Just In
- 1 hr ago
ಭಾರತದಲ್ಲಿ ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಗೆ ಸಿದ್ದವಾದ ಎಲೆಕ್ಟ್ರಾನ್ ಇವಿ
- 14 hrs ago
ಆಕರ್ಷಕ ವಿನ್ಯಾಸದ 2022ರ ಹ್ಯುಂಡೈ ಟ್ಯೂಸಾನ್ ಎಸ್ಯುವಿಯ ವಿಶೇಷತೆಗಳು
- 15 hrs ago
ಪಾಸ್ಫೋರ್ಟ್ ಪ್ರಯೋಜನಗಳೇನು? ಏಕೆ ವಿವಿಧ ಬಣ್ಣಗಳಲ್ಲಿ ಲಭ್ಯವಿರುತ್ತವೆ ನೋಡಿ..
- 15 hrs ago
ಬ್ರೇಕ್ ಫೇಲ್ ಆದಾಗ ಕೇವಲ 8 ಸೆಕೆಂಡುಗಳಲ್ಲಿ ಕಾರು ನಿಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಸಲಹೆ
Don't Miss!
- Education
UGC Scholarship : ಯುಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
- News
ಆಗಸ್ಟ್ 17ರಂದು ಭಾರತದ ನಿಮ್ಮ ನಗರದಲ್ಲಿ ಪೆಟ್ರೋಲ್-ಡೀಸೆಲ್ ದರ ತಿಳಿಯಿರಿ
- Movies
ಮಗಳಿಗೆ ದುಬಾರಿ ಗಿಫ್ಟ್ ಕೊಟ್ಟ ನಟ ದುನಿಯಾ ವಿಜಯ್!
- Lifestyle
ಶನಿದೋಷ ನಿವಾರಣೆ ಹಾಗೂ ಸಂಪತ್ತು ವೃದ್ಧಿಗೆ ಕೃಷ್ಣ ಜನ್ಮಾಷ್ಟಮಿಗೆ ಮಾಡಿ ಈ ವಿಶೇಷ ಪರಿಹಾರ
- Technology
ಧಮಾಕಾ ಕೊಡುಗೆ!..ಭರ್ಜರಿ ಡಿಸ್ಕೌಂಟ್ನಲ್ಲಿ ಹೊಸ ಸ್ಮಾರ್ಟ್ಟಿವಿ ನಿಮ್ಮದಾಗಿಸಿಕೊಳ್ಳಿ!
- Finance
ಆಗಸ್ಟ್ 17: ಭಾರತದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು
- Sports
ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಖರೀದಿಸುತ್ತೇನೆ ಎಂದ ಎಲಾನ್ ಮಸ್ಕ್!
- Travel
ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಆನೆಗಳ ಶಿಬಿರಕ್ಕೆ ಭೇಟಿ ಕೊಡಿ
ಬಿಡುಗಡೆಯಾಗಲಿರುವ ಹೊಸ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು...
ಜನಪ್ರಿಯ ಕಾರು ತಯಾರಕ ಸಂಸ್ಥೆ ಕಿಯಾ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಮಾದರಿ ಸೆಲ್ಟೋಸ್ ಎಸ್‍ಯುವಿಯಾಗಿದೆ. ಈ ಸೆಲ್ಟೋಸ್ ಎಸ್‍ಯುವಿಯು ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ಭಾರತೀಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಯಶ್ವಸಿಯಾಗಿದೆ.

ಭಾರತದ ಗ್ರಾಹಕರು ಈ ಸೆಲ್ಟೋಸ್ ಎಸ್‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ. ಬಿಡುಗಡೆಯಾದಾಗಿನಿಂದ ಸೆಲ್ಟೋಸ್ ಎಸ್‍ಯುವಿ ಜನಪ್ರಿಯವಾಗುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿದೆ. ಮಾರಾಟದಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತ್ತು. ಸೆಲ್ಟೋಸ್ ಯಶಸ್ಸು ಭಾರತದಲ್ಲಿ ದಕ್ಷಿಣ ಕೊರಿಯಾದ ವಾಹನ ತಯಾರಕರಾದ ಕಿಯಾಗೆ ಅಡಿಪಾಯ ಹಾಕಿತು.

ಈಗ, ಕಿಯಾ ಮಾದರಿಯನ್ನು ತಾಜಾವಾಗಿರಿಸಲು ಮತ್ತು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಲು ಫೇಸ್‌ಲಿಫ್ಟೆಡ್ ಸೆಲ್ಟೋಸ್ ಬರಲಿದೆ. ದಕ್ಷಿಣ ಕೊರಿಯಾದ ಕಾರು ತಯಾರಕ ಕಿಯಾ ಇತ್ತೀಚೆಗೆ ಫೇಸ್‌ಲಿಫ್ಟೆಡ್ ಸೆಲ್ಟೋಸ್ ಅನ್ನು ಅನಾವರಣಗೊಳಿಸಿದೆ. ಈ ನವೀಕರಿಸಿದ ಎಸ್‍ಯುವಿಯನ್ನು ಮುಂಬರುವ ಬುಸಾನ್ ಮೋಟಾರ್ ಶೋ 2022 ನಲ್ಲಿ ಮೊದಲ ಬಾರಿಗೆ ಸಾರ್ವಜನಿಕರಿಗೆ ಪ್ರದರ್ಶಿಸಲಾಗುತ್ತದೆ.

ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಅನ್ನು ಭಾರತದಲ್ಲಿಯೂ ಪರೀಕ್ಷಿಸಲಾಗಿದೆ, ಮತ್ತು ಇದು ಮುಂದಿನ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಮುಂಬರುವ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಕುರಿತು ಲಭ್ಯವಿರುವ ಎಲ್ಲಾ ಮಾಹಿತಿಯು ಇಲ್ಲಿದೆ,

ವಿನ್ಯಾಸ
ಮುಂಬರುವ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್‌ನ ಹೊರಭಾಗವು ಬಹಳಷ್ಟು ಸಣ್ಣ ಬದಲಾವಣೆಗಳನ್ನು ಹೊಂದಿದೆ. ಮುಂಭಾಗದ ಗ್ರಿಲ್ ಅನ್ನು ಮರುಹೊಂದಿಸಲಾಗಿದೆ. ಹೊಸ ಎಲ್ಇಡಿ DRL ಗಳು ಹೆಚ್ಚು ಅಗ್ರೇಸಿವ್ ವಿನ್ಯಾಸವನ್ನು ಹೊಂದಿವೆ. ಬಂಪರ್‌ಗಳನ್ನು (ಮುಂಭಾಗ ಮತ್ತು ಹಿಂಭಾಗ) ಸಹ ನವೀಕರಿಸಲಾಗಿದೆ.

ಮರುವಿನ್ಯಾಸಗೊಳಿಸಲಾದ ಸಿಲ್ವರ್ ಫಿನಿಶಿಂಗ್ ಬ್ಯಾಷ್ ಪ್ಲೇಟ್‌ಗಳೊಂದಿಗೆ. ಹೊಸ ಟೈಲ್‌ಲೈಟ್‌ಗಳು ಕಿಯಾ ಕ್ಯಾರೆನ್ಸ್‌ನಿಂದ ಪ್ರೇರಿತವಾದ ಸಿಂಗಲ್-ಪೀಸ್ ವಿನ್ಯಾಸವನ್ನು ಒಳಗೊಂಡಿವೆ. ಇನ್ನು ಅಲಾಯ್ ವ್ಹೀಲ್ ಗಳು ಹೊಸ ವಿನ್ಯಾಸವನ್ನು ಹೊಂದಿವೆ.

ಇಂಟಿರಿಯರ್
ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‌ಯುವಿಯ ಒಳಭಾಗವು ಕೆಲವು ಪ್ರಮುಖ ಬದಲಾವಣೆಗಳನ್ನು ಕಂಡಿದೆ. ದೊಡ್ಡ ಬದಲಾವಣೆಯೆಂದರೆ ಡ್ಯಾಶ್‌ನಲ್ಲಿನ ಹೊಸ ಪನೋರಮಿಕ್ ಸ್ಕ್ರೀನ್ ಸೆಟಪ್, ಇದು ಸಂಪೂರ್ಣ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ವೈಡ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಅನ್ನು ಒಳಗೊಂಡಿರುತ್ತದೆ.

ಸೆಂಟರ್ ಕನ್ಸೋಲ್ ಅನ್ನು ಸಂಪೂರ್ಣವಾಗಿ ನವೀಕರಿಸಲಾಗಿದೆ, ಮರುವಿನ್ಯಾಸಗೊಳಿಸಲಾದ ಸೆಂಟರ್ ಎಸಿ ವೆಂಟ್‌ಗಳು, ಮರುವಿನ್ಯಾಸಗೊಳಿಸಲಾದ HVAC ಕಂಟ್ರೋಲ್ ಪ್ಯಾನೆಲ್ ಮತ್ತು ಗೇರ್ ಸೆಲೆಕ್ಟ್ ಲಿವರ್ ಬದಲಿಗೆ ರೋಟರಿ ಡ್ರೈವ್ ಆಯ್ಕೆ ಡಯಲ್ ಅನ್ನು ಒಳಗೊಂಡಿದೆ. ಇಂಡಿಯಾ-ಸ್ಪೆಕ್ ಆವೃತ್ತಿಯು ಕ್ಯಾಬಿನ್ ವಿನ್ಯಾಸಕ್ಕೆ ಇದೇ ರೀತಿಯ ಬದಲಾವಣೆಗಳನ್ನು ಹೊಂದಿರಬಹುದು.

ಫೀಚರ್ಸ್
ವರದಿಗಳ ಪ್ರಕಾರ, ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ADAS (ಸುಧಾರಿತ ಡ್ರ೮ವಿಂಗ್-ಅಸಿಸ್ಟ್ ಸಿಸ್ಟಂಗಳು) ಅನ್ನು ಪಡೆಯುತ್ತದೆ, ಇದು ವಾಹನದ ಸಕ್ರಿಯ ಸುರಕ್ಷತೆಯನ್ನು ಸುಧಾರಿಸುತ್ತದೆ. ಪ್ರಸ್ತುತ ಆವೃತ್ತಿಯಲ್ಲಿ ಲಭ್ಯವಿರುವ ಎಲ್ಲಾ ಪ್ರೀಮಿಯಂ ವೈಶಿಷ್ಟ್ಯಗಳು ಹೊಂದಿರಲಿದೆ. ಇದು ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಕೀಲೆಸ್ ಎಂಟ್ರಿ & ಗೋ, ಕ್ರೂಸ್ ಕಂಟ್ರೋಲ್, ಇತ್ಯಾದಿ ವೈಶಿಷ್ಟ್ಯಗಳಿಗೆ ಫೇಸ್‌ಲಿಫ್ಟೆಡ್ ಮಾಡೆಲ್‌ಗೆ ದಾರಿ ಮಾಡಿಕೊಡುತ್ತವೆ

ಎಂಜಿನ್
ಇಂಡಿಯಾ-ಸ್ಪೆಕ್ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಪ್ರಸ್ತುತ ಆವೃತ್ತಿಯಂತೆ ಅದೇ ಎಂಜಿನ್-ಪ್ರಸರಣ ಆಯ್ಕೆಗಳೊಂದಿಗೆ ಮುಂದುವರಿಯುತ್ತದೆ. ಪ್ರಸ್ತುತ ಕಿಯಾ ಸೆಲ್ಟೋಸ್ ಎಸ್‍ಯುವಿಯನ್ನು ಹಲವು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇವುಗಳಲ್ಲಿ 1.5 ಲೀಟರ್ ಪೆಟ್ರೋಲ್, 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಗಳಾಗಿವೆ. ಈ ಎಸ್‍ಯುವಿ ಮಾದರಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿಎಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್‍ಪಿ ಪವರ್ ಮತ್ತು 242 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಲ್ಲಾ ಎಂಜಿನ್ ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಸಿವಿಟಿ, 1.5 ಲೀಟರ್ ಡೀಸೆಲ್‍ಗೆ ಐವಿಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳ ಆಯ್ಕೆಯನ್ನು ಹೊಂದಿದೆ.

ಇನ್ನು ಕಿಯಾ ಇಂಡಿಯ 2022 ಜೂನ್ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ ಕಂಪನಿಯು 2022ರ ಜೂನ್ ತಿಂಗಳಿನಲ್ಲಿ ಅತ್ಯಧಿಕ ಮಾಸಿಕ ಮಾರಾಟವನ್ನು ಮಾಡಿದೆ. ಕಳೆದ ತಿಂಗಳು ಕೊರಿಯಾದ ಕಾರು ತಯಾರಕರು ಒಟ್ಟು 24,024 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ. ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಕಿಯಾ ಕಂಪನಿಯು 15,015 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.60 ಪ್ರತಿಶತದಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ
ಫೇಸ್‌ಲಿಫ್ಟೆಡ್ ಸೆಲ್ಟೋಸ್ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂದು ಕಿಯಾ ಅಧಿಕೃತವಾಗಿ ಹೇಳಿಲ್ಲ, ಆದರೆ 2023 ಆಟೋ ಎಕ್ಸ್‌ಪೋದಲ್ಲಿ ಇದು ಬಿಡುಗಡೆಯಾಗುವ ಸಾಧ್ಯತೆಗಳಿದೆ, ಪ್ರಸ್ತುತ, ಕಿಯಾ ಸೆಲ್ಟೋಸ್ ಎಸ್‍ಯುವಿಯ ಆರಂಭಿಕ ಬೆಲೆಯು ರೂ,. 10.19 ಲಕ್ಷವಾಗಿದೆ.ಮುಂಬರುವ ಫೇಸ್‌ಲಿಫ್ಟೆಡ್ ಆವೃತ್ತಿಯು ತುಸು ದುಬಾರಿಯಾಗಿರುತ್ತದೆ.