ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಬೆಂಗಳೂರು ಮೂಲದ ಇವೆರೆ(EVRE) ಕಂಪನಿಯು ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸುತ್ತಿದ್ದು, ಕಂಪನಿಯ ಹೊಸ ಯೋಜನೆ ಅಡಿ ನಿರ್ಮಾಣ ಮಾಡಲಾಗುತ್ತಿರುವ ಪ್ರತಿ ಚಾರ್ಜಿಂಗ್ ಹಬ್‌ಗಳಲ್ಲೂ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ತೆರೆಯಲಾಗಿದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಇವಿ ವಾಹನಗಳಿಗೆ ಪೂರಕವಾಗಿ ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸುವತ್ತ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಸ್ವದೇಶಿ ಕಂಪನಿಯಾಗಿರುವ ಇವೆರೆ ಕಂಪನಿಯು ಕೂಡಾ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನೂರು ನಗರಗಳಲ್ಲಿ ವಿವಿಧ ಕಂಪನಿಗಳ ಸಹಯೋಗದೊಂದಿಗೆ ಬೃಹತ್ ಇವಿ ಚಾರ್ಜಿಂಗ್ ನಿಲ್ದಾಣಗಳ ಜಾಲ ತೆರೆಯುತ್ತಿದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಭಾರತದಲ್ಲಿ ಹೆಚ್ಚುತ್ತಿರುವ ಇವಿ ವಾಹನಗಳಿಗೆ ಪೂರಕವಾಗಿ ವಿವಿಧ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಇವಿ ವಾಹನಗಳ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ಹೆಚ್ಚಿಸಿದ್ದು, ಚಾರ್ಜಿಂಗ್ ಕೇಂದ್ರಗಳ ಹೆಚ್ಚಳಕ್ಕೆ ಪ್ರಮುಖ ಕಂಪನಿಗಳು ವಿಶೇಷ ಆಸಕ್ತಿ ವಹಿಸಿವೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಇವೆರೆ ಕಂಪನಿಯು ಈಗಾಗಲೇ ಇವಿ ವಾಹನಗಳಿಗಾಗಿ ಸಣ್ಣ ಪ್ರಮಾಣದ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯ ಒದಗಿಸುತ್ತಿದ್ದು, ಕಂಪನಿಯು ಇದೀಗ ಸಾಮಾನ್ಯ ಇವಿ ಚಾರ್ಜಿಂಗ್ ನಿಲ್ದಾಣಗಳಲ್ಲೂ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಖಚಿತಪಡಿಸುತ್ತಿದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಇವೆರೆ ಕಂಪನಿಯು ಈಗಾಗಲೇ 52 ಚಾರ್ಜಿಂಗ್ ನಿಲ್ದಾಣಗಳೊಂದಿಗೆ ಗ್ರಾಹಕರ ಸೇವೆಗಳನ್ನು ಒದಗಿಸುತ್ತಿದ್ದು, ಕಾರ್ಯನಿರ್ವಹಣೆಯಲ್ಲಿರುವ ಎಲ್ಲಾ ಚಾರ್ಜಿಂಗ್ ನಿಲ್ದಾಣಗಳಲ್ಲೂ ಇದೀಗ ಎಸಿ ಚಾರ್ಜರ್ (3.3 kW ಇಂಡಸ್ಟ್ರಿಯಲ್/ಡೊಮೆಸ್ಟಿಕ್ 3-ಪಿನ್ ಸಾಕೆಟ್ ಮತ್ತು 7 kW ಟೈಪ್-II) ಮತ್ತು ಇವಿ ಫ್ಲೀಟ್ ಮತ್ತು ಚಿಲ್ಲರೆ ಗ್ರಾಹಕರನ್ನು ಒಳಗೊಂಡಂತೆ ಅದರ ಎಲ್ಲಾ ಗ್ರಾಹಕರಿಗೆ ವೇಗದ ಡಿಸಿ ಚಾರ್ಜರ್ (GB/T ಮತ್ತು CCS) ನೊಂದಿಗೆ ಚಾರ್ಜಿಂಗ್ ಹಬ್ ಆಗಿ ಪರಿವರ್ತಿಸಿದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಇವೆರೆ ಕಂಪನಿಯ ದೊಡ್ಡ ಚಾರ್ಜಿಂಗ್ ಹಬ್‌ಗಳಲ್ಲಿ ಇದೀಗ ಒಂದೇ ಸಮಯದಲ್ಲಿ 80 ವಾಹನಗಳನ್ನು ಚಾರ್ಜ್ ಮಾಡಬಹುದಾಗಿದ್ದು, ಹೊಸ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ಇಂಟೆಲಿಜೆಂಟ್ ಫ್ರೇಮ್‌ವರ್ಕ್ ಅಡಿ ಅಭಿವೃದ್ದಿಗೊಳಿಸಲಾಗಿದೆ. ಇದು ಪ್ರತಿ ಇವಿ ವಾಹನ ಬಳಕೆದಾರರಿಗೆ ತಡೆರಹಿತ ಚಾರ್ಜಿಂಗ್ ಅನುಭವವನ್ನು ಖಚಿತಪಡಿಸಲಿದ್ದು, ಇವೆರೆ ಅಪ್ಲಿಕೇಶನ್ ಮೂಲಕ ಎಲ್ಲಾ ಸೇವೆಗಳಿಗೂ ಏಕ-ವಿಂಡೋ ಪ್ರವೇಶವನ್ನು ಒದಗಿಸಲಾಗುತ್ತದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಇವೆರೆ ಚಾರ್ಜಿಂಗ್ ನಿಲ್ದಾಣಗಳ ಮಾಹಿತಿಯನ್ನು ಕ್ಲೌಡ್-ಆಧಾರಿತ ತಂತ್ರಜ್ಞಾನದೊಂದಿಗೆ ಕಾರ್ಯನಿರ್ವಹಿಸುತ್ತಿರುವುದರಿಂದ ಎಲೆಕ್ಟ್ರಿಕ್ ವಾಹನ ಬಳಕೆದಾರರ ಎಲ್ಲಾ ಅಗತ್ಯಗಳಿಗೆ ಒಂದೇ ಸೂರಿನಡಿಯಲ್ಲಿ ಪರಿಹಾರವನ್ನು ಒದಗಿಸಲಿದ್ದು, ಇದು ರಿಯಲ್ ಟೈಮ್ ಮೂಲಕ ಸ್ಮಾರ್ಟ್ ಕೀ ನಿರ್ವಹಣೆ ಮತ್ತು ವಾಹನ ಸುರಕ್ಷತೆಯನ್ನು ಖಚಿತಪಡಿಸಲು ಬಳಕೆದಾರರಿಗೆ ವೆಬ್ ಡ್ಯಾಶ್‌ಬೋರ್ಡ್ ಮೂಲಕ ಟೆಲಿಮ್ಯಾಟಿಕ್ಸ್‌ನಂತಹ ವೈಶಿಷ್ಟ್ಯಗಳನ್ನು ನೀಡುತ್ತದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಜೊತೆಗೆ ಚಾರ್ಜಿಂಗ್ ಸಮಯದಲ್ಲಿ ಬಳಕೆದಾರರಿಗೆ ಉಂಟಾಗುವ ಯಾವುದೇ ಹಾನಿಯನ್ನು ಸರಿದೂಗಿಸಲು ಕಂಪನಿಯು ವಿಮಾ ರಕ್ಷಣೆಯನ್ನು ಸಹ ಒದಗಿಸಲಿದ್ದು, ಸ್ಮಾರ್ಟ್ ಪಾರ್ಕಿಂಗ್ ಮತ್ತು ಚಾರ್ಜಿಂಗ್ ಪಾಯಿಂಟ್‌ಗಳೊಂದಿಗೆ ಈಟ್ ಅಂಡ್ ಚಾರ್ಜ್‌ನಂತಹ ವೈಶಿಷ್ಟ್ಯತೆಗಳನ್ನು ಸಹ ಒದಗಿಸುತ್ತದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಇನ್ನು ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲೂ ವಿವಿಧ ರಾಜ್ಯ ಸರ್ಕಾರಗಳು ಸಹ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು ಕೇಂದ್ರ ಫೇಮ್ 2 ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಕೂಡಾ ಹೊಸ ಇವಿ ನೀತಿ ಘೋಷಣೆ ಮಾಡುತ್ತಿವೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಹಾಗೆಯೇ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ವಿವಿಧ ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ತ್ವರಿತಗೊಳಿದ್ದು, ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಸಹಭಾಗಿತ್ವ ಯೋಜನೆ ಅಡಿ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಹೆಚ್ಚುತ್ತಿರುವ ಇಂಧನ ದರಗಳು ಮತ್ತು ಮಾಲಿನ್ಯ ಸಮಸ್ಯೆಯಿಂದಾಗಿ ಕಳೆದ ಕೆಲವು ವರ್ಷಗಳಿಂದ ವಿದ್ಯುತ್ ವಾಹನಗಳ ಪ್ರಾಮುಖ್ಯತೆಯು ತೀವ್ರವಾಗಿ ಹೆಚ್ಚುತ್ತಿದ್ದು, ಅದಕ್ಕೆ ತಕ್ಕಂತೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಕಿರುವ ಚಾರ್ಜಿಂಗ್ ಸೌಲಭ್ಯ ಒದಗಿಸುವುದು ಕೂಡಾ ಪ್ರಮುಖವಾಗಿದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಇವೆರೆ

ಈ ನಿಟ್ಟಿನಲ್ಲಿ ಇವೆರೆ ಕಂಪನಿಯು ವಿವಿಧ ಕಂಪನಿಗಳ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, 2025ರ ವೇಳೆಗೆ ಇವೆರೆ ಕಂಪನಿಯು ದೇಶಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದುವ ಗುರಿಹೊಂದಿದೆ.

More from DriveSpark

Article Published On: Tuesday, January 18, 2022, 11:05 [IST]
English summary
Evre enables ev fast charging infrastructure at all its 52 ev hubs details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+