹೇಳಿಕೊಂಡಿದ್ದು, ಇದು ಇದುವರೆಗೆ ಒಂದು ತಿಂಗಳಿನಲ್ಲಿ ಅತಿ ಹೆಚ್ಚು ನೋಂದಣಿಯಾಗಿದೆ.
2021ರ ಡಿಸೆಂಬರ್ನಲ್ಲಿ ಒಟ್ಟು 50,866 ಯುನಿಟ್ ಎಲೆಕ್ಟ್ರಿಕ್ ವಾಹನಗಳು ಮಾರಾಟಗೊಂಡಿದ್ದು, ಇದು 2020ರ ಡಿಸೆಂಬರ್ ಅವಧಿಯಲ್ಲಿ ನೋಂದಾಯಿಸಲಾದ ಒಟ್ಟು ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಗಿಂತಲೂ ಶೇ. 240 ಹೆಚ್ಚು ಎನ್ನಲಾಗಿದೆ.
ಅಲ್ಲದೆ ಕಳೆದ ತಿಂಗಳ ಇವಿ ವಾಹನ ಮಾರಾಟವು 2021ರ ನವೆಂಬರ್ ಅವಧಿಗೆ ಹೋಲಿಸಿದರೆ ಇದು ತಿಂಗಳಿನಿಂದ ತಿಂಗಳಿಗೆ (MoM) ಶೇ. 21ರಷ್ಟು ಬೆಳವಣಿಗೆಯನ್ನು ಸಾಧಿಸಿದ್ದು, ಇವಿ ವಾನಹಗಳ ನೋಂದಣಿಯಲ್ಲಿ ಶೇ.90 ರಷ್ಟು ದ್ವಿಚಕ್ರ ಮತ್ತು ತ್ರಿ-ಚಕ್ರ ವಾಹನಗಳಿವೆ.
ಎಲೆಕ್ಟ್ರಿಕ್ ವಾಹನಗಳ ಒಟ್ಟು ಮಾರಾಟ ಸಂಖ್ಯೆಯಲ್ಲಿ ಶೇ.10 ರಷ್ಟು ಕಾರುಗಳಿದ್ದು, ಇವಿ ವಾಹನಗಳ ನೋಂದಣಿಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ. ಉತ್ತರ ಪ್ರದೇಶದಲ್ಲಿ ಕಳೆದ ತಿಂಗಳು ಒಟ್ಟು 10 ಸಾವಿರ ಇವಿ ವಾಹನಗಳು ನೋಂದಣಿಯಾಗಿದ್ದು, ದೇಶಾದ್ಯಂತ ಮಾರಾಟ ಇವಿಗಳಲ್ಲಿ ಶೇಕಡಾ 23ರಷ್ಟು ಇದಾಗಿದೆ.
ಉತ್ತರ ಪ್ರದೇಶದ ನಂತರ ಶೇ. 13 ರಷ್ಟು ಇವಿ ಮಾರಾಟ ಹೊಂದಿರುವ ಮಹರಾಷ್ಟ್ರ 2ನೇ ಸ್ಥಾನದಲ್ಲಿ, ಶೇ.9 ರಷ್ಟು ಇವಿ ವಾಹನ ಮಾರಾಟ ಹೊಂದಿರುವ ಕರ್ನಾಟಕ ಮೂರನೇ ಸ್ಥಾನದಲ್ಲಿ, ಶೇ. 7 ರಷ್ಟು ಇವಿ ವಾಹನ ಮಾರಾಟ ಹೊಂದಿರುವ ದೆಹಲಿ 4ನೇ ಸ್ಥಾನದಲ್ಲಿ ಮತ್ತು ಶೇ.7 ರಷ್ಟು ಇವಿ ವಾಹನ ಮಾರಾಟ ಹೊಂದಿರುವ ತಮಿಳುನಾಡು 5ನೇ ಸ್ಥಾನದಲ್ಲಿದೆ.
ಇನ್ನು ಇವಿ ವಾಹನಗಳು ಸಾಂಪ್ರಾದಾಯಿಕ ವಾಹನಗಳಿಂತಲೂ ಕಡಿಮೆ ನಿರ್ವಹಣಾ ವೆಚ್ಚದೊಂದಿಗೆ ಮಾಲಿನ್ಯ ತಡೆಯಲು ಸಾಕಷ್ಟು ಸಹಕಾರಿಯಾಗಿದ್ದು, ಭವಿಷ್ಯದಲ್ಲಿ ಇವಿ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಬಳಕೆಯಾಗಲಿವೆ.
ಅತ್ಯುತ್ತಮ ಫೀಚರ್ಸ್ಗಳೊಂದಿಗೆ ದುಬಾರಿ ಬೆಲೆ ನಡುವೆಯೂ ಇವಿ ವಾಹನಗಳ ಮಾರಾಟವು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಆಕರ್ಷಕ ಮೈಲೇಜ್, ಹಲವಾರು ಪ್ರೀಮಿಯಂ ಫೀಚರ್ಸ್, ಅತ್ಯುತ್ತಮ ಎಲೆಕ್ಟ್ರಿಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ತಾಂತ್ರಿಕ ಸೇವೆಗಳ ವಿಚಾರವಾಗಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಹೊಂದಿವೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಗೊಳಿಸುವಲ್ಲಿ ಸ್ಟಾರ್ಟ್ಅಪ್ ಕಂಪನಿಗಳು ಯಶಸ್ವಿಯಾಗುತ್ತಿವೆ.
ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.
ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆಯನ್ನು ಆರಂಭಿಸುತ್ತಿವೆ.